Horoscope: ಈ ರಾಶಿಯವರ ದುಂದು ವೆಚ್ಚಕ್ಕೆ ಸಂಗಾತಿಯೇ ಬ್ರೇಕ್ ಹಾಕಬೇಕಾಗಿಬರಬಹುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 19) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರ ದುಂದು ವೆಚ್ಚಕ್ಕೆ ಸಂಗಾತಿಯೇ ಬ್ರೇಕ್ ಹಾಕಬೇಕಾಗಿಬರಬಹುದು
ದಿನಭವಿಷ್ಯImage Credit source: iStock Photo
Follow us
| Updated By: Rakesh Nayak Manchi

Updated on: Sep 19, 2023 | 12:45 AM

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 19) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ತುಲಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ಆಯುಷ್ಮಾನ್, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 30 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 3:28 ರಿಂದ 04:59 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:25 ರಿಂದ 10:56ರವರೆಗೆ, ಗುಳಿಕ ಕಾಲ ಮಧ್ಯಾಹ್ನ 12:27 ರಿಂದ 1:57ರ ವರೆಗೆ.

ಧನು ರಾಶಿ: ವ್ಯಾಪಾರದಲ್ಲಿ ಲಾಭವನ್ನು ಕಂಡು ಏನಾದರೂ ಯೋಜನೆಯನ್ನು ಮಾಡಿ ಕಷ್ಟಕ್ಕೆ ಸಿಲುಕಿಕೊಳ್ಳುವಿರಿ. ಪ್ರಶಂಸೆಯಿಂದ ಸಣ್ಣ ಅಹಂಕಾರವು ಬರಬಹುದು. ‌ಮಿತ್ರರಿಗೆ ವಂಚಿಸುವ ಆಲೋಚನೆ ಬರಲಿದೆ. ಯಂತ್ರಗಳನ್ನು ಬಳಸಿಕೊಂಡು ಸಣ್ಣ ಉದ್ಯೋಗವನ್ನು ಆರಂಭಿಸುವಿರಿ. ವಿದೇಶದಲ್ಲಿ ಜೀವನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಪ್ರವಚನಕಾರರಿಗೆ ಉತ್ತಮ ಅವಕಾಶಗಳು ಲಭ್ಯವಿರಲಿದೆ. ದೌರ್ಬಲ್ಯವನ್ನು ನೀವು ಸಕಾರಾತ್ಮಕವಾಗಿ ತೆಗೆದುಕೊಂಡವು ಸಾಧಿಸುವಿರಿ. ವಿದೇಶದ ಬಂಧುಗಳು ನಿಮ್ಮ ಉದ್ಯಮಕ್ಕೆ ಸಹಾಯ ಮಾಡುವರು. ಪೂರ್ವಯೋಜಿತ ಕಾರ್ಯಕ್ಕೂ ನೀವು ಸಮಯವನ್ನು ಹೊಂದಿಸಿಕೊಳ್ಳಲಾಗದು. ನಿಮ್ಮ ದುಂದು ವೆಚ್ಚಕ್ಕೆ ಸಂಗಾತಿಯೇ ಬ್ರೇಕ್ ಹಾಕಬೇಕಾಗಿಬರಬಹುದು. ಇಂದು ನಿಮಗೆ ಎಲ್ಲವನ್ನೂ ಪ್ರತಿಭಟಿಸುವ ಮನೋಭಾವ ಬರುವುದು.

ಮಕರ ರಾಶಿ: ಅನಿರೀಕ್ಷಿತವಾಗಿ ಧನವ್ಯಯವಾಗಿದ್ದು ಆತಂಕವು ಆಗಲಿದೆ. ರಾಜಕೀಯದಿಂದ ನೀವು ಪ್ರೇರಣೆ ಪಡೆಯುವಿರಿ. ಅನಾರೋಗ್ಯದ ಲಕ್ಷಣವು ಕಂಡಾಗಲೇ ಸರಿ ಮಾಡಿಕೊಳ್ಳಲು ಪ್ರಯತ್ನಿಸಿ. ಆರ್ಥಿಕ ಲಾಭದಿಂದ ನೀವು ಸಂತೋಷವಾಗಿ ಇರುವುದು ನಿಮ್ಮ ಮುಖದಲ್ಲಿ ಕಾಣಿಸುವುದು. ಹಳೆಯ ವಾಹನವನ್ನು ನೀವು ಖರೀದಿಸುವಿರಿ. ಸಾಲ ಮಾಡುವಾಗ ನಿಮ್ಮ ಆದಾಯವನ್ನು ಗಮನದಲ್ಲಿ ಇಟ್ಟುಕೊಳ್ಳುವುದು ಒಳ್ಳೆಯದು. ತಾಯಿಯ ಆರೋಗ್ಯದಲ್ಲಿ ಆದ ವ್ಯತ್ಯಾಸದಿಂದ ಚಿಂತೆಗೆ ಒಳಗಾಗುವಿರಿ. ಪ್ರಭಾವೀ ಜನರ ಭೇಟಿಯಿಂದ ಅನೇಕ ಲಾಭವನ್ನು ಮಾಡಿಕೊಳ್ಳುವಿರಿ. ಸಾಮಾಜಿಕ ಕಾರ್ಯಕ್ಕೆ ನಿಮ್ಮ ಸಣ್ಣ ಕೊಡುಗೆ ನೀಡುವಿರಿ. ನಿಮಗೆ ಕೊಟ್ಟ ಜವಾಬ್ದಾರಿಯಿಂದ ಒತ್ತಡದ ಕಾರಣಕ್ಕೆ ನೀವು ಹಿಮ್ಮುಖರಾಗುವಿರಿ.

ಕುಂಭ ರಾಶಿ: ಮನೆಯಲ್ಲಿ ಸಣ್ಣ ವಿಚಾರಕ್ಕೆ ನೀವು ವಿವಾದ ಮಾಡಿಕೊಳ್ಳುವಿರಿ. ನಿಮ್ಮ ನೆಮ್ಮದಿಯನ್ನು ಸಂಗಾತಿಯು ಭಂಗ ಮಾಡಬಹುದು. ಧಾರ್ಮಿಕ ವಿಚಾರದಲ್ಲಿ ನಿಮಗೆ ಸ್ಪಷ್ಟತೆ ಇರದು. ವಂಚನೆಯಲ್ಲಿ ಗೊತ್ತಾಗದಂತೆ ಸಿಕ್ಕಿಕೊಳ್ಳುವಿರಿ. ಅರೋಗ್ಯದ ಸುಧಾರಣೆಗೆ ವೈದ್ಯರ ಭೇಟಿ ಅವಶ್ಯಕ. ಎಲ್ಲರ ಮೇಲೂ ಕೋಪವು ಕಾರಣವಿಲ್ಲದೇ ಬರುವುದು. ರಾಜಕೀಯವನ್ನು ಬಂಧುಗಳ ನಡುವೆಯೂ ಮಾಡುವಿರಿ. ಆಸಕ್ತಿ ಇಲ್ಲದೇ ಇದ್ದರೂ ಕರ್ತವ್ಯದಲ್ಲಿ ಲೋಪವಿರಬಾರದು. ಮನಸ್ಸು ಚಂಚಲದಿಂದ ಯಾರ ಮಾತನ್ನೂ ಕೇಳುವ ಮನಃಸ್ಥಿತಿಯಲ್ಲಿ ಇರಲಾರಿರಿ. ದೂರದ ಬಂಧುಗಳು ಪರಿಚಿತರಾಗಿ ಅವರ ಜೊತೆ ಕಾಲ ಕಳೆಯುವಿರಿ. ನಿಮಗೆ ಕೃತಜ್ಞತೆ ಇರಲಿ. ಕುಲದೇವರ ಆರಾಧನೆಯನ್ನು ಮಾಡುವಿರಿ.

ಮೀನ ರಾಶಿ: ದಿನದ ಕಾರ್ಯದಲ್ಲಿ ಅಡೆತಡೆಯಾಗಲಿದೆ. ಆರ್ಥಿಕ ಸಂಕಟವನ್ನು ಸ್ನೇಹಿತರ ಸಹಾಯವನ್ನು ಪಡೆದು ಸರಿಮಾಡಿಕೊಳ್ಳುವಿರಿ. ನಿಮ್ಮ‌ ಮಾತಿನ ಮೇಲೆ‌ ನಿಯಂತ್ರಣವಿರಲಿ. ನಿಮ್ಮ ವಸ್ತುವು ಕಳ್ಳರಿಂದ ಅಪಹರಣ ಆಗುತಗತದೆವೆಂಬ ಭಯವು ಇರುವುದು. ಇನ್ನೊಬ್ಬರ ಬಳಿ‌ ಇರುವ ನಿಮ್ಮ‌ ವಸ್ತುವನ್ನು ಬಹಳ‌ ಪ್ರಯತ್ನದಿಂದ ಪಡೆಯುವಿರಿ. ಬಂಧುಗಳಿಗಾಗಿ ಸಾಲ ಮಾಡುವ ಹಾಗೆ ಅಸದ ಆಗಬಹುದು. ಕೃಷಿಯಲ್ಲಿ ಆದ ಪ್ರಗತಿಯಿಂದ ಸಂತೋಷವಾಗುವುದು. ಅನಾರೋಗ್ಯವನ್ನು ಸರಿ ಮಾಡಿಕೊಳ್ಳುವಲ್ಲಿ ನಿಮ್ಮ ಪ್ರಯತ್ನವೂ ಬೇಕು. ಇಂದು ನಿಮ್ಮ ವಿವಾಹದ ಮಾತುಕತೆಯನ್ನು ಆಡಲು ಹೋಗಲಿದ್ದೀರಿ. ನಿಮ್ಮ ಬಗ್ಗೆ ಕೆಲವು ಊಹಾಪೋಹಗಳು ಹರಡುವುದು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು
ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿ ದರ್ಶನ್​ ಬಗ್ಗೆ ಸುದೀಪ್​ ಮೊದಲ ಮಾತು
ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿ ದರ್ಶನ್​ ಬಗ್ಗೆ ಸುದೀಪ್​ ಮೊದಲ ಮಾತು
ಪವಿತ್ರಾ ಮನೆಯಲ್ಲಿ ಸ್ಥಳ ಮಹಜರು ವೇಳೆ ನಗ್ತಾ ಸಾಗಿದ ಆರೋಪಿ ಪವನ್
ಪವಿತ್ರಾ ಮನೆಯಲ್ಲಿ ಸ್ಥಳ ಮಹಜರು ವೇಳೆ ನಗ್ತಾ ಸಾಗಿದ ಆರೋಪಿ ಪವನ್
ರೇಣುಕಾ ಸ್ವಾಮಿ ಪ್ರಕರಣ: ಕಾರು ಚಾಲಕನ ಕುಟುಂಬದ ಗೋಳು ಕೇಳೋರ್ಯಾರು?
ರೇಣುಕಾ ಸ್ವಾಮಿ ಪ್ರಕರಣ: ಕಾರು ಚಾಲಕನ ಕುಟುಂಬದ ಗೋಳು ಕೇಳೋರ್ಯಾರು?
ಪೆಟ್ರೋಲ್ -ಡೀಸೆಲ್ ದರ ಏರಿಕೆ ವಿರುದ್ಧ ನಾರಿಯರು ಕಿಡಿ
ಪೆಟ್ರೋಲ್ -ಡೀಸೆಲ್ ದರ ಏರಿಕೆ ವಿರುದ್ಧ ನಾರಿಯರು ಕಿಡಿ
ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಇಲ್ಲಿದೆ ವಿಡಿಯೋ..
ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಇಲ್ಲಿದೆ ವಿಡಿಯೋ..
ಬಳ್ಳಾರಿ: ನೋಬಲ್ ಬುಕ್ ಆಫ್ ರೆಕಾರ್ಡ್ಸ್​​​ಗೆ ಸೇರಿದ 4 ತಿಂಗಳ ಮಗು ಸಾಯಿರಾ
ಬಳ್ಳಾರಿ: ನೋಬಲ್ ಬುಕ್ ಆಫ್ ರೆಕಾರ್ಡ್ಸ್​​​ಗೆ ಸೇರಿದ 4 ತಿಂಗಳ ಮಗು ಸಾಯಿರಾ
ಶ್ವಾಸಕೋಶದ ಸಾಮರ್ಥ್ಯ ಹೆಚ್ಚಿಸುವ ಆಸನ ಅರ್ಧ ಚಕ್ರಾಸನ
ಶ್ವಾಸಕೋಶದ ಸಾಮರ್ಥ್ಯ ಹೆಚ್ಚಿಸುವ ಆಸನ ಅರ್ಧ ಚಕ್ರಾಸನ
ಪವಿತ್ರಾ ಗೌಡ ಮನೆಯಲ್ಲಿ ಮಹಜರು; ಹೇಗಿದೆ ಕೊಲೆ ಆರೋಪಿಯ ಬಂಗಲೆ?
ಪವಿತ್ರಾ ಗೌಡ ಮನೆಯಲ್ಲಿ ಮಹಜರು; ಹೇಗಿದೆ ಕೊಲೆ ಆರೋಪಿಯ ಬಂಗಲೆ?
ವಿಡಿಯೋ: ಆದಿಚುಂಚನಗಿರಿಗೆ ಸೆಂಟ್ರಲ್ ಮಿನಿಸ್ಟರ್ ಕುಮಾರಣ್ಣ ಖಡಕ್​ ಎಂಟ್ರಿ
ವಿಡಿಯೋ: ಆದಿಚುಂಚನಗಿರಿಗೆ ಸೆಂಟ್ರಲ್ ಮಿನಿಸ್ಟರ್ ಕುಮಾರಣ್ಣ ಖಡಕ್​ ಎಂಟ್ರಿ