Horoscope: ಈ ರಾಶಿಯವರಿಗೆ ನಿಮ್ಮ ಸ್ವಭಾವಕ್ಕೆ ಹೊಂದಿಕೊಳ್ಳುವ ಸಂಗಾತಿ ಸಿಗುವುದು ಕಷ್ಟವಾದೀತು

| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 06, 2023 | 12:45 AM

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 06) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರಿಗೆ ನಿಮ್ಮ ಸ್ವಭಾವಕ್ಕೆ ಹೊಂದಿಕೊಳ್ಳುವ ಸಂಗಾತಿ ಸಿಗುವುದು ಕಷ್ಟವಾದೀತು
ಪ್ರಾತಿನಿಧಿಕ ಚಿತ್ರ
Follow us on

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 06 ಬುಧವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ವ್ಯಾಘಾತ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 40 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:31 ರಿಂದ 14:03 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:54 ರಿಂದ 09:27ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 10:59 ರಿಂದ 12:31ರ ವರೆಗೆ.

ಧನು ರಾಶಿ : ಭೂಮಿಯ ಲಾಭದ ವಿಚಾರದಲ್ಲಿ ಚರ್ಚೋಪಚರ್ಚೆಗಳು ಆಗಬಹುದು. ಆರೋಪ ಪ್ರತ್ಯಾರೋಪಗಳಿಂದ ಪರಸ್ಪರ ಕಲಹವೂ ಆಗುವುದು. ದುಸ್ಸಾಧ್ಯ ಎನಿಸಿದ ಕಾರ್ಯವನ್ನು ಮಾಡಲು ಪ್ರಯತ್ನಿಸುವುದು ಬೇಡ. ಸ್ಥಿರಾಸ್ತಿಯನ್ನು ಮಾರಾಟ ಮಾಡುವ ಪ್ರಯತ್ನದಲ್ಲಿ ಇರುವಿರಿ. ಇಂದಿನ ಮನೆಯ ಕೆಲಸದಿಂದ ನಿಮಗೆ ಶ್ರಮವಾಗುವುದು. ಕೃಷಿಯ ಚಟುವಟಿಕೆಯಲ್ಲಿ ಹೆಚ್ಚು ತೊಡಗುವಿರಿ. ಹಳೆಯ ಆಸೆಯನ್ನು ನೀವು ತೀರಿಸಿಕೊಳ್ಳುವ ಅವಕಾಶವಿರಲಿದೆ. ‌ಇಂದು ನಿಮ್ಮ ಅನಗತ್ಯ ಮಾತುಗಳು ಕಲಹಕ್ಕೆ ಕಾರಣವಾಗಬಹುದು. ಇನ್ನೊಬ್ಬರ ವಸ್ತುಗಳನ್ನು ನೀವು ಹಾಳು ಮಾಡುವಿರಿ. ವಿದ್ಯಾಭ್ಯಾಸದ ಸಾಲವನ್ನು ನೀವು ತೀರಿಸುವಿರಿ. ಮಹಾಲಕ್ಷ್ಮಿಯ ಉಪಾಸನೆಯನ್ನು‌ ಮಾಡಿ.

ಮಕರ ರಾಶಿ : ಸ್ಥಿರಾಸ್ತಿಗಾಗಿ ಹೆಚ್ಚು ಓಡಾಟವಿರುವುದು. ವಿದೇಶ ಪ್ರಯಾಣವು ನಿಮಗೆ ಇಷ್ಟವಿಲ್ಲದಿದ್ದರೂ ಮಾಡಬೇಕಾದೀತು. ಉದ್ಯಮವು ಒಂದೊಂದೇ ಹೆಜ್ಜೆ ಬೆಳೆಯುತ್ತಿರುವುದು ಸಂತೋಷ ಕೊಡುವುದು. ಅಪರಿಚಿತರಿಗೆ ನೀವು ಹಣವನ್ನು ಕೊಡುವಿರಿ. ಮೈಮರೆತು ಇಂದಿನ ತುರ್ತು ಕಾರ್ಯವನ್ನು ಮರೆಯುವಿರಿ. ಅಸಹಜ ವರ್ತನೆಯಿಂದ ಸಂಗಾತಿಗೆ ಅನುಮಾನ ಬರಲಿದೆ. ಮನೆಯ ಹಿರಿಯರನ್ನು ಅನಾದರದಿಂದ ನೋಡುವುದು ಉಚಿತವಲ್ಲ. ನಿಮ್ಮ ಕಛೇರಿಯಲ್ಲಿ ಉಂಟಾದ ಅಸಮಾಧಾನವನ್ನು ಆಪ್ತರ ಜೊತೆ ಹಂಚಿಕೊಳ್ಳಿ. ಇಂದು ನೀವು ಬಹಳ ಸಿಟ್ಟಗೊಂಡರೂ ಬೇಗ ಶಾಂತರಾಗುವಿರಿ. ಸ್ವಾವಲಂಬನೆ ನಿಮಗೆ ಇಷ್ಟವಾಗುವುದು.

ಕುಂಭ ರಾಶಿ : ವಾಸಸ್ಥಳವನ್ನು ನೀವು ಇಂದು ಬದಲಿಸುವ ಆಲೋಚನೆ ಮಾಡುವಿರಿ. ಸರ್ಕಾರದ ನಿಮ್ಮ ಕೆಲಸವು ಬೇಗನೆ ಮುಗಿದುಹೋಗುವುದು. ಮಿತ್ರರ ಕಾರಣದಿಂದ ವೃಥಾ ಕಾಲಹರಣವಾಗಲಿದ್ದು ಕಛೇರಿಯ ಕೆಲಸದ ಬಗ್ಗೆಯೇ ಚಿಂತೆ ಇರುವುದು. ಮಾರಾಟದ ವಿಚಾರವಾಗಿ ನೀವು ಬೇರೆ ಊರಿಗೆ ಹೋಗಬೇಕಾಗಬಹುದು. ನಿಮಗೆ ಅವಿವಾಹಿತನಾಗಿದ್ದೇನೆ ಎಂಬ ಕೊರಗು ಕಾಡಬಹುದು. ನಿಮ್ಮ ಸ್ವಭಾವಕ್ಕೆ ಹೊಂದಿಕೊಳ್ಳುವ ಸಂಗಾತಿಯು ಸಿಗುವುದು ಕಷ್ಟವಾದೀತು. ಇಂದು ಮಾಡುವ ಪ್ರಯಾಣದಲ್ಲಿ ಅಪರಿಚಿತರ ಗೆಳೆತನವಾಗಬಹುದು. ನಿಮ್ಮ ಎಲ್ಲ ವಿವರಗಳನ್ನು ಇನ್ನೊಬ್ಬರ ಜೊತೆ ಹೇಳಿಕೊಳ್ಳುವುದು ಬೇಡ. ಅಧಿಕ‌‌ ಭೋಜನದಿಂದ ನಿಮಗೆ ಕಷ್ಟವಾದೀತು.

ಮೀನ ರಾಶಿ : ಆಪ್ತರ ಜೊತೆಗಿನ ಮಾತುಕತೆಯು ನಿಮಗೆ ಆಹ್ಲಾದವನ್ನು ಉಂಟುಮಾಡುವುದು. ಇಂದಿನ ಕೆಲಸದಲ್ಲಿ ಮಂದಗತಿ ಇರಲಿದೆ. ಇತರರಿಂದ ಗೌರವ ಪ್ರಾಪ್ತವಾಗಬಹುದು. ವ್ಯಾಪಾರದಲ್ಲಿ ಅಲ್ಪ ಲಾಭವೇ ಆದರೂ ನೆಮ್ಮದಿ ಇರಲಿದೆ. ಯಾರಿಗೋ ಸಹಾಯ ಮಾಡಲು ಹೋಗಿ ಆಪತ್ತಿನಲ್ಲಿ ಸಿಕ್ಕಿಕೊಳ್ಳಬಹುದು. ಸ್ನೇಹಿತರ ಜೊತೆ ನೋವನ್ನು ಹಂಚಿಕೊಂಡು ಸಮಾಧಾನ ತಂದುಕಳ್ಳುವಿರಿ. ತಂದೆಯ ಜೊತೆ ಅಪರೂಪದ ಸಮಾರಂಭಕ್ಕೆ ಹೋಗುವಿರಿ. ಖರೀದಿಯಲ್ಲಿ ನೀವು ಸ್ಥೂಲವಾಗಿ ಖರ್ಚನ್ನು ಅಂದಾಜಿಸಿಕೊಳ್ಳಿ. ಮಕ್ಕಳು ನಿಮ್ಮ ಬಳಿ ಹೊಸತನ್ನು ತಿಳಿದುಕೊಳ್ಳಲು ಬಯಸುವರು. ಇಂದು ನೀವು ನಿಮ್ಮ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಿರಿ.

-ಲೋಹಿತಶರ್ಮಾ 8762924271 (what’s app only)