Horoscope: ರಾಶಿಭವಿಷ್ಯ, ಈ ರಾಶಿಯವರಿಗೆ ಇಂದು ಯಶಸ್ಸು ಸುಲಭದಲ್ಲಿ ಲಭ್ಯವಾಗುವುದಿಲ್ಲ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 15) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ಈ ರಾಶಿಯವರಿಗೆ ಇಂದು ಯಶಸ್ಸು ಸುಲಭದಲ್ಲಿ ಲಭ್ಯವಾಗುವುದಿಲ್ಲ
ಇಂದಿನ ದಿನಭವಿಷ್ಯ (Photo Credit: iStock)
Follow us
TV9 Web
| Updated By: Rakesh Nayak Manchi

Updated on: Aug 15, 2023 | 12:45 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಆಗಸ್ಟ್ 15 ಮಂಗಳವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಭವಿಷ್ಯ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಸಿದ್ಧ, ಕರಣ: ಚತುಷ್ಪಾತ್, ಸೂರ್ಯೋದಯ ಬೆಳಗ್ಗೆ 06 ರಿಂದ 19 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ರಿಂದ 53 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:45 ರಿಂದ 05:20 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:28 ರಿಂದ 11:02ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:37 ರಿಂದ 02:11ರ ವರೆಗೆ.

ಧನು ರಾಶಿ: ಹಲವು ದಿನಗಳಿಂದ ನಿರೀಕ್ಷಿಸುತ್ತಿದ್ದ ಬಡ್ತಿಯು ಇಂದು ಸಿಗಲಿದೆ. ನಿಮ್ಮ ಧಾರ್ಮಿಕ ಶ್ರದ್ಧೆಗೆ ಫಲ ದೊರೆತಂತಾಗುವುದು. ನಿಮ್ಮ ಸಾಮರ್ಥ್ಯವನ್ನು ತೋರಿಸಲು ಹಿಂದೇಟು ಹಾಕುವಿರಿ. ನಿಮ್ಮ ಯಶಸ್ಸಿಗೆ ಕಾರಣರಾದವರನ್ನು ಸ್ಮರಿಸಿಕೊಳ್ಳುವಿರಿ. ದೈಹಿಕ ಕಸರತ್ತನ್ನು ಅತಿಯಾಗಿ ಮಾಡಲು ಹೋಗುವುದು ಬೇಡ. ಅತಿಯಾದ ಆಪ್ತತೆಯು ನಿಮಗೆ ಮುಳುವಾಗಬಹುದು. ಆರ್ಥಿಕ ವ್ಯವಹಾರವನ್ನು ಯಾರ ಜೊತೆ ಕೂಡ ಹಂಚಿಕೊಳ್ಳುವುದು ಬೇಡ. ಸುಖವಾಗಿರಲು ಮಾರ್ಗವನ್ನು ಹುಡುಕುವಿರಿ. ಅತಿಯಾದ ಲೋಭವು ನಿಮಗೆ ಮಾರಕವಾದೀತು. ಒಂದು ಕ್ಷಣವೂ ಒಂದು ಕಡೆ ಕುಳಿತಿರಲಾರಿರಿ.

ಮಕರ ರಾಶಿ: ಅಪ್ರಸಿದ್ಧ ಸಂಸ್ಥೆಗೆ ಹಣ ಹೂಡಿಕೆ ಮಾಡಿ ನಿಮ್ಮ ಹಣವನ್ನು ಕಳೆದುಕೊಳ್ಳುವಿರಿ. ಕರಕುಶಲ ವ್ಯಾಪಾರಿಗಳು ಅಧಿಕ ಲಾಭವನ್ನು ಪಡೆಯುವರು. ಸರ್ಕಾರಿ‌ ಕೆಲಸಕ್ಕೆ ಪ್ರಯತ್ನಿಸಿದರೂ ಸುಲಭವಾಗಿ ಸಿಗದು. ನಿಮ್ಮ ಆಸ್ತಿಗೆ ಸಂಬಂಧಿಸಿದ ವ್ಯವಹಾರವನ್ನು ಮಾಡಲು ಹೆಚ್ಚು ಓಡಾಟವಾಗುವುದು. ನಿಮ್ಮ ಬಗ್ಗೆ ಪ್ರಶಂಸೆಯ ಮಾತುಗಳು ಕೇಳಿಬರುವುದು. ಎಲ್ಲರನ್ನೂ ಮೆಚ್ಚಿಸಿ ನಿಮ್ಮ ಕೆಲಸವನ್ನು ಸಾಧಿಸಿಕೊಳ್ಳಲು ಸಾಧ್ಯವಾಗದು. ಗೌರವದ ಅಪೇಕ್ಷೆಯು ಇಲ್ಲದಿದ್ದರೂ ನಿಮಗೆ ಸುಕೃತದಿಂದ ಸಿಗುವುದು. ಸ್ನೇಹಿತರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಆಗಬೇಕಾದ ಕಾರ್ಯಗಳ ಬಗ್ಗೆ ನಿಮಗೆ ಗಮನವು ಕಡಿಮೆ‌ ಇರುವುದು.

ಕುಂಭ ರಾಶಿ: ನಿಮ್ಮ ಪಾಲುದಾರಿಕೆಯ ಒಪ್ಪಂದವನ್ನು ಪುನಃ ಮಾಡಿಕೊಳ್ಳುವ ಸನ್ನಿವೇಶಗಳು ಬರಲಿದ್ದು ಆಲೋಚಿಸಿ ಒಪ್ಪಿಗೆ ನೀಡಿ. ಗುರಿಯ ಬಗ್ಗೆ ಸ್ಪಷ್ಟ ಕಲ್ಪನೆ ಇಲ್ಲದಿರುವುದು ವೈಫಲ್ಯಕ್ಕೆ ಕಾರಣವಾಗಿದೆ. ವಿದ್ಯಾರ್ಥಿಗಳಿಗೆ ಪ್ರೋತ್ಸಾಹವು ಕಡಿಮೆ ಆಗುವುದು. ನಿಮ್ಮೊಳಗೆ ಯಾರೂ ಸಾಧಿಸದ್ದನ್ನು ತಾನು ಸಾಧಿಸಿದೆನೆಂಬ ತೃಪ್ತಿ, ಅದಕ್ಕಿಂತ ಹೆಚ್ಚು ಅಹಂಕಾರವು ಇರಲಿದೆ‌. ಬರಬೇಕಾದ ಹಣದಲ್ಲಿ ವಂಚನೆಯಾಗುವ ಸಾಧ್ಯತೆ ಇದೆ. ಇಂದಿನ ನಿಮ್ಮ ವೈಯಕ್ತಿಕ ಕೆಲಸ ನಡುವೆ ಕಛೇರಿಯ ಕೆಲಸಗಳು ಹಿಂದೆ ಉಳಿಯುವುದು. ನಿಮ್ಮ ಅನಾರೋಗ್ಯದ ಸ್ಥಿತಿಯು ಎಂದಿಗಿಂತ ಹೆಚ್ಚಾಗಬಹುದು. ನಿಮಗೆ ಯಶಸ್ಸು ಸುಲಭದಲ್ಲಿ ಲಭ್ಯವಿಲ್ಲ.

ಮೀನ ರಾಶಿ: ನಿಮ್ಮ ಆತ್ಮೀಯವಾದ ಮಾತುಕತೆಗಳಿಂದ ಅಪರಿಚಿತರು ಆಪ್ತರಾಗುವರು. ಆಕಸ್ಮಿಕ ದ್ರವ್ಯಪ್ರಾಪ್ತಿಯು ಆಗಲಿದೆ. ದಾಂಪತ್ಯದಲ್ಲಿ ಪರಸ್ಪರ ನಂಬಿಕೆಗಳು ದೃಢವಾಗುವುದು. ಆದಾಯದ ಮೂಲವು ಬದಲಾವಣೆ ಆಗಬಹುದು. ಕಲ್ಪನೆಗೆ ಸಿಗದ ಬದಲಾವಣೆಯನ್ನು ನೀವು ನೋಡಬಹುದು. ಸೌಂದರ್ಯದ ಅತಿಶಯದಿಂದ ನೀವು ಆಕರ್ಷಕವಾಗಿ ಕಾಣುವಿರಿ‌. ಒತ್ತಡದಿಂದ ಹೊರ ಬರಲು ವೃತ್ತಿಯಲ್ಲಿ ವಿರಾಮ ಸಮಯವನ್ನು ನಿರೀಕ್ಷಿಸುವಿರಿ. ಉಪಕಾರದ ವಿಸ್ಮತಣೆಯಾಗಿ ಪಶ್ಚಾತ್ತಾಪ ಪಡುವಿರಿ. ದಶರಥನಿಂದ ವಿರಚಿತವಾದ ಶನಿಯ ಸ್ತೋತ್ರವನ್ನು ಪಠಿಸಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ