Horoscope: ರಾಶಿಭವಿಷ್ಯ, ಈ ರಾಶಿಯವರಿಗೆ ಪ್ರೀತಿಪಾತ್ರರ ವರ್ತನೆಯಿಂದ ಕಿರಿಕಿರಿ ಆಗಬಹುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 18) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ, ಈ ರಾಶಿಯವರಿಗೆ ಪ್ರೀತಿಪಾತ್ರರ ವರ್ತನೆಯಿಂದ ಕಿರಿಕಿರಿ ಆಗಬಹುದು
ರಾಶಿ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 18, 2023 | 12:33 AM

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ತೃತೀಯಾ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಪ್ರೀತಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 32 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:54 ರಿಂದ 09:25 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:56 ರಿಂದ 12:27ರವರೆಗೆ, ಗುಳಿಕ ಕಾಲ ಸಂಜೆ 01:58 ರಿಂದ 03:29ರ ವರೆಗೆ.

ಧನು ರಾಶಿ : ನೀವು ಮಾಡಿಕೊಂಡ ಎಡವಟ್ಟಿನಿಂದ ಅವಕಾಶದಿಂದ ವಂಚಿತರಾಗಿ ಬೇಸರಿಸಿಕೊಳ್ಳುವಿರಿ. ಪರಾಧೀನ ಸ್ಥಿತಿಯಿಂದ ಮಾನಸಿಕ ಹಿಂಸೆಯನ್ನು ಅನುಭವಿಸುವಿರಿ. ಅಧಿಕಾರದಿಂದ ಕೆಲವು ತೊಂದರೆಯನ್ನು ಎದುರಿಸಬೇಕಾದೀತು. ಇಂದಿನ ಕಾರ್ಯವು ಯಾವುದೇ ತೊಂದರೆಗಳಿಲ್ಲದೇ ಮುಗಿಯುವುದು. ಸ್ತ್ರೀಯರು ಅನಾರೋಗ್ಯದಿಂದ ಪೀಡಿತರಾಗುವಿರಿ. ಮನೆಯಿಂದ ದೂರವಿರಲಿದ್ದು ಆಹಾರದ ತೊಂದರೆಯನ್ನು ಅನುಭವಿಸುವಿರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅವಶ್ಯಕತೆ ಅಧಿಕವಾಗಿ ಇರಲಿದೆ. ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತನ್ನು ಕಳೆದುಕೊಳ್ಳುವಿರಿ. ನಿಮಗೆ ಇಂದು ಪ್ರೀತಿ ಪಾತ್ರರಿಂದ ಉಡುಗೊರೆ ಬರಲಿದೆ. ವಿದ್ಯಾಭ್ಯಾಸವನ್ನು ಯೋಗ್ಯರೀತಿಯಲ್ಲಿ ನಡೆಸಲು ಕಷ್ಟವಾದೀತು. ವರ್ಗಾವಣೆಯು ನಿಮಗೆ ಇಷ್ಟವಾಗದೇ ಪ್ರಭಾವೀ ವ್ಯಕ್ತಿಗಳ ಸಹಕಾರದಿಂದ ರದ್ದು ಮಾಡಿಸಿಕೊಳ್ಳುವಿರಿ.

ಮಕರ ರಾಶಿ : ಆಮದು ವ್ಯವಹಾರವು ಯಾವುದೇ ಅಡೆತಡೆಗಳಿಲ್ಲದೇ ಆಗುವುದು. ಸ್ನೇಹಿತರಿಂದ ಆಪತ್ತಿಗೆ ಸಹಾಯವು ಸಿಗುವುದು. ಚಿಕಿತ್ಸೆಯ ಕಾರಣದಿಂದ ಆರೋಗ್ಯದಲ್ಲಿ ಚೇತರಿಕೆ ಇರಲಿದೆ. ಹಿತಶತ್ರುಗಳು ಸಕಾಲಕ್ಕೆ ಕಾರ್ಯದಲ್ಲಿ ತೊಂದರೆಯನ್ನು ಕೊಡುವರು. ಹೊಸತರ ಕಲಿಕೆಯಲ್ಲಿ ಆಸಕ್ತಿಯು ಅಧಿಕವಾಗುವುದು. ಸಮಾರಂಭಗಳಿಗೆ ತೆರಳುವಿರಿ. ಕೃಷಿಕರಿಗೆ ಲಾಭದಲ್ಲಿ ಸ್ವಲ್ಪ ಇಳಿಮುಖ ಇರಲಿದೆ‌. ಸಾಮಾಜಿಕ ಕಾರ್ಯಗಳಿಂದ ಮೆಚ್ಚುಗೆ ಪಡೆಯುವಿರಿ. ಅತಿಯಾದ ಕೋಪದಿಂದ ಎಲ್ಲ ಕೆಲಸವನ್ನು ವ್ಯತ್ಯಾಸ ಮಾಡಿಕೊಳ್ಳುವಿರಿ. ಆಲಂಕಾರಿಕ ವಸ್ತುಗಳನ್ನು ಖರೀದಿಸುವಿರಿ. ಅಧಿಕಾರಿಯ ವಿಶ್ವಾಸವನ್ನು ಪಡೆದು ಹೆಚ್ಚಿನ ಸ್ಥಾನ ಪಡೆಯುವಿರಿ. ಅನಿರೀಕ್ಷಿತ ರಾಜಕಾರಿಣಿಗಳ ಭೇಟಿಯಿಂದ ಕೆಲವು ಬದಲಾವಣೆಯನ್ನು ಕಾಣುವಿರಿ. ಇಂದು ದೂರ ಪ್ರವಾಸದಿಂದ ನಿಮಗೆ ತೊಂದರೆಯಾಗಲಿದೆ.

ಕುಂಭ ರಾಶಿ : ಸಂಗಾತಿಯ ಮಾತಿನಂತೆ ನಡೆದುಕೊಳ್ಳುವಿರಿ. ಮನೆಯಲ್ಲಿ ಹಿಂದಿನ ಘಟನೆಯೇ ಮರುಕಳಿಸಲಿದ್ದು ಸಣ್ಣ ವಾಗ್ವಾದವೂ ನಡೆಯಬಹುದು. ವ್ಯಾಪಾರವು ಸಾಧಾರಣವಾಗಿ ಇರಲಿದೆ. ಉದ್ಯೋಗವನ್ನು ಬದಲಿಸಲು ಮನಸ್ಸು ಇಲ್ಲದಿದ್ದರೂ ನಿಮಗೆ ಅನಿವಾರ್ಯ ಆಗಬಹುದು. ವಾಹನದಿಂದ ಬಿದ್ದು ಪೆಟ್ಟಾಗಬಹುದು. ಆತುರದ ಚಾಲನೆ ಬೇಡ. ಇಂದು ಬಂಧುಗಳನ್ನು ಮನೆಗೆ ಆಹ್ವಾನಿಸುವಿರಿ. ಮನಸ್ಸಿನ ನೋವನ್ನು ಮರೆಯಲು ಒಂಟಿಯಾಗಿ ದೂರ ಹೋಗುವಿರಿ. ಪುಣ್ಯಕ್ಷೇತ್ರಗಳ ದರ್ಶನವನ್ನು ಮಾಡುವಿರಿ. ಅನಾರೋಗ್ಯದಿಂದ ಕೆಲಸಗಳಿಗೆ ವಿಘ್ನವು ಬರುವುದು. ಯಾರದೋ ಮಾತನ್ನು ಕೇಳಿ ನಿಮ್ಮವರ ಬಗ್ಗೆ ತೀರ್ಮಾನ ಮಾಡಬೇಡಿ. ಸ್ವಂತಿಕೆಯೂ ಇರಲಿ.

ಮೀನ ರಾಶಿ : ಇಂದು ನಿಮಗೆ ದೇವತಾಕಾರ್ಯವನ್ನು ಮಾಡುವ ಉತ್ಸಾಹವಿದ್ದರೂ ತೊಂದರೆಯಿಂದಾಗಿ ಮಾಡಲಾಗದ ಸ್ಥಿತಿ ಬರಬಹುದು. ಮಕ್ಕಳ ಆಗಮನದಿಂದ ಮನೆಯಲ್ಲಿ ಸಂತೋಷವು ನೆಲೆಸುವುದು. ಆಸ್ತಿಯನ್ನು ಖರೀದಿಸುವ ಕುರಿತು ಚರ್ಚೋಪಚರ್ಚೆಗಳನ್ನು ಮಾಡುವಿರಿ. ಆರ್ಥಿಕ ಒತ್ತಡದಿಂದ ನೀವು ಹೊರಬರಲು ದಾರಿಯನ್ನು ಹುಡುಕುವಿರಿ. ಇಂದಿನ ಉತ್ಸಾಹವು ಕೆಲಸಕ್ಕೆ ಪೂರಕವಾಗವುವುದು. ಹಣದ ಹರಿವು ಸಾಧಾರಣವಾಗಿ ಇರಲಿದೆ. ಪ್ರೀತಿಪಾತ್ರರ ವರ್ತನೆಯಿಂದ ಕಿರಿಕಿರಿ ಆಗಬಹುದು. ಹೇಳಲಾಗದ ಮರೆಯಲಾಗದ ಸ್ಥಿತಿ ಇರಲಿದೆ. ನೀವೇ ನಿಮ್ಮ ಬಗ್ಗೆ ಹೇಳಿಕೊಳ್ಳುವುದು ಉಚಿತವಲ್ಲ.‌ ಇದು ನಿಮ್ಮವರಿಗೆ ಮುಜುಗರದ ಸಂದರ್ಭವಾಗುವುದು. ಉದ್ಯೋಗದಲ್ಲಿ ಆಲಸ್ಯದಿಂದ ಇರುವ ಕಾರಣ ಅಧಿಕಾರಿಗಳಿಂದ ಸೂಚನೆ ಬರಬಹುದು.

-ಲೋಹಿತಶರ್ಮಾ – 8762924271 (what’s app only)

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ