Horoscope: ರಾಶಿಭವಿಷ್ಯ, ಈ ರಾಶಿಯವರ ದಾಂಪತ್ಯದ ವಿರಸವು ದೂರವಾಗುವುದು
ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್ 12) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.
ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್ 12) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಸ್ವಾತೀ, ಯೋಗ: ಆಯುಷ್ಮಾನ್, ಕರಣ: ಚತುಷ್ಪಾತ್, ಸೂರ್ಯೋದಯ ಬೆಳಗ್ಗೆ 06 ಗಂಟೆ 33 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ. ರಾಹು ಕಾಲ ಮಧ್ಯಾಹ್ನ 04:34 ರಿಂದ 06:00, ಯಮಘಂಡ ಕಾಲ ಮಧ್ಯಾಹ್ನ 12:17 ರಿಂದ 01:43ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:08 ರಿಂದ 04:34ರ ವರೆಗೆ.
ಧನು ರಾಶಿ: ಹಣಕಾಸನಲ್ಲಿ ವಂಚನೆಯಾಗಿರುವುದು ಬಹಳ ದಿನಗಳ ಅನಂತರ ಗೊತ್ತಾಗಿ ಬೇಸರವಾಗುವುದು. ಮಾತನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ. ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಂಭವಿದೆ. ನೀವು ಆಯ್ಕೆ ಆಗಿದ್ದು ಯಾವುದಕ್ಕೋ ಕೆಲಸವು ಮತ್ಯಾವುದೋ ಆಗಲಿದೆ. ಅನಾರೋಗ್ಯವು ಚಿಕಿತ್ಸೆಯಾಗಿ ಪರಿಣಮಿಸಬಹುದು. ಉತ್ತಮ ಭೂಮಿಯ ಲಾಭವನ್ನು ಪಡೆಯುವಿರಿ. ಅಪಾಯಯಕ್ಕೆ ಸಿಕ್ಕಿಕೊಳ್ಳುವ ಸಂಭವವಿತ್ತು. ಧನವ್ಯಯವನ್ನು ನಿಮ್ಮ ಜಾಣ್ಮೆಯಿಂದ ತಪ್ಪಿಸಿಕೊಳ್ಳುವಿರಿ. ಸ್ತ್ರೀಯರಿಂದ ಕೆಲವು ಸಮಸ್ಯೆಯು ಬರಲಿದೆ. ಅಪರಿಚಿತರಿಗೆ ಇಂದು ಅಲ್ಪ ಧನಸಹಾಯವನ್ನು ಮಾಡಬೇಕಾಗುವುದು. ಕೋಪದ ನಿಯಂತ್ರಣವು ಕಷ್ಟವಾದೀತು. ಸಂಸಾರದಲ್ಲಿ ನಿರಾಸಕ್ತಿಯು ಹೆಚ್ಚಾಗುವುದು. ದಾಂಪತ್ಯದ ವಿರಸವು ದೂರವಾಗುವುದು.
ಮಕರ ರಾಶಿ: ಇಂದು ಪ್ರಯಾಣದ ಆಯಾಸವು ಇರಲಿದೆ. ಶತ್ರುಗಳನ್ನು ಕ್ಷಮಿಸಿ, ಅವರ ಮೇಲೆ ನಿಮ್ಮ ದೃಷ್ಟಿಯು ಬೇಕಾಗುವುದು. ಪಾಲುದಾರಿಕೆಯಲ್ಲಿ ನಿಮ್ಮ ಪಾಲೇ ಅಧಿಕವಾಗಿರುವುದು. ಶತ್ರುವಿನ ಮೇಲೆ ಸೇಡು ತೀರಿಸಿಕೊಳ್ಳಲು ಅಧಿಕ ಖರ್ಚನ್ನು ಮಾಡಬೇಕಾದೀತು. ಉದ್ಯಮಿಗಳಿಗೆ ನೌಕರರ ಕಲಹವನ್ನು ಸರಿ ಮಾಡುವುದೇ ಹೆಚ್ಚಾಗುವುದು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ. ಪ್ರೀತಿಯಲ್ಲಿ ನಿಮಗೆ ಮೋಸವಾಗುವುದು. ಉದ್ಯಮಕ್ಕೆ ಬೇಕಾದ ವಿವರಗಳನ್ನು ಅನುಭವಿಗಳಿಂದ ಪಡೆಯಿರಿ. ಸ್ನೇಹಿತನ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳುವಿರಿ. ಅಸಂಬದ್ಧ ಮಾತುಗಳ ನಿಮ್ಮನ್ನು ವ್ಯಕ್ತಿತ್ವವನ್ನು ತಿಳಿಸುವುದು. ಪ್ರಭಾವೀ ವ್ಯಕ್ತಿಗಳ ಭೇಟಿಯು ನಿಮ್ಮ ಜೀವನೋತ್ಸಾಹವನ್ನು ಹೆಚ್ಚಿಸುವುದು. ಮಾತನಾಡುವ ವೇಗದಲ್ಲಿ ಏನನ್ನಾದರೂ ಹೇಳಿಬಿಡುವಿರಿ.
ಕುಂಭ ರಾಶಿ: ಇನ್ನೊಬ್ಬರ ಸಮಸ್ಯೆಯನ್ನು ಪರಿಹರಿಸಲು ಹೋಗು ನೀವು ಸಮಸ್ಯೆಯಲ್ಲಿ ಸಿಕ್ಕಿಕೊಳ್ಳಬೇಕಾದೀತು. ನಿಮ್ಮ ಸಮ್ಮುಖದಲ್ಲಿ ಕುಟುಂಬದ ಸಮಸ್ಯೆಗಳು ಬಗೆಹರಿಯಬಹುದು. ಆಸ್ತಿಯ ವಿಚಾರ ಬಂದಾಗ ಮೌನ ತಾಳುವಿರಿ. ಬಹಳ ದಿನಗಳ ಅನಂತರ ಸಾರ್ವಜನಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವಿರಿ. ಉತ್ಸಾಹವೂ ಇರಲಿದೆ. ನಿಮ್ಮ ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಗುವುದು. ಸಕಾರಾತ್ಮಕ ಆಲೋಚನೆಗಳನ್ನು ನೀವು ಆಪ್ತರ ಜೊತೆ ಹಂಚಿಕೊಳ್ಳುವಿರಿ. ನಿಮ್ಮ ಯೋಜನೆಗೆ ಬೆನ್ನೆಲುಬಾಗಿ ನಿಲ್ಲುವವರು ಬೇಕಾಗಿದ್ದರೆ. ಅಧಿಕ ಖರ್ಚನ್ನು ಇಂದು ಮಾಡಬೇಕಾಗುವುದು. ಸಾಲಬಾಧೆಯು ನಿಮ್ಮನ್ನು ತೀವ್ರವಾಗಿ ಕಾಡುವುದು. ನಿಮ್ಮ ದುರಭ್ಯಾಸವನ್ನು ಇನ್ನೊಬ್ಬರಿಗೂ ಹಿಡಿಸುವ ಸಾಧ್ಯತೆ ಇದೆ. ಭವಿಷ್ಯದ ಆಗುಹೋಗುಗಳ ಬಗ್ಗೆ ಅತಿಯಾದ ಚಿಂತೆ ಇರಲಿದೆ.
ಮೀನ ರಾಶಿ: ಕುಟುಂಬಕ್ಕೆ ಗೌರವವು ಬರುವಂತೆ ನೋಡಿಕೊಳ್ಳುವಿರಿ. ಮಕ್ಕಳ ಜೊತೆ ಸಾಮರಸ್ಯದ ಮಾತನಾಡಿ. ಸಾಲದ ಮರುಪಾವತಿಗೆ ಸೂಕ್ತ ಕ್ರಮದ ಅಗತ್ಯವಿರಲಿದೆ. ಆಲಸ್ಯದಿಂದ ಕಛೇರಿಯ ಕೆಲಸಗಳು ವಿಳಂಬವಾಗುವುದು. ನಿಮ್ಮ ಬಗ್ಗೆ ಪ್ರಶಂಸೆಯ ನುಡಿಗಳು ಕೇಳಿಬರಬಹುದು. ವಿದ್ಯಾರ್ಥಿಗಳಿಗೆ ಓದಲು ಸಮಯವನ್ನು ಇಂದು ಹೊಂದಿಕೆಯಾಗದು. ಪೂರಕ ವಾತಾವರಣದಲ್ಲಿ ಕೊರತೆ ಇರುವುದು. ಸುಮ್ಮನೇ ಆಪ್ತರ ಮೇಲೆ ಸಂಶಯವನ್ನು ಇಟ್ಟುಕೊಳ್ಳುವುದು ಬೇಡ. ಹೂಡಿಕೆಯ ವಿಚಾರದಲ್ಲಿ ಇಂದು ಸಕಾರಾತ್ಮಕ ಆಲೋಚನೆಯು ಇರದು. ಉದ್ವೇಗದಲ್ಲಿ ಇದ್ದರೂ ಸಮಾಧಾನಿಗಳಂತೆ ತೋರುವಿರಿ. ಪುಣ್ಯದ ಫಲವು ಇಂದು ಸಿಗುವುದು. ಸಹೋದ್ಯೋಗಿಗಳ ವರ್ತನೆಯು ನಿಮಗೆ ಆಚ್ಚರಿಗೊಳ್ಳುವಿರಿ. ಪ್ರೇಮದ ವಿರೋಧವನ್ನು ನೀವು ಎದುರಿಸಬೇಕಾದೀತು.
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ