Horoscope: ರಾಶಿಭವಿಷ್ಯ, ಈ ರಾಶಿಯವರು ಆತುರದಲ್ಲಿ ಯಾವ ನಿರ್ಧಾರವನ್ನೂ ಮಾಡದೇ ಯೋಚಿಸಿ ಮುನ್ನಡೆಯಿರಿ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 07) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ, ಈ ರಾಶಿಯವರು ಆತುರದಲ್ಲಿ ಯಾವ ನಿರ್ಧಾರವನ್ನೂ ಮಾಡದೇ ಯೋಚಿಸಿ ಮುನ್ನಡೆಯಿರಿ
ಪ್ರಾತಿನಿಧಿಕ ಚಿತ್ರImage Credit source: iStock Photo
Follow us
TV9 Web
| Updated By: Rakesh Nayak Manchi

Updated on: Nov 07, 2023 | 12:45 AM

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 07) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ದಶಮೀ, ನಿತ್ಯನಕ್ಷತ್ರ: ಮಘಾ, ಯೋಗ: ಬ್ರಹ್, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 31 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:09 ರಿಂದ 04:35 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:24 ರಿಂದ 10:50 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:16 ರಿಂದ 01:42ರ ವರೆಗೆ.

ಧನು ರಾಶಿ: ಮಕ್ಕಳ‌ ಉದ್ಯೋಗದ ಚಿಂತೆ ಇರುವುದು.‌ ಗೆಳೆಯರ ಸಹಕಾರವು ನಿಮಗೆ ಬೇಕೆನಿಸುವುದು. ಬೇರೆಯವರಿಗೆ ನಿಮ್ಮ ಬಗ್ಗೆ ನಕಾರಾತ್ಮಕ ಭಾವವು ಇರಬಹುದು. ಗುರಿಯನ್ನು ಬದಲಿಸದೇ ಮುನ್ನುಗ್ಗಿ. ಮಕ್ಕಳಿಗೆ ಪ್ರೋತ್ಸಾಹವನ್ನು ಕೊಡುವಿರಿ. ನಿಮ್ಮ ಉಳಿಕೆಯ ಹಣದ ಬಗ್ಗೆ ಎಚ್ಚರವಿರಲಿ. ಭೂಮಿಯ ಉತ್ಪನ್ನಗಳಿಂದ ಲಾಭವು ಸಿಗುವುದು. ಆತುರದಲ್ಲಿ ಯಾವ ನಿರ್ಧಾರವನ್ನೂ ಮಾಡದೇ ಯೋಚಿಸಿ ಮುಂದುವರಿಯಬೇಕಾಗುವುದು. ಕುಟುಂಬದಲ್ಲಿ ಬಂದ ಭಿನ್ನಾಭಿಪ್ರಾಯವನ್ನು ನೀವು ಸರಿ ಮಾಡಲು ನೀವು ಸಮರ್ಥರಾಗುವಿರಿ. ಸಮೀಪದ ಬಂಧುಗಳ ವಿಯೋಗವೂ ಆಗಬಹುದು. ನಿಮಗೆ ಇದು ನಂಬಲಾಗದ ವಿಚಾರವೂ, ಸಹಿಸಲು ಅಸಾಧ್ಯವೂ ಆಗಬಹುದು. ನಿಮಗೆ ಗೌರವ ಸಿಗದ ಕಡೆ ಹೋಗುವುದಿಲ್ಲ. ನೌಕರರ ವಿಚಾರದಲ್ಲಿ ಒಂದು ಕಣ್ಣಿರಲಿ.

ಮಕರ ರಾಶಿ: ಹಠದ ಸ್ವಭಾವದಿಂದ ನೀವು ಅವಕಾಶದಿಂದ ವಂಚಿತರಾಗುವಿರಿ. ಅತಿಯಾದ ಮರೆವಿನ ಸಮಸ್ಯೆಯಿಂದ ವಿದ್ಯಾಭ್ಯಾಸದ ಮೇಲೆ ದುಷ್ಪರಿಣಾಮವನ್ನು ಬೀರುವುದು. ನಿವೃತ್ತಿಯ ಅಂಚಿನಲ್ಲಿದ್ದು ನಡತೆಯನ್ನು ಸರಿಯಾಗಿ ಇಟ್ಟುಕೊಳ್ಳಿ. ಒಂದೇ ವಿಚಾರವನ್ನು ಎಲ್ಲರಿಂದಲೂ ಕೇಳಿ ಜಿಗುಪ್ಸೆ ಬಂದೀತು. ಮನೆಮಂದಿಯವರ ಜೊತೆ ಸಿಟ್ಟಗೊಂಡರೆ ನಿಮಗೇ ತೊಂದರೆಯಾದೀತು. ನಿಮ್ಮ ಇಂದಿನ ಕಾರ್ಯದಿಂದ‌ ಕಛೇರಿಯಲ್ಲಿ ನಿರೀಕ್ಷೆ ಮೀರಿ ಪ್ರಶಂಸೆ ಸಿಗುವುದು. ನಿಮ್ಮವರೇ ನಿಮ್ಮ‌ ಯಶಸ್ಸನ್ನು ಸಹಿಸದೇ ತೊಂದರೆ ಕೊಡುವರು. ಹಣವನ್ನು ಸರಿಯಾಗಿ ಸಂಗ್ರಹಿಸಿ, ಕೂಡಿಡಿ. ಸಾಲದಿಂದ ನೀವು ಬೇಗ ಮುಕ್ತರಾಗುವಿರಿ. ಬೆಂಬಲಕ್ಕೆ‌ ನಿಂತವರನ್ನು ಮರೆಯುವುದು ಬೇಡ. ಕೈಲಾದ ಸಹಕಾರವನ್ನು ಮಾಡಿ. ನಿಮ್ಮ ಆತ್ಮವಿಶ್ವಾಸವು ಇತರರಿಗೆ ಅಹಂಕಾರದಂತೆ ತೋರುವುದು.

ಕುಂಭ ರಾಶಿ: ಅಧ್ಯಾತ್ಮದಲ್ಲಿ ಆಸಕ್ತಿ ಇರುವ ನಿಮಗೆ ಅಧಿಕ ನೆಮ್ಮದಿ ಸಿಗುವುದು. ಬಹಳ ಖುಷಿಪಡುವಿರಿ. ಬಂಧುಗಳ ಒಡನಾಟ ನಿಮಗೆ ಸಿಗಲಿದೆ. ಸ್ನೇಹಿತರ ಜಗಳದಲ್ಲಿ ತಲೆ ಹಾಕಿ ಅಪಾಯಕ್ಕೆ ಸಿಕ್ಕಿಕೊಳ್ಳುವಿರಿ. ಹೊಸ ವಿಷಯಗಳತ್ತ ಉತ್ಸಾಹವೇ ಇರಲಿದ್ದು, ಇದು ತಾತ್ಕಾಲಿಕ ಅಷ್ಟೇ. ದಾಂಪತ್ಯದಲ್ಲಿನ ವಿರಸದಿಂದ ಮಾನಸಿಕ ಆರೋಗ್ಯವನ್ನು ಕೆಡಿಸುವುದು. ಶ್ರಮದಿಂದ ನ್ಯಾಯಾಲಯಲ್ಲಿ ಗೆಲುವನ್ನು ಸಾಧಿಸುವಿರಿ. ನಿಮ್ಮಲ್ಲಿ ಅನಾರೋಗ್ಯದ ಭಯವು ಇರುವುದು. ಹಿರಿಯರಿಂದ ನಿಮ್ಮ ಜೀವನಕ್ಕೆ ಮಾರ್ಗದರ್ಶನ ಸಿಗಲಿದೆ. ನೌಕರರಿಲ್ಲದೇ ಉದ್ಯಮಕ್ಕೆ ಅಡ್ಡಿಯಾದೀತು. ಉದ್ಯೋಗದ ಕಾರಣಕ್ಕೆ ಇಂದು ನೀವು ಪ್ರಯಾಣವನ್ನು ಮಾಡಬೇಕಾಗುವುದು. ನಿಶ್ಚಿಂತೆಯಿಂದ ಇರಬೇಕೆಂದುಕೊಂಡರೂ ಕೆಲಸಗಳು ಬರುವುದು. ಮಾತಿನ ತಂತ್ರವು ಫಲಿಸುವುದು.

ಮೀನ ರಾಶಿ: ನಿದ್ರಾಭಂಗದಿಂದ ಮಾನಸಿಕ‌ ಕಿರಿಕಿರಿ ಅಧಿಕವಾದೀತು. ದಾಂಪತ್ಯದ ವಾಗ್ವಾದವು ಅತಿರೇಕಕ್ಕೆ ಹೋಗಬಹುದು. ‌ಮಿತ್ರರು ನಿಮ್ಮಆಸಕ್ತಿಯ ಕ್ಷೇತ್ರವನ್ನು ಬದಲಿಸಬಹುದು.‌ ಇಂದಿನ ಕಾರ್ಯವನ್ನು ಮುಂದೂಡುವುದು ಬೇಡ. ಪೋಷಕರನ್ನು ಕಡೆಗಣಿಸಿದ್ದು ನಿಮಗೆ ಪಾಪಪ್ರಜ್ಞೆ ಕಾಡಬಹುದು. ಕುಟುಂಬದಲ್ಲಿ ಸಂತಸದ ವಾತಾವರಣವಿರುವಂತೆ ಮಾಡುವಿರಿ. ವಾಹನವನ್ನು ಚಲಾಯಿಸುವಾಗ ಸ್ವಲ್ಪ ಎಚ್ಚರವಿರಲಿ. ಹೊಸ ವ್ಯಾಪಾರದಲ್ಲಿಯೂ ನಿಮಗೆ ಮನಸ್ಸಾಗಬಹುದು. ಯಂತ್ರಗಳಿಂದ ತೊಂದರೆಯಾಗಬಹುದು. ಬಹಳ ಎಚ್ಚರಿಕೆಯಿಂದ ಕಾರ್ಯವನ್ನು ಮಾಡಿ. ಇಂದು ನಿಮ್ಮದೇ ಸ್ವಂತ ಕಾರ್ಯಗಳು ಇರಲಿದ್ದು, ಬೇರೆ ಕೆಲಸಕ್ಕೆ ಮನಸ್ಸು ಕೊಡುವುದು ಕಷ್ಟವಾದೀತು‌. ಒತ್ತಾಯದಿಂದ ಕೆಲಸವನ್ನು ಮಾಡಬೇಕಾದೀತು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ