ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 15) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಹಸ್ತಾ, ಯೋಗ: ಐಂದ್ರ, ಕರಣ: ಕಿಂಸ್ತುಘ್ನ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 33 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:57 ರಿಂದ ಮಧ್ಯಾಹ್ನ 12:28 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:31 ರಿಂದ 05:02ರ ವರೆಗೆ, ಗುಳಿಕ ಕಾಲ ಸಂಜೆ 07:54 ರಿಂದ 09:25ರ ವರೆಗೆ.
ಧನು ರಾಶಿ : ಧಾರ್ಮಿಕ ವಿಚಾರವಾಗಿ ನೀವು ದೂರ ಪ್ರಯಾಣವನ್ನು ಮಾಡುವಿರಿ. ಏಕಾಗ್ರತೆಯಿಂದ ನಿಮ್ಮ ಮತ್ತೆಲ್ಲ ಕಾರ್ಯಗಳೂ ನಿಧಾನವಾಗಬಹುದು. ಪರಿಶ್ರಮದಿಂದ ಧನಾರ್ಜನೆ ಮಾಡಿದ್ದು ನಿಮಗೆ ಅಧಿಕ ಸಂತೋಷವಾಗುವುದು. ಉದ್ಯೋಗವಿಲ್ಲದೇ ಬೇಸರಗೊಂಡ ನಿಮಗೆ ಬೇರೆಕಡೆಯಲ್ಲಿ ಕೆಲಸವು ಸಿಗುವುದು. ಇಂದಿನ ಸಂದರ್ಭವನ್ನು ನೋಡಿಕೊಂಡು ಮಾತನಾಡಿ. ನಿಮ್ಮ ಕೆಲಸದ ಸಮಯವು ಬದಲಾಗಲಿದ್ದು ಹೊಂದಿಕೊಳ್ಳುವುದು ಕಷ್ಟವಾದೀತು. ನಿಮ್ಮ ನಿಯಮಗಳನ್ನು ನೀವೇ ದಾಟುವಿರಿ. ರಾಜಕೀಯ ಜೀವನವು ನಿಮಗೆ ಅತಂತ್ರ ಸ್ಥಿತಿಯನ್ನು ತರಬಹುದು. ಹಣಕಾಸಿನ ಕೊರತೆಯನ್ನು ನೀವು ಕುಟುಂಬಕ್ಕೆ ಗೊತ್ತಾಗದಂತೆ ನಿರ್ವಹಿಸುವಿರಿ.
ಮಕರ ರಾಶಿ : ನಮ್ರತೆಯು ನಿಮ್ಮನ್ನು ಎತ್ತರಕ್ಕೆ ಏರಿಸುವುದು. ಹೇಳಿಕೊಳ್ಳಲಾಗದ ಸಂಕಟವನ್ನು ಮನಸ್ಸಿನಲ್ಲಿಯೇ ನುಂಗುವಿರಿ. ಪ್ರಭಾವಿ ಗಣ್ಯರ ಜೊತೆ ಕೆಲವು ಸಮಯವನ್ನು ಕಳೆಯುವಿರಿ. ವ್ಯವಹಾರದಲ್ಲಿ ಚುರುಕು ಸಾಲದು. ಉದ್ಯೋಗದಲ್ಲಿ ದಿನದಿಂದ ದಿನಕ್ಕೆ ಉಂಟಾದ ಒತ್ತಡದಿಂದ ಉದ್ಯೋಗವನ್ನು ಬದಲಿಸಲು ಯೋವಿಸುವಿರಿ. ಯಂತ್ರೋಪಕರಣದ ಮಾರಾಟಗಾರರಿಗೆ ಅಧಿಕ ಲಾಭವಾಗುವುದು. ಮನೆತನದ ಕಾರಣದಿಂದ ನಿಮಗೆ ಗೌರವವು ಪ್ರಾಪ್ತವಾಗಲಿದೆ. ಮೇಲಧಿಕಾರಿಗಳನ್ನು ಮೆಚ್ಚಿಸುವಿರಿ. ನೀವು ಇಂದು ನೋಡಲು ಪ್ರಶಾಂತವಾಗಿ ಕಂಡರೂ ನಿಮ್ಮಳಗೆ ಅಶಾಂತಿಯ ತರಂಗಗಳು ಒಂದೊಂದೊಗಿಯೇ ಮೇಲೆ ಬರುವುದು. ಹಣವನ್ನು ವ್ಯಯಿಸಿ ಉನ್ನತ ಅಧಿಕಾರವನ್ನು ಪಡೆಯುವಿರಿ.
ಕುಂಭ ರಾಶಿ : ಬರುವ ಹಣವು ಕೈಸೇರಿದರೂ ಖರ್ಚಿನ ದಾರಿ ನಿಮಗೆ ತೆರೆದಿರುವುದು. ಮಕ್ಕಳಿಗೆ ಸಿಗುವ ಪುರಸ್ಕಾರದಿಂದ ನಿಮಗೆ ಸಂತೋಷವಾಗುವುದು. ಅಪರೂಪದ ಮಿತ್ರರು ನಿಮ್ಮನ್ನು ಭೇಟಿ ಮಾಡುವರು. ಮನೆಗೆ ಅತಿಥಿಗಳ ಆಗಮನವಾಗಬಹುದು. ನಿಮ್ಮ ಮಕ್ಕಳನ್ನು ಓದಿಸಲು ಹೊರಗೆ ಕಳುಹಿಸುವ ನಿರ್ಧಾರವಿರಲಿದೆ. ಸ್ವಂತ ನಿರ್ಧಾರವನ್ನು ತೆಗೆದುಕೊಳ್ಳಲು ನೀವು ಸಫಲರಾಗುವುದಿಲ್ಲ. ಏಕಪಕ್ಷೀಯವಾದ ನಿರ್ಧಾರದಿಂದ ನಿಮ್ಮವರಿಗೆ ಬೇಸರವಾದೀತು. ಅಹಂಕಾರದಿಂದ ಸಾಧಿಸಲು ಶಕ್ಯವಾಗದ್ದನ್ನು ಪ್ರೀತಿಯಿಂದ ಸಾಧಿಸುವಿರಿ. ಸಂಗಾತಿಯಿಂದ ಪ್ರೀತಿಯು ಸಿಗಲಿದೆ. ವಿದೇಶಪ್ರಯಾಣದ ನಿರೀಕ್ಷೆಯಲ್ಲಿಯೇ ಇರುವಿರಿ.
ಮೀನ ರಾಶಿ : ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕೊರತೆಯು ಹೆಚ್ಚು ಕಂಡುಬರುವುದು. ಇಂದಿನ ವ್ಯವಹಾರದಲ್ಲಿ ನಿಮಗೆ ತೊಡಕಿರುವುದು. ಮನೆಯ ಎಷ್ಟೋ ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು. ಆಂತರಿಕ ಕಲಹವನ್ನು ಜಗಜ್ಜಾಹಿರ ಮಾಡಿಕೊಳ್ಳುವಿರಿ. ಇಂದು ಬಂಧುಗಳ ಕಾರಣಕ್ಕಾಹಿ ಧನವ್ಯಯವಾಗುವುದು. ನಿಮ್ಮ ಆಸ್ತಿಯ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಿ. ಹಳೆಯ ನೋವುಗಳು ಕಾಣಿಸಿಕೊಳ್ಳಬಹುದು. ಉದ್ಯೋಗದಲ್ಲಿ ಆಯ್ಕೆ ಸಮಸ್ಯೆಯು ಬರಬಹುದು. ಶತ್ರುಗಳ ಸಂಚಿಗೆ ಬಲಿಯಾಗುವಿರಿ. ಕಾರ್ಯವನ್ನು ಸಂಕೀರ್ಣ ಮಾಡಿಕೊಳ್ಳುವಿರಿ. ಜವಾಬ್ದಾರಿಯುತ ಸ್ಥಾನವು ನಿಮಗೆ ಬೇಸರ ತರಿಸುವುದು.
-ಲೋಹಿತಶರ್ಮಾ – 8762924271 (what’s app only)