Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಈ ರಾಶಿಯವರು ಇಂದು ಗಂಭೀರ ವಿಚಾರವನ್ನು ಲಘುವಾಗಿ ತೆಗೆದುಕೊಳ್ಳುವುವುದು ಬೇಡ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 22) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ಈ ರಾಶಿಯವರು ಇಂದು ಗಂಭೀರ ವಿಚಾರವನ್ನು ಲಘುವಾಗಿ ತೆಗೆದುಕೊಳ್ಳುವುವುದು ಬೇಡ
ದಿನಭವಿಷ್ಯImage Credit source: iStock Photo
Follow us
TV9 Web
| Updated By: Rakesh Nayak Manchi

Updated on: Aug 22, 2023 | 12:45 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಆಗಸ್ಟ್ 22 ಮಂಗಳವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಸ್ವಾತೀ, ಯೋಗ: ಶುಕ್ಲ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 49 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:43 ರಿಂದ 05:16ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:28 ರಿಂದ 11:02ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:35 ರಿಂದ 02:09ರ ವರೆಗೆ.

ಧನು ರಾಶಿ: ದುರಭ್ಯಾಸದ ಕಾರಣ ಎಲ್ಲರೆದುರು ಮರ್ಯಾದಿಯನ್ನು ತೆಗೆದಕೊಳ್ಳಬೇಕಾಗುವುದು. ಮಹಿಳೆಯರಿಗೆ ಸಹಾಯ ಮಾಡಲು ಹೋಗಿ ಅಪವಾದವು ಬರಬಹುದು. ನಿಮ್ಮ ನಿರುದ್ಯೋಗದ ಸಮಸ್ಯೆಯನ್ನು ಸರಿ ಮಾಡಿಕೊಳ್ಳುವಿರಿ. ಈಗಾಗಲೇ ವೃತ್ತಿಯಲ್ಲಿ ತೊಡಗಿದವರು ಬಡ್ತಿಯನ್ನು ನೀಡುವಂತೆ ಒತ್ತಾಯಿಸಬಹುದು. ನಿಮ್ಮದೇ ಆದ ವ್ಯಕ್ತಿತ್ವವು ನಿಮ್ಮ ಗೌರವವನ್ನು ಹೆಚ್ಚಿಸುವುದು. ಕಹಿ ಘಟನೆಗಳು ನಿಮ್ಮ ಹೆಚ್ಚು ಕಾಡಬಹುದು. ಇಂದು ನಿಮ್ಮ ಸಂತೋಷವನ್ನು ಯಾರ ಬಳಿ ಕೊಂಡರೆ ಇಮ್ಮಡಿಸುವದೋ ಅವರ ಬಳಿ ಹೇಳಿಕೊಳ್ಳಿ. ವಿದ್ಯಾಭ್ಯಾಸದ ಬಗ್ಗೆ ನಿಮಗೆ ಬಹಳ ಆಸ್ಥೆಯು ಅಧಿಕವಾಗಿದ್ದು ಮಾರ್ಗವನ್ನು ನೀವು ನಿರೀಕ್ಷಿಸುವಿರಿ.

ಮಕರ ರಾಶಿ: ಆರ್ಥಿಕತೆಯ ಕಾರಣಕ್ಕಾಗಿ ನೀವು ಹೆಚ್ಚು ಆತಂಕ ಪಡುವಿರಿ. ದಾಯದಿದಗಳ ಕಲಹವೂ ನಿಮ್ಮ ಅನಾರೋಗ್ಯಕ್ಕೆ ಪೂರಕವಾಗಿರುವುದು. ನಿಮ್ಮ ಉತ್ಸಾಹಕ್ಕೆ ಭಂಗವಾಗುವ ಸನ್ನಿವೇಶವು ನಿಮ್ಮ ಕಣ್ಣೆದುರಿಗೆ ನಡೆಯುವುದು. ಆಪತ್ಕಾಲಕ್ಕಾಗಿ ಕೂಡಿಟ್ಟ ಹಣವು ಇಂದು ತೆಗೆಯಬೇಕಾದೀತು. ನಿಮ್ಮ ಮುಂದಾಲೋಚನೆಯು ಅಸ್ಪಷ್ಟವಾಗಿ ಇರುವ ಕಾರಣ ಮನಸ್ಸಿಗೆ ಕಿರಿಕಿರಿ ಆಗಬಹುದು. ದೃಷ್ಟಿಯಲ್ಲಿ ದೋಷವು ಕಾಣಿಸಿಕೊವಲಳ್ಳಬಹುದು‌. ನಿಮ್ಮ ಅರೋಗ್ಯ ಸಮಸ್ಯೆಯನ್ನು ಆಪ್ತರ ಜೊತೆ ಹೇಳಿಕೊಳ್ಳಿ. ನಿಮ್ಮದೇ ಆದ ಯೋಜನೆಯನ್ನು ಮೊದಲೇ ಸಿದ್ಧಪಡಿಸಿಕೊಳ್ಳಿ. ದಾಂಪತ್ಯದ ಸುಖದಲ್ಲಿ ಮಕ್ಕಳನ್ನು ಮರೆಯದಿರಿ.

ಕುಂಭ ರಾಶಿ: ಸ್ವಯಂ ಕೃತ ತಪ್ಪಿನಿಂದ ಪಶ್ಚಾತ್ತಾಪ ಪಡಬೇಕಾಗುವುದು. ಸಂಗಾತಿಯ ವಿಚಾರದಲ್ಲಿ ನಿಮಗೆ ಬೇಸರವಾಗಬಹುದು. ನೀವಾಡುವ ಮಾತುಗಳಿಗೆ ಕುಟುಂಬವು ಉತ್ತರಿಸಬೇಕಾದೀತು. ಕ್ರೀಡೆಯಲ್ಲಿ ಉತ್ಸಾಹವು ಹೆಚ್ಚಿರಲಿದೆ. ಇಂದಿನ ನಿಮ್ಮ ಓಡಾಡವು ವ್ಯರ್ತಯವಸದೀತು. ನೀವು ಇಂದು ನಿಮ್ಮ ಬಳಿ ಇರುವ ಸಂಪತ್ತನ್ನು ತೋರಿಸುವುದು ಬೇಡ. ದೇಹವನ್ನು ಹೆಚ್ಚು ದಂಡಿಸಬೇಕಾಗುವುದು. ನಿಮ್ಮ ಜೀವನ ಶೈಲಿಯನ್ನು ಬದಲಿಸಿಕೊಳ್ಳುವುದು ಉತ್ತಮ. ಕಛೇರಿಯ ವ್ಯವಹಾರವನ್ನು ಅಲ್ಲಿಯೇ ಬಿಟ್ಟು ಬನ್ನಿ. ಸ್ನೇಹಿತರಿಗಾಗಿ ಧನವು ನಷ್ಟವಾಗುವುದು.‌ ಯಾರನ್ನೂ ಸಣ್ಣವರನ್ನಾಗಿ ತಿಳಿಯುವುದು ಬೇಡ. ಯಾರದೋ ಮೇಲಿನ ಭಯದಿಂದ ಗೌಪ್ಯ ವಿಚಾರವನ್ನು ಹೇಳುವಿರಿ.

ಮೀನ ರಾಶಿ: ನಿಮಗೆ ಇಂದು ನೀವು ಮಾಡುವ ಕೆಲಸದಲ್ಲಿ ತೃಪ್ತಿಯು ಸಿಗಲಿದೆ. ಸಂಗಾತಿಯ ಪ್ರೀತಿಯೂ ನಿಮಗೆ ಲಭ್ಯವಾಗುವುದು. ನೌಕರರ ಅಲಭ್ಯದಿಂದ ಉದ್ಯಮದಲ್ಲಿ ಲಾಭವು ಕಡಿಮೆ ಆಗುವುದು. ಸಣ್ಣ ವಿಚಾರಕ್ಕೆ ಬಂಧುಗಳ ಜೊತೆ ವಾಗ್ವಾದವನ್ನು ಮಾಡುವಿರಿ. ನೀವು ಅಧ್ಯಾತ್ಮದಿಂದ ಹೆಚ್ಚು ಪ್ರಭಾವಿತರಾಗಲಿದ್ದೀರಿ. ನಿಮ್ಮ ಚಂಚಲ ಮನಸ್ಸಿನಿಂದ ಮಾಡಿದ ನಿರ್ಧಾರವು ಕುಟುಂಬಕ್ಕೆ ಸಮಸ್ಯೆಯಾಗಿ ಪರಿಣಮಿಸಬಹುದು. ಅತಿಯಾದ ಭೋಜನವು ನಿಮಗೆ ಸಂಕಟ ಕೊಟ್ಟೀತು. ತಾಯಿಯ ಕಡೆಯ ಬಂಧುಗಳ ಸಹಾಯದಿಂದ ನೀವು ಸ್ವಂತ ವಾಹನವನ್ನು ಖರೀದಿಸುವಿರಿ. ಗಂಭೀರ ವಿಚಾರವನ್ನು ಲಘುವಾಗಿ ತೆಗೆದುಕೊಳ್ಳುವುವುದು ಬೇಡ. ಉದ್ಯೋಗಕ್ಕೆ ಸೇರಿ ನಿಮಗೆ ತೊಂದರೆಯಾಗಬಹುದು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು