Horoscope: ರಾಶಿಭವಿಷ್ಯ, ಸಣ್ಣ ಅಂತರದಲ್ಲಿ ನಿಮ್ಮ ಅಪಘಾತವು ತಪ್ಪಲಿದ್ದು ನಿಮ್ಮ ಅದೃಷ್ಟವು ಕೈ ಹಿಡಿಯಲಿದೆ
ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 20) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.
ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಮೂಲಾ, ಯೋಗ: ಶೋಭನ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 08 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:49 ರಿಂದ 12:17ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:13 ರಿಂದ 04:41ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:54 ರಿಂದ ಮಧ್ಯಾಹ್ನ 09:22ರ ವರೆಗೆ.
ನವರಾತ್ರಿಯ ಆರನೇ ದಿನ ಆರಾಧನೆಗೊಳ್ಳುವವಳು ಸ್ಕಂದಮಾತಾ. ಕಾರ್ತಿಕೇಯನನ್ನು ಸಲಹಿದ ಮಾತೆ ಆಕೆ. ಕಾರ್ತಿಕೇಯನನ್ನು ಕಾಪಾಡಿದಂತೆ ಎಲ್ಲರನ್ನೂ ರಕ್ಷಿಸಲಿ.
ಸಿಂಹಾಸನಗತಾ ನಿತ್ಯಂ ಪದ್ಮಾಶ್ರಿತಕರದ್ವಯಾ | ಶುಭದಾಸ್ತು ಸದಾ ದೇವೀ ಸ್ಕಂದಮಾತಾ ಯಶಸ್ವಿನೀ ||
ಧನು ರಾಶಿ : ನಿಗದಿತ ಸಮಯಕ್ಕಿಂತ ಮೊದಲೇ ಸಾಲವನ್ನು ತೀರಿಸಿದ್ದಕ್ಕೆ ನಿಮ್ಮಲ್ಲಿ ಅಹಂಕಾರವು ಜಾಗೃತವಾಗಬಹುದು. ನಿಮ್ಮ ಬಗ್ಗೆ ನೀವೇ ಹೇಳಿಕೊಳ್ಳುವ ಸ್ಥಿತಿಯು ಹಾಸ್ಯವೆನಿಸುವುದು. ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ ಎನ್ನುವಂತೆ ನಿಮ್ಮ ಬಹಳ ದಿನದ ಕೂಡಿಟ್ಟ ಹಣವು ಕ್ಷಣಾರ್ಧದಲ್ಲಿ ಖಾಲಿಯಾಗಲಿದ್ದು ನಿಮಗೆ ಬೇಸರ ತರಿಸೀತು. ಸಂಬಂಧಗಳನ್ನು ಬೆಳೆಸಿಕೊಳ್ಳುವ ಇಚ್ಛೆ ಇದ್ದರೂ ಮುನ್ನುಗ್ಗಲು ಮನಸ್ಸು ಇರದು. ತಂದೆಯ ಜೊತೆಗಿನ ಮನಸ್ತಾಪವು ನಿಮ್ಮ ನೆಮ್ಮದಿಯನ್ನು ಹಾಳು ಮಾಡೀತು. ನಿಮ್ಮ ಮಾತನ್ನು ದುರುಪಯೋಗ ಮಾಡಬಹುದು. ಸಂಗಾತಿಯು ನಿಮ್ಮ ಯೋಜನೆಯನ್ನು ಪ್ರೋತ್ಸಾಹಿಸಬಹುದು. ಅಪರಿಚಿತ ಕರೆಗಳಿಗೆ ಸ್ಪಂದನೆ ಬೇಡ. ನಿಮ್ಮ ಸಂತೋಷವನ್ನು ಕೆಲವರಿಗೆ ನೋಡುವುದು ಕಷ್ಟವಾದೀತು.
ಮಕರ ರಾಶಿ : ಗೃಹನಿರ್ಮಾಣವು ನಿಮಗೆ ಅನಿವಾರ್ಯವಾದೀತು. ಬಾಡಿಗೆ ಮನೆಯ ಕಿರಿಕಿರಿಯು ನಿಮಗೆ ಸಾಕಾಗಿ ಹೋಗುವುದು. ಅಧಿಕಾರಿಗಳಿಂದ ನಿಮ್ಮ ಆರ್ಥಿಕತೆಯು ಪರಿಶೀಲನೆಗೊಳ್ಳುವುದು. ದಾಂಪತ್ಯದಲ್ಲಿ ಹಣದ ವಿಚಾರಕ್ಕೆ ಕಹಿ ಮಾತುಗಳು ಬರಬಹುದು. ಒಬ್ಬರಾದರೂ ತಾಳ್ಮೆಯಿಂದ ಇರಬೇಕಾದೀತು. ನಿಮ್ಮ ಕನಸನ್ನು ಪೂರ್ಣ ಮಾಡಿಕೊಳ್ಳುತ್ತಿರುವುದು ನಿಮಗೆ ಖುಷಿಯಾಗಲಿದೆ. ಭೋಜನವನ್ನು ಸಮಯ ಮೀರಿ ಮಾಡುವುದು ಬೇಡ. ಕಲಾವಿದೆಯು ನಿಮ್ಮ ಬಾಳ ಸಂಗಾತಿಯಾಗಿ ಬರುವ ಸಾಧ್ಯತೆ ಇದೆ. ಕಛೇರಿಯಲ್ಲಿ ಇಂದು ಯಾವುದೇ ಜವಾಬ್ದಾರಿಯನ್ನು ಮೈಮೇಲೆ ಹಾಕಿಕೊಂಡು ಹೋಗುವ ಮನಸ್ಸು ಇರದು. ಇಂದು ಹೂಡಿಕೆಯ ಪ್ರಯೋಜನದ ಬಗ್ಗೆ ತಿಳಿದುಕೊಳ್ಳುವಿರಿ.
ಕುಂಭ ರಾಶಿ : ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲು ನಿಮ್ಮಿಂದಲೇ ಪ್ರಸ್ತಾವನೆ ಬರಲಿದೆ. ಆಕಸ್ಮಿಕವಾಗಿ ನೀವು ಅಶುಭ ಸಮಾಚಾರವನ್ನು ಕೇಳಬೇಕಾಗುವುದು. ನಿಮಗೆ ನಂಬಲೂ ಸಾಧ್ಯವಾಗದೇ ಹೋಗಬಹುದು. ಸಣ್ಣ ಅಂತರದಲ್ಲಿ ನಿಮ್ಮ ಅಪಘಾತವು ತಪ್ಪಲಿದ್ದು ನಿಮ್ಮ ಅದೃಷ್ಟವು ಕೈ ಹಿಡಿಯಲಿದೆ. ವೃತ್ತಿ ಜೀವನದಲ್ಲಿ ಗೌರವವನ್ನು ಪಡೆಯಬೇಕು ಎನಿಸುವುದು. ಅನಗತ್ಯ ಖರ್ಚಿಗೆ ಇಂದು ಹಲವು ಹಾದಿಗಳು ನಿಮ್ಮ ಕಣ್ಣಿಗೆ ಬೀಳಬಹುದು. ಆರ್ಥಿಕ ವ್ಯವಸ್ಥೆಯು ಎತ್ತು ಏರಿಗೆ ಕೋಣ ನೀರಿಗೆ ಎನ್ನುವ ಸ್ಥಿತಿಯು ಬರಬಹುದು. ಒಂದು ಕಡೆ ಬಾಗಲು ಮುಚ್ಚಿದರೆ ಇನ್ಮೊಂದು ಕಡೆ ಕಿಟಕಿ ತೆರುವುದು. ಓಡಾವು ನಿಮಗೆ ಅತಿಯಾದ ಆಯಾಸಪ್ರದವಾಗಲಿದೆ. ಚಿಂತೆಯು ಕಾಡಲಿದ್ದು ನಿಮಗೆ ಮನಸ್ಸನ್ನು ಅದರಿಂದ ತಪ್ಪಿಸಲು ಆಗದು.
ಮೀನ ರಾಶಿ : ಬಹಳ ದಿನಗಳಿಂದ ಇದ್ದ ಆಸ್ತಿಯ ಮೇಲಿನ ಮೋಹವು ಕಡಿಮೆ ಆಗುವುದು. ರಾಜಕೀಯದ ಜೊತೆ ಸಂಪರ್ಕವು ಬೆಳೆಯವಹುದು. ಆರ್ಥಿಕ ಸಮಸ್ಯೆಯು ತಾತ್ಕಾಲಿಕವಾಗಿ ನಿವಾರಣೆಯಾಗಿ ಒತ್ತಡದಿಂದ ಹೊರಬರುವಿರಿ. ಇಂದು ನಿಮ್ಮ ಪ್ರಯತ್ನದಲ್ಲಿ ಯಶಸ್ಸು ನಿರೀಕ್ಷಿಸಬಹುದು. ಇಂದಾಗುವ ಖರ್ಚನ್ನು ರೂಪಾಯಿಯಲ್ಲಿ ಲೆಕ್ಕವಿಡಲು ಸಾಧ್ಯವಾಗದು. ಶತ್ರುಗಳಿಗೆ ಏನನ್ನಾದರೂ ಮಾಡಲು ಯಾರಿಂದಲಾದರೂ ಪ್ರೇರಣೆ ಸಿಕ್ಕೀತು. ಗ್ರಾಹಕರಿಂದ ಮೆಚ್ಚುಗೆ ಸಿಗಲಿದೆ. ಅಶಿಸ್ತು ನಿಮ್ಮ ಕಾರ್ಯವನ್ನು ಯೋರಿಸುತ್ತದೆ. ಸ್ವಂತ ಕಾರ್ಯದ ಕಾರಣ ಕಛೇರಿಗೆ ವಿತಾಮ ಹೇಳುವಿರಿ. ಮಾಡಿದ ತಪ್ಪನ್ನು ಪುನಃ ಮಾಡಲು ಹಿಂಜರಿಯುವಿರಿ.
-ಲೋಹಿತಶರ್ಮಾ – 8762924271 (what’s app only)