Horoscope: ರಾಶಿಭವಿಷ್ಯ, ನಿಮ್ಮ ಪ್ರೀತಿಗೆ ಇಂದು ಅಧಿಕೃತ ಮುದ್ರೆಯು ಬೀಳಲಿದ್ದು ನಿಮಗೆ ಖುಷಿಯಾಗಲಿದೆ
ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 12) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.
ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 12) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ಶುಕ್ಲ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 13 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:48 ರಿಂದ 03:16ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:24 ರಿಂದ 07:53ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:22 ರಿಂದ ಮಧ್ಯಾಹ್ನ 10:50ರ ವರೆಗೆ.
ಧನು ರಾಶಿ : ಭೂಮಿಯ ಲಾಭಕ್ಕಾಗಿ ಓಡಾಟವನ್ನು ಮಾಡಬೇಕಾದೀತು. ಇಂದು ನಿಮ್ಮ ಮನಸ್ಸು ಅದರಲ್ಲಿಯೇ ಮುಳುಗಿ ಇರುವುದು. ಒಂದು ರೀತಿಯಲ್ಲಿ ನಿಮಗೆ ಆತಂಕದ ದಿವಸವೂ ಆಗಬಹುದು. ಸಾಹಿತ್ಯಾಸಕ್ತರು ತಮ್ಮ ಬಳಗದ ಜೊತೆ ಹೆಚ್ಚು ಸಮಯ ಇರುವರು. ಎಲ್ಲರೂ ನಿಮ್ಮ ಬಗ್ಗೆ ನಕಾರಾತ್ಮಕವಾಗಿ ಮಾತನಾಡಲಿದ್ದು ನೀವು ಹತಾಶೆಯ ಭಾವ ಜಾಗೃತವಾಗಿ ಖಿನ್ನತೆಗೂ ಹೋಗಬಹುದು. ಜವಾಬ್ದಾರಿಯನ್ನು ನೀವು ನಿಭಾಯಿಸಲೂ ನಿಮಗೆ ಕಷ್ಟವಾದೀತು. ದೈವದ ಬಗ್ಗೆ ನಿಮಗೆ ಅಪನಂಬಿಕೆ ಬರುವುದು. ಮಕ್ಕಳ ಹಠಸ್ವಭಾವವು ಇಮಗೆ ಇಷ್ಟವಾಗದು. ನೀವು ಸಹನೆಯನ್ನು ಮೀರಿ ವರ್ತಿಸುವಿರಿ. ಹಿತವಾದ ಆಹಾರವನ್ನು ಸ್ವೀಕರಿಸಿ ಅನಾರೋಗ್ಯವನ್ನು ಸರಿ ಮಾಡಿಕೊಳ್ಳುವಿರಿ. ಆರ್ಥಿಕ ಸ್ಥಿತಿಯನ್ನು ಸ್ಥಿರಗೊಳಿಸಿಕೊಳ್ಳುವಿರಿ. ಇಂದು ನಿಮ್ಮ ಸ್ವಾಭಿಮಾನಕ್ಕೆ ತೊಂದರೆ ಬರಬಹುದು.
ಮಕರ ರಾಶಿ : ಕೃಷಿಯಲ್ಲಿ ಲಾಭ ಗಳಿಸಬೇಕೆಂದು ನಾನಾ ಪ್ರಯತ್ನವನ್ನು ಮಾಡುವಿರಿ. ಇಂದಿನ ಆದಾಯಕ್ಕೆ ತಕ್ಕಂತೆ ಖರ್ಚೂ ಇರಲಿದೆ. ನಿಮ್ಮ ಪ್ರೀತಿಗೆ ಇಂದು ಅಧಿಕೃತ ಮುದ್ರೆಯು ಬೀಳಲಿದ್ದು ನಿಮಗೆ ಖುಷಿಯಾಗಲಿದೆ. ನಿಮ್ಮ ವೃತ್ತಿಯ ಕುರಿತು ಯಾರಾದರೂ ಕೇಳಿಯಾರು. ಆದಾಯವನ್ನೂ ಕೇಳಬಹುದು. ಉನ್ನತ ವಿದ್ಯಾಭ್ಯಾಸವು ಯಶಸ್ವಿಯಾಗಿ ಪೂರೈಸುವಿರಿ. ವಿದೇಶದ ವ್ಯವಹಾರವು ನಿಮಗೆ ಸರಿಯಾಗಿ ಆಗಿಬರದು. ಹೊಸ ಉದ್ಯೋಗಕ್ಕೆ ಸೇರಿದ ನಿಮಗೆ ಸಂಕೋಚದಿಂದ ಇರುವಿರಿ. ನಿಮ್ಮ ಮಕ್ಕಳ ವರ್ತನೆಯಲ್ಲಿ ಬದಲಾವಣೆಯು ನಿಮಗೆ ಅಚ್ಚರಿಯನ್ನು ತಂದೀತು. ಆಗದಿರುವವರ ಬಗ್ಗೆ ಗೊಣಗುತ್ತ ಇರುವಿರಿ. ಇದರಿಂದ ಯಾವ ಪ್ರಯೋಜನವೂ ಆಗದು. ಗೋವಿಗೆ ಪ್ರಾತಃಕಾಲದಲ್ಲಿ ಸಕಲ ದೋಷ ನಿವೃತ್ತಿಗಾಗಿ ಗೋಗ್ರಾಸವನ್ನು ನೀಡಿ.
ಕುಂಭ ರಾಶಿ : ವ್ಯಾಪಾರವನ್ನು ಮಾಡುವಾಗ ಜಾಗರೂಕತೆ ಇರಲಿ. ಗ್ರಾಹಕರಿಂದ ಮೋಸ ಹೋಗಬೇಕಾದೀತು. ನಿಮ್ಮ ಸಣ್ಣ ವ್ಯಾಪಾರವನ್ನು ವಿಸ್ತರಿಸಲಿದ್ದೀರಿ. ನಿಮ್ಮನ್ನು ಕೇಳಿಕೊಂಡು ಯಾರಾದರೂ ಅಪರಿಚಿತರು ಬರಬಹುದು. ಯಾರನ್ನಾದರೂ ಕಳೆದುಕೊಳ್ಳುವ ಭೀತಿಯು ಇರಲಿದೆ. ನಿಮಗೇ ನೆರವು ಬೇಕಾಗಿದ್ದರೂ ಇನ್ನೊಬ್ಬರ ಸಹಾಯಕ್ಕೆ ಹೋಗುವಿರಿ. ನಿಮ್ಮ ವಿರೋಧಿಗಳ ಸಂಖ್ಯೆ ಕಡಿಮೆಯಾಗುವುದು. ನಿಮ್ಮ ಇಂದಿನ ಕಾರ್ಯವು ಕ್ರಮಬದ್ಧವಾಗಿ ಇರಲಿ. ಮಾಡಿದ ತಪ್ಪನ್ನೇ ಮತ್ತೆ ಮಾಡಿ ಮನೆಯಲ್ಲಿ ಬೈಸಿಕೊಳ್ಳುವಿರಿ. ಆರೋಗ್ಯವಾಗಿ ಇರಬೇಕೆಂದು ಹೆಚ್ಚು ನಿದ್ರೆ ಮಾಡುವಿರಿ. ಕಲಿತ ವಿದ್ಯೆಗಳನ್ನು ಎಲ್ಲಿಯಾದರೂ ಬಳಸಲು ನೋಡುವಿರಿ. ನಿಮ್ಮದಾದ ವಾಹನವಿಲ್ಲದೇ ನಿಮಗೆ ಬೇಸರವಾದೀತು. ಬಂಧುಗಳು ನಿಮ್ಮ ಬಗ್ಗೆ ತಪ್ಪು ತಿಳಿಯುವರು. ತುಪ್ಪದ ದೀಪವನ್ನು ಒಳ್ಳೆಯ ಸಂಕಲ್ಪದ ಜೊತೆ ದೇವರ ಮುಂದೆ ಬೆಳಗಿ.
ಮೀನ ರಾಶಿ : ಸ್ನೇಹಿತರ ಮಾತಿನಿಂದ ವಿದೇಶಕ್ಕೆ ಹೋಗುವ ಆಸೆ ಅತಿಯಾಗುವುದು. ಅಸ್ತವ್ಯಸ್ತವಾದ ವ್ಯವಹಾರವನ್ನು ಸುಸ್ಥಿತಿಗೆ ತರಲು ಪ್ರಯತ್ನಿಸುವಿರಿ. ಯಾರದರೂ ನಿಮಗೆ ಸವಾಲು ಹಾಕಬಹುದು. ದೇಹಕ್ಕೆ ಸಂಬಂಧಿಸಿದಂತೆ ಕೆಲವು ತೊಂದರೆಗಳು ಕಾಣಿಸಿಕೊಳ್ಳುವುದು. ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಸಕಾರಾತ್ಮಕ ನಿಲುವು ಇರಲಿ. ಮಕ್ಕಳು ನಿಮ್ಮ ಜೊತೆ ವಾಗ್ವಾದ ಬರಬಹುದು. ಯಾವದೇ ಅಪಶಬ್ದಗಳನ್ನು ಆಡಿ ವಾದವನ್ನು ದೊಡ್ಡ ಮಾಡಿಕೊಳ್ಳುವುದು ಬೇಡ. ಮನೆಯ ಬಗ್ಗೆ ಚಿಂತಿಸಿ ನೀವು ಕಾಲಹರಣ ಮಾಡುವಿರಿ. ಆಗಿಹೋದ ಘಟನೆಗಳನ್ನು ಮತ್ತೆ ಮತ್ತೆ ನೆನಪಿಸಿಕೊಂಡು ಸಂಕಟಪಡುವಿರಿ. ಮನಸ್ಸನ್ನು ಕಾರ್ಯದಲ್ಲಿ ನಿಲ್ಲಿಸಲು ಕಷ್ಟವಾದೀತು. ಮನೆಯ ಜವಾಬ್ದಾರಿಯು ನಿಮಗೆ ಅನಿರೀಕ್ಷಿತವಾಗಿ ಬರಬಹುದು. ನಿಯಮ ಪಾಲನೆಯನ್ನು ನೀವು ಮಾಡಲಾರಿರಿ.
-ಲೋಹಿತಶರ್ಮಾ – 8762924271 (what’s app only)