Horoscope: ದಿನಭವಿಷ್ಯ; ಸಾಮಾಜಿಕ ಕಾರ್ಯದಲ್ಲಿ ಪ್ರಶಂಸೆ ಸಿಕ್ಕಿ ಸಂತೋಷವಾಗವುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 08) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದಿನಭವಿಷ್ಯ; ಸಾಮಾಜಿಕ ಕಾರ್ಯದಲ್ಲಿ ಪ್ರಶಂಸೆ ಸಿಕ್ಕಿ ಸಂತೋಷವಾಗವುದು
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 08, 2023 | 12:45 AM

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 08) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ದಶಮೀ, ನಿತ್ಯನಕ್ಷತ್ರ: ಪುಷ್ಯ, ಯೋಗ: ಶಿವ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06-23ಕ್ಕೆ, ಸೂರ್ಯಾಸ್ತ ಸಂಜೆ 06 – 16ಕ್ಕೆ, ರಾಹು ಕಾಲ ಸಂಜೆ 04:47 –06:16ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:20 –01:49ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:18 –04:47ರ ವರೆಗೆ.

ಧನು ರಾಶಿ : ಇಂದು ಆಸ್ತಿ ಸಂಬಂಧಿತ ವಿಷಯಗಳಲ್ಲಿ ನೀವು ಜಾಣ್ಮೆಯಿಂದ ವ್ಯವಹರಿಸಿ. ಆಸ್ತಿ ಹೂಡಿಕೆಯು ನಿಮಗೆ ನಿರೀಕ್ಷಿತ ಆದಾಯವನ್ನು ನೀಡುವುದಿಲ್ಲ. ತಮ್ಮ ಮೇಲಧಿಕಾರಿಗಳ ಜೊತೆ ದಕ್ಷತೆಯಿಂದ ವ್ಯವಹರಿಸುವ ಜನರಿಗೆ ಉದ್ಯೋಗದಲ್ಲಿ ಬೆಳೆಯುವ ಅವಕಾಶಗಳು ಸಿಗಲಿವೆ. ಪ್ರಮುಖ ವ್ಯಕ್ತಿಗಳಿಗೆ ಕಿರಿಕಿರಿ ಮಾಡಬೇಡಿ. ಮನೆಯಲ್ಲಿಯೇ ಇದ್ದು ನೆಮ್ಮದಿ ಕಾಣುವಿರಿ. ಸಮಸ್ಯೆಗಳನ್ನು ನೀವು ಹಂಚಿಕೊಳ್ಳಲು ಹಿಂಜರಿಯುವಿರಿ. ಬಂಧುಗಳ ವಿಯೋಗವಾಗಬಹುದು. ನಿಮ್ಮ ಜೀವನದ ದಿನಚರಿಯನ್ನು ಬದಲು ಮಾಡಿಕೊಳ್ಳಿ. ದಾಂಪತ್ಯದಲ್ಲಿ ನಿಮಗೆ ವೈಮನಸ್ಯ ಉಂಟಾದರೂ ಸರಿಮಾಡಿಕೊಳ್ಳುವಿರಿ. ಯಾರಿಗಾದರೂ ಸಹಾಯ ಮಾಡಲು ಹೋಗಿ ತೊಂದರೆಗೆ ಸಿಕ್ಕಿಕೊಳ್ಳಬಹುದು. ಇಂದು ನಿಮ್ಮ ಮನಸ್ಸು ಉಲ್ಲಾಸದಿಂದ ಇರಲಿದೆ. ನಿಮ್ಮ ಯೋಚನೆಯು ಬಲಿಷ್ಠವಾಗಿದ್ದರೂ ಅದನ್ನು ಕ್ರಿಯಾರೂಪಕ್ಕೆ ತರುವುದು ಕಷ್ಟವಾದೀತು.

ಮಕರ ರಾಶಿ : ಸಾಮಾಜಿಕ ಕಾರ್ಯದಲ್ಲಿ ಪ್ರಶಂಸೆ ಸಿಕ್ಕಿ ಸಂತೋಷವಾಗವುದು. ಇಂದು, ನಿಮ್ಮ ಒಡಹುಟ್ಟಿದವರು ಹಣಕಾಸಿನ ಸಹಾಯಕ್ಕಾಗಿ ನಿಮ್ಮನ್ನು ಸಂಪರ್ಕಿಸಬಹುದು. ಈ ದಿನ ನಿಮ್ಮ ಆರೋಗ್ಯದ ಬಗ್ಗೆ ನೀವು ವಿಶೇಷ ಕಾಳಜಿ ವಹಿಸಬೇಕು ಮತ್ತು ಸಮತೋಲಿತ ದಿನಚರಿಯನ್ನು ಅನುಸರಿಸಿ. ನಿಮ್ಮ ಶತ್ರುಗಳಿಂದ ಸೃಷ್ಟಿಯಾಗುವ ಕೆಲವು ಸಣ್ಣ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಅಧಿಕಾರಿಗಳೊಂದಿಗೆ ವ್ಯವಹರಿಸುವಾಗ ನೀವು ಜಾಗರೂಕರಾಗಿರಬೇಕು ಮತ್ತು ಅವರನ್ನು ವಿರೋಧಿಸುವುದನ್ನು ತಪ್ಪಿಸಬೇಕು. ನಿಮ್ಮ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿಗೆ ಪರಿಣಾಮ ಬೀರಬಹುದು, ಹೀಗಾಗಿ ಅದರ ಬಗ್ಗೆ ಗಮನಕೊಡಿ. ನಿಮ್ಮ ಪ್ರಭಾವವು ಎಲ್ಲರಿಗೂ ತಿಳಿಯಬಹುದು. ಸರ್ಕಾರಿ ಉದ್ಯೋಗದಲ್ಲಿ ಪ್ರಗತಿಯಾಗಲಿದೆ. ತಂದೆಯ ಸೇವೆಯನ್ನು ಮಾಡುವ ಮನಸ್ಸು ಆಗಲಿದೆ. ಬೇರೆಯವರ ಮಾತನ್ನು ಪೂರ್ಣವಾಗಿ ನಂಬಲು ನಿಮಗೆ ಆಗದು.

ಕುಂಭ ರಾಶಿ : ಆರ್ಥಿಕ ಅಡೆತಡೆಗಳು ಇಂದು ಕುಟುಂಬ ವೈಷಮ್ಯಕ್ಕೆ ಕಾರಣವಾಗಬಹುದು. ಅಂತಹ ಸಂದರ್ಭಗಳಲ್ಲಿ, ಕುಟುಂಬದ ಸದಸ್ಯರ ಜೊತೆ ಮಾತನಾಡುವಾಗ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ಉಳಿದ ಸಾಲವನ್ನು ತೀರಿಸುವಿರಿ. ಬೆನ್ನು ನೋವು ಅಧಿಕವಾಗಬಹುದು. ಸಹೋದರರ ಅಸಹಕಾರವು ನಿಮಗೆ ಹಿಂಸೆಯನ್ನು ಕೊಡುವುದು. ಅತಿಯಾದ ಅನಾರೋಗ್ಯದಿಂದ ವೈದ್ಯರ ಸಲಹೆಯನ್ನು ಪಡೆಯಿರಿ. ಸಕಾರಾತ್ಮ ಆಲೋಚನೆಗಳಿಂದ ನೀವು ಸಂತೋಷವಾಗಿ ಇರುವಿರಿ. ಇನ್ನೊಬ್ಬರ ಅನವಶ್ಯಕ ವಿಚಾರಕ್ಕೆ ನೀವು ತಲೆ ಹಾಕಬೇಡಿ. ತಂದೆಯಿಂದ ತಪ್ಪಿನ ಕೆಲಸಕ್ಕೆ ಬೈಗುಳ ಸಿಕ್ಕೀತು. ಸೌಂದರ್ಯಕ್ಕೆ ಹೆಚ್ಚು ಮಹತ್ತ್ವ ಕೊಡುವಿರಿ. ಆಸ್ತಿಯ ಸಂರಕ್ಷಣೆಗೆ ಕಷ್ಡವಾದೀತು. ಮಂದಗತಿಯಲ್ಲಿ ಇರುವ ಆರ್ಥಿಕತೆಯನ್ನು ಬಲಗೊಳಿಸುವ ಪ್ರಯತ್ನವು ನಡೆಯುವುದು.

ಮೀನ ರಾಶಿ : ನಿಮ್ಮ ದೈಹಿಕ ಚೈತನ್ಯವನ್ನು ಕಾಪಾಡಿಕೊಳ್ಳಲು ಕೆಲವು ಸಮಯವಲ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವಿರಿ. ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಹಣಕಾಸಿನ ವಹಿವಾಟಿನ ಜೊತೆ ವ್ಯವಹರಿಸುವಾಗ ಜಾಗರೂಕತೆ ಇರಲಿ. ನಿಮ್ಮ ವಿವಾಹವು ಮುಂದೆ ಮುಂದೆ ಹೋಗುವುದಕ್ಕೆ ಕಾರಣವನ್ನು ದೈವಜ್ಞರಿಂದ ಪಡೆಯಿರಿ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧವಾಗುವರು. ‌ಶಾಂತ ವಾತಾವರಣವನ್ನು ಓದಿಗಾಗಿ ಹುಡುಕುವಿರಿ. ನೀವು ಆಡಿದ ಮಾತೇ ನಿಮಗೆ ಬೇರೆಯವರ ಮೂಲಕ ಬರಲಿದೆ. ಹಳೆಯ ವಾಹನದ ಮಾರಾಟದಿಂದ ನಿಮಗೆ ಆರ್ಥಿಕ ಲಾಭವು ಆಗುವುದು. ಧಾರ್ಮಿಕ ಆಚರಣೆಗಳಲ್ಲಿ ನಿರಾಸಕ್ತಿ ಇರುವುದು. ನಾಯಕರಿಗೆ ಕೆಲವು ತೊಂದರೆಗಳು ಬರಬಹುದು. ನಿಮಗೆ ಕಾರ್ಯದ ಒತ್ತಡ ನಡುವೆಯೂ ನಿಮ್ಮವರಿಗೆ ಸ್ವಲ್ಪ ಸಮಯ ಕೊಡುವಿರಿ.

-ಲೋಹಿತಶರ್ಮಾ – 8762924271 (what’s app only)

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ