AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಂಡಲ್ಲಿ ಈ ರಾಶಿಯವರ ಕೆಲಸದಲ್ಲಿ ಪ್ರಗತಿ ಇರಲಿದೆ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 09) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today: ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಂಡಲ್ಲಿ ಈ ರಾಶಿಯವರ ಕೆಲಸದಲ್ಲಿ ಪ್ರಗತಿ ಇರಲಿದೆ
ರಾಶಿಭವಿಷ್ಯImage Credit source: iStock Photo
TV9 Web
| Updated By: Rakesh Nayak Manchi|

Updated on: Aug 09, 2023 | 12:45 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಆಗಸ್ಟ್ 09 ಬುಧವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ : ಆಶ್ಲೇಷಾ, ಮಾಸ : ಅಧಿಕ ಶ್ರಾವಣ, ಪಕ್ಷ : ಕೃಷ್ಣ, ವಾರ : ಬುಧ, ತಿಥಿ : ನವಮೀ, ನಿತ್ಯನಕ್ಷತ್ರ : ಕೃತ್ತಿಕಾ, ಯೋಗ : ವೃದ್ಧಿ, ಕರಣ : ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 18 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 57 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:38 ರಿಂದ 02:13ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:53 ರಿಂದ 09:28 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:03 ರಿಂದ ಮಧ್ಯಾಹ್ನ 12:38ರ ವರೆಗೆ.

ಧನು ರಾಶಿ: ಪ್ರಯತ್ನಿಸಿದ ಕಾರ್ಯಗಳು ನಿಮಗೆ ಬಹುಪಾಲು ಜಯವನ್ನು ತಂದುಕೊಡುವುವು. ಸ್ವಂತ ಉದ್ಯೋಗಸ್ಥರಿಗೆ ಲಾಭವಾಗುವುದು. ಸರ್ಕಾರದ ಅಧಿಕಾರಿಗಳು ನಿಮ್ಮನ್ನು ಪೀಡಿಸಬಹುದು. ಸ್ವತಂತ್ರವಾಗಿದ್ದರೂ ಏನನ್ನಾದರೂ ಕಳೆದುಕೊಳ್ಳುತ್ತೇನೆ ಎಂಬ‌ ಭಯವು ಇರುವುದು. ಮಕ್ಕಳಿಂದ ನೀವು ಪೀಡಿತರಾಗುವಿರಿ. ದಾಂಪತ್ಯದ ಬಿರುಕನ್ನು ನೀವು ಸರಿಮಾಡಲು ಅರ್ಹರು. ಹೊಸತನ್ನು ಕಲಿಯುವ ಆಸೆಯಿದ್ದು ಅವಕಾಶವನ್ನು ಹುಡುಕುವಿರಿ. ನಿಮ್ಮ ಕುಲದಿಂದ‌ ಗೌರವಬು ಸಿಗಬಹುದು. ಅಧಿಕಾರಯುತವಾದ ಮಾತು ಲೆಕ್ಕಕ್ಕೆ ಬಾರದು. ಹೊಸ ಆರಂಭದಲ್ಲಿ ವೇಗವನ್ನು ಪಡೆದುಕೊಳ್ಳುವುದು. ಅಕ್ರಮ ಆಸ್ತಿಯಿಂದ‌ ತೊಂದರೆಯಾಗಬಹುದು. ಅಧಿಕಾರಿಗಳ ಮೇಲೆ ಒತ್ತಡವನ್ನು ಹೇರುವಿರಿ.

ಮಕರ ರಾಶಿ: ಉದ್ಯೋಗದಲ್ಲಿ ಮನಸ್ತಾಪ ಬಂದು ನೀವು ಆ ಉದ್ಯೋಗವನ್ನು ಬಿಡುವಿರಿ. ಮೇಲಧಿಕಾರಿಗಳ ಜೊತೆ ವಾಗ್ವಾದ ಬೇಡ. ಎಷ್ಟೋ ಕೆಲಸಗಳು ನಿಮ್ಮ ಬಳಿಯೇ ಆಗದೇ ಇರುತ್ತವೆ. ನೀವು ಹೇಳಬೇಕಾದ ವಿಷಯಗಳನ್ನು ಇನ್ನೊಬ್ಬರಿಗೆ ಹೇಳುವಿರಿ. ಕಫದಿಂದ ತೊಂದರೆ ಆಗಬಹುದು. ಭೂಮಿಯ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು ಕಾನೂನಾತ್ಮಕ ತೊಂದರೆಗಳು ಬರಬಹುದು. ಉದ್ಯಮವನ್ನು ಮಾಡುವ ಮೊದಲು ಅದರ ವ್ಯಾಪ್ತಿಯನ್ನು ಅರ್ಥಮಾಡಿಕೊಳ್ಳಿ. ಅಪರಿಚಿತರ ಕರೆಯಿಂದ ನಿಮಗೆ ಕಷ್ಟವು ಬರಬಹುದು. ನಿಮಗೆ ಏಕಾಂತ ಬೇಕೆನಿಸಿ ದೂರ ಎಲ್ಲಿಯಾದರೂ ಹೋಗುವ ಮನಸ್ಸು ಮಾಡುವಿರಿ. ಸಜ್ಜನರ ಸಹವಾಸವು ನಿಮ್ಮ ಅಹಂಕಾರದಿಂದ ಇರುವ ಕಾರಣ ಸಿಗದು.

ಕುಂಭ ರಾಶಿ: ಬಹಳ ದಿನಗಳ ಅನಂತರ ದೂರಪ್ರಯಾಣವನ್ನು ಮಾಡಲು ಹೊರಟಿರುವಿರಿ. ಪುಣ್ಯಸ್ಥಳಗಳ ದರ್ಶನವನ್ನು ಮಾಡಲು ಇಚ್ಛಿಸುವಿರಿ. ಸಾಮಾಜಿಕ ಕಾರ್ಯಗಳು ನಿಮಗೆ ಯಶಸ್ಸನ್ನು ತಂದುಕೊಡಲಿವೆ. ಇರುವ ಸಮಯವನ್ನು ವ್ಯರ್ಥ ಮಾಡಿಕೊಳ್ಳದೇ ಭವಿಷ್ಯಕ್ಕೆ ಬರುವ ಹಾಗೆ ಮಾಡಿಕೊಳ್ಳಿ. ವೃತ್ತಿಯಲ್ಲಿ ನಿಮಗೆ ಭಯವು ಆರಂಭವಾಗಿದ್ದು ಆಪ್ತರ ಜೊತೆ ಹಂಚಿಕೊಳ್ಳಿ. ನಿಮ್ಮ ಸಾಮರ್ಥ್ಯವು ಎಲೆ‌ಮರೆಯ ಕಾತಿಯಂತೆ ಇರಲಿದೆ. ಪ್ರೇಮವನ್ನು ಹೇಳಿಕೊಳ್ಳಲು ನೀವು ಹಿಂದೇಟು ಹಾಕುವಿರಿ. ನಡೆಯುವ ಘಟನೆಗಳನ್ನು ಸಕಾರಾತ್ಮಕವಾಗಿ ನೋಡುವಿರಿ. ಮಕ್ಕಳ ವಿಚಾರದಲ್ಲಿ ನೀವು ದುರ್ಬಲರಾಗುವಿರಿ. ಕುಲದೇವರ ಆರಧನೆಯಿಂದ ಕಾರ್ಯಗಳು ಸಫಲವಾಗುವುವು.

ಮೀನ ರಾಶಿ: ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಂಡಲ್ಲಿ ಕೆಲಸದಲ್ಲಿ ಪ್ರಗತಿ ಇರಲಿದೆ. ಸ್ಥಿರಾಸ್ತಿಗೆ ಸಂಬಂಧಿಸಿದಂತೆ ಕೆಲವು ಮಾರ್ಪಾಡುಗಳು ಆಗಬಹುದು. ಮಕ್ಕಳಿಂದ ಆಗುವ ಅಸಮಾಧಾನವನ್ನು ನೀವು ಸಹಿಸಿಕೊಳ್ಳಲಾರಿರಿ. ನಿಮ್ಮ ಇಂದಿನ ಸ್ಥೈರ್ಯವು ನಿಮಗೆ ಹೆಚ್ಚಿನ ಸಹಾಯವನ್ನು ಮಾಡಬಹುದು. ನಿಮ್ಮ ಉದ್ಯೋಗಕ್ಕೆ ಬರವ ಅಡೆತಡೆಗಳನ್ನು ಸರಿಮಾಡಿಕೊಂಡು ಮುನ್ನಡೆಯುವಿರಿ. ಯುವಕರಿಗೆ ಸರಿಯಾದ ಮಾರ್ಗರ್ಶನದವು ಸಿಗದೇ ಕಷ್ಟಪಡುವಿರು. ವಾಹನ ಖರೀದಿಯ ವ್ಯವಹಾರವು ನಿಮಗೆ ಸರಿಯಾಗಿ ಮುಕ್ತಾಯವಾಗದು. ಉಪಕಾರ ಸ್ಮರಣೆಯನ್ನು ನೀವು ಬಿಡುವುದಿಲ್ಲ. ಸಹೋದರರ ನಡುವೆ ಆಪ್ತತೆಯು ಹೆಚ್ಚಾಗಬಹುದು. ನಿಮ್ಮ ಕೈತಪ್ಪಿ ಹೋದುದನ್ನು ಪುನಃ ಸ್ವಾಧೀನ ಮಾಡಿಕೊಳ್ಳುವಿರಿ.

ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ