AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಈ ರಾಶಿಯವರನ್ನು ಇತರರು ದುರುಪಯೋಗ ಮಾಡಿಕೊಳ್ಳುವ ಸಂಭವಿದೆ ಎಚ್ಚರ!

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 12) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ, ಈ ರಾಶಿಯವರನ್ನು ಇತರರು ದುರುಪಯೋಗ ಮಾಡಿಕೊಳ್ಳುವ ಸಂಭವಿದೆ ಎಚ್ಚರ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 12, 2023 | 12:20 AM

Share

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 12) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಪರಿಘ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 35 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:32 ರಿಂದ ಸಂಜೆ 05:04 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:26 ರಿಂದ 10:57ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:29 ರಿಂದ 02:01ರ ವರೆಗೆ.

ಧನು ರಾಶಿ: ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಂಭವಿದೆ.‌ ನೀವು ಆಯ್ಕೆ ಆಗಿದ್ದು ಯಾವುದಕ್ಕೋ ಕೆಲಸವು ಮತ್ಯಾವುದೋ ಆಗಲಿದೆ. ಅನಾರೋಗ್ಯವು ಚಿಕಿತ್ಸೆಯಾಗಿ ಪರಿಣಮಿಸಬಹುದು. ಉತ್ತಮ ಭೂಮಿಯ ಲಾಭವನ್ನು ಪಡೆಯುವಿರಿ. ಅಪಾಯಯಕ್ಕೆ ಸಿಕ್ಕಿಕೊಳ್ಳುವ ಸಂಭವವಿತ್ತು. ಧನವ್ಯಯವನ್ನು ನಿಮ್ಮ ಜಾಣ್ಮೆಯಿಂದ ತಪ್ಪಿಸಿಕೊಳ್ಳುವಿರಿ‌. ಅಪರಿಚಿತರಿಗೆ ಇಂದು ಅಲ್ಪ ಧನಸಹಾಯವನ್ನು ಮಾಡಬೇಕಾಗುವುದು. ಕೋಪದ ನಿಯಂತ್ರಣವು ಕಷ್ಟವಾದೀತು. ಸಂಸಾರದಲ್ಲಿ ನಿರಾಸಕ್ತಿಯು ಹೆಚ್ಚಾಗುವುದು. ಸಂಗಾತಿಯ ಜೊತೆ ನಿಮಗೆ ಸಮಯ ಕಳೆಯಲೂ ಕಷ್ಟವಾದೀತು. ಇಷ್ಟದವರನ್ನು ನೀವು ಭೇಟಿಯಾಗುವಿರಿ. ತಪ್ಪಿಗೆ ಯಾರಾದರೂ ಕ್ಷಮೆಯನ್ನು ಕೇಳಬಹುದು. ನಿರಾಕರಿಸುವುದು ಬೇಡ.

ಮಕರ ರಾಶಿ: ಪಾಲುದಾರಿಕೆಯಲ್ಲಿ ನಿಮ್ಮ ಪಾಲೇ ಅಧಿಕವಾಗಿರುವುದು. ಶತ್ರುವಿನ ಮೇಲೆ ಸೇಡು ತೀರಿಸಿಕೊಳ್ಳಲು ಅಧಿಕ ಖರ್ಚನ್ನು ಮಾಡಬೇಕಾದೀತು. ಉದ್ಯಮಿಗಳಿಗೆ ನೌಕರರ ಕಲಹವನ್ನು ಸರಿ ಮಾಡುವುದೇ ಹೆಚ್ಚಾಗುವುದು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ. ಉದ್ಯಮಕ್ಕೆ ಬೇಕಾದ ವಿವರಗಳನ್ನು ಅನುಭವಿಗಳಿಂದ ಪಡೆಯಿರಿ. ಸ್ನೇಹಿತನ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳ ಭೇಟಿಯು ನಿಮ್ಮ ಜೀವನೋತ್ಸಾಹವನ್ನು ಹೆಚ್ಚಿಸುವುದು. ಮಾತನಾಡುವ ವೇಗದಲ್ಲಿ ಏನನ್ನಾದರೂ ಹೇಳಿಬಿಡುವಿರಿ. ನಿಮಗೆ ಇಂದು ಜಯದ ಸಂಭ್ರಮವು ಸಿಹಲಿದೆ. ಕಾರ್ಯದಲ್ಲಿ ಏಕಾಗ್ರತೆ ಇರಲಿದೆ.‌

ಕುಂಭ ರಾಶಿ: ನಿಮ್ಮ‌ ಸಮ್ಮುಖದಲ್ಲಿ ಕುಟುಂಬದ ಸಮಸ್ಯೆಗಳು ಬಗೆಹರಿಯಬಹುದು. ಬಹಳ ದಿನಗಳ ಅನಂತರ ಸಾರ್ವಜನಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವಿರಿ. ಉತ್ಸಾಹವೂ ಇರಲಿದೆ. ನಿಮ್ಮ ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಗುವುದು. ಸಕಾರಾತ್ಮಕ ಆಲೋಚನೆಗಳನ್ನು ನೀವು ಆಪ್ತರ ಜೊತೆ ಹಂಚಿಕೊಳ್ಳುವಿರಿ. ನಿಮ್ಮ ಯೋಜನೆಗೆ ಬೆನ್ನೆಲುಬಾಗಿ ನಿಲ್ಲುವವರು ಬೇಕಾಗಿದ್ದರೆ. ಅಧಿಕ ಖರ್ಚನ್ನು ಇಂದು ಮಾಡಬೇಕಾಗುವುದು. ನಿಮ್ಮ ದುರಭ್ಯಾಸವನ್ನು ಇನ್ನೊಬ್ಬರಿಗೂ ಹಿಡಿಸುವ ಸಾಧ್ಯತೆ ಇದೆ. ಭವಿಷ್ಯದ ಆಗುಹೋಗುಗಳ ಬಗ್ಗೆ ಅತಿಯಾದ ಚಿಂತೆ ಇರಲಿದೆ. ಸಿಕ್ಕಿದ್ದನ್ನು ರಕ್ಷಣೆ ಮಾಡಿಕೊಳ್ಳುವ ಜವಾಬ್ದಾರಿಯು ನಿಮ್ಮದಾಗಿದೆ.

ಮೀನ ರಾಶಿ: ಸಾಲದ ಮರುಪಾವತಿಗೆ ಸೂಕ್ತ ಕ್ರಮದ ಅಗತ್ಯವಿರಲಿದೆ. ಆಲಸ್ಯದಿಂದ ಕಛೇರಿಯ ಕೆಲಸಗಳು ವಿಳಂಬವಾಗುವುದು. ನಿಮ್ಮ ಬಗ್ಗೆ ಪ್ರಶಂಸೆಯ ನುಡಿಗಳು ಕೇಳಿಬರಬಹುದು. ವಿದ್ಯಾರ್ಥಿಗಳಿಗೆ ಓದಲು ಸಮಯವನ್ನು ಇಂದು ಹೊಂದಿಕೆಯಾಗದು. ಪೂರಕ ವಾತಾವರಣದಲ್ಲಿ ಕೊರತೆ ಇರುವುದು. ಹೂಡಿಕೆಯ ವಿಚಾರದಲ್ಲಿ ಇಂದು ಸಕಾರಾತ್ಮಕ ಆಲೋಚನೆಯು ಇರದು. ಉದ್ವೇಗದಲ್ಲಿ ಇದ್ದರೂ ಸಮಾಧಾನಿಗಳಂತೆ ತೋರುವಿರಿ.‌ ಪುಣ್ಯದ ಫಲವು ಇಂದು ಸಿಗುವುದು. ಸಹೋದ್ಯೋಗಿಗಳ ವರ್ತನೆಯು ನಿಮಗೆ ಆಚ್ಚರಿಗೊಳ್ಳುವಿರಿ. ಕೆಲಸವನ್ನು ಬಿಡಬೇಕಾದ ಸಂದರ್ಭ ಬಂದರೂ ಹೇಗೋ ಉಳಿಸಿಕೊಳ್ಳುವಿರಿ. ಮನೋಬಲವು ಯಾರಿಂದಲಾದರೂ ಕುಗ್ಗಬಹುದು.

Follow Us
Web contact
Web contact

TV9 Kannada

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?