AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಅನಗತ್ಯ ಖರ್ಚಿಗೆ ಇಂದು ಹಲವು ಹಾದಿಗಳು ಇರಲಿವೆ, ಈ ರಾಶಿಯವರು ಎಚ್ಚರವಾಗಿರಿ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 20) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ಅನಗತ್ಯ ಖರ್ಚಿಗೆ ಇಂದು ಹಲವು ಹಾದಿಗಳು ಇರಲಿವೆ, ಈ ರಾಶಿಯವರು ಎಚ್ಚರವಾಗಿರಿ
ಪ್ರಾತಿನಿಧಿಕ ಚಿತ್ರImage Credit source: iStock Photo
TV9 Web
| Updated By: Rakesh Nayak Manchi|

Updated on: Aug 20, 2023 | 12:45 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಆಗಸ್ಟ್ 20 ಭಾನುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಚತುರ್ಥಿ, ನಿತ್ಯನಕ್ಷತ್ರ: ಹಸ್ತಾ, ಯೋಗ: ಸಾಧ್ಯ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 51 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 05:15 ರಿಂದ 06:51ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:36 ರಿಂದ 02:10ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:43 ರಿಂದ 05:17ರ ವರೆಗೆ.

ಧನು ರಾಶಿ: ಸಂಬಂಧಗಳನ್ನು ನಿಮ್ಮ ಬಳಸಿಕೊಳ್ಳಬಹುದು. ನಿಮ್ಮ ಕೆಲಸದಲ್ಲಿ ನೀವು ತೊಡಗಿಕೊಳ್ಳಿ. ಮನಸ್ತಾಪಗಳು ನೆಮ್ಮದಿಯನ್ನು ಹಾಳು ಮಾಡುವುದು. ನಿಮ್ಮ ನಡತೆಯ ದುರುಪಯೋಗವಾಗಲಿದೆ. ಬಂದ ಹಣವು ಮತ್ಯಾವುದೋ ರೀತಿಯಿಂದ ಹೋಗಬಹುದು. ಸಂಗಾತಿಯಿಂದ ನಿಮ್ಮ ಯೋಚನೆಗೆ ಪ್ರೋತ್ಸಾಹವು ಸಿಗಲಿದೆ‌. ಅಪರಿಚಿತ ಕರೆಗಳಿಗೆ ಸ್ಪಂದಿಸುವುದು ಬೇಡ. ನಿಮ್ಮ ಸಂತೋಷವನ್ನು ಕೆಲವರಿಗೆ ನೋಡಲಾಗದು. ಹಿರಿಯರ ಜೊತೆ ತೆರಳಿ ವಿವಾಹದ ಮಾತುಕತೆಯನ್ನು ಮಾಡುವಿರಿ. ಧಾರ್ಮಿಕ ಕಾರ್ಯಗಳಲ್ಲಿ ನೀವು ಮಗ್ನರಾಗಿರುವಿರಿ. ನಿಮ್ಮದಲ್ಲದ ವಿಚಾರವನ್ನು ಕಿವಿಗೆ ಹಾಕಿಕೊಳ್ಳುವುದು ಬೇಡ.

ಮಕರ ರಾಶಿ: ನೀವು ಇಂದು ನಿರೀಕ್ಷಿತ ಹಂತಕ್ಕೆ ಹೋಗುತ್ತಿರುವುದು ಸಂತೋಷದ ಸಂಗತಿಯಾಗಲಿದೆ. ದೂರ ಪ್ರಯಾಣವು ನಿಮಗೆ ಖುಷಿ ಕೊಡಬಹುದು. ಭೋಜನವನ್ನು ಸರಿಯಾದ ಸಮಯಕ್ಕೆ ಮಾಡಿ. ಇಲ್ಲವಾದರೆ ಆರೋಗ್ಯದ ಮೇಲೆ ದುಷ್ಪರಿಣಾಮವನ್ನು ಬೀರಬಹುದು. ಕಲಾವಿದರು ನಿಮ್ಮ ಬಾಳ ಸಂಗಾತಿಯಾಗಬಹುದು. ಕಾರ್ಯದಲ್ಲಿ ನಿರಾಸಕ್ತಿಯು ನಿಮ್ಮ ವ್ಯಕ್ತಿತ್ವವನ್ನು ಹೇಳುವುದು. ನೀವು ಯಾರ ನಕಾರಾತ್ಮಕ ಮಾತಿಗೂ ಉತ್ತರಿಸುವುದು ಬೇಡ. ಕಾಲ ಸರಿದಂತೆ ಎಲ್ಲವೂ ಗೊತ್ತಾಗುವುದು. ನಿಮಗೆ ಬೇಕಾದ ವಸ್ತುಗಳನ್ನು ಎಲ್ಲಿದ್ದರೂ ಪಡೆಯುವಿರಿ. ಹೂಡಿಕೆಯಿಂದ ಪ್ರಯೋಜನವಾಗದು ಎಂದು ಅನ್ನಿಸಬಹುದು.

ಕುಂಭ ರಾಶಿ: ವೃತ್ತಿ ಜೀವನದಿಂದ ನಿಮಗೆ ಗೌರವವು ಸಿಗಬಹುದು. ಆರೋಗ್ಯದ ವ್ಯತ್ಯಾಸವನ್ನು ನೀವು ನಿರ್ಲಕ್ಷ್ಯ ಮಾಡುವಿರಿ.ಅನಗತ್ಯ ಖರ್ಚಿಗೆ ಇಂದು ಹಲವು ಹಾದಿಗಳು ಇರಲಿವೆ. ಹೊಸದಾದ ವ್ಯವಹಾರವು ನಿಮಗೆ ಅಧಿಕವಾದ ಅರ್ಥಿಕಲಾಭವನ್ನು ಕೊಡದು. ಅವಶ್ಯಕ ವಸ್ತುವನ್ನು ಕಳೆದುಕೊಳ್ಳುವಿರಿ. ಯಾರ ಜೊತೆಯೂ ನೋವಾಗುವಂತೆ ವರ್ತಿಸುವುದು ಬೇಡ. ನಿಮಗೆ ಸೋಲನ್ನು ಒಪ್ಪಿಕೊಳ್ಳುವುದು ಕಷ್ಟವಾದೀತು. ಗಳಿಕೆ ಅಲ್ಪ ಭಾಗವನ್ನು ಉಳಿತಾಯಕ್ಕೆ ಇಡುವುದು ಉತ್ತಮ ಎನಿಸುವುದು. ನಿಮ್ಮದಲ್ಲದ ವಸ್ತುವಿನ ಬಗ್ಗೆ ಮೋಹವು ಇರಲಿದೆ. ಮನೋರಂಜನೆಗೆ ಖರ್ಚು ಮಾಡುವಿರಿ.

ಮೀನ ರಾಶಿ: ಇಂದು ನಿಮ್ಮ ಪ್ರಯತ್ನದಿಂದ ಯಶಸ್ಸು ಸಿಗುವುದು. ಆರೋಗ್ಯದ ಮೇಲೆ ಸಣ್ಣ ಸಮಸ್ಯೆಗಳು ಬರಬಹುದು. ಅದನ್ನು ಲೆಕ್ಕಕ್ಕೆ ತೆಗೆದುಕೊಳ್ಳಬೇಕಿಲ್ಲ. ಶತ್ರುಗಳು ನಿಮ್ಮ ವಿರುದ್ಧ ಏನನ್ನಾದರೂ ಮಾಡಲಿಕ್ಕೆ ಇರುವರು. ಇಂದಿನ ನಿಮ್ಮ ವ್ಯಾಪರವು ಇಂದು ಅಲ್ಪ ಲಾಭವನ್ನು ತಂದುಕೊಡುವುದು. ಅಶಿಸ್ತಿನಿಂದ ಇದ್ದರೆ ಯಾರಾದರೂ ಬಯ್ಯುವರು. ನಿಮ್ಮದಾದ ಯೋಜನೆಯನ್ನು ಸಿದ್ಧಪಡಿಸಲು ಅಧಿಕ ಶ್ರಮವಿರಲಿದೆ. ಉದ್ಯೋಗದ ಸ್ಥಳದಲ್ಲಿ ನೆಮ್ಮದಿಯ ಕೊರತೆ ಕಾಣಿಸುವುದು. ಆದಾಯದ ಮೂಲವು ಬದಲಾಗಬಹುದು. ಅಪಮಾನವಾದ ಸ್ಥಳದಲ್ಲಿಯೇ ಗೌರವವು ಸಿಗಲಿದೆ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಕುಮಾರ್ ಕಾಮಗಾರಿ ನಡೆಯುತ್ತಿರುವ ಸ್ಥಳ ಪರಿಶೀಲನೆ ನಡೆಸಲಿದ್ದಾರೆ: ಸೋಮಣ್ಣ
ಶಿವಕುಮಾರ್ ಕಾಮಗಾರಿ ನಡೆಯುತ್ತಿರುವ ಸ್ಥಳ ಪರಿಶೀಲನೆ ನಡೆಸಲಿದ್ದಾರೆ: ಸೋಮಣ್ಣ
ತೇಜಸ್ವಿ ಸೂರ್ಯ ಮನೆಗೆ ಹೊಸ ಅತಿಥಿ: ಹಾಡಿನ ಮೂಲಕ ಸ್ವಾಗತಿಸಿದ ಶಿವಶ್ರೀ
ತೇಜಸ್ವಿ ಸೂರ್ಯ ಮನೆಗೆ ಹೊಸ ಅತಿಥಿ: ಹಾಡಿನ ಮೂಲಕ ಸ್ವಾಗತಿಸಿದ ಶಿವಶ್ರೀ
ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು