Horoscope: ರಾಶಿಭವಿಷ್ಯ, ಈ ರಾಶಿಯ ವಿದ್ಯಾರ್ಥಿಗಳಿಗೆ ಉತ್ತಮ ದಿನ, ನಿರ್ಧರಿಸಿದ ಗುರಿಯನ್ನು ಪಡೆಯುವಿರಿ

| Updated By: Rakesh Nayak Manchi

Updated on: Sep 04, 2023 | 12:45 AM

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 04) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ಈ ರಾಶಿಯ ವಿದ್ಯಾರ್ಥಿಗಳಿಗೆ ಉತ್ತಮ ದಿನ, ನಿರ್ಧರಿಸಿದ ಗುರಿಯನ್ನು ಪಡೆಯುವಿರಿ
ದಿನಭವಿಷ್ಯ
Image Credit source: iStock Photo
Follow us on

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 04) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ವೃದ್ಧಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ರಿಂದ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ರಿಂದ 41 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:54 ರಿಂದ 09:27ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:59 ರಿಂದ ಮಧ್ಯಾಹ್ನ 12:32ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:04 ರಿಂದ 03:37 ರ ವರೆಗೆ.

ಧನು ರಾಶಿ: ಅನವಶ್ಯಕ ಸಾಲಗಳಿಂದ ದೂರವಿರಿ. ಉದ್ಯೋಗಸ್ಥ ದಂಪತಿಗೆ ಒಂದೇ ಕಡೆ ವರ್ಗಾವಣೆಯಾಗಬಹುದು. ಗೃಹ ನಿರ್ಮಾಣದ ಕಾರ್ಯ ಮುಂದೂಡುವುದು ಉತ್ತಮ. ಹಳೆ ಮಿತ್ರರನ್ನು ಭೇಟಿಯಾಗುವಿರಿ. ಸರ್ಕಾರಿ ನೌಕರರಿಗೆ ಹೆಚ್ಚಿನ ಗಳಿಕೆಯಾಗಲಿದೆ. ನಿಮ್ಮ ಮನೆಯಲ್ಲಿ ಮಂಗಳ ಕಾರ್ಯಕ್ಕೆ ತಯಾರಿ ಆರಂಭವಾಗುವುದು. ಹಳೆ ರೋಗಗಳು ಮರುಕಳಿಸದಂತೆ ಎಚ್ಚರ ವಹಿಸಿ. ನಿಮ್ಮ ಆಸೆಯನ್ನು ಈಡೇರಿಸಲು ಬಹಳಷ್ಟು ಪ್ರಯತ್ನವನ್ನು ಮಾಡಬೇಕಾಗುತ್ತದೆ. ವೃತ್ತಿ ಜೀವನದ ಬಗ್ಗೆ ಮಾತನಾಡಿದರೆ, ಈ ದಿನ ನಿಮಗೆ ಉತ್ತಮ ಅವಕಾಶಗಳು ಸಿಗುತ್ತವೆ. ಇದರಿಂದ ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಾಧ್ಯವಾಗುತ್ತದೆ.

ಮಕರ ರಾಶಿ: ಆಸ್ತಿ ಹಂಚಿಕೆ ವಿಚಾರದಲ್ಲಿ ಬುದ್ಧಿವಂತಿಕೆಯಿಂದ ವರ್ತಿಸುವಿರಿ. ಹೆಚ್ಚಲಿರುವ ಆದಾಯದಿಂದ ದುರಭ್ಯಾಸವನ್ನು ಬೆಳೆಸಿಕೊಳ್ಳುವಿರಿ. ಶಿಕ್ಷಕರಿಗೆ ವೇತನದಲ್ಲಿ ಹೆಚ್ಚಳವಾಗಲಿದೆ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಅವಿವಾಹಿತರಿಗೆ ಕಂಕಣಬಲ ಕೂಡಿಬರುವುದು. ನಿಮ್ಮ ಮಕ್ಕಳ ನಡವಳಿಕೆಯಿಂದ ಬೇಸರ ಆಗುವ ಸಾಧ್ಯತೆ ಇದೆ. ತಾಳ್ಮೆಯಿಂದ ವರ್ತಿಸಿ. ನೀವು ಪ್ರವಾಸಕ್ಕೆ ಹೋಗುವ ಸಾಧ್ಯತೆ ಇದೆ, ಆದರೆ ಪ್ರವಾಸದ ಸಮಯದಲ್ಲಿ ಜಾಗರೂಕರಾಗಿರಬೇಕು. ಏಕೆಂದರೆ ನಿಮ್ಮೊಂದಿಗೆ ಅಪಘಾತ ಸಂಭವಿಸಭುದು. ತಂದೆಯ ಆರೋಗ್ಯವು ಹದಗೆಡಬಹುದು. ಆದ್ದರಿಂದ ಅವರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಬೇಕು.  ಸಹದ್ಯೋಗಿ ಅಥವಾ ಸಂಬಂಧಿಕರ ಬೆಂಬಲವನ್ನು ನೀವು ಪಡೆಯಬಹುದು. ಈ ದಿನ ನೀವು ಆಕಸ್ಮಿಕವಾಗಿ ಹಣವನ್ನು ಕೂಡ ಪಡೆಯಬಹುದು.

ಕುಂಭ ರಾಶಿ: ನಿಮ್ಮ ಬದುಕಿನಲ್ಲಿ ಬದಲಾವಣೆ ಅನಿವಾರ್ಯವಾಗಿ ಮಾಡಿಕೊಳ್ಳುವಿರಿ. ಹಣಕಾಸಿನ ಪರಿಸ್ಥಿತಿ ಉತ್ತಮಗೊಳ್ಳುವುದು. ಸಹೋದ್ಯೋಗಿಗಳಿಗೆ ಸಹಕರಿಸುವಿರಿ. ಮೋಜಿನ ಸುತ್ತಾಟವು ಹೆಚ್ಚಾಗಬಹುದು. ಕಾನೂನು ಸಲಹೆಗಾರರಿಗೆ ಆದಾಯ ಹೆಚ್ಚಲಿದೆ. ಆಹಾರ ಸೇವನೆಯಿಂದ ಅನಾರೋಗ್ಯ ಕಾಡುವ ಸಾಧ್ಯತೆ ಇದೆ. ಬಂಧುಗಳ ಜೊತೆ ವಾಗ್ವಾದ ಬೇಡ ಇಂದು. ಇಂದು ಗಳಿಕೆಗಾಗಿ ಯಾವುದೇ ರೀತಿಯ ಹೂಡಿಕೆ ಮಾಡಬೇಡಿ, ಇಲ್ಲದಿದ್ದರೆ ಆರ್ಥಿಕ ಸವಾಲುಗಳನ್ನು ಎದುರಿಸಬೇಕಾಗಬಹುದು. ವೈವಾಹಿಕ ಜೀವನವು ಸುಖ ಶಾಂತಿಯಿಂದ ತುಂಬಿರುತ್ತದೆ ಮತ್ತು ಯಾವುದೇ ಪ್ರಕಾರದ ದೊಡ್ಡ ತೊಂದರೆಯು ಬಾಧಿಸದು.

ಮೀನ ರಾಶಿ: ಖಾಸಗಿ ಕಂಪನಿ ಉದ್ಯೋಗಿಗಳ ವೇತನವು ಹೆಚ್ಚಾಗುವುದು. ನಿಮ್ಮ ವರ್ಗಾವಣೆಯು ಅನಿವಾರ್ಯವಾಗಬಹುದು. ಮಕ್ಕಳ ಆರೋಗ್ಯಕ್ಕೆ ಹೆಚ್ಚಿನ ಖರ್ಚು ಆಗುವುದು. ವ್ಯವಹಾರದಲ್ಲಿ ಹೆಚ್ಚಿನ ಲಾಭ ಬರುವುದು. ಪ್ರಸಾರ ಮಾಧ್ಯಮದವರಿಗೆ ಅನವರತ ಕಾರ್ಯಗಳು ಇರುವುದು. ಸಾಹಿತಿಗಳಿಗೆ ಸನ್ಮಾನ ಸಿಗುವುದು. ಅವಿವಾಹಿತರಿಗೆ ಕಂಕಣಬಲ ಪ್ರಾಪ್ತವಾಗಬಹುದು. ಬಂಡವಾಳದಿಂದ ಹೆಚ್ಚಿನ ಲಾಭವಿದೆ. ವಿವಾದ ಅಥವಾ ಜಗಳವಾಗುವ ಸಾಧ್ಯತೆ ಇದೆ. ಆದರೆ ಜಾಗರೂಕತೆ ಮತ್ತು ಬುದ್ಧಿವಂತಿಕೆಯಿಂದ ನಡೆದರೆ ಸಮಸ್ಯೆಗಳನ್ನು ನಿವಾರಿಸಬಹುದು. ವಿದ್ಯಾರ್ಥಿಗಳಿಗೆ ಈ ದಿನ ಉತ್ತಮವಾಗಲಿದೆ, ನಿರ್ಧರಿಸಿದ ಗುರಿಯನ್ನು ಪಡೆಯುವಿರಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ