ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಕೆಲವರು ಬೆಳಗ್ಗೆ ಎದ್ದ ಕೂಡಲೇ ರಾಶಿ ಭವಿಷ್ಯ (Daily horoscope) ತಪ್ಪದೇ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯದಿಂದ ತಿಳಿದುಕೊಳ್ಳುತ್ತಾರೆ. ಅದರ ಜೊತೆಗೆ ನಿತ್ಯಪಂಚಾಂಗ ಕೂಡ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 2) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ?, ಯಾರಿಗೆ ಲಾಭ?, ಯಾರಿಗೆ ನಷ್ಟ?, ಯಾರಿಗೆ ಶುಭ, ಅಶುಭ? ಇಲ್ಲಿ ನೋಡಿ ನಿಮ್ಮ ಭವಿಷ್ಯ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಪ್ರೀತಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 16 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆಗೆ, ರಾಹು ಕಾಲ ಮಧ್ಯಾಹ್ನ 12:39 ರಿಂದ 02:14ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:52 ರಿಂದ 09:28ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:03 ರಿಂದ ಮಧ್ಯಾಹ್ನ 12:39ರ ವರೆಗೆ.
ಧನು ರಾಶಿ: ನಿಮಗೆ ಖಾಸಗಿ ಸಂಸ್ಥೆಯ ಮುಖ್ಯಸ್ಥರಾಗಲು ಕರೆ ಬರಬಹುದು. ಸಾಲದಿಂದ ನೀವು ಮುಕ್ತರಾಗಿ ಖುಷಿಪಡುವಿರಿ. ಕೃಷಿಕರು ಸ್ವಲ್ಪ ಲಾಭವನ್ನು ಪಡೆಯುವರು. ವಿನಾಕಾರಣ ಇನ್ನೊಬ್ಬರ ಮೇಲೆ ಸಿಟ್ಟಾಗುವುದು ಸರಿಯಾಗದು. ನಿಮ್ಮ ಪ್ರೇಮ ಪ್ರಕರಣವು ಹೊಸ ರೂಪವನ್ನು ಒಡೆಯುವುದು. ಅಧಿಕಾರಿಯುತವಾದ ವರ್ತನೆಯು ಸರಿಯಾಗದು. ದೂರ ಪ್ರಯಾಣವನ್ನು ಇಂದು ಮಾಡುವುದು ಬೇಡ. ಧಾರ್ಮಿಕ ಕ್ಷೇತ್ರಗಳ ದರ್ಶನವನ್ನು ಮಾಡುವಿರಿ. ಕೆಲಸದ ಕುರಿತು ಗೊಂದಲ ಇರಲಿದೆ. ಸಭೆಯಲ್ಲಿ ನಿಮಗೆ ಗೌರವವು ಸಿಗಬಹುದು.
ಮಕರ ರಾಶಿ: ಪಾಲುದಾರಿಕೆಯಲ್ಲಿ ಕಲಹವಾಗಬಹುದು. ಎಷ್ಟು ಬೇಕೋ ಅಷ್ಟನ್ನು ಮಾತ್ರವೇ ಮಾತನಾಡಿ. ನಿಮ್ಮದಲ್ಲದ ವಸ್ತುಗಳನ್ನು ಇನ್ನೊಬ್ಬರಿಗೆ ಕೊಡಲಿದ್ದೀರಿ. ಗೊತ್ತಿಲ್ಲ ಕೆಲಸಕ್ಕೆ ಮುನ್ನುಗ್ಗುವುದು ಬೇಡ. ನಿಮ್ಮ ಮಾತುಗಳು ಹಾಸ್ಯಾಸ್ಪದವಾಗಿ ಇರಲಿದೆ. ಹೊಸ ಯೋಜನೆಗಳನ್ನು ಆರಂಭಿಸುವಾಗ ಆಪ್ತರ ಜೊತೆ ಚರ್ಚೆಯನ್ನು ಮಾಡಿ. ಧನದ ವ್ಯವಹಾರದಲ್ಲಿ ನಿಮಗೆ ಸರಿಯಾದ ಮಾಹಿತಿಯ ಕೊರತೆ ಇರಲಿದೆ. ಕುಟುಂಬದ ಜೊತೆ ಸಮಯವನ್ನು ಕಳೆಯುವಿರಿ. ಬಂಧುಗಳ ವಿಚಾರದಲ್ಲಿ ನಿಮಗೆ ಅಸಮಾಧಾನ ಇರಬಹುದು. ಇಂದು ಮುಗಿಯಬೇಕಾದ ಕೆಲಸಗಳು ಹಾಗೆಯೇ ಇರಲಿವೆ.
ಕುಂಭ ರಾಶಿ: ಪರೀಕ್ಷೆಯಲ್ಲಿ ನೀವು ಅಂದುಕೊಂಡಷ್ಟು ಯಶಸ್ಸು ಸಿಗದು. ಸಂಗಾತಿಯು ಒಂದೇ ವಿಚಾರಗಳನ್ನು ಮತ್ತೆ ಮತ್ತೆ ಹೇಳಿ ನಿಮಗೆ ಬೇಸರ ಮಾಡಬುದು. ಆಲಸ್ಯವನ್ನು ಬಿಟ್ಟು ಧೈರ್ಯದಿಂದ ಮುನ್ನಡೆಯಿರಿ. ನಿಮಗಾದ ಸಹಾಯವನ್ನು ನೀವು ನೆನಪಿಸಿಕೊಳ್ಳುವಿರಿ. ಅಧಿಕಾರಿವರ್ಗದ ಪ್ರಶ್ನೆಗೆ ಸರಿಯಾದ ಉತ್ತರವನ್ನು ನೀಡಿ. ಸಿಟ್ಟನ್ನು ಬಿಟ್ಟು ಶಾಂತವಾಗಿ ವರ್ತಿಸುವುದು ಮುಖ್ಯವಾಗುವುದು. ನೆರಹೊರೆಯರ ಸಂಕಷ್ಟಕ್ಕೆ ನೀವು ನೆರವಾಗುವ ಮನಸ್ಸು ಇರಲಿದೆ. ಕಛೇರಿಯಲ್ಲಿ ನೀವು ಎಲ್ಲ ಕೆಲಸಗಳನ್ನು ಮುಗಿಸಿಕೊಂಡು ಶಿಸ್ತಿನಿಂದ ಇರುವಿರಿ. ದಾನವನ್ನು ನೀವು ಮಾಡಲಿದ್ದೀರಿ.
ಮೀನ ರಾಶಿ: ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ನಿಮಗೆ ಚಿಂತೆ ಇರಲಿದೆ. ಆರೋಗ್ಯವು ನಿನ್ನೆಗಿಂತ ಉತ್ತಮವಾಗಿದ್ದು, ಹಾಗೆಯೇ ಉಳಿಸಿಕೊಳ್ಳಲು ಪ್ರಯತ್ನಿಸಿ. ಆಸ್ತಿಯನ್ನು ಮಾರಾಟಮಾಡುವ ಆಲೋಚನೆ ಇರಲಿದೆ. ಸ್ವಉದ್ಯೋಗವನ್ನು ಮಾಡುತ್ತಿದ್ದರೆ ಸ್ವಲ್ಪ ನಷ್ಟವಾಗಬಹುದು. ಕುಟುಂಬವು ನಿಮ್ಮ ಜೊತೆಗೆ ನಿಲ್ಲುವುದು. ಹಳೆಯ ವಿಚಾರಗಳನ್ನು ನೀವು ಮತ್ತೆ ಕೆದಕುವಿರಿ. ಬಾಯಿ ಮಾತಿನ ಯಾವುದನ್ನೂ ದಾಖಲೆಯಾಗಿ ಪಡೆಯದೇ ಬರಹದ ಮೂಲಕ ವ್ಯಕ್ತಪಡಿಸಿ. ಅನ್ಯರ ವಿಚಾರಗಳನ್ನು ಆಡಿಕೊಳ್ಳಲಿದ್ದೀರಿ.
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ