AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಹಿತಶತ್ರುಗಳ ಬಾಧೆಯಿಂದ ತಪ್ಪಿಸಿಕೊಳ್ಳುವ ತನಕ ಈ ರಾಶಿಯವರ ಯಾವ ಉದ್ಯೋಗವೂ ಊರ್ಜಿತವಾಗದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 16) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today: ಹಿತಶತ್ರುಗಳ ಬಾಧೆಯಿಂದ ತಪ್ಪಿಸಿಕೊಳ್ಳುವ ತನಕ ಈ ರಾಶಿಯವರ ಯಾವ ಉದ್ಯೋಗವೂ ಊರ್ಜಿತವಾಗದು
ರಾಶಿಭವಿಷ್ಯImage Credit source: iStock Photo
TV9 Web
| Updated By: Rakesh Nayak Manchi|

Updated on: Aug 16, 2023 | 12:45 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಆಗಸ್ಟ್ 16 ಬುಧವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ವರೀಯಾನ್, ಕರಣ: ನಾಗವಾನ್, ಸೂರ್ಯೋದಯ ಬೆಳಗ್ಗೆ 06 ರಿಂದ 19 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 53 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:37 ರಿಂದ 02:11ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:54 ರಿಂದ 09:28ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:02 ರಿಂದ ಮಧ್ಯಾಹ್ನ 12:37ರ ವರೆಗೆ.

ಧನು ರಾಶಿ: ನೀವು ಅಂದುಕೊಂಡ ಕೆಲಸವು ಆಗದೇಹೋದೀತು. ಸರ್ಕಾರಿ ದಾಖಲೆಗಳನ್ನು ಭದ್ರವಾಗಿ ಇರಿಕೊಳ್ಳಿ. ಹಣಕಾಸಿನ ವಿಚಾರಕ್ಕೆ ಸಹೋದರರ ನಡುವೆ ಚರ್ಚೆಯು ನಡೆಯಬಹುದು. ವಾಹನ ಚಲಾಯಿಸಲು ನಿಮಗೆ ಕಷ್ಟವಾದೀತು. ನಿಮ್ಮವರು ನಿಮ್ಮ ದೋಷವನ್ನೇ ಎತ್ತಿಹೇಳಬಹುದು. ಸಾಹಿತ್ಯದ ಆಸಕ್ತರು ತಮ್ಮ ಕ್ಷೇತ್ರದಲ್ಲಿ ಹೆಚ್ಚು ತೊಡಗಿಕೊಳ್ಳುವರು. ಎಲ್ಲವನ್ನೂ ಬಾಹುಬಲದಿಂದ ಸಾಧಿಸುತ್ತೇನೆ ಎಂಬ ಹುಂಬುತನ ವ್ಯರ್ಥ. ಬುದ್ಧಿಯನ್ನು ಬಳಸಿ ನಿಮ್ಮ ಕಾರ್ಯವನ್ನು ಮಾಡಿಕೊಳ್ಳಿ. ಇನ್ನೊಬ್ಬರ ಮೇಲಿನ ಅಸಮಾಧಾನವನ್ನು ನೀವು ಯಾವುದೋ ಸಂದರ್ಭದಲ್ಲಿ ಹೊರಹಾಕುವಿರಿ.

ಮಕರ ರಾಶಿ: ಹಣಕಾಸಿನ ವ್ಯವಹಾರದಿಂದ ನಿಮಗೆ ಅಪವಾದವು ಬರಬಹುದು. ದಾಂಪತ್ಯದಲ್ಲಿ ಅನಗತ್ಯ ವಾಗ್ವಾದಗಳು ನಡೆಯಬಹುದು. ಕುಟುಂಬದಲ್ಲಿ ಕೆಲವು ವಿಷಯಗಳನ್ನು ನಿಮಗೆ ಹೇಳದೇ ರಹಸ್ಯವಾಗಿ ಇಡುವರು. ಯಾರದೋ ಸಿಟ್ಟನ್ನು ಇನ್ನಾರದೋ ಮೇಲೆ ತೀರಿಸಿಕೊಳ್ಳುವಿರಿ. ಹಿತಶತ್ರುಗಳ ಬಾಧೆಯಿಂದ ತಪ್ಪಿಸಿಕೊಳ್ಳುವ ತನಕ ನಿಮ್ಮ ಯಾವ ಉದ್ಯೋಗವೂ ಊರ್ಜಿತವಾಗದು. ಪಾಲುದಾರಿಕೆಯ ವ್ಯವಹಾರವು ನಿಮಗೆ ಸಾಕು ಎನಿಸಬಹುದು. ಹಳೆಯ ವಾಹನವನ್ನು ನೀವು ಮಾರಾಟ‌ಮಾಡುವಿರಿ. ನೀವು ಇಂದು ಹೆಚ್ಚು ಒಂದೇ ಚಿಂತೆಯಲ್ಲಿ ಮಗ್ನರಾಗಿ ಇರುವಿರಿ. ಮನಸ್ಸು ನಿರ್ಲಿಪ್ತವಾಗಿ ಇರುವುದು.

ಕುಂಭ ರಾಶಿ: ನಿಮ್ಮ ಸ್ಥಾನದ ರಕ್ಷಣೆಗಾಗಿ ಇನ್ನೊಬ್ಬರ ಮೇಲೆ ಆರೋಪವನ್ನು ಮಾಡುವಿರಿ. ಕೆಲವು ಕೆಲಸಗಳಿಗೆ ನೀವು ಆಲಸ್ಯವನ್ನು ತೋರುವಿರಿ. ನಿಮ್ಮ ಸಂಕಟಕ್ಕೆ ಸ್ಪಂದಿಸಿದವರನ್ನು ನೀವು ಗೌರವಿಸಿ. ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಏಕಾಗ್ರತೆಯ ಕೊರತೆ ಕಾಣಿಸುವುದು. ನಕಾರಾತ್ಮಕ ಆಲೋಚನೆಯನ್ನು ನೀವು ಕಡಿಮೆ ಮಾಡಿಕೊಳ್ಳುವುದು ಉತ್ತಮ. ನಿಮ್ಮ ಆಸಕ್ತಿಯ‌ ಕ್ಷೇತ್ರವೂ ನಿಮಗೆ ಇಷ್ಟವಾಗದೇ ಹೋಗುವುದು. ನಿಮ್ಮ ನಿರ್ಧಾರಗಳು ಬಲವಾದಂತೆ ಕಾರ್ಯಗಳಲ್ಲಿಯೂ ದೃಢತೆ ಇರಲಿ. ಸಿಕ್ಕ ಅಧಿಕಾರವನ್ನು ಸದುಪಯೋಗವಾಗುವಂತೆ ಮಾಡಿಕೊಳ್ಳಿ. ದೂರಾಲೋಚನೆಯನ್ನು ಅತಿಯಾಗಿ ಇಟ್ಟುಕೊಳ್ಳುವುದು ಬೇಡ.

ಮೀನ ರಾಶಿ: ಸಾಮಾಜಿಕ ಕಾರ್ಯಗಳಲ್ಲಿ ನಿಮಗೆ ಹೆಚ್ಚು ಆಸಕ್ತಿಯು ಇರುವುದು. ಪತ್ನಿಯ ಅನಗತ್ಯ ಖರ್ಚಿಗೆ ಕಡಿವಾಣ ಹಾಕುವಿರಿ. ಇದಕ್ಕಾಗಿ ವಾಗ್ವಾದವು ನಡೆಯಬಹುದು. ಮಕ್ಕಳನ್ನು ನಿರ್ಲಕ್ಷಿಸಿದರೆ ಕಷ್ಟವಾದೀತು. ನಿಮ್ಮ ಇಂದಿನ ಕೆಲಸಗಳನ್ನು ಬಾಕಿ ಉಳಿಸಿಕೊಳ್ಳಬೇಕಾದೀತು. ಉದ್ಯಮಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಒಬ್ಬರೇ ತೆಗೆದುಕೊಳ್ಳದೇ ಪರಿಚಿತರನ್ನು ಕೇಳಿ. ಎಂದೋ ಆದ ದೈಹಿಕ ಪೀಡೆಯು ಪುನಃ ಕಾಣಿಸಿಕೊಳ್ಳಬಹುದು. ವಿವಾಹ ಸಂಭ್ರಮದ ವಾತಾವರಣ ಮನೆಯಲ್ಲಿ ಇರಲಿದೆ. ಉದ್ಯೋಗಸ್ಥ ಸ್ತ್ರೀಯರು ಮಾನಸಿಕ ಕಿರಿಕಿರಿಯನ್ನು ಅನುಭವಿಸುವರು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!