Horoscope: ಈ ರಾಶಿಯವರು ಪ್ರಭಾವೀ ವ್ಯಕ್ತಿಗಳನ್ನು ಎದುರು ಹಾಕಿಕೊಳ್ಳುವ ಸಂದರ್ಭವು ಬರಬಹುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 21) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರು ಪ್ರಭಾವೀ ವ್ಯಕ್ತಿಗಳನ್ನು ಎದುರು ಹಾಕಿಕೊಳ್ಳುವ ಸಂದರ್ಭವು ಬರಬಹುದು
ಜ್ಯೋತಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 21, 2023 | 12:45 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 21 ಗುರುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ತುಲಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಮೂಲಾ, ಯೋಗ: ಶೋಭನ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 29 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:26 ರಿಂದ 01:57 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:54 ರಿಂದ 09:24ರವರೆಗೆ, ಗುಳಿಕ ಕಾಲ ಬೆಳಿಗ್ಗೆ 10:55 ರಿಂದ 12:26ರ ವರೆಗೆ.

ಧನು ರಾಶಿ : ಸ್ವಂತ ಉದ್ಯಮದ ನಿಮಿತ್ತ ಹೊರಗೆ ಹೋಗಬೇಕಾದೀತು. ಸರ್ಕಾರಕ್ಕೆ ಕೊಡಬೇಕಾದ ಹಣವನ್ನು ಇಂದು ಕೊಡಲಿದ್ದೀರಿ. ಪ್ರಭಾವೀ ವ್ಯಕ್ತಿಗಳನ್ನು ಎದುರು ಹಾಕಿಕೊಳ್ಳುವ ಸಂದರ್ಭವು ಬರಬಹುದು. ನೂತನ ಅಧಿಕಾರವು ಪ್ರಾಪ್ತವಾಗಲಿದೆ. ಮೇಲಧಿಕಾರಿಹಳ ಜೊತೆ ಯೋಜನೆಯ ಕುರಿತು ಚರ್ಚೆ ನಡೆಸುವಿರಿ. ಯಂತ್ರಗಳ ಮಾರಾಟ ಮಾಡುವವರಿಗೆ ಉತ್ತಮ ಲಾಭವಿರಲಿದೆ. ಕೆಲಸದಲ್ಲಿ ಆಸಕ್ತಿ ಇದ್ದರೂ ನಿಮ್ಮನ್ನು ಟೀಕಿಸಿದ ಕಾರಣ ಹಿಂದೇಟು ಹಾಕುವಿರಿ. ಆಹಾರಕ್ಕೋಸ್ಕರ ಅಧಿಕ ವೆಚ್ಚವನ್ನು ನೀವು ಮಾಡುವಿರಿ. ನಟರ ನಿರೀಕ್ಷೆಯು ಸತ್ಯವಾಗುವುದು. ಸಂಬಂಧಗಳ ನಡುವೆ ಪರಸ್ಪರ ಸೌಹಾರ್ದವು ಇರಲಿದೆ. ಸಾಹಸಕ್ಕೆ ಕಾರ್ಯಕ್ಕೆ ಹೋದಾಗ ನಿಮ್ಮ ಬಗ್ಗೆ ನಿಮಗೆ ಗೊತ್ತಿರಲಿ. ದುರಾಲೋಚನೆಯು ನಿಮ್ಮ ಮಾರ್ಗವನ್ನು ಬದಲಾಯಿಸುವುದು.

ಮಕರ ರಾಶಿ : ಧನವು ನಷ್ಟವಾದ ಕಾರಣ ಹತಾಶೆಯು ನಿಮ್ಮಲ್ಲಿ ಬರಬಹುದು. ತಂದೆಯ ಜೊತೆ ವಾಗ್ವಾದ ಮಾಡುವ ಸ್ಥಿತಿಯನ್ನು ತಂದುಕೊಳ್ಳುವಿರಿ. ವ್ಯವಹಾರದಲ್ಲಿ ಪಾರದರ್ಶಕತೆ ಕಾಣಿಸುವುದು. ಸಹೋದರಿಗೆ ಉಡುಗೊರೆ ನೀಡಿ ಖುಷಿಪಡಿಸುವಿರಿ. ಹಿತಶತ್ರುಗಳು ನಿಮ್ಮ ಸ್ಥಿತಿಯನ್ನು ಕಂಡು ಒಳಗೊಳಗೇ ಸಂತೋಷಪಡುವರು. ಸ್ಥಿರಾಸ್ತಿಯ ವಿಚಾರದಲ್ಲಿ ಗೊಂದಲು ಇರಲಿದೆ. ಇಂದು ಎಲ್ಲರಿಂದ ಪ್ರತ್ಯೇಕವಾಗಿ ಇರಲು ಇಷ್ಟಪಡುವಿರಿ. ನಿಮ್ಮ ಸಾಮರ್ಥ್ಯದ ಬಗ್ಗೆ ಇತರರಿಂದ ತಿಳಿದು ಖುಷಿಯಾಗುವುದು. ರಾಜಕೀಯದಲ್ಲಿ ಮುಂದುವರಿಯುವುದು ಕಷ್ಟವೆನಿಸಬಹುದು. ಪ್ರಯಾಣದಲ್ಲಿ ನೀವು ಸುರಕ್ಷತೆಗೆ ಮಹತ್ತ್ವ ಕೊಡಿ. ನಿಮ್ಮಿಂದ ಆಗುವ ಕೆಲಸವನ್ನು ಬೆಂಬಿಡದೇ ಮಾಡಿಸಿಕೊಳ್ಳುವರು.

ಕುಂಭ ರಾಶಿ : ಅಪರೂಪದ ವ್ಯಕ್ತಿಗಳನ್ನು ಭೇಟಿ ಮಾಡುವ ಸಂದರ್ಭವು ಬರಬಹುದು. ಉಪಕಾರದ ಸ್ಮರಣೆಯನ್ನು ನೀವು ಮಾಡಿಕೊಳ್ಳುವಿರಿ. ಇಂದು ದುಡಿಮೆಯು ಕಷ್ಟವೆನಿಸಬಹುದು. ವಿದ್ಯಾರ್ಥಿಗಳು ಪರೀಕ್ಷೆಯತ್ತ ಗಮನ ಕೊಡಬೇಕಾಗುವುದು. ಬಂಧುಗಳ ಮಾತು ನಿಮಗೆ ಕಿರಿಕಿರಿ ತರಿಸಬಹುದು. ಪುಣ್ಯಸ್ಥಳಗಳ ಭೇಟಿ ಮಾಡವಿರಿ. ನಿಮ್ಮ ಸೌಂದರ್ಯಕ್ಕೆ ಹೆಚ್ಚು ಮಹತ್ವವನ್ನು ಕೊಡುವಿರಿ. ಕುಟುಂಬದ ಜವಾಬ್ದಾರಿಯು ನಿಮಗೆ ಸಿಗಬಹುದು. ಚಂಚಲವಾದ ಮನಸ್ಸನ್ನು ನಿಶ್ಚಲಗೊಳಿಸಲು ಪ್ರಯತ್ನಿಸುವಿರಿ. ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ನಿಮಗೆ ಕೆಲವು ತಂತ್ರಗಳನ್ನು ಕೇಳಿ ಪಡೆಯುವಿರಿ. ಆಪ್ತರನ್ನು ಕಳೆದುಕೊಳ್ಳಲು ಕಷ್ಟವಾದೀತು. ಆಸ್ತಿಯನ್ನು ಮಾರಾಟ‌ ಮಾಡಲು ಇಚ್ಛೆ ಇರುವುದು.

ಮೀನ ರಾಶಿ : ಆಸೆಯನ್ನು ಈಡೇರಿಸಿಕೊಂಡು ಸಂತೋಷಪಡುವಿರಿ. ದಾನದಲ್ಲಿ ಹೆಚ್ಚಿನ ಶ್ರದ್ಧೆಯನ್ನು ತೋರುವಿರಿ. ನಿಮ್ಮ ಬಗ್ಗೆ ಒಳ್ಳೆಯ ಭಾವವು ಬರಬಹುದು. ಸಂಗಾತಿಯ ಇಂದಿನ ಮಾತುಕತೆಗಳು ವಾಗ್ವಾದಕ್ಕೆ ತಿರುಗಬಹುದು. ವಿದ್ಯುತ್ ಉಪಕರಣಗಳ ಉದ್ಯಮದಿಂದ ಲಾಭವಾಗಲಿದೆ. ಉದ್ಯೋಗದ ಸ್ಥಳದಲ್ಲಿ ಒತ್ತಡ ಅನಿರೀಕ್ಷಿತವಾಗಿ ಹೆಚ್ಚುವುದು. ಗೊಂದಲದ ತೀರ್ಮಾನವು ಬೇಡ. ಎಲ್ಲವೂ ಅಂದುಕೊಂಡಂತೆ ಆಗದು ಎಂಬುದು ನಿಮ್ಮ ವಿಚಾರದಲ್ಲಿ ಸತ್ಯವಾಗುವುದು. ನಿಮ್ಮ ಆರಂಭವೇ ಸರಿಯಾಗದೇ ಇರುವುದರಿಂದ ಗುರಿಯೂ ತಪ್ಪಬಹುದು. ಇಂದು ಪ್ರವಾಸ ಮಾಡುವುದು ನಿಮಗೆ ಇಷ್ಟವಾಗದು. ಭವಿಷ್ಯದ ಬಗ್ಗೆ ನಿಮಗೆ ಭೀತಿ ಇರುವುದು.

-ಲೋಹಿತಶರ್ಮಾ – 8762924271 (what’s app only)

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ