Horoscope: ದಿನಭವಿಷ್ಯ; ಈ ರಾಶಿಯವರು ಮನಸ್ಸಿನ ಚಾಂಚಲ್ಯದಿಂದ ಸಂಪತ್ತನ್ನು ಕಳೆದುಕೊಳ್ಳುವಿರಿ

| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 05, 2023 | 12:45 AM

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 05) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದಿನಭವಿಷ್ಯ; ಈ ರಾಶಿಯವರು ಮನಸ್ಸಿನ ಚಾಂಚಲ್ಯದಿಂದ ಸಂಪತ್ತನ್ನು ಕಳೆದುಕೊಳ್ಳುವಿರಿ
ಪ್ರಾತಿನಿಧಿಕ ಚಿತ್ರ
Follow us on

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 05) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ವ್ಯತಿಪಾತ್, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06-23ಕ್ಕೆ, ಸೂರ್ಯಾಸ್ತ ಸಂಜೆ 06 – 18ಕ್ಕೆ, ರಾಹು ಕಾಲ ಮಧ್ಯಾಹ್ನ 01:50 – 03:20ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:24 – 07:53ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:22 – 10:52ರ ವರೆಗೆ.

ಧನು ರಾಶಿ : ಭೋಗ ವಸ್ತುಗಳನ್ನು ಅಧಿಕವಾಗಿ ಖರೀದಿಸುವಿರಿ. ಉನ್ನತ ವಿದ್ಯಾಭ್ಯಾಸಕ್ಕೆ ಸಾಲವನ್ನು ಮಾಡಬೇಕಾಗುವುದು. ಕಾರಣಾಂತರದಿಂದ ನಿಮ್ಮ ಪ್ರಯಾಣವು ಸ್ಥಗಿತವಾಗಬಹುದು. ಯಂತ್ರಗಳ‌ ಮಾರಾಟದಿಂದ ನಿಮಗೆ ಆದಾಯವು ಹೆಚ್ಚಾಗುವುದು. ಮಕ್ಕಳನ್ನು ಖುಷಿಯಿಂದ ಇಡಲು ನಾನಾ ಪ್ರಯತ್ನವನ್ನು ಮಾಡುವಿರಿ. ಹಿರಿಯರ ಮಾತನ್ನು ಪಾಲಿಸುವಿರಿ. ನಿಮಗೆ ಇಂದು ಕೈ ಹಾಕಿದ ಕಾರ್ಯದಲ್ಲಿ ಜಯ ಸಿಗುವುದು. ಪೂರ್ವಜನ್ಮದ ಪುಣ್ಯವು ರಕ್ಷಿಸುವುದು. ಸ್ವಂತ ಉದ್ಯೋಗದಿಂದ ಒತ್ತಡವು ಅಧಿಕವಾಗಿ ಬರಬಹುದು. ಮನೆಯ ಕೆಲಸವನ್ನು ಮಾಡಿಕೊಳ್ಳಲು ನಿಮಗೆ ಸಮಯ ಸಾಕಾಗದು. ನಿಮ್ಮ ಮಾತುಗಳಿಂದ ಅನರ್ಥವಾಗಬಹುದು. ದೇಹದಲ್ಲಿ ಅತಿಯಾದ ಚಾಂಚಲ್ಯವು ಕಾಣಿಸುವುದು.

ಮಕರ ರಾಶಿ : ವಿವಿಧ ಕಡೆಗಳಿಂದ ಧನಾಗಮನವಾಗಬಹುದು. ನಿಮ್ಮ ಹಳೆಯ ವಾಹನವನ್ನು ಮಾರಾಟ ಮಾಡಿ ನೂತನ ವಾಹನವನ್ನು ಖರೀದಿ ಮಾಡುವಿರಿ. ದೇವರಲ್ಲಿ ಭಕ್ತಿಯು ಅಧಿಕವಾದೀತು. ಮಕ್ಕಳಿಗೆ ಶಿಸ್ತನ್ನು ಹೇಳುವಿರಿ. ನಿಮ್ಮ ಮನಸ್ಸನ್ನು ಬಹಳ ವಿಚಲಿತವಾಗಿದ್ದು ಸ್ಥಿರತ್ವವನ್ನು ತಂದುಕೊಳ್ಳುವುದು ಕಷ್ಟವಾದೀತು. ನಿಮ್ಮ‌ಅಲ್ಪ ಜ್ಞಾನವನ್ನು ಎಲ್ಲರೆದುರು ತೋರಿಸುವುದು ಬೇಡ. ನಿಮ್ಮ ಆಸ್ತಿಯನ್ನು ಇನ್ನೊಬ್ಬರು ಪಡೆಯಲು ಕಾನೂನು ರೀತಿಯಲ್ಲಿ ಹೋಗುವರು. ಮನೆಗೆ ದಂಪತಿಗಳನ್ನು ಕರೆದು ಸತ್ಕಾರ ಮಾಡಿ. ಸಹೋದರನ ಬೆಂಬಲವಿದ್ದರೂ ನಿಮಗೆ ನಿಮ್ಮ ಸ್ವಾಭಿಮಾನದಿಂದ ಹೊರಬರಲು ಆಗದು. ನೀವು ಇಂದು ಬಹಳ ಉಗ್ರವಾಗಿ ಕಾಣುವಿರಿ.

ಕುಂಭ ರಾಶಿ : ಜೂಜು ಮೊದಲಾದ ಲೇವಾದೇವಿಯ ವ್ಯವಹಾರದಲ್ಲಿ ನಿಮಗೆ ಹಿನ್ನಡೆ ಇರಲಿದೆ. ದೇವಾಲಯವು ನಿಮಗೆ ಇಂದು ನೆಮ್ಮದಿಯ ಸ್ಥಾನವಾಗುವುದು. ಆರೋಗ್ಯದಲ್ಲಿ ಅಸಮಾಧಾನವು ಇರಲಿದೆ. ಮಾತಾನಾಡುವ ಭರದಲ್ಲಿ ಏನಾದರೂ ಹೇಳಬಹುದು. ಕೇವಲ ಬಾಯಿ ಮಾತಿನಲ್ಲಿ ವ್ಯವಹಾರವನ್ನು ಮಾಡಿ ಮುಂದುವರಿಸುವುದು ಬೇಡ. ನಿಮ್ಮ ರಹಸ್ಯವನ್ನು ಯಾರಾದರೂ ತಿಳಿದುಕೊಳ್ಳಲು ಬಯಸುವರು. ಅವರಸದಲ್ಲಿ ಏನನ್ನೂ ಖರೀದಿ ಮಾಡುವುದು ಬೇಡ. ನಿಮ್ಮ ಸಲಹೆಯನ್ನು ಅಧಿಕಾರಿಗಳು ಸ್ವೀಕರಿಸದೇ ಇರಬಹುದು. ನೀವು ಇಂದು ಎಲ್ಲರ ಜೊತೆ ಅಲ್ಪವಾಗಿ ಮಾತನಾಡುವಿರಿ. ಸ್ಮರಣಶಕ್ತಿಯ ಕೊರತೆಯು ಅಧಿಕವಾಗಿ ಕಾಡಡಬಹುದು. ಗೌರವವನ್ನು ಕಾಪಾಡಿಕೊಳ್ಳಲು ಗಂಭೀರವಾಗಿ ಇರುವಿರಿ. ಶನೈಶ್ಚರನ ದೇವಾಲಯಕ್ಕೆ ಹೋಗಿ ಎಳ್ಳೆಣ್ಣೆಯ ದೀಪ ಬೆಳಗಿ ನಮಸ್ಕರಿಸಿ ಬನ್ನಿ.

ಮೀನ ರಾಶಿ : ಮನಸ್ಸಿನ ಚಾಂಚಲ್ಯದಿಂದ ನಿಮ್ಮ ಸಂಪತ್ತನ್ನು ಕಳೆದುಕೊಳ್ಳುವಿರಿ. ನಿಮ್ಮ ವಸ್ತುಗಳು ಕಾಣೆಯಾಗಬಹುದು. ಮಾತಿನ ಬಿರುಸು ಅಧಿಕವಾಗಿ ಇರುವುದು. ಇಂದಿನ ಖರ್ಚು ನಿಮ್ಮ ಜೇಬಿಗೆ ಭಾರವಾದೀತು. ಶತ್ರುಗಳ ತೊಂದರೆಯಿಂದ ನಿರ್ಮಾಣ ಕಾರ್ಯವು ನಿಧಾನವಾಗಲಿದೆ. ನೌಕರರ ವರ್ತನೆಯ ಮೇಲೆ ನಿಮ್ಮ ಕಣ್ಣಿಡಿ. ಬಂಧುಗಳ ಜೊತೆ ಕಲಹವಾಗುವುದು. ಸಂಗಾತಿಯ ನೆರವನ್ನು ನೀವು ನಿರೀಕ್ಷಿಸುವಿರಿ. ಆದ್ಯತೆಯ ಮೇಲೆ ನಿಮ್ಮ ಕಾರ್ಯಗಳು ಇರಬಹುದು. ಅಧಿಕಾರಿಗಳ ಮನವನ್ನು ಒಲಿಸಿ ನಿಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಮಕ್ಕಳಿಂದ ಶುಭ ಸಮಾಚಾರವು ನಿಮಗೆ ಬರಲಿದೆ. ಆಯ್ಕೆಯನ್ನು ವಿಳಂಬವಾಗಿ ಮಾಡುವಿರಿ.

-ಲೋಹಿತಶರ್ಮಾ – 8762924271 (what’s app only)