AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಈ ರಾಶಿಯವರು ಆಕಸ್ಮಿಕವಾಗಿ ಪ್ರೇಮದಲ್ಲಿ ಬೀಳುವಿರಿ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 16) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ, ಈ ರಾಶಿಯವರು ಆಕಸ್ಮಿಕವಾಗಿ ಪ್ರೇಮದಲ್ಲಿ ಬೀಳುವಿರಿ
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Oct 16, 2023 | 12:45 AM

Share

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 16) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಅನುರಾಧಾ, ಯೋಗ: ವಿಷ್ಕಂಭ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 11 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:53 ರಿಂದ 09:22ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:50 ರಿಂದ 12:18ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:46 ರಿಂದ 03:15ರ ವರೆಗೆ.

ಧನು ರಾಶಿ : ಅವಿವಾಹಿತರು ನಿಮ್ಮ ಸಮಸ್ಯೆಯನ್ನು ಪರಿಹರಿಸಿಕೊಳ್ಳುವಿರಿ. ಆಕಸ್ಮಿಕವಾಗಿ ಪ್ರೇಮದಲ್ಲಿ ಬೀಳುವಿರಿ. ನೂತನ ವಸ್ತುಗಳನ್ನು ಪಡೆದು ಸಂತೋಷಪಡುವಿರಿ. ಗೌರವಾದಿಗಳು ಸಿಕ್ಕಿ ಸಂತೋಪಡುವಿರಿ. ನೀವು ಅಂದುಕೊಂಡ ಹಾಗೆಯೇ ನಡೆಯದು. ನಿಮ್ಮ ಚರ ಹಾಗೂ ಸ್ಥಿರಾಸ್ತಿಗಳ ದಾಖಲೆಗಳನ್ನು ಜೋಪಾನವಾಗಿ ಇರಿಕೊಳ್ಳಿ. ಧಾರ್ಮಿಕ ಆಚರಣೆಗಳನ್ನು ಹೆಚ್ಚು ಮಾಡಲು ಮನಸ್ಸಾಗುವುದು. ನಿಮ್ಮ ವಾಹನವನ್ನು ಚಲಾಯಿಸಲು ಕಷ್ಟವಾದೀತು. ನಿಮ್ಮವರು ನಿಮ್ಮ ದೋಷವನ್ನೇ ಹೆಚ್ಚು ಹೇಳುವರು. ಸಾಹಿತ್ಯಸಲ್ಲಿ ಆಸಕ್ತಿ ಇರುವವರು ತಮ್ಮ ಕ್ಷೇತ್ರದಲ್ಲಿ ಹೆಚ್ಚು ತೊಡಗಿಕೊಳ್ಳುವರು. ಎಲ್ಲವನ್ನೂ ಬಾಹುಬಲದಿಂದ ಸಾಧಿಸುತ್ತೇನೆ ಎಂಬ ಹುಂಬುತನ ಬೇಡ. ಬುದ್ಧಿಯನ್ನು ಬಳಸಿ ಕೆಲಸವನ್ನು ಸರಳ ಮಾಡಿಕೊಳ್ಳಿ. ಇನ್ನೊಬ್ಬರ ಮೇಲಿನ ಅಸಮಾಧಾನವನ್ನು ನೀವು ಇಂದು ಅವರೆದುರು ಹೇಳುವಿರಿ.

ಮಕರ ರಾಶಿ : ಸ್ತ್ರೀಯರು ತಮ್ಮ ಕಾರ್ಯದಲ್ಲಿ ಮುಳುಗುವರು. ತಮ್ಮ ಉದ್ಯಮವನ್ನು ಪ್ರಭಾವೀ ವ್ಯಕ್ತಿಗಳ ಸಹಾಯದಿಂದ ಜನಪ್ರಿಯ ಗೊಳಿಸಿಕೊಳ್ಳುವರು. ಎಲ್ಲವನ್ನೂ ನೀವೇ ಮಾಡಬೇಕು ಎನ್ನುವ ಮಾನಸಿಕತೆ ಬೇಡ. ಒಂಟಿತನವು ಇಷ್ಟವಾಗುವುದು. ಆರ್ಥಿಕ ವ್ಯವಹಾರದಲ್ಲಿ ನಿಮಗೆ ಕೆಲವು ಮಾತುಗಳು ಬರಬಹುದು. ದಂಪತಿಗಳ ನಡುವೆ ಅನವಶ್ಯಕ ವಿಚಾರಕ್ಕೆ ವಾಗ್ವಾದವು ಅಗಬಹುದು. ಕುಟುಂಬದ ಕೆಲವು ವಿಚಾರಗಳು ನಿಮಗೆ ಗೊತ್ತಾಗದೇ ಗೌಪ್ಯವಾಗಿ ಇರುವುದು. ಸಿಟ್ಟನ್ನು ಯಾರದೋ ಮೇಲೆ ತೀರಿಸಿಕೊಂಡು ಸಮಾಧಾನಪಡುವಿರಿ. ಹಿತಶತ್ರುಗಳನ್ನು ಅವರಿಗೆ ಗೊತ್ತಾಗದಂತೆ ದೂರವಿರಿಸಿ. ಪಾಲುದಾರಿಕೆಯ ವ್ಯವಹಾರವು ನಿಮಗೆ ಸಾಕೆನಿಸುವುದು. ಬಿಟ್ಟು ಹೋದ ಪ್ರೇಮದ ಬಗ್ಗೆಯೇ ಹೆಚ್ಚು ಆಲೋಚನೆ ಮಾಡುತ್ತ ಇರುವಿರಿ.

ಕುಂಭ ರಾಶಿ : ಮನೆಯಲ್ಲಿ ಧಾರ್ಮಿಕ ಕಾರ್ಯಗಳನ್ನು ಮಾಡುವಿರಿ. ಭೂಮಿಯ ಉತ್ಪನ್ನದಿಂದ ಕೆಲವು ಅದಾಯವು ಸಿಗಬಹುದು. ಬಂಧುಗಳ ಅನಾರೋಗ್ಯದ ಕಾರಣ ನೀವು ಧನಸಹಾಯವನ್ನು ಮಾಡಬೇಕಾದೀತು. ನಿಮ್ಮ ಸ್ಥಾನವನ್ನು ಕಾಪಾಡಿಕೊಳ್ಳಲು ಬೇರೆಯವರ ಮೇಲೆ ಗೂಬೆ ಕೂರಿಸುವಿರಿ. ಸಣ್ಣ ಕೆಲಸಗಳನ್ನು ಮಾಡಲು ನೀವು ಇಷ್ಟಪಡುವುದಿಲ್ಲ. ನಿಮ್ಮ ಸಂಕಟಕ್ಕೆ ಸ್ಪಂದಿಸಿದವರನ್ನು ಇಷ್ಟಪಡುವಿರಿ. ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಏಕಾಗ್ರತೆಯು ಇಲ್ಲವಾಗಬಹುದು. ನಕಾರಾತ್ಮಕ ಚಿಂತನೆಯನ್ನು ಕಡಿಮೆ ಮಾಡಿಕೊಳ್ಳಿ. ನೀವೇ ಆಯ್ಕೆ ಮಾಡಿಕೊಂಡ ಕೆಲಸದಲ್ಲಿ ಆಸಕ್ತಿಯು ಕಡಿಮೆ ಇರುವುದು. ನಿಮ್ಮ ನಿರ್ಧಾರಗಳು ಬಲವಾದಂತೆ ಕಾರ್ಯಗಳಲ್ಲಿಯೂ ದೃಢತೆ ಇರಲಿ. ಸಿಕ್ಕ ಅಧಿಕಾರವನ್ನು ಸದುಪಯೋಗಪಡಿಸಿಕೊಳ್ಳಿ. ಮುಂದಾಲೋಚನೆಗೂ ಸ್ವಲ್ಪ ಮಿತಿ ಇರಲಿ.

ಮೀನ ರಾಶಿ : ಉನ್ನತ ವಿದ್ಯಾಭ್ಯಾಸದ ಕಾರಣ ದೂರ ಪ್ರಯಾಣವನ್ನು ಮಾಡಬೇಕಾಗಬಹುದು. ತಾಯಿಯ ಕಡೆಯಿಂದ ನಿಮಗೆ ಆಸ್ತಿಯು ಲಭಿಸುವುದು. ಆಹಾರ ಪದಾರ್ಥಗಳ ಉದ್ಯಮವನ್ನು ಇಟ್ಟುಕೊಂಡಿದ್ದರೆ ಶುಭವಿರಲಿದೆ. ಹಣಕಾಸಿನ ವಿಚಾರದಲ್ಲಿ ಯಾರನ್ನು ನಂಬಬೇಕು ಎಂಬುದು ಗೊತ್ತಾಗದು. ಸಾರ್ವಜನಿಕ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವ ಆಸೆ ಇರುವುದು. ಪತ್ನಿಯ ಅನವಶ್ಯಕ ಖರ್ಚಿಗೆ ಕಡಿವಾಣವನ್ನು ಹಾಕಬೇಕಾದೀತು. ಇದಕ್ಕಾಗಿ ಕೂಗಾಡಿಕೊಳ್ಳಬಹುದು. ಮಕ್ಕಳ ಬಗ್ಗೆ ನಿಮ್ಮ ಲಕ್ಷ್ಯವು ಇರಲಿ. ನಿಮ್ಮ ಇಂದಿನ ಕೆಲಸಗಳನ್ನು ಬಾಕಿ ಉಳಿಸಿಕೊಳ್ಳಬೇಡಿ. ಒತ್ತಡವು ಹೆಚ್ಚಾದೀತು. ಉದ್ಯಮಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಒಬ್ಬರೇ ತೆಗೆದುಕೊಳ್ಳುವಿರಿ. ಹಳೆಯ ದೈಹಿಕ ಸಮಸ್ಯೆಯು ಪುನಃ ಕಾಣಿಸಿಕೊಳ್ಳುವುದು. ಉದ್ಯೋಗಸ್ಥ ಸ್ತ್ರೀಯರಿಗೆ ಸಮಾಧಾನವಿರದು.

-ಲೋಹಿತಶರ್ಮಾ – 8762924271 (what’s app only)

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು