Horoscope: ಈ ರಾಶಿಯವರು ನಿಮ್ಮ ಮಾತಿನ ಮೇಲೆ ಹಿಡಿತವನ್ನು ಸಾಧಿಸಬೇಕಾದೀತು
ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 09) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.
ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 09 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ದಶಮೀ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ಸಿದ್ಧಿ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 37 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:26 ರಿಂದ 10:58 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:02 ರಿಂದ 03:34ರ ವರೆಗೆ, ಗುಳಿಕ ಕಾಲ ಸಂಜೆ 06:22 ರಿಂದ 07:54ರ ವರೆಗೆ.
ಧನು ರಾಶಿ : ಮಿತ್ರನ ನಂಬಿಕೆಯನ್ನು ಕಳೆದುಕೊಂಡು, ಆದ ನಷ್ಟಕ್ಕೆ ದುಃಖಿಸುವಿರಿ. ಸ್ಥಿರಾಸ್ತಿಯನ್ನು ವ್ಯವಹಾರ ಜ್ಞಾನದ ಕೊರತೆಯಿಂದ ಕಳೆದುಕೊಳ್ಳಬಹುದು. ಸಹೋದರರ ನಡುವೆ ಆರ್ಥಿಕ ಸಂಬಂಧವು ಉತ್ತಮವಾದುದು ಅಲ್ಲ. ವಯಸ್ಸಿಗೆ ಬಂದ ಮಕ್ಕಳ ವಿವಾಹದ ಚಿಂತೆ ಇರುಬುದು. ಪ್ರೀತಿಯಿಂದ ಕೊಟ್ಟ ವಸ್ತುವನ್ನು ಮತ್ತೆ ಕೊಡುವುದು ಬೇಡ. ಸಂಗಾತಿಯ ಜೊತೆ ಸಣ್ಣ ವಿಚಾರಗಳಿಗೂ ಜಗಳವಾಡುಬಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಆದ ಪ್ರಗತಿಯಿಂದ ನಿಮಗೆ ಸಂತೋಷವಾಗಲಿದೆ. ಸಮಯಸ್ಫೂರ್ತಿಯಿಂದ ಇಂದಿನ ಅನಾಹುತವನ್ನು ತಪ್ಪಿಸಿಕೊಳ್ಳುವಿರಿ.
ಮಕರ ರಾಶಿ : ನ್ಯಾಯಾಲಯದ ವಿಚಾರದಲ್ಲಿ ನಿಮ್ಮ ಊಹೆಯು ಸರಿಯಾಗದು. ಮನೆಯಲ್ಲಿ ಮಕ್ಕಳು ನಿಮ್ಮನ್ನು ಲೆಕ್ಕಕ್ಕೆ ತೆಗದುಕೊಳ್ಳದೇ ಹೋಗಬಹುದು. ವಿದ್ಯಾರ್ಥಿಗಳ ಕಲಿಕೆಯಲ್ಲಿ ಹಿನ್ನಡೆಯಾಗಲಿದೆ. ಇಂದಿನ ಹೆಚ್ಚಿನ ವಿಚಾರಗಳನ್ನು ನಕರಾತ್ಮಕವಾಗಿಯೇ ಚಿಂತಿಸುವಿರಿ. ದೂರ ಪ್ರಯಾಣವು ನಿಮಗೆ ಇಂದು ಅನಿವಾರ್ಯವಾದೀತು. ಸ್ವಂತ ವಾಹನದಿಂದ ನೀವು ಲಾಭವನ್ನು ಗಳಿಸುವಿರಿ. ಇಂದು ನಿಮಗೆ ಜೊತೆಗೆ ಯಾರೂ ಇಲ್ಲ ಎಂಬ ಅನಾಥಪ್ರಜ್ಞೆಯು ಕಾಡುವುದು. ಸಂಗಾತಿಯಿಂದ ಗೌರವವನ್ನು ಅಪೇಕ್ಷಿಸುವಿರಿ. ಇನ್ನೊಬ್ಬರ ಆಡಿದ ಮಾತು ಸತ್ಯವಾಗುವುದು ಎಂಬ ನಂಬಿಕೆ ಬರಬಹುದು.
ಕುಂಭ ರಾಶಿ : ಇಂದಿನ ಅನಾರೋಗ್ಯವು ಕುಟುಂಬದವರ ಆರೈಕೆಯಿಂದ ಕಡಿಮೆಯಾಗುವುದು. ಗೌಪ್ಯವಾಗಿ ನಿಮ್ಮ ಅಂತರಂಗವನ್ನು ತಿಳಿದುಕೊಳ್ಳಲು ಶತ್ರುಗಳು ಪ್ರಯತ್ನಿಸಬಹುದು. ಮಾತಿನ ಮೇಲೆ ನೀವು ಹಿಡಿತವನ್ನು ಸಾಧಿಸಬೇಕಾದೀತು. ಕಲಾವಿದರು ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳುವರು. ಮೇಲಧಿಕಾರಿಗಳ ಮಾತುಗಳು ನಿಮ್ಮನ್ನು ಕಾಡಬಹುದು. ಅತಿಯಾದ ಒತ್ತಡದಿಂದ ಮಾಡುವ ಕೆಲಸದಿಂದ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ನಿಮ್ಮ ಮಾತಿನ ಮೇಲೆ ನಂಬಿಕೆ ಕಡಿಮೆ ಆದೀತು. ಇಂದು ಶಿಸ್ತಿಗೆ ಹೆಚ್ಚಿನ ಗಮನವನ್ನು ಕೊಡುವಿರಿ.
ಮೀನ ರಾಶಿ : ಇಂದು ನಿಮಗೆ ಮಾತಿನಿಂದಾಗಿ ತೊಂದರೆಗಳು ಬರಬಹುದು. ಕುಟುಂಬದ ಸಮಸ್ಯೆಗೆ ಧಾರ್ಮಿಕ ಕಾರ್ಯವನ್ನು ಮಾಡಿ ಪರಿಹಾರವನ್ನು ಮಾಡಿಕೊಳ್ಳಲು ಇಚ್ಛಿಸುವಿರಿ. ಇಂದು ನೀವು ಅಂದುಕೊಂಡಂತೆ ಆಗಿದ್ದು ಖುಷಿಯಿಂದ ಇರುವಿರಿ. ವಾಹನ ಖರೀದಿಯ ಆಲೋಚನೆಯನ್ನು ಸದ್ಯ ಕೈ ಬಿಡುವಿರಿ. ಸ್ತ್ರೀಯರಿಂದ ಇಂದು ಸಹಾಯವನ್ನು ಪಡೆಯುವಿರಿ. ಬರಬೇಕಾದ ಹಣವನ್ನು ನೀವೇ ಖುದ್ದಾಗಿ ಹೋಗಿ ಪಡೆಯಬೇಕಾಗಬಹುದು. ಖರ್ಚಿಗೆ ಬರುವ ಎಲ್ಲ ಮಾರ್ಗವನ್ನೂ ನಿಲ್ಲಿಸುವಿರಿ. ಇಂದು ನಿಮ್ಮ ಬಂಧುಗಳ ಮನೆಯಲ್ಲಿ ಉಳಿಯುವುದು ಅನಿವಾರ್ಯವಾಗುವುದು. ವಿನಾಕಾರಣ ಪತ್ನಿಯನ್ನು ದ್ವೇಷಿಸುವಿರಿ.
-ಲೋಹಿತಶರ್ಮಾ 8762924271 (what’s app only)