AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ; ಈ ರಾಶಿಯವರು ಇಂದು ಆರೋಗ್ಯದ ಮೇಲೆ ಹೆಚ್ಚಿನ ಗಮನಹರಿಸಿ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 06) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದಿನಭವಿಷ್ಯ; ಈ ರಾಶಿಯವರು ಇಂದು ಆರೋಗ್ಯದ ಮೇಲೆ ಹೆಚ್ಚಿನ ಗಮನಹರಿಸಿ
ರಾಶಿ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 06, 2023 | 12:45 AM

Share

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 06) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ವರೀಯಾನ್, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06-23ಕ್ಕೆ, ಸೂರ್ಯಾಸ್ತ ಸಂಜೆ 06 – 17ಕ್ಕೆ, ರಾಹು ಕಾಲ ಬೆಳಿಗ್ಗೆ 10:51 – 12:21ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:19 – 04:49ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:53 – 09:22ರ ವರೆಗೆ.

ಧನು ರಾಶಿ : ಇಂದು ನಿಮಗೆ ಎಲ್ಲ ರೀತಿಯಲ್ಲೂ ಲಾಭವಾಗಲಿದೆ ಎಂದು ಮನಸ್ಸು ಹೇಳುವುದು. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ನೌಕರರಿಗೆ ಉನ್ನತ ಅಧಿಕಾರಿಗಳಿಂದ ಪ್ರಶಂಸೆ ಪ್ರಾಪ್ತಿಯಾಗಲಿದೆ. ಇಂದು ಮಹಿಳೆಯರಿಗೆ ಶುಭ ದಿನ. ಪ್ರಾರ್ಥನೆಯ ಪರಿಣಾಮ ನಿಮ್ಮ ಮನಸ್ಸು ಎಂದಿಗಿಂತ ನೆಮ್ಮದಿಯಿಂದ ಇರಲಿದೆ. ಸ್ಥಗಿತಗೊಂಡ ಕೆಲಸದಲ್ಲಿ ವೇಗವನ್ನು ಪಡೆಯುವುದು ಪ್ರಯೋಜನಕಾರಿಯಾಗಿದೆ. ಕುಟುಂಬದ ಆಸ್ತಿಯನ್ನು ಪಡೆಯುವ ಸಾಧ್ಯತೆಗಳಿವೆ. ವಿದ್ಯಾರ್ಥಿಗಳ ಮನಸ್ಸು ಅಧ್ಯಯನದಲ್ಲಿ ತೊಡಗಿಕೊಳ್ಳುವುದು.

ಮಕರ ರಾಶಿ : ಇಂದು ನಿಮ್ಮ ಆರೋಗ್ಯದ ಮೇಲೆ ಹೆಚ್ಚಿನ ಗಮನ ಇರಿಸಿ. ದೈಹಿಕವಾಗಿ ಸದೃಢವಾಗಿರಲು ನಿಮ್ಮ ಪ್ರಯತ್ನ ಅತಿ ಮುಖ್ಯ. ಸಂಗಾತಿಯ ಸೂಕ್ಷ್ಮ ಭಾವಕ್ಕೆ ಪೆಟ್ಟು ಬೀಳಬಹುದು. ನಿಮ್ಮ ಸುತ್ತಮುತ್ತಲಿನವರಿಂದ ಸಾಕಷ್ಟು ಪ್ರಶಂಸೆ ಪಡೆಯಲಿದ್ದೀರಿ. ಮಹತ್ವದ ಕೆಲಸವು ಹಲವು ದಿನಗಳವರೆಗೆ ಬಾಕಿಯಿದ್ದರೆ, ಅವುಗಳನ್ನು ಮುಗಿಸಿ. ನೀವು ಉತ್ತಮ ಆರ್ಥಿಕ ಯೋಜನೆಯನ್ನು ಮಾಡಬಹುದು. ಯುವಕರು ಹೊಸ ಉದ್ಯೋಗಗಳನ್ನು ಪಡೆಯುವ ಸಾಧ್ಯತೆಯಿದೆ. ಮನೆಯ ವೆಚ್ಚದಲ್ಲಿ ಇಳಿಕೆಯಾಗುವುದು.

ಕುಂಭ ರಾಶಿ : ಸ್ವಂತ ಉದ್ಯಮ ಮಾಡುವವರಿಗೆ ಒಳ್ಳೆಯ ಸಮಯ. ಕಟ್ಟುಪಾಡುಗಳನ್ನು ಅಳವಡಿಸಿಕೊಳ್ಳುವ ಮೂಲಕ ನೀವು ಉತ್ತಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವಿರಿ. ಕುಟುಂಬದ ಸದಸ್ಯರ ಸಲಹೆಯಿಂದ ನೀವು ಪ್ರಯೋಜನ ಪಡೆಯಬಹುದು. ಇಂದು ಶೈಕ್ಷಣಿಕ ರಂಗದಲ್ಲಿ ಸಕಾರಾತ್ಮಕ ಫಲಿತಾಂಶವನ್ನು ಪಡೆಯುವಿರಿ. ನಿಮ್ಮ ದಿನದ ಆರಂಭವು ಸಾಮಾನ್ಯವಾಗಿರುತ್ತದೆ. ಹಣವನ್ನು ಬಹಳ ನೈಪುಣ್ಯದಿಂದ ಖರ್ಚು ಮಾಡುವಿರಿ. ನೀವು ಬಂಧುಗಳ ಜೊತೆ ವ್ಯಾಪಾರ ಮಾಡಲು ತೀರ್ಮಾನಿಸುವಿರಿ. ಕೆಲಸದ ಪರಿಸ್ಥಿತಿಗಳು ಸುಧಾರಿಸುವ ಸಾಧ್ಯತೆಯಿದೆ. ಇಂದು ಸಂಘರ್ಷವು ನಿಮಗೆ ಪ್ರಯೋಜನಕಾರಿ ಆಗಿರುವುದಿಲ್ಲ.

ಮೀನ ರಾಶಿ : ಇಂದು ಆರ್ಥಿಕ ಲಾಭ ದೊರೆಯುವ ಸಾಧ್ಯತೆ ಇದೆ. ಕೈ ತಪ್ಪಿ ಹೋಗಿದೆ ಎಂದುಕೊಂಡಿದ್ದ ಯೋಜನೆಗಳು ಸಿಗಬಹುದು. ನಿಮ್ಮನ್ನು ಬಹು ದಿನಗಳಿಂದ ಬಾಧಿಸುತ್ತಿದ್ದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ನೀವು ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಪ್ರತಿ ಗುರಿಯನ್ನು ಸಾಧಿಸುವಿರಿ. ವ್ಯಾಪಾರವನ್ನು ವಿಸ್ತರಿಸಲು ನೀವು ಬ್ಯಾಂಕಿನಿಂದ ಸಾಲ ತೆಗೆದುಕೊಳ್ಳಬಹುದು. ಎಲ್ಲೋ ಕೊಟ್ಟಿರುವ ಹಣವನ್ನು ನೀವು ಮರಳಿ ಪಡೆಯಬಹುದು. ಹೊಸ ಉದ್ಯೋಗದಿಂದ ನೀವು ಸಾಕಷ್ಟು ಯಶಸ್ಸನ್ನು ಪಡೆಯುತ್ತೀರಿ.

-ಲೋಹಿತಶರ್ಮಾ – 8762924271 (what’s app only)

Follow Us
Lohitha Hebbar
Lohitha Hebbar

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!