ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ ಶುಕ್ರ:, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಹಸ್ತಾ, ಯೋಗ: ಬ್ರಹ್ಮ, ಕರಣ: ಚತುಷ್ಪಾತ್, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 13 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:50 ರಿಂದ 12:19ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:16 ರಿಂದ 04:45ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:53 ರಿಂದ 09:22ರ ವರೆಗೆ.
ಧನು ರಾಶಿ : ಮಕ್ಕಳ ಭವಿಷ್ಯಕ್ಕೆ ಹಣವನ್ನು ಕೂಡಿ ಇಡುವಿರಿ. ಸಾಲ ಕೊಟ್ಟವರು ನಿಮ್ಮನ್ನು ಇಂದು ಏನೂ ಕೇಳುವುದಿಲ್ಲ. ಹಾಗಾಗಿ ನಿಶ್ಚಿಂತೆಯಿಂದ ಇದ್ದುಬಿಡುವಿರಿ. ಸಿಕ್ಕಿದ್ದರಲ್ಲಿ ಸಂತೋಷ ಪಡುವುದನ್ನ ನೀವು ಬೆಳೆಸಿಕೊಳ್ಳಬೇಕಾಗುವುದು. ಮಕ್ಕಳು ನಿಮಗೆ ಬೇಕಾದ ಆರ್ಥಿಕ ನೆರವನ್ನು ಕೊಡುವರು. ನಿಮ್ಮ ದುರಭ್ಯಾಸವು ಅತಿಯಾಗಲಿದೆ. ಕಛೇರಿಯಲ್ಲಿ ಸ್ವಲ್ಪ ಬಿಡುವು ಮಾಡಿಕೊಂಡು ಕುಟುಂಬಕ್ಕೆ ಸಮಯವನ್ನು ಕೊಡುವಿರಿ. ಇಷ್ಟವಿಲ್ಲದ ಕಡೆ ನೀವು ಎಂದೂ ಹೋಗಲಾರಿರಿ. ನಿಮ್ಮ ಉತ್ಸಾಹದ ಕೆಲಸವು ಇನ್ನೊಬ್ಬರಿಗೆ ಮಾದರಿಯಾದೀತು. ನಿಮ್ಮ ನಿರ್ಲಕ್ಷ್ಯದ ಸ್ವಭಾವದಿಂದ ಉತ್ತಮ ಅವಕಾಶಗಳನ್ನು ಕಳೆದುಕೊಳ್ಳುವಿರಿ. ಬೇಸರದ ಸನ್ನಿವೇಶದಲ್ಲಿ ಕುಟುಂಬದ ಬಗ್ಗೆ ಗೊತ್ತಾಗುವುದು. ಆತ್ಮಾಭಿಮಾನ ಹೆಚ್ಚಿರುವಂತೆ ತೋರುತ್ತದೆ. ಆದ್ದರಿಂದ ನಿಮ್ಮ ಬಗ್ಗೆ ಏನಾದರೂ ಹೇಳಿದರೆ ಸಿಟ್ಟೂ ಬೇಗ ಬರುವುದು.
ಮಕರ ರಾಶಿ : ಸಾಲ ಕೊಟ್ಟವರು ನಿಮ್ಮನ್ನು ಶತ್ರುಗಳಂತೆ ಕಾಡುವರು. ನಿಮ್ಮನ್ನು ಕೆಲವು ಸಹೋದ್ಯೋಗಿಗಳು ಟೀಕಿಸಬಹುದು. ಕುಹಕ ಮಾತುಗಳನ್ನೂ ಆಡಬಹುದು. ಸಂಗಾತಿಯು ನಿಮ್ಮ ಮಾತನ್ನು ಅಲ್ಲಗಳೆಯಬಹುದು. ಸ್ವಪ್ರತಿಷ್ಠೆಯನ್ನು ಎಲ್ಲರೆದುರು ತೋರಿಸಿದರೆ ಪ್ರಯೋಜನವಾಗದು. ನಿಮ್ಮ ವ್ಯವಹಾರದಲ್ಲಿ ಯಾರ ಹಸ್ತಕ್ಷೇಪವೂ ಇಷ್ಟವಾಗದು. ತಂದೆಯ ಕೆಲವು ವ್ಯವಹಾರವು ನಿಮಗೆ ಇಷ್ಟವಾಗದೇ ಅವರ ಮೇಲೆ ಮುನಿಸಿಕೊಳ್ಳುವಿರಿ. ರಾಜಕೀಯದಲ್ಲಿ ನಿಮ್ಮ ವರ್ಚಸ್ಸನ್ನು ಜೊತೆಗಿರುವವರು ಹೆಚ್ಚಿಸುವರು. ಕೆಲಸದ ಒತ್ತಡವು ಇಂದು ಅಧಿಕವಾಗಿ ಇರಲಿದೆ. ಭೂಮಿಯ ವ್ಯವಹಾರದಲ್ಲಿ ಸ್ವಲ್ಪ ನಷ್ಟವಾಗುವುದು. ತಂತ್ರಜ್ಞರು ಲಾಭವನ್ನು ಗಳಿಸುವರು.
ಕುಂಭ ರಾಶಿ : ಹಳೆಯ ಮನೆಯ ದುರಸ್ತಿಗೆ ಹಣವನ್ನು ಖರ್ಚು ಮಾಡುವಿರಿ. ಆತುರಾತುರವಾಗಿ ಯಾವುದನ್ನೂ ಮಾಡಲು ಹೋಗುವುದು ಬೇಡ. ಇನ್ನೊಬ್ಬರು ತೋರುವ ನಿರ್ಲಕ್ಷ್ಯದಿಂದ ನೀವು ಬಹಳ ದುಃಖಿಸುವಿರಿ. ಉದ್ಯೋಗಕ್ಕೆ ಸಂಬಂಧಿಸಿದಂತೆ ಬಂಧುಗಳ ಸಹಕಾರ ಇಂದು ಲಭ್ಯವಾಗುವುದು. ಯಾರಾದರೂ ನಿಮ್ಮ ಭವಿಷ್ಯದ ಬಗ್ಗೆ ಹೇಳಿ ಅವಮಾನಿಸಬಹುದು. ಕೆಲಸದಲ್ಲಿ ಮತ್ತೆ ಮತ್ತೆ ತೊಂದರೆ ಎದುರಾದರೆ ಅದನ್ನು ಕೈ ಬಿಡುವುದು ಸೂಕ್ತ. ಮನೆಯ ಕಾರ್ಯದಲ್ಲಿ ಮಂದಗತಿ, ಆಮೇಲೆ ಮಾಡಿದರಾಯಿತು ಎಂಬ ಭಾವ ಇರಲಿದೆ. ರಾಜಕೀಯ ನಾಯಕರಿಂದ ಒತ್ತಾಯ ಪೂರ್ವಕ ಬೆಂಬಲವನ್ನು ಪಡೆಯುವಿರಿ. ಹೊಸ ವಸ್ತುವು ನಿಮಗೆ ಸಂತೋಷವನ್ನು ಕೊಡುವುದು. ಆದಾಯದ ಬಗ್ಗೆ ಋಣಾತ್ಮಕ ಮನೋಭಾವ ಬೇಡ. ಬಂದಿದ್ದರಲ್ಲಿ ಸುಖ ಪಡಿ.
ಮೀನ ರಾಶಿ : ಇಂದು ನೀವಾಡುವ ಮಾತಿನ ಮೇಲೆ ನಿಮ್ಮ ಕಾರ್ಯಗಳು ನಿಂತವೆ. ಓಡಾಡಕ್ಕೆ ನಿಮಗೆ ವಾಹನದ ಅನುಕೂಲತೆಯೂ ಆಗುವುದು. ಸ್ವಂತ ಉದ್ಯಮದಲ್ಲಿ ನಿರೀಕ್ಷಿತ ಲಾಭವನ್ನು ಕಾಣುವಿರಿ. ಪ್ರೇಮವು ನಿಮಗೆ ನಿಮ್ಮನ್ನು ಉತ್ಸಾಹದಿಂದ ಇಡುವುದು. ಇನ್ನೊಬ್ಬರಿಗೆ ನೀವು ಸಹಾಯವನ್ನು ಮಾಡಲು ಹೆಚ್ಚು ಇಷ್ಟಪಡುವಿರಿ. ಸಮಯಕ್ಕೆ ಸರಿಯಾಗಿ ಕೆಲಸ ಮಾಡದೇ ಮೇಲಧಿಕಾರಿಗಳು ಏನಾದರೂ ಹೇಳಿಯಾರು. ವಾಹನವನ್ನು ಚಲಾಯಿಸುವಾಗ ಎಚ್ಚರ. ಅಪಘಾತವಾಗುವ ಸಾಧ್ಯತೆ ಇದೆ. ನೀವು ಅತಿಯಾದ ಆತ್ಮವಿಶ್ವಾಸದಲ್ಲಿ ಕೆಲವೊಂದನ್ನು ಕಳೆದುಕೊಳ್ಳುವಿರಿ. ಮುನ್ನುಗ್ಗುವ ಮನಃಸ್ಥಿತಿಯು ಇಲ್ಲವಾದೀತು. ನಿಮ್ಮ ನಿರೀಕ್ಷೆಗೆ ಕೆಲವು ನಕಾರಾತ್ಮಕ ಮಾತುಗಳನ್ನು ಕೇಳಿಸಿಕೊಳ್ಳುವಿರಿ.
-ಲೋಹಿತಶರ್ಮಾ – 8762924271 (what’s app only)