AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಈ ರಾಶಿಯವರಿಗೆ ನಂಬಿಕೆಯನ್ನು ಕಳೆದುಕೊಳ್ಳುವವ ಪ್ರಸಂಗವು ಬರಬಹುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 14) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ, ಈ ರಾಶಿಯವರಿಗೆ ನಂಬಿಕೆಯನ್ನು ಕಳೆದುಕೊಳ್ಳುವವ ಪ್ರಸಂಗವು ಬರಬಹುದು
ಜ್ಯೋತಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Sep 14, 2023 | 12:15 AM

Share

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 14) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ಬ್ರಹ್ಮ, ಕರಣ: ಚತುಷ್ಪಾದ್, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 34 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:59 ರಿಂದ ಸಂಜೆ 03:31 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:22 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:25 ರಿಂದ 10:57ರ ವರೆಗೆ.

ಧನು ರಾಶಿ : ಅಲಂಕಾರಕ್ಕೆ ಹೆಚ್ಚು ಸಮಯವನ್ನು ಕೊಡುವಿರಿ ಮತ್ತು ಅದಕ್ಕೆ ಸಂಬಂಧಿಸಿದ ವಸ್ತುಗಳನ್ನು ಖರೀದಿಸುವಿರಿ. ಯೋಗಾಭ್ಯಾಸದಿಂದ ನಿಮಗೆ ಆಯಾಸವಾಗಲಿದೆ. ಕೊಟ್ಟ ಹಣವನ್ನು ನೀವು ಪುನಃ ಕೇಳುವಿರಿ. ನಿಮ್ಮಿಂದ ಸಹಾಯವನ್ನು ಪಡೆದ ಹಿರಿಯರು ಆಶೀರ್ವದಿಸುವರು. ಇದರಿಂದ ಸಂತೋಷವಾಗಲಿದೆ. ಸ್ನೇಹಿತನ ಸಹವಾಸದಿಂದ ದುರಭ್ಯಾಸವು ಬರಬಹುದು. ವಿದ್ಯಾಭ್ಯಾಸದ ಕಾರಣಕ್ಕೆ ಹಣವನ್ನು ಪಡೆದು ಅನ್ಯ ಕಾರ್ಯಕ್ಕೆ ಬಳಸಿಕೊಳ್ಳುವಿರಿ. ನಂಬಿಕೆಯನ್ನು ಕಳೆದುಕೊಳ್ಳುವವ ಪ್ರಸಂಗವು ಬರಬಹುದು. ಉದ್ಯಮವನ್ನು ಮುನ್ನಡೆಸಲು ಉತ್ತಮ ವ್ಯಕ್ತಿಗಳ ಅನ್ವೇಷಣೆ ಮಾಡುವಿರಿ. ದೇವತಾರಾಧನೆಯಲ್ಲಿ ಮನಸ್ಸು ನಿಲ್ಲಲಿದೆ.

ಮಕರ ರಾಶಿ : ಇಂದಿನ ಕೆಲವು ಮಾತುಗಳನ್ನು ನೀವು ನಿರ್ಲಕ್ಷಿಸುವಿರಿ. ಕಛೇರಿಯ ವ್ಯವಹಾರದಲ್ಲಿ ನಿಮಗೆ ಒತ್ತಡವು ಬರಬಹುದು. ಹಳೆಯ ಸ್ನೇಹಿತೆಯ ಸಖ್ಯವಾಗಬಹುದು. ಮಕ್ಕಳ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ವ್ಯವಹರಿಸುವುದು ಉತ್ತಮ. ಹೊಸ ಉದ್ಯೋಗಕ್ಕೆ ಪ್ರಯತ್ನಗಳು ಆರಂಭವಾಗಲಿದೆ. ಪಿತ್ರಾರ್ಜಿತ ಆಸ್ತಿಯು ತಾನಾಗಿಯೇ ಬರಬಹುದು. ವಿದ್ಯಾಭ್ಯಾಸದಲ್ಲಿ ಆಸಕ್ತಿ ಬರುವಂತೆ ಮಾಡುವ ಹೊಣೆಗಾರಿಕೆ ಇರಲಿದೆ. ಹಿರಿಯರಿಂದ ಮಾರ್ಗದರ್ಶನವು ಸಿಗಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಓಡಾಟವು ವ್ಯರ್ಥಯವಾಗುವುದು. ಉಚಿತವಾಗಿ ಸಿಕ್ಕಿದ್ದನ್ನು ಪಡೆಯಲು ಇಚ್ಛಿಸುವುದಿಲ್ಲ. ಶ್ರಮಕ್ಕೆ ಹೆಚ್ಚು ಮಹತ್ವವನ್ನು ಕೊಡುವಿರಿ.

ಕುಂಭ ರಾಶಿ : ಹಳೆಯ ಬಂಧುಗಳ ಸಮಾಗಮವಾಗಲಿದ್ದು, ಸಂತೋಷವಾಗಲಿದೆ. ದೇವಾಲಯಕ್ಕೆ ಹೋಗಿ ನೆಮ್ಮದಿಯನ್ನು ಪಡೆದುಕೊಳ್ಳುವಿರಿ. ನಿಮ್ಮ ಮಾತುಗಳು ಕಠೋರವಾಗಿ ಇರುವುದು. ಏನನ್ನೋ ಸಾಧಿಸಲು ಹೋಗಿ ಮತ್ತೇನನ್ನೋ ಮಾಡಿಕೊಳ್ಳುವಿರಿ. ವಾಹನದಿಂದ ಗಾಯವಾಗುವ ಸಾಧ್ಯತೆ ಇದೆ. ನಿಮಗೆ ಬೇಕಾದ ವಾತಾವರಣದಲ್ಲಿ ಇರುವುದು ಇಷ್ಟವಾಗುವುದು. ಸಹೋದರನ ಜೊತೆ ಸಣ್ಣ ವಿಷಯಕ್ಕೆ ವಿವಾದವಾಗಬಹುದು.‌ ಕಾರ್ಯದ ಅನಿವಾರ್ಯತೆಯು ಎದ್ದು ಕಾಣಿಸುವುದು. ನಿಮ್ಮ ಸರಳ ವ್ಯಕ್ತಿತ್ವವು ಮಾದರಿಯಾಗುವುದು.

ಮೀನ ರಾಶಿ : ಅಜಾಗರೂಕತೆಯಿಂದ ನಿಮ್ಮ ವಸ್ತುವು ಇನ್ನೊಬ್ಬರ ಪಾಲಾಗಬಹುದು. ಕಳೆದ ವಿಚಾರವನ್ನು ಮತ್ತೆ ಮತ್ತೆ ನೆನಪಿಸಿಕೊಂಡು ದುಃಖಿಸುವಿರಿ. ಅಪರಿಚಿತ ಕರೆಗಳು ನಿಮ್ಮನ್ನು ಪೀಡಿಸಬಹುದು. ಅನ್ಯ ಕಾರ್ಯದಿಂದ ನಿಮ್ಮ ಮುಖ್ಯ‌ ಕಾರ್ಯದಲ್ಲಿ ವೇಗವು ಕಡಿಮೆ ಆಗಬಹುದು.ಲ. ನೂತನ ವಾಹನವನ್ನು ಖರೀದಿಸುವ ಆಲೋಚನೆ ಇರುವುದು. ಸ್ನೇಹಿತರ ಸಂಪಾದನೆಯ ದಾರಿಯನ್ನು ಹಾಕಿಕೊಡುವಿರಿ. ನಿಮ್ಮ ಅಧಿಕಾರದ ಮಾತುಗಳು ಅಹಂಕಾರವಾಗಿ ಪರಿವರ್ತಿತವಾಗಬಹುದು. ಅಶಕ್ತರಿಗೆ ನಿಮ್ಮ ಕೈಲಾದ ಸಹಕಾರವನ್ನು ಮಾಡುವಿರಿ. ನೂತನ ಸಂಬಂಧವನ್ನು ಬೆಳೆಸಿಕೊಳ್ಳಲು ಉತ್ಸುಕರಾಗುವಿರಿ. ಅರ್ಥಿಕ ಕ್ರಮವನ್ನು ಸರಿಯಾಗಿ ಇಟ್ಟುಕೊಳ್ಳುವಿರಿ.

-ಲೋಹಿತಶರ್ಮಾ – 8762924271 (what’s app only)