Horoscope: ರಾಶಿಭವಿಷ್ಯ, ಈ ರಾಶಿಯವರು ಇಂದು ಸಂಗಾತಿಯ ಮಾತನ್ನೇ ಹೆಚ್ಚು ಕೇಳಬೇಕಾದೀತು

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 13) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ, ಈ ರಾಶಿಯವರು ಇಂದು ಸಂಗಾತಿಯ ಮಾತನ್ನೇ ಹೆಚ್ಚು ಕೇಳಬೇಕಾದೀತು
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 13, 2023 | 12:45 AM

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ಶುಕ್ಲ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 34 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:29 ರಿಂದ ಸಂಜೆ 02:00 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:54 ರಿಂದ 09:26ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 10:57 ರಿಂದ 12:29ರ ವರೆಗೆ.

ಧನು ರಾಶಿ : ಭೂಮಿಯ ವಿಚಾರದಲ್ಲಿ ಶಾಂತವಾದ ಕಲಹವು ಮತ್ತೆ ಆರಂಭವಾಗುವುದು. ಕಬ್ಬಿಣ ಮುಂತಾದ ವ್ಯಾಪಾರವನ್ನು ಮಾಡುವವರಿಗೆ ಆದಾಯವು ಹೆಚ್ಚಾಗುವುದು. ಮಕ್ಕಳ ಶ್ರಮದಿಂದ ಪಾಲಕರಿಗೆ ನೆಮ್ಮದಿ ಇರಲಿದೆ. ಹಿರಿಯರ ಆರೋಗ್ಯದಲ್ಲಿ ವ್ಯತ್ಯಸಾವಾಗಿದ್ದು ತುರ್ತು ಚಿಕಿತ್ಸೆಯ ಅವಶ್ಯಕತೆ ಇರಲಿದೆ. ಹಲವು ದಿನಗಳ ನಿಮ್ಮ ಋಣವು ಮುಕ್ತಾಯವಾಗಿದ್ದು ಸಂತಸದ ವಿಚಾರವಾಗಿದೆ. ಉನ್ನತ ಹುದ್ದೆಗೆ ಆಯ್ಕೆಯಾದವರ ಪಟ್ಟಿಯಲ್ಲಿ ನಿಮ್ಮ ಹೆಸರೂ ಇರಲಿದೆ. ಮಕ್ಕಳ ಭವಿಷ್ಯಕ್ಕೆ ಹಣವನ್ನು ಉಳಿತಾಯ ಮಾಡವಿರಿ. ಇಂದಿನ ಸಮಯ ಮಿತಿಯನ್ನು ಅರಿತು ಕಾರ್ಯವನ್ನು ಮಾಡುವಿರಿ. ನಿಮ್ಮ ಆಲೋಚನಾ ಕ್ರಮವನ್ನು ಬದಲಿಸಿಕೊಳ್ಳುವುದು ಉತ್ತಮ.

ಮಕರ ರಾಶಿ : ಶಿಕ್ಷಕವೃತ್ತಿಯವರು ಉನ್ನತ ಸ್ಥಾನವನ್ನು ಪಡೆದುಕೊಳ್ಳುವರು. ಖಾಸಗಿ ಸಂಸ್ಥೆಯ ಹುದ್ದೆಯನ್ನು ನೀವು ಪಡೆಯಲಿದ್ದೀರಿ. ಧಾರ್ಮಿಕ‌ಚಿಂತನೆಗಳು ನಿಮ್ಮ ಮನಸ್ಸಿನಲ್ಲಿ ಓಡಬಹುದು. ನೀವು ಇಂದು ಹಳೆಯ ಸ್ನೇಹಿತನ ಜೊತೆ ಸೇರಿ ಹೊಸ ಉದ್ಯೋಗವನ್ನು ಆರಂಭಿಸುವ ಯೋಚನೆ ಮಾಡುವಿರಿ. ತಂದೆ ಹಾಗೂ ತಾಯಿಯರ ಜೊತೆ ಬಹಳ ದಿನಗಳ ಅನಂತರ ಹರಟೆ ಹೊಡೆಯುವಿರಿ. ತೀರ್ಥಕ್ಷೇತ್ರಗಳ ದರ್ಶನವನ್ನು ಮಕ್ಕಳ ಜೊತೆ ಮಾಡುವಿರಿ. ಚಂಚಲವಾದ ಮನಸ್ಸನ್ನು ಏಕಾಗ್ರವಾಗಿ ಇಡಲು ಪ್ರಯತ್ನಿಸುವಿರಿ. ಸಹೋದ್ಯೋಗಿಗಳ ಅನಾದರವನ್ನು ನೀವು ಲೆಕ್ಕಿಸದೇ ನಿಮ್ಮ ಕಾರ್ಯದಲ್ಲಿ ಮಗ್ನರಾಗುವಿರಿ.

ಕುಂಭ ರಾಶಿ : ಅಧಿಕ ಆದಾಯ ಕೆಲಸವನ್ನು ಇಂದು ಹುಡುಕುವಿರಿ. ನಿಮ್ಮ ವ್ಯಾಪಾರಕ್ಕೆ ವಿದೇಶದ ಸಂಪರ್ಕವು ಬರಬಹುದು. ಮನೆಯಲ್ಲಿ ನಡೆದು ಶುಭಕಾರ್ಯದ ತಯಾರಿಯಲ್ಲಿ ನೀವು ಇರುವಿರಿ. ಆಸ್ತಿಯ ವಿಚಾರದಲ್ಲಿ ನಿಮ್ಮ ನಿಲುವಿಗೆ ಅಪಜಯವಾಗಬಹುದು. ಇಂದು ನೀವು ಸಂಗಾತಿಯ ಮಾತನ್ನೇ ಹೆಚ್ಚು ಕೇಳಬೇಕಾದೀತು. ಸ್ನೇಹಿತರಿಗೋಸ್ಕರ ನೀವು ಹಣವನ್ನು ಖರ್ಚು ಮಾಡಬೇಕಾದೀತು. ನಿಮ್ಮ‌ ವಸ್ತುಗಳನ್ನು ದುರುಪಯೋಗ ಮಾಡಿಕೊಳ್ಳುವಿರಿ. ನೀವು ಇನ್ನೊಬ್ಬರಿಗೆ ನಿಮ್ಮನ್ನು ಹೋಲಿಸಿಕೊಂಡು ನಿಮ್ಮೊಳಗೇ ಸಂಕಟಪಡುವಿರಿ. ಅತಿಯಾದ ದುಃಖದ ಸನ್ನಿವೇಶವು ಬರಲಿದೆ.

ಮೀನ ರಾಶಿ : ಕಾರ್ಯದ ಒತ್ತಡದಿಂದ ನೀವು ವಿಶ್ರಾಂತಿಯನ್ನು ಪಡೆಯುವುದು ಉತ್ತಮ. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಿನ್ನಡೆಯಾಗುವುದು. ಆಭರಣ ಮಾರಾಟಗಾರು ಲಾಭವನ್ನು ಗಳಿಸಬಹುದು. ಕಲಾವಿದರಿಗೆ ಅವಕಾಶದ ದೊಡ್ಡ ಬಾಗಿಲು ತೆರೆದುಕೊಳ್ಳಬಹುದು. ಇಂದು ನಿಮಗೆ ಕೆಲಸವು ಆಗಬೇಕಾಗಿದ್ದು ಪ್ರಯಾಣವು ಅನಿವಾರ್ಯವಾಗುವುದು. ಒಂದೇ ಸಾರಿ ಖರ್ಚಿನ ಎಲ್ಲ ಅವಕಾಶಗಳನ್ನು ಇಟ್ಟುಕೊಳ್ಳಬೇಡಿ. ನಿಮ್ಮ ಮಾತು ಇನ್ನೊಬ್ಬರಿಗೆ ಸಿಟ್ಟು ಬರುವಂತೆ ಇರವುದು. ಮಕ್ಕಳ ವಿದ್ಯಾಭ್ಯಾಸದ ಖರ್ಚು ಸ್ವಲ್ಪ ಕಡಿಮೆ‌ ಆಗಿದ್ದು ಸಂತಸದ ಸಮಾಚಾರವಾಗಲಿದೆ. ನಿಮ್ಮ ನೀರೀಕ್ಷೆಯ ಮಟ್ಟಕ್ಕೆ ವ್ಯಾಪಾರವು ತಲುಪದಿರುವುದು ನಿಮಗೆ ಬೇಸರವಾಗುವುದು.

-ಲೋಹಿತಶರ್ಮಾ – 8762924271 (what’s app only)