Horoscope: ರಾಶಿಭವಿಷ್ಯ, ಈ ರಾಶಿಯ ಸ್ತ್ರೀಯರಿಗೆ ನಾನಾ ರೀತಿಯಿಂದ ಅನುಕೂಲವಾಗಬಹುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 08) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ, ಈ ರಾಶಿಯ ಸ್ತ್ರೀಯರಿಗೆ ನಾನಾ ರೀತಿಯಿಂದ ಅನುಕೂಲವಾಗಬಹುದು
ರಾಶಿ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 08, 2023 | 12:45 AM

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 08) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ಐಂದ್ರ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 31 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:16 ರಿಂದ 01:42 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:24 ರಿಂದ 09:24 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 10:50 ರಿಂದ 12:16ರ ವರೆಗೆ.

ಧನು ರಾಶಿ : ಹಿತಶತ್ರುಗಳ ಕಾರಣದಿಂದ ಅವಕಾಶದಿಂದ ವಂಚಿತರಾಗುವಿರಿ. ವಾಹನ ಸಂಚಾರದಲ್ಲಿ ವ್ಯತ್ಯಯವಾಗುವುದು‌. ಎಲ್ಲ ರೀತಿಯಿಂದಲೂ ಅನುಕೂಲವಾಗಲಿ ಎಂಬ ಮನೋಭಾವವು ಇರಲಿದೆ. ಹಿತಶತ್ರುಗಳ ತೊಂದರೆಯ ನಡುವೆಯೂ ನಿಮ್ಮ ಅಭಿವೃದ್ಧಿಯು ಆಗಲಿದೆ. ಇದರಿಂದ‌ ನಿಮ್ಮ ಅಳಿದುಳಿದ ಶತ್ರುಗಳು ನಾಶವಾಗುವರು. ನಿಮ್ಮದೇ ಶ್ರಮದಿಂದ ಭೂಲಾಭವನ್ನು ಮಾಡಿಕೊಂಡರೂ ನಿಮಗೆ ಸಲ್ಲದ ಮಾತುಗಳನ್ನು ಕೇಳಬೇಕಾದೀತು. ಆಸ್ತಿಯ ಗಳಿಕೆಯಲ್ಲಿ ಎಲ್ಲವೂ ಅನಾಯಾಸವಾಗಿ ನಡೆಯದು. ಬಹಳ ದಿನಗಳ ಅನಂತರ ಮನೆಯಲ್ಲಿ ಧಾರ್ಮಿಕ ಕಾರ್ಯದಲ್ಲಿ ಆಸಕ್ತಿಯು ಬರಬಹುದು. ಸಣ್ಣ ವಿಚಾರಕ್ಕೆ ನೀವು ಕೋಪಗೊಂಡು ಮನಸ್ಸನ್ನು ಹಾಳು ಮಾಡಿಕೊಳ್ಳುವಿರಿ. ಇನ್ನೊಬ್ಬರನ್ನು ನಿಂದಿಸುವ ಮಾತು ವಿವಾದಕ್ಕೆ ಗುರಿಯಾಗಬಹುದು. ಮಕ್ಕಳಿಂದ ನೀರಿಕ್ಷಿಸುವುದನ್ನು ಕಡಿಮೆ‌ ಮಾಡಿ. ನೆಮ್ಮದಿ ಸಿಗುವುದು.

ಮಕರ ರಾಶಿ : ನಂಬಿಕೆಯು ಭಗ್ನವಾಗಬಹುದು. ಎಲ್ಲರ ಜೊತೆ ಕಲಹವನ್ನು ಮಾಡಿಕೊಳ್ಳುವಿರಿ. ಸ್ನೇಹಿತರಿಗೆ ಸ್ಪಂದಿಸಬೇಕಾಗುವುದು. ಸಹೋದ್ಯೋಗಿಗಳಿಂದ ಕಾರ್ಯಗಳಿಗೆ ವಿಘ್ನವುಮನಡಾಗುವುದು. ಸಾಲದಿಂದ ಬಿಡುಗಡೆ ಹೊಂದಲು ಆದಾಯದ ಮೂಲವನ್ನು ಹೆಚ್ಚಿಸಿಕೊಳ್ಳುವಿರಿ. ಸ್ಥಿರಾಸ್ತಿಯ ಸಂಪಾದನೆಗೆ ಆಪ್ತರ ಮಾರ್ಗದರ್ಶನವನ್ನು ಪಡೆದುಕೊಳ್ಳುವುದು ಉತ್ತಮ. ಇಂದು ವಿದೇಶಕ್ಕೆ ಪ್ರಯಾಣ ಹೋಗುವ ಅವಕಾಶಗಳು ತೆರೆದುಕೊಳ್ಳಬಹುದು. ನಿಮ್ಮ ಪ್ರಯತ್ನಕ್ಕೆ ಫಲವು ಇಂದೇ ಸಿಗಲಿ ಎಂಬ ನಿರೀಕ್ಷೆ ಬೇಡ. ಇಂದು ನೀವು ತಂದೆಯವರಿಗೆ ಎದುರು ಮಾತನಾಡಿ ಅವರ ಮನಸ್ಸನ್ನು ನೋಯಿಸುವಿರಿ. ಪಾಲುದಾರಿಕೆಯಲ್ಲಿ ವ್ಯತ್ಯಾಸವನ್ನು ಮಾಡಬೇಕಾದೀತು. ಶನೈಶ್ಚರನಿಗೆ ಪ್ರಿಯವಾದ ವಸ್ತುವನ್ನು ನೀಡಿ.

ಕುಂಭ ರಾಶಿ : ಅನಿರೀಕ್ಷಿತ ಪ್ರಯಾಣದಿಂದ ಆಯಾಸವು ಅಧಿಕವಾದೀತು. ಯಾವುದಕ್ಕೂ ನಿರಾಸೆ ಇಟ್ಟುಕೊಳ್ಳುವುದು ಬೇಡ. ಸಮಯವು ಬೇಕಾಗಬಹುದು. ಅಧಿಕ ಖರ್ಚಿನಿಂದ ಇಂದಿನ‌ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ವಾಸಸ್ಥಳವನ್ನು ಬದಲಿಸಬೇಕಾಗುವುದು. ಮನಸ್ಸಿಗೆ ನಿಮ್ಮವರು ಆಡಿದ ಮಾತುಗಳು ಹಿಂಸೆಯನ್ನು ಕೊಡಬಹುದು. ತಾಯಿಯಿಂದ ನಿಮಗೆ ಲಾಭವಾಗಬಹುದು. ಇಂದಿನ ವ್ಯರ್ಥ ಓಡಾಟದಿಂದ ನಿಮಗೆ ಆಯಾಸವಾಗುವುದು. ಇಷ್ಟರೊಳಗೆ ಆಗಬೇಕಾದ ಸರ್ಕಾರಿ ಕೆಲಸವು ಮತ್ತೂ ಮುಂದಕ್ಕೆ ಹೋಗುವುದು. ಯಂತ್ರಗಳಿಂದ ದೇಹಕ್ಕೆ ತೊಂದರೆ ಆಗಬಹುದು. ಬಂದ ಅವಕಾಶವನ್ನು ಬಿಟ್ಟು ಅನಂತರ ದುಃಖಿಸುವುದರಲ್ಲಿ ಅರ್ಥವಿರದು. ಆರ್ಥಿಕ ತೊಂದರೆಗೆ ನೀವು ಬಂಧುಗಳ ಸಹಾಯವನ್ನು ಪಡೆಯಬಹುದು. ಸಂಗಾತಿಗೆ ಸಮಯವನ್ನು ಕೊಡುವುದು ಕಷ್ಟವಾದೀತು. ದಾಂಪತ್ಯದಲ್ಲಿ ಮತ್ತೆ ಮತ್ತೆ ಇಂದೇ ಘಟನೆಯು ಮರುಕಳಿಸಬಹುದು.

ಮೀನ ರಾಶಿ : ಇಂದು ಅಂದುಕೊಂಡ ದೇವರ‌ ಕಾರ್ಯವು ನಡೆಯದೇಹೋಗಬಹುದು. ಯಾವುದಾದರೂ ಸಮಾಜ ಬಾಹಿರ ಕೃತ್ಯಗಳಲ್ಲಿ ಸಿಕ್ಕಿಕೊಳ್ಳುವ ಸಂಭವವಿರಲಿದೆ. ಸ್ತ್ರೀಯರಿಗೆ ನಾನಾ ರೀತಿಯಿಂದ ಅನುಕೂಲವಾಗಬಹುದು. ಇಂದಿನ ಕಾರ್ಯಗಳಲ್ಲಿ ಪ್ರಗತಿ ಇರಲಿದ್ದು ಸಂತೋಷವಾಗುವುದು. ಉದ್ಯೋಗದಲ್ಲಿ ಭಡ್ತಿ ಸಿಗುವ ಸಾಧ್ಯತೆ ಇದೆ. ಸಾದಿಷ್ಟವಾದ ಭೋಜನದಿಂದ ಸಂತೃಪ್ತಿ ಇರಲಿದೆ. ಗೊಂದಲದಿಂದ ಇರುವ ಮನಸ್ಸು ಇಂದು ಪ್ರಶಾಂತವಾಗಲಿದೆ. ಆತ್ಮೀಯರ ಭೇಟಿಯಿಂದ ನಿಮಗೆ ಸಮಾಧಾನ ಸಿಗಲಿದೆ. ಸಹೋದ್ಯೋಗಿಗಳ‌ ಜೊತೆ ಭಿನ್ನಾಭಿಪ್ರಾಯ ಬಂದು ಅದು ವೈಯಕ್ತಿಕ ಶತ್ರುತ್ವ ಬರಬಹುದು. ಸಂತೋಷದ ಸಮಯವನ್ನು ನೆನಪಿಸಿಕೊಳ್ಳುವಿರಿ. ನೀವು ಪ್ರಸಿದ್ಧಿಯನ್ನು ಪಡೆಯಲು ಆಸಕ್ತಿಯು ಹೆಚ್ಚುವುದು. ಕೆಲವು ವಿಚಾರವನ್ನು ನೀವೇ ದೊಡ್ಡ ಮಾಡಿಕೊಂಡು ತಲೆಯನ್ನು ಹಾಳು ಮಾಡಿಕೊಳ್ಳುವಿರಿ.

-ಲೋಹಿತಶರ್ಮಾ 8762924271 (what’s app only)

ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್