Horoscope: ದಿನಭವಿಷ್ಯ; ನಿಮ್ಮ ನೇರ ಮಾತಿನಿಂದ ತೊಂದರೆ ಆಗಬಹುದು

| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 07, 2023 | 12:45 AM

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 07) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದಿನಭವಿಷ್ಯ; ನಿಮ್ಮ ನೇರ ಮಾತಿನಿಂದ ತೊಂದರೆ ಆಗಬಹುದು
ಪ್ರಾತಿನಿಧಿಕ ಚಿತ್ರ
Follow us on

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 07) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು,
ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ನವಮೀ,
ನಿತ್ಯನಕ್ಷತ್ರ: ಪುನರ್ವಸು, ಯೋಗ: ಪರಿಘ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06-23ಕ್ಕೆ, ಸೂರ್ಯಾಸ್ತ ಸಂಜೆ 06 – 17ಕ್ಕೆ, ರಾಹು ಕಾಲ ಬೆಳಿಗ್ಗೆ 09:22 – 10:51ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:50 – 03:19ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:24 – 07:53ರ ವರೆಗೆ.

ಧನು ರಾಶಿ : ಸಣ್ಣದಾಗಿ ಹದ ತಪ್ಪಿದ ಆರೋಗ್ಯವು ದೊಡ್ಡದಾಗಬಹುದು. ದೂರ ಪ್ರಯಾಣವನ್ನು ನೋವು ಹೆಚ್ಚು ಇಷ್ಟಪಡುವಿರಿ. ತಂದೆಯಿಂದ ಸಹಕಾರವನ್ನು ಪಡೆಯುವಿರಿ. ನಿಮ್ಮ ನೇರ ಮಾತಿನಿಂದ ತೊಂದರೆ ಆಗಬಹುದು. ವ್ಯರ್ಥ ಓಡಾಟದಿಂದ ಬೇಸರವಾಗುವುದು. ನಿಮ್ಮ ಇಂದಿನ ತುರ್ತು ಕಾರ್ಯಗಳನ್ನು ಮುಂದೂಡುವಿರಿ. ಒತ್ತಡದ ಕಾರ್ಯದಿಂದ ನೀವು ದೂರ ಉಳಿಯುವಿರಿ. ಲಾಭ ಬರುವ ಕಾರ್ಯದಲ್ಲಿ ಮಾತ್ರ ಇಚ್ಛೆಯು ಇರುವುದು. ಮನಸ್ಸಿನ ಚಾಂಚಲ್ಯವನ್ನು ಧ್ಯಾನದಿಂದ ಸರಿ ಮಾಡಿಕೊಳ್ಳಿ. ಬಂಧುಗಳು ನಿಮಗೆ ಆರ್ಥಿಕ ಸಹಾಯವನ್ನು ಮಾಡಲು ಬಂದರೂ ಸ್ವಾಭಿಮಾನದಿಂದ ನಿರಾಕರಿಸುವಿರಿ. ಸರ್ಕಾರದ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಸಿಗಬಹುದು. ನಿಮ್ಮವರ ಏಳ್ಗೆಯನ್ನು ಸಹಿಸುವುದು ನಿಮಗೆ ಕಷ್ಟವಾದೀತು. ಕಲಾವಿದರು ಉತ್ತಮ ಅವಕಾಶಗಳನ್ನು ಪಡೆದುಕೊಳ್ಳುವರು.

ಮಕರ ರಾಶಿ : ಪಾಲುದಾರಿಕೆಯಲ್ಲಿ ಕಲಹವು ಶುರುವಾಗಬಹುದು. ಯಂತ್ರಗಳ ಮಾರಾಟದಿಂದ ಹೆಚ್ಚಿನ ಲಾಭಾಂಶವನ್ನು ಪಡೆಯುವಿರಿ. ಸಹೋದ್ಯೋಗಿಗಳ ಕಿರಿಕಿರಿಯಿಂದ ಉದ್ಯೋಗವನ್ನು ಬದಲಿಸುವಿರಿ. ಇಂದು ಸ್ತ್ರೀಯರಿಗೆ ಅನಿರೀಕ್ಷಿತ ತೊಂದರೆಗಳು ಇರಲಿದೆ. ಅನಾರೋಗ್ಯವು ನಿಮ್ಮ ಉತ್ಸಾಹವನ್ನು ಕಡಿಮೆ ಮಾಡುವುದು. ನೆರೆಹೊರೆಯರ ಜೊತೆ ವಾಗ್ವಾದ‌ ಮಾಡುವಿರಿ. ಬಾಡಿಗೆ ಮನೆಯ ಮಾಲಿಕರಿಂದ ನಿಮಗೆ ಏನಾದರೂ ಆಗಬಹುದು. ಸರ್ಕಾರದ ಕಡೆಯಿಂದ ನಿಮ್ಮ ಕೆಲಸಕ್ಕೆ ಒಪ್ಪಿಗೆ ಸಿಗುವುದು. ಉದ್ಯೋಗದಲ್ಲಿ ಉದ್ವೇಗಕ್ಕೆ ಒಳಗಾಗುವ ಸಾಧ್ಯತೆ ಇದೆ.‌ ಉದ್ಯೋಗದ ಮಿತ್ರರು ಇಂದು ಸಿಗವರು. ಆದಾಯವು ನಿಮ್ಮ ಯೋಜನೆಯಷ್ಟು ಇದ್ದರೂ ಆದಾಯವು ಹೆಚ್ಚಿನ ಖರ್ಚಿಗೆ ಕಾರಣವಾಗುವುದು. ದಾಂಪತ್ಯದಲ್ಲಿ ಕಲಹವು ಸಾಮಾನ್ಯವಾದರೂ ಇಂದು ಬೇರೆ ಪರಿಣಾಮವನ್ನು ಬೀರಬಹುದು.

ಕುಂಭ ರಾಶಿ : ಆರ್ಥಿಕ ವಿಚಾರವಾಗಿ ದಾಂಪತ್ಯದಲ್ಲಿ ವಿರಸ ಉಂಟಾಗಬಹುದು. ವಿದೇಶ ಪ್ರಯಾಣಕ್ಕೆ ನೀವು ಸಮಯವನ್ನು ಹೊಂದಿಸಿಕೊಳ್ಳುವಿರಿ. ನೀವು ಎಣಿಸಿದ್ದನ್ನು ಬಂಧುಗಳು ಮಾಡಿಕೊಡುವರು. ನಿಮಗೆ ಬೇರೆ ಬೇರೆ ಮೂಲಗಳಿಂದ ಸಂಪಾದನೆಗೆ ಇಂದು ಅವಕಾಶಗಳು ಸಿಗುವುದು. ವಿದೇಶೀ ವ್ಯವಹಾರದಿಂದ ನಿಮಗೆ ಲಾಭವಿದೆ. ಕುಟುಂಬದಲ್ಲಿ ನೆಮ್ಮದಿಯ ತಂದುಕೊಳ್ಳುವಿರಿ. ಇಷ್ಟಮಿತ್ರರ ಭೇಟಿಯಿಂದ ಖುಷಿಯು ಹೆಚ್ಚಾಗುವುದು. ಇನ್ನೊಬ್ಬರ ಕ್ಷೇಮ ಭಾಗಿಯಾಗುವಿರಿ. ನಿಮ್ಮ ಕೆಲಸಗಳಿಗೇ ನೀವು ಇಂದು ಹೆಚ್ಚು ಪ್ರಾಮುಖ್ಯ ನೀಡಿ ಮುಗಸಿಕೊಳ್ಳುವಿರಿ. ಬಹಳ ದಿನಗಳ ಸಂತಾನದ ಸುಖದ ನಿರೀಕ್ಷೆಯಲ್ಲಿ ಸಫಲರಾಗುವುದು.‌ ಸಾಹಸದ‌ ಕಾರ್ಯಗಳಲ್ಲಿ ಜಾಗರೂಕತೆ ಅವಶ್ಯಕ. ಆಪ್ತರಿಂದ ನಿಮ್ಮ ಸಂಪತ್ತನ್ನು ಪಡೆದುಕೊಳ್ಳುವಿರಿ. ಇನ್ನೊಬ್ಬರ ಒತ್ತಾಯಕ್ಕೆ ಹೊಸ ಕಲಿಕೆಯನ್ನು ಆರಂಭಿಸುವಿರಿ.

ಮೀನ ರಾಶಿ : ನಿಮ್ಮ ಸ್ಥಿರಾಸ್ತಿಯ ಮಾರಾಟಕ್ಕೆ ಹೆಚ್ಚು ಓಡಾಟ ಮಾಡಬೇಕಾದೀತು. ಬಂಧುಗಳು ಮನೆಗೆ ಬಂದ ಕಾರಣ ಖರ್ಚು ಹೆಚ್ಚಾದೀತು. ನಿಮ್ಮ ಸಣ್ಣ ಮನಸ್ಸನ್ನು ಅವರಿಗೆ ತೋರಿಸಬೇಡಿ. ಉನ್ನತ ಅಧ್ಯಯನವನ್ನು ಬಯಸಿ ಬೇರೆ ಕಡೆಗೆ ತೆರಳುವಿರಿ. ನಿಮ್ಮ ನಿರೀಕ್ಷೆಯ ಗುರಿಯನ್ನು ತಲುಪುವುದು ಕಷ್ಟವಾಗಬಹುದು. ನಿಮ್ಮ ಸಂಗಾತಿಯ ವಿಚಾರದಲ್ಲಿ ಪ್ರೀತಿಯು ಅಧಿಕವಾಗಿರುವುದು.‌ ಬಂಧುಗಳ ಸಲಹೆಯು ನಿಮ್ಮನ್ನು ದಾರಿ ತಪ್ಪಿಸಬಹುದು. ಆರ್ಥಿಕ ವ್ಯವಹಾರವನ್ನು ಮೊದಲೇ ಸರಿಮಾಡಿಕೊಳ್ಳುವುದು ಉತ್ತಮ. ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನೀವು ಹೆಚ್ಚು ಶ್ರಮವಹಿಸಬೇಕು.

-ಲೋಹಿತಶರ್ಮಾ – 8762924271 (what’s app only)