AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಈ ರಾಶಿಯವರು ಕುಲದೇವರ ಆರಾಧನೆ ಮಾಡಿ, ನೆಮ್ಮದಿ ಪ್ರಾಪ್ತವಾಗುವುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 21) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ, ಈ ರಾಶಿಯವರು ಕುಲದೇವರ ಆರಾಧನೆ ಮಾಡಿ, ನೆಮ್ಮದಿ ಪ್ರಾಪ್ತವಾಗುವುದು
ಪ್ರಾತಿನಿಧಿಕ ಚಿತ್ರImage Credit source: iStock Photo
TV9 Web
| Updated By: Rakesh Nayak Manchi|

Updated on: Oct 21, 2023 | 12:45 AM

Share

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 21) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಪೂರ್ವಾಷಾಢ, ಯೋಗ: ಅತಿಗಂಡ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 08 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:22 ರಿಂದ 10:49ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:45 ರಿಂದ 03:13ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:26 ರಿಂದ 07:54ರ ವರೆಗೆ.

ಧನು ರಾಶಿ: ಉದ್ಯಮದ ಕಾರಣ ಇರುವ ಸ್ಥಳದಿಂದ ದೂರ ಹೋಗಬೇಕಾಗುವದು. ಸುಳ್ಳನ್ನಾಡಿ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಅಚಾತುರ್ಯದಿಂದ ಹಣವನ್ನು ಕಳೆದುಕೊಳ್ಳಬೇಕಾದೀತು. ಬೇಡದ ಕಾರ್ಯಕ್ಕೆ ಯಾರಾದರೂ ಪ್ರಚೋದಿಸಿಯಾರು. ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು. ಒಂದು ಕಾರ್ಯಕ್ಕೆ ವಿಘ್ನಗಳು ಬರುತ್ತಿದ್ದು ದೈವಜ್ಞರನ್ನು ಸಂಪರ್ಕಿಸಿ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಉತ್ತಮ. ವಿದ್ಯೆಯ ಕಾರಣಕ್ಕೆ ಇಂದು ನಿಮಗೆ ಗೌರವವು ಸಿಗಲಿದೆ. ಕಾರ್ಯದ ಒತ್ತಡದಿಂದ‌ ಶಿರೋವೇದನೆ ಕಾಣಿಸಿಕೊಳ್ಳುವುದು. ಇಂದು ನೀವು ಮಾಡಿದ ಕೆಲಸವು ನಿಷ್ಪ್ರಯೋಜಕವಾಗಲಿದೆ. ಬೇಸರವನ್ನು ಕಳೆಯಲು ಎಲ್ಲಿಗಾದರೂ ಹೋಗುವಿರಿ. ಸಹಾಯವನ್ನು ಕೇಳಿ ಬಂದವರಿಗೆ ಇಲ್ಲ ಎನ್ನುವುದು ಬೇಡ.

ಮಕರ ರಾಶಿ: ಸರ್ಕಾರ ಕಾರ್ಯವು ಇಂದು ಪೂರ್ಣವಾಗದು ಎಂದು ಅಂದುಕೊಂಡಿದ್ದರೂ ಕೊನೆಗೆ ಕೆಲಸವಾಗುವುದು. ಮನೆಯ ಸಮೀಪದಲ್ಲಿಯೇ ನಿಮ್ಮ ಉದ್ಯೋಗವು ಸಿಗಲಿದೆ. ಮನೆಯಲ್ಲಿ ತಾಳ್ಮೆಯಿಂದ ವ್ಯವಹರಿಸಿ. ನಿಮ್ಮ ವಾಹನಕ್ಕಾಗಿ ಖರ್ಚನ್ನು ಮಾಡಬೇಕಾಗುವುದು. ಪ್ರೀತಿಯ ವಿಷಯದಲ್ಲಿ ಇಂದು ದುಃಖವುಂಟಾಗಬಹುದು. ಮನಸ್ತಾಪವನ್ನು ದ್ವೇಷವಾಗಿ ಪರಿವರ್ತಿಸಿಕೊಳ್ಳುವುದು ಬೇಡ. ನಿಮಗೆ ಕೊಟ್ಟ ಜವಾಬ್ದಾರಿಯನ್ನು ನೀವು ತಳ್ಳಿಹಾಕುವಿರಿ. ವ್ಯವಹಾರದಲ್ಲಿ ಇರಬೇಕಾದ ಚಾಕಚಕ್ಯತೆಯನ್ನು ಬೆಳೆಸಿಕೊಳ್ಳಬೇಕಾಗುವುದು. ಪ್ರೀತಿಯ ಮಾತುಗಳಿಂದ ನಿಮ್ಮತ್ತ ಜನರು ಆಕರ್ಷಿತರಾಗುವುದು. ವಿದ್ಯಾರ್ಥಿಗಳಿಗೆ ಅನ್ಯರ ಸಹವಾಸ ಸಿಗಬಹುದು.

ಕುಂಭ ರಾಶಿ: ಇಂದು ನಿಮಗೆ ಸಾಮಾಜಿಕ ಕಾರ್ಯಗಳಿಗೆ ಪ್ರೇರಣೆ ಸಿಗಬಹುದು. ಕೋರ್ಟು ಕಛೇರಿಯ ವ್ಯವಹಾರಕ್ಕೆಂದು ಓಡಾಟ ಇರಲಿದ್ದು ಸುಸ್ತಾಗುವಿರಿ. ಸ್ನೇಹಿತರು ನಿಮಗೆ ಸುಳ್ಳು ಹೇಳುವರು. ಮಕ್ಕಳ ವಿದ್ಯಾಭ್ಯಾಸಕ್ಕೆ ನೀವೇ ವಿಶೇಷ ಕಾಳಜಿಯನ್ನು ತೋರಿ ಅವರನ್ನು ಓದಿಗೆ ಪ್ರೇರಣೆ ಕೊಡಬೇಕಾಗುವುದು. ದಿನದ ಕೆಲಸವೇ ಇಂದು ಬಹಳ ಆಗಲಿದ್ದು ಇನ್ನೊಬ್ಬರ ಕೆಲಸವನ್ನು ಮಾಡಿಕೊಡಲು ತಾಳ್ಮೆ ಇರಲಾರದು. ಬರಬೇಕಾದ ಹಣವು ಆಕಸ್ಮಿಕವಾಗಿ ಬಂದಿದ್ದು ಖುಷಿ ಕೊಡುವುದು. ಇಂದು ನಿಮ್ಮ ಉತ್ಸಾಹವನ್ನು ಯಾರಿಂದಲೂ ಸಾಧ್ಯವಾಗದು. ಆದಾಯದ ವಿಚಾರದಲ್ಲಿ ಹಿನ್ನಡೆಯಾಗಿದ್ದು ನಿಮ್ಮ ತಂತ್ರವು ಪೂರ್ಣವಾಗಿ ಫಲಿಸದು. ಇಂದಿನ ನಿಮ್ಮ ಪ್ರಯಾಣದ ವಿಚಾರದಲ್ಲಿ ಬಹಳ ಗೊಂದಲ ಉಂಟಾಗಬಹುದು. ನಿಮ್ಮ ತಪ್ಪಿಗೂ ಇನ್ನೊಬ್ಬರನ್ನು ಕೈ ಮಾಡಿ ತೋರಿಸುವುದು ಬೇಡ. ಕುಲದೇವರ ಆರಾಧನೆಯಿಂದ ನೆಮ್ಮದಿ ಪ್ರಾಪ್ತವಾಗುವುದು.

ಮೀನ ರಾಶಿ: ಯಾರದೋ ವಿವಾಹದ‌ ಕಾರ್ಯಕ್ಕೆ ಓಡಾಟ ಮಾಡಬೇಕಾದೀತು. ಒಂದಿಷ್ಟು ಆಯಾಸ ಬಿಟ್ಟರೆ, ಮತ್ತೇನೂ ಆಗದು. ಇನ್ನೊಬ್ಬರ ಬಗ್ಗೆ ನಿಮ್ಮಲ್ಲಿ ಕುತೂಹಲ ಇರಲಿದೆ. ಸಜ್ಜನರ ಜೊತೆ ಸಮಯ ಕಳೆಯುವ ಅವಕಾಶ ಸಿಗುವುದು. ಕುಟುಂಬದ ಹಿರಿಯರ ಅನಾರೋಗ್ಯದ ಕಾರಣ ನಿಮ್ಮ ಸ್ವಂತ ಕಾರ್ಯವನ್ನು ಮಾಡಿಕೊಳ್ಳಲಾಗದು. ಆಭರಣ ಖರೀದಿಗೆ ಉತ್ತಮ ದಿನವಿದಾಗಲಿದೆ. ವೃದ್ಧರ ಸೇವೆಯಲ್ಲಿ ತೊಡಗಿಕೊಳ್ಳುವಿರಿ. ಉದ್ಯೋಗವನ್ನು ನಂಬಿ ಜೀವನ ಸಾಗಿಸುವವರಿಗೆ ಬೇಸರ ಎದುರಾಗಬಹುದು. ನಿಮ್ಮ ವ್ಯಾಪಾರದ ತಂತ್ರವು ಫಲಿಸಬಹುದು. ವ್ಯಾಪಾರದಲ್ಲಿ ಲಾಭವನ್ನು ತಂದೀತು. ಸನ್ನಿವೇಶಕ್ಕೆ ತಕ್ಕುದಾದ ಮಾತನ್ನು ಆಡಿ. ಎಲ್ಲ ಕಾರ್ಯಕ್ಕೂ ಲಾಭವನ್ನು ನಿರೀಕ್ಷಿಸುವುದು ಬೇಡ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ