Horoscope: ಈ ರಾಶಿಯವರು ವಾಹನ ಚಾಲನೆಯಲ್ಲಿ ಜಾಗರೂಕರಾಗಿರಿ

| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 08, 2023 | 12:30 AM

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 08) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರು ವಾಹನ ಚಾಲನೆಯಲ್ಲಿ ಜಾಗರೂಕರಾಗಿರಿ
ಸಾಂದರ್ಭಿಕ ಚಿತ್ರ
Follow us on

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 08 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ನವಮೀ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ವಜ್ರ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 38 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:58 ರಿಂದ 12:30 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:35 ರಿಂದ 05:07ರ ವರೆಗೆ, ಗುಳಿಕ ಕಾಲ ಸಂಜೆ 07:26 ರಿಂದ 09:26ರ ವರೆಗೆ.

ಸಿಂಹ ರಾಶಿ : ಉದ್ಯೋಗದಲ್ಲಿ ಪ್ರಗತಿ ಇಲ್ಲ ಎಂದು ಬೇಸರಗೊಂಡಿದ್ದರೆ ನಿಮಗೆ ಅಲ್ಪ ನೆಮ್ಮದಿಯ ಸಂಗತಿಯು ಇರಲಿದೆ. ನೌಕರರ ಕಾರ್ಯವು ನಿಮಗೆ ಸಂತೋಷವನ್ನು ತರದು. ಸಂಪೂರ್ಣವಾದ ಮನಸ್ಸಿನಿಂದ ಕಾರ್ಯವನ್ನು ಮಾಡಲಾಗದು‌. ಲಾಭವಿಲ್ಲದ ಕಾರ್ಯದಲ್ಲಿ ಆಸಕ್ತಿಯು ಕಡಿಮೆ ಇರಲಿದೆ. ವಾಹನ ಚಾಲನೆಯಲ್ಲಿ ಜಾಗರೂಕರಾಗಿರಿ. ಕಣ್ಣಿನ ತೊಂದರೆಯು ಹೆಚ್ಚಾಗಬಹುದು. ನಿಮ್ಮ ಮೇಲಧಿಕಾರಿಗಳು ನಿಮ್ಮ ಕೆಲಸಕ್ಕೆ ಅಸಮಾಧಾನಗೊಳ್ಳುವರು. ನಿಮಗೆ ಗೊತ್ತಿಲ್ಲದೇ ಇರುವ ವಿಚಾರಗಳನ್ನು ಕೇಳಿ ಪಡೆಯಿರಿ. ಎಲ್ಲವನ್ನೂ ತಿಳಿದವರಂತೆ ಇರುವುದು ಬೇಡ. ಉನ್ನತ ವ್ಯಾಸಂಗದ ಆಸಕ್ತಿಯನ್ನು ಮನೆಯಲ್ಲಿ ಹೇಳುವಿರಿ.

ಕನ್ಯಾ ರಾಶಿ : ಆರೋಗ್ಯದಲ್ಲಿ ಸುಧಾರಣೆ ಇರಲಿದ್ದು ಕಾರ್ಯಕ್ಕೆ ತಯಾರಾಗುವಿರಿ. ಕಛೇರಿಯ ಕಾರ್ಯದ ನಿಮಿತ್ತ ಓಡಾಟವನ್ನು ಮಾಡಬೇಕಾಗಿದ್ದು ನಿಮಗೆ ಕಷ್ಟವಾದೀತು. ಶತ್ರುಗಳು ಮಾನಸಿಕ ಕಿರುಕುಳವನ್ನು ಯಾವ ರೀತಿಯಿಂದಲೂ ಕೊಡಬಹುದು. ನಿಮ್ಮ ಕೆಲಸಕ್ಕೆ ಸಮಯದ ಮಿತಿಯನ್ನು ಇಟ್ಟುಕೊಳ್ಳುವುದು ಉತ್ತಮ. ಹಿರಿಯರ ತಿಳಿವಳಿಕೆಯು ಅಪಮಾನದಂತೆ ಕಾಣಬಹುದು. ಆಲಸ್ಯದ ಕಾರಣ ನಿಮ್ಮ ಕಾರ್ಯವು ಪೂರ್ಣವಾಗದು. ಸಂಗಾತಿಯ ಮಾತನ್ನು ನೀವು ಗಂಭೀರವಾಗಿ ಪರಿಗಣಿಸುವುದಿಲ್ಲ. ಅಪರಿಚಿತರು ಅಲ್ಪ ಕಾಲದಲ್ಲಿಯೇ ಆಪ್ತರಾಗಬಹುದು. ಅಂದುಕೊಂಡಿದ್ದು ಸರಿಯಾಗಿ ಆಗಿಲ್ಲ ಎಂಬ ವ್ಯಥೆಯಾಗುವುದು.

ತುಲಾ ರಾಶಿ : ಇಂದಿನ‌ ‌ಮನೆಯ ವಾತಾವರಣವು ನಿಮ್ಮ ಅಧ್ಯಯನಕ್ಕೆ ತೊಂದರೆ ಕೊಡಬಹುದು. ದಾಯಾದಿಗಳು ನಿಮ್ಮ ಮೇಲೆ ಅಪವಾದವನ್ನು ಮಾಡಬಹುದು. ಕಾರ್ಯದಲ್ಲಿ ಜಯವಿದ್ದರೂ ಆರ್ಥಿಕ ನಷ್ಟವು ಆಗಬಹುದು. ಹಿತಶತ್ರುಗಳ ಕಾರಣದಿಂದ ಇಂದಿನ ವ್ಯವಹಾರವು ಹಿಂದೆ ಸಾಗಲಿದೆ. ತಪ್ಪಿನಿಂದಾಗಿ ಹಿರಿಯರ ಕೆಂಗಣ್ಣಿಗೆ ಗುರಿಯಾಗುವಿರಿ. ತಂದೆಯ ಜೊತೆ ನಿಮ್ಮ ಭವಿಷ್ಯದ ಚಿಂತನೆಯನ್ನು ಮಾಡಲಿದ್ದೀರಿ. ಇಂದಿನ ಶುಭವಾರ್ತೆಯು ನಿಮ್ಮ ಕಾರ್ಯಕ್ಕೆ ಉತ್ಸಾಹವನ್ನು ಕೊಡುವುದು. ಖಾಸಗಿ ಸಂಸ್ಥೆಯು ನಿಮಗೆ ಜವಾಬ್ದಾರಿಯ ಸ್ಥಾನವನ್ನು ಕೊಡುವುದು. ಬಂಧುಗಳ ಮಾತಿನಿಂದ ಬೇಸರಗೊಳ್ಳುವಿರಿ.

ವೃಶ್ಚಿಕ ರಾಶಿ : ಇಂದು ನಿಮ್ಮ ಪ್ರೀತಿಪಾತ್ರರನ್ನು ಭೇಟಿ ಮಾಡಲಿದ್ದೀರಿ. ಶುಭ ಕಾರ್ಯದಲ್ಲಿ ನಿಮಗೆ ಹೆಚ್ಚು ಆಸಕ್ತಿಯು ಇರಲಿದೆ. ಆಸ್ತಿಯ ಮಾರಾಟದಿಂದ ನಿಮಗೆ ಹೆಚ್ಚಿನ ಲಾಭವು ಸಿಗಲಿದೆ. ಸಾರ್ವಜನಿಕ ಕ್ಷೇತ್ರದಲ್ಲಿ ನಿಮ್ಮ ಅಸ್ತಿತ್ವವು ಹೆಚ್ಚಾಗಿ ತೋರುವುಸು. ಹಣವನ್ನು ಸಾಮಾಜಿಕ ಕಾರ್ಯಗಳಿಗೆ ಬಳಸಲು ಸಿದ್ಧರಿರುವಿರಿ. ತಪ್ಪನ್ನು ನೀವು ಒಪ್ಪಿಕೊಳ್ಳಲಾರಿರಿ. ಸಹೋದರರ ನಡುವೆ ವಾಗ್ವಾದವು ಆಗಬಹುದು. ಇಂದಿನ ವ್ಯವಹಾರವು ಎಚ್ಚರಿಕೆಯಿಂದ ಇರಲಿ. ಕೆಲವೊಮ್ಮೆ ನಿಮ್ಮ ಮಾತುಗಳೇ ನಿಮಗೆ ಮುಳುವಾಗಬಹುದು. ನೇರ ನುಡಿಯಿಂದ ಇನ್ನೊಬ್ಬರಿಗೆ ನೋವನ್ನು ಕೊಡುವಿರಿ. ಸುಖವು ಹೇಗಾದರೂ ನಿಮ್ಮನ್ನು ಅರಸಿ ಬರಬಹುದು.

-ಲೋಹಿತಶರ್ಮಾ 8762924271 (what’s app only)