Horoscope: ಈ ರಾಶಿಯವರು ದೂರಾದ ಪ್ರೇಮಿಯನ್ನು ನೆನಪಿಸಿಕೊಂಡು ಮನಸ್ಸಿನಲ್ಲಿ ಸಂಕಟಪಡಲಿದ್ದಾರೆ

| Updated By: Rakesh Nayak Manchi

Updated on: Sep 05, 2023 | 12:45 AM

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 05) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರು ದೂರಾದ ಪ್ರೇಮಿಯನ್ನು ನೆನಪಿಸಿಕೊಂಡು ಮನಸ್ಸಿನಲ್ಲಿ ಸಂಕಟಪಡಲಿದ್ದಾರೆ
ದಿನಭವಿಷ್ಯ
Image Credit source: iStock Photo
Follow us on

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 05) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಭರಣೀ, ಯೋಗ: ಧ್ರುವ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 40 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:36 ರಿಂದ 05:09 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:27 ರಿಂದ 10:59ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:31 ರಿಂದ 02:04ರ ವರೆಗೆ.

ಧನು ರಾಶಿ: ನಿಮ್ಮವರು ನೀವಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳುವರು. ಪ್ರೇಮಕ್ಕಾಗಿ ಹೆಚ್ಚು ಖರ್ಚನ್ನು ಮಾಡಬೇಕಾದೀತು. ಹಿತಶತ್ರುಗಳ ಬಗ್ಗೆ ನಿಮ್ಮ ಜಾಗರೂಕತೆಯು ಸಾಕಾಗದು. ಉದ್ಯೋಗವನ್ನು ಬಿಡುವ ಸಂದರ್ಭವೂ ಬರಬಹುದು. ಮನೋ ವ್ಯಥೆಯನ್ನು ಯಾರ ಬಳಿಯಾದರೂ ಹೇಳಿಕೊಳ್ಳುವಿರಿ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸೋಲಬೇಕಾಗುವುದು. ನಿಮ್ಮ ಗುರಿಯನ್ನು ತಲುಪಲು ಬೇರೆ ಮಾರ್ಗವನ್ನೂ ಅನುಸರಿಸಬೇಕಾದೀತು. ಉದ್ಯೋಗದಲ್ಲಿ ಸ್ತ್ರೀಯರಿಗೆ ಸಹಕಾರ ಮಾಡುವಿರಿ‌. ಇಂದು ನಿಮಗೆ ಭಯವು ಕಾಡಬಹುದು. ಹೆಚ್ಚಿನ ಆದಾಯ ಸಿಗುವ ವ್ಯವಹಾರವು ತಪ್ಪಿಹೋಗಬಹುದು.

ಮಕರ ರಾಶಿ: ಇಂದಿನ ಕಾರ್ಯಗಳಲ್ಲಿ ತೊಂದರೆಗಳು ಎದ್ದು ಕಾಣಿಸುವುದು. ಜಾಣ್ಮೆಯನ್ನು ಪ್ರದರ್ಶಿಸಲು ಹೋಗಿ ಮುಗ್ಗರಿಸುವಿರಿ. ತೀರ್ಥಕ್ಷೇತ್ರಗಳ ದರ್ಶನವನ್ನು ಮಾಡುವಿರಿ. ರಾಜಕೀಯ ವ್ಯಕ್ತಿಗಳ ಸಂಪರ್ಕವನ್ನು ನೀವು ಮಾಡುವಿರಿ. ಸ್ತ್ರೀಯರು ತಾಳ್ಮೆಯನ್ನು ಕಳೆದುಕೊಂಡು ಕೂಗಾಡಬಹುದು. ಸಾಹಸ ಕಾರ್ಯಗಳನ್ನು ಮಾಡಲು ನಿಮಗೆ ಉತ್ಸಾಹವು ಬರಬಹುದು. ನೀವು ಮಾಡಲು ಹೊರಟ ಕೆಲಸಕ್ಕೆ ಶುಭಸೂಚನೆಯು ಸಿಗುವುದು. ನಿಮ್ಮ ಆಲೋಚನೆಯ ದಿಕ್ಕು ಬದಲಾಗಬಹುದು. ದ್ವೇಷವನ್ನು ಮುಂದುವರಿಸಿ ಮನಸ್ಸನ್ನು ಹಾಳು ಮಾಡಿಕೊಳ್ಳಬೇಕಾದೀತು. ಅಪರೂಪದ ಬಂಧುಗಳ ಆಗಮನವು ನಿಮಗೆ ಕಷ್ಟವಾದೀತು. ದೂರಾದ ಪ್ರೇಮಿಯನ್ನು ನೆನಪುಮಾಡಿಕೊಂಡು ಮನಸ್ಸಿನಲ್ಲಿ ಸಂಕಟಪಡುವಿರಿ.

ಕುಂಭ ರಾಶಿ: ಅಮೂಲ್ಯ ವಸ್ತುವಿನ ಲಾಭದಿಂದ ಸಂತಸವಾಗಲಿದೆ. ಅಪರಿಚಿತರ ಜೊತೆ ವೃಥಾ ಕಲಹವಾಗಬಹುದು. ಮಕ್ಕಳ ವಿದ್ಯಾಭ್ಯಾಸದ ಚಿಂತೆ ಇರಲಿದೆ. ವಾಹನ‌ದ ಖರೀದಿಗೆ ಬೆಂಬಲವು ಸಿಗಬಹುದು. ‌ನಿಮ್ಮ‌ ಕೆಲಸಕ್ಕೆ ಅಧಿಕಾರಿಗಳು ಪ್ರಶಂಸಿಸುವರು. ಬಹಳ ದಿನಗಳಿಂದ ನಡೆಯುತ್ತಿದ್ದ ನ್ಯಾಯಾಲಯದ ವ್ಯವಹಾರವನ್ನು ಮುಕ್ತಾಯ ಮಾಡಿಕೊಳ್ಳುವಿರಿ. ಮಿತ್ರರೆಂದು ಹೇಳಿಕೊಂಡು ಯಾರಾದರೂ ಬರಬಹುದು. ನಿಮ್ಮ ಜಾಗರೂಕತೆಯಲ್ಲಿ ನೀವಿರಿ. ಕುಟುಂಬದ ಸ್ಥಿರಾಸ್ತಿಯನ್ನು ಪಡೆಯಲು ಪ್ರೇರಣೆ ಪಡೆಯುವುರಿ. ಬರಬೇಕಾದ ಹಣವು ಬಾರದೇ ಇರುವುದು ಚಿಂತೆಗೊಳಿಸುವುದು.

ಮೀನ ರಾಶಿ: ಇಂದು ನೀವು ಎಲ್ಲರ ಮಾತಿನಿಂದ ಗೆಲ್ಲುವಿರಿ. ನಿಮ್ಮನ್ನು ನೌಕರರು ಹೋಗಳುವರು. ನಿಮ್ಮ ಇಂದಿನ‌ ಶ್ರಮಕ್ಕೆ ತಕ್ಕುದಾದ ಫಲವು ಸಿಗಬಹುದು. ಭೂಮಿಯ ವ್ಯಾಪಾರದಲ್ಲಿ ಜಯವಾಗಲಿದೆ. ಇಂದು ಸರ್ಕಾರಿ ಕೆಲಸಕ್ಕೆ ಓಡಾಟ ಮಾಡುವಿರಿ. ಕುಲದೇವರ ಆರಾಧನೆಯನ್ನು ನೀವು ಮಾಡುವಿರಿ. ನಿಮಗೆ ಕೆಲಸದಲ್ಲಿ ಅನೇಕ ಗೊಂದಲಗಳು ಇರಬಹುದು. ಹಳೆಯ ನೆನಪುಗಳು ನಿಮ್ಮನ್ನು ಕಾಡುವುದು. ತಂದೆಯ ಆರೋಗ್ಯದಲ್ಲಿ ಏರುಪೇರಾಗಬಹುದು. ಮಕ್ಕಳ ಸಂತೋಷಕ್ಕಾಗಿ ಹಣವನ್ನು ವ್ಯಯಿಸುವಿರಿ. ಅದೃಷ್ಟವನ್ನು ಮಾತ್ರ ನಂಬಿ ಕೆಲಸವನ್ನು ಮಾಡಬೇಡಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ