Horoscope: ಈ ರಾಶಿಯವರು ಅಶುಭ ಸೂಚನೆಗಳನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯದಲ್ಲಿ ಪ್ರವೃತ್ತರಾಗಿ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 20) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರು ಅಶುಭ ಸೂಚನೆಗಳನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯದಲ್ಲಿ ಪ್ರವೃತ್ತರಾಗಿ
ರಾಶಿ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 20, 2023 | 12:45 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 20 ಬುಧವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ತುಲಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಸೌಭಾಗ್ಯ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 29 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:26 ರಿಂದ 01:57 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:54 ರಿಂದ 09:24ರವರೆಗೆ, ಗುಳಿಕ ಕಾಲ ಬೆಳಿಗ್ಗೆ 10:55 ರಿಂದ 12:26ರ ವರೆಗೆ.

ಧನು ರಾಶಿ : ರಾಜಕೀಯವು ನಿಮ್ಮ ದಿಕ್ಕನ್ನೇ ಬದಲಿಸುವ ಸಾಧ್ಯತೆ ಇದೆ. ಇಂದು ಸಾರ್ವಜನಿಕ ಸಭೆಗಳನ್ನು ನಡೆಸಲು ಯೋಜಿಸುವಿರಿ‌. ಪ್ರಭಾವೀ ವ್ಯಕ್ತಿಗಳ ಒಡನಾಟವನ್ನು ಯಾರ ಜೊತೆಯಾದರೂ ಹಂಚಿಕೊಂಡು ಸಮಾಧಾನ ಮಾಡಿಕೊಳ್ಳುವಿರಿ. ಆಭರಣ ಮುಂತಾದ ಬಹು ಮೌಲ್ಯದ ವಸ್ತುವನ್ನು ಖರೀದಿಸುವಿರಿ. ನಿಮ್ಮ ಮನೆಯ ಕಾರ್ಯವು ಹಲವು ದಿನಗಳಿಂದ ನಿಂತಿದ್ದು ಮತ್ತೆ ಆರಂಭಿಸುವಿರಿ. ಇಂದು ನಿಮಗೆ ಅನಿರೀಕ್ಷಿತ ಆನಂದವನ್ನು ತರುವ ವಾರ್ತೆಗಳು ಬರಬಹುದು. ಬಹಳ ದಿನಗಳ ಕಳೆದ ಮೇಲೆ ತಂದೆಯ ಜೊತೆ ಮಾತನಾಡಿ ನೆಮ್ಮದಿಯು ಪಡೆಯುವಿರಿ. ನಿಮ್ಮ ದೂರ ಪ್ರಯಾಣಕ್ಕೆ ಕುಟುಂಬದಿಂದ ಒಪ್ಪಿಗೆ ಸಿಗದು. ಇನ್ನೊಬ್ಬರ‌ ನೋವಿಗೆ ಸ್ಪಂದಿಸುವ ನಿಮ್ಮ ಗುಣವು ಮೆಚ್ಚುಗೆಯಾಗಿ ಇದೇ ಪ್ರೀತಿಗೆ ದಾರಿ ಮಾಡಿಕೊಡಬಹುದು. ನಿಮಗೆ ಸಿಕ್ಕ ವ್ಯಕ್ತಿಗಳನ್ನು ಉಳಿಸಿಕೊಳ್ಳಿ. ಮನೆಯಲ್ಲಿ ವಿವಾಹಕ್ಕೆ ಸಂಬಂಧಿಸಿದ ನಿಮ್ಮ ಅಭಿಪ್ರಾಯವನ್ನು ತಿಳಿಸುವಿರಿ.

ಮಕರ ರಾಶಿ : ಇಂದು ನೀವು ಮನೆಯ ಹಿರಿಯರಿಗೆ ಗೌರವ ತರುವ ಕಾರ್ಯವನ್ನು ಮಾಡುವಿರಿ. ನೀವು ಸಾಲವನ್ನು ಮಾಡಿದ್ದರೆ, ಇಂದು ನಿಮ್ಮ ಬಳಿ ಹಣವು ಬಂದು ಸೇರಿದರೂ ಮರುಪಾವತಿಗೆ ಮನಸ್ಸಾಗದು. ಉದ್ಯೋಗಕ್ಕಾಗಿ ಬಂದ ಬಂಧುವಿಗೆ ಮಾರ್ಗದರ್ಶನ ಮಾಡುವಿರಿ. ಸಹೋದರನ ಸಹಕಾರವು ಅನುಕೂಲವೇ ಆಗುವುದು. ನೂತನ ವಾಹನದ‌ ಖರೀದಿಯನ್ನು ಮಾಡುವ ಇಚ್ಛೆಯು ಇಂದು ಪೂರ್ಣವಾಗುವುದು. ಹಿತಶತ್ರು ನಿಮ್ಮ‌ ಪತನವನ್ನೇ ನಿರೀಕ್ಷಿಸುತ್ತ ಕುಳಿತಿರುವರು.‌ ವೈವಾಹಿಕ ಜೀವನ ಆರಂಭದ ದಿನಗಳಲ್ಲಿ ಸಂತೋಷವೇ ಇರುವುದು. ಪರಸ್ಪರ ದುಃಖವನ್ನು ಹಂಚಿಕೊಂಡು ದಂಪತಿಗಳು ಹಗುರಾಗುವುದು. ಇಂದಿನ‌ ಕಾರ್ಯದ ಯಾದಿ ಮಾಡಿಕೊಂಡೇ ಕಾರ್ಯದಲ್ಲಿ ತೊಡಗಿ.

ಕುಂಭ ರಾಶಿ : ಕುಟುಂಬಕ್ಕೆ ಅಗತ್ಯವಾದ ಪದಾರ್ಥಗಳನ್ನು ಖರೀದಿಸುವಿರಿ.‌ ಇಂದು ನಿಮ್ಮ ದೇಹವು ಆಯಾಸದಿಂದ ದುರ್ಬಲವಾಗಬಹುದು. ಹೆಚ್ಚು ವಿಶ್ರಾಂತಿಯ ಅವಶ್ಯಕತೆ ಇರುವುದು. ಇಂದು ನಿಮ್ಮ ವಾಹನದ ಬಳಕೆಯನ್ನು ಹೆಚ್ಚು ಮಾಡುವಿರಿ. ಕಾರ್ಯದ ನಿಮಿತ್ತ ನಿಮ್ಮ ಓಡಾಟವು ವ್ಯರ್ಥವಾಗಬಹುದು. ಅಶುಭ ಸೂಚನೆಗಳನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯದಲ್ಲಿ ಪ್ರವೃತ್ತರಾಗಿ. ಆಪ್ತ ಬಂಧುವನ್ನು ಅಕಾಲದಲ್ಲಿ ಕಳೆದುಕೊಳ್ಳುವಿರಿ. ಎಲ್ಲರೆದುರು ಮುಖಭಂಗವನ್ನು ಎದುರಿಸಿಬೇಕಾದೀತು. ವೈವಾಹಿಕ ಜೀವನದ ಕನಸು ಕಾಣುವಿರಿ. ನಿಮ್ಮ‌ ದೂರಾಲೋಚನೆಯು ವಾಸ್ತವಕ್ಕೆ ಹತ್ತಿರವಾಗಿ ಇಲ್ಲ. ಏನನ್ನಾದರೂ ಸಾಧಿಸಬೇಕು ಎನ್ನುವ ಕ್ಷಣಕಲವಿದ್ದು ಮರೆಯಾಗುವುದು. ಸದಭಿರುಚಿಯಿಂದ ಹೊಸ ಅವಕಾಶಗಳು ತೆರೆದುಕೊಳ್ಳುವುದು.

ಮೀನ ರಾಶಿ : ಇಂದು ನಿಮ್ಮ ವ್ಯಾಪಾರದಲ್ಲಿ ಕಠಿಣ ಶ್ರಮವಿದ್ದೂ ಕಡಿಮೆ ಲಾಭವನ್ನು ಪಡೆಯಬೇಕಾಗುವುದು. ಇಂದಿನ ಆಗತ್ಯಕ್ಕೆ ಎಲ್ಲೂ ತೊಂದರೆಯಾಗದಂತೆ ಇರುವಿರಿ.‌ ಜವಾಬ್ದಾರಿಯು ಬಂದು ಹೊರೆಯು ಹೆಚ್ಚಾಗುವುದು. ಬಹಳ ಹುಡುಕಾಟದ ಅನಂತರದ ಉತ್ತಮ‌ ವಿವಾಹ ಸಂಬಂಧವು ಬರುವುದು. ಪಾಲುದಾರಿಕೆಯಲ್ಲಿ ಅಧಿಕಾರದ ಬಗ್ಗೆ ಅಸಮಾಧಾನ ಹೆಚ್ಚಾಗುವುದು. ಪುರುಷಪ್ರಯತ್ನದಿಂದ ಇಂದು ಹೆಚ್ಚು ಇರುವುದು. ಸಂಗಾತಿಯ ಜೊತೆ ಆಪ್ತವಾದ ಮಾತುಕತೆ ಇರಲಿದೆ. ನಿಮಗೆ ಸಾಕಷ್ಟು ಸಮಯವುವ ಇಂದು ಇರಲಿದ್ದು ಏನು ಮಾಡಬೇಕೆಂದು ತಿಳಿಯದೇ ಕಾಲವನ್ನು ಕಳೆಯುವಿರಿ. ಉತ್ತಮ ಹವ್ಯಾಸವನ್ನು ಬೆಳೆಸಿಕೊಳ್ಳುವುದು ಉತ್ತನ. ನಿಮ್ಮ ಸೌಂದರ್ಯಕ್ಕೆ ನಿಮ್ಮ‌ ಮೇಲೆ‌ ಕೆಟ್ಟ ಕಣ್ಣುಗಳು ಬೀಳಬಹುದು. ಹನುಮಾನ್ ಚಾಲೀಸ್ ಪಠಿಸಿ.

-ಲೋಹಿತಶರ್ಮಾ – 8762924271 (what’s app only)

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ