Horoscope: ರಾಶಿಭವಿಷ್ಯ, ಈ ರಾಶಿಯವರು ದಾಂಪತ್ಯದ ಸುಖದಲ್ಲಿ ಮಕ್ಕಳನ್ನು ಮರೆಯದಿರಿ
ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 22) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.
ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 22) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಉತ್ತರಾಷಾಢ, ಯೋಗ: ಸುಕರ್ಮಾ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 26 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 07 ನಿಮಿಷಕ್ಕೆ, ರಾಹು ಕಾಲ ಸಂಜೆ 04:40 ರಿಂದ 06:08ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:17 ರಿಂದ 01:45ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:12 ರಿಂದ 04:40ರ ವರೆಗೆ.
ಧನು ರಾಶಿ: ತುರ್ತು ಹಣವು ಬೇಕಿದ್ದರಿಂದ ಸ್ನೇಹಿತರನ್ನು ಕೇಳುವಿರಿ. ಮನೆಯ ಕಾರ್ಯದಲ್ಲಿ ನಿಮ್ಮ ಇಡೀ ದಿನವು ಕಳೆದು ಹೋದುದ್ದು ಗೊತ್ತಾಗದೇ ಹೋಗಬಹುದು. ಧಾರ್ಮಿಕ ನಂಬಿಕೆಯು ನಿಮ್ಮಲ್ಲಿ ಜಾಗೃತವಾಗಬಹುದು. ದುರಭ್ಯಾಸದ ಕಾರಣ ಮರ್ಯಾದಿಯನ್ನು ಕಳೆದುಕೊಳ್ಳಬೇಕಾದೀತು. ಮಹಿಳೆಯರಿಗೆ ಸಹಾಯ ಮಾಡಲು ಹೋಗಿ ಅಪವಾದಕ್ಕೆ ಸಿಕ್ಕುವಿರಿ. ನಿಮ್ಮ ನಿರುದ್ಯೋಗಕ್ಕೆ ಸೂಕ್ತ ಪರಿಹಾರ ಸಿಗಲಿದೆ. ಅನಿರೀಕ್ಷಿತವಾಗಿ ಇಂದು ಮನೆಯಲ್ಲಿಯೇ ಕಛೇರಿಯ ಕಾರ್ಯವನ್ನು ಮಾಡಬೇಕಾಗುವುದು. ನಿಮ್ಮ ವ್ಯಕ್ತಿತ್ವವು ಗೌರವವನ್ನು ಹೆಚ್ಚಿಸುವುದು. ದುಃಖವನ್ನು ಹಂಚಿಕೊಂಡು ಕಡಿಮೆ ಮಾಡಿಕೊಳ್ಳುವಿರಿ. ಸ್ವತಂತ್ರ ಆಲೋಚನೆಯು ನಿಮಗೆ ಉಪಯುಕ್ತವಾಗಲಿದೆ.
ಮಕರ ರಾಶಿ: ಸಂಗಾತಿಯ ಜೊತೆಗಿನ ಕಲಹವು ನಿಮ್ಮ ಇಡೀ ದಿನವನ್ನು ಸರಿಯಾಗಿ ಕಳೆಯುವಂತೆ ಮಾಡದು. ದೂರಪ್ರಯಾಣವು ಆಯಾಸವನ್ನು ಕೊಡಬಹುದು. ಪಂಡಿತರ ಸಹವಾಸ ತೊರೆಯುವುದು. ಸಂಶೋಧನೆಯ ಮನಸ್ಸಿನಲ್ಲಿ ಇದ್ದರೆ ಹೊಸ ವಿಷಯವು ನಿಮ್ಮ ಮನಸ್ಸಿಗೆ ಬರಬಹುದು. ಆರ್ಥಿಕತೆಯು ದುರ್ಬಲವಾದ ಕಾರಣ ಆತಂಕವು ಉಂಟಾಗಬಹುದು. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮ್ಮ ಉತ್ಸಾಹಕ್ಕೆ ಭಂಗ ಬರುವುದು. ಆಪತ್ಕಾಲಕ್ಕಾಗಿ ಕೂಡಿಟ್ಟ ಹಣವು ಇಂದು ಖರ್ಚು ಮಾಡಬೇಕಾಗುವುದು. ಭವಿಷ್ಯದ ಬಗ್ಗೆ ಅಸ್ಪಷ್ಟತೆ ಇರುವ ಕಾರಣ ಮನಸ್ಸಿಗೆ ಕಿರಿಕಿರಿ ಇರುವುದು. ದೃಷ್ಟಿದೋಷಕ್ಕೆ ಸೂಕ್ತ ಔಷಧಿಯು ಸಿಗಲಿದೆ. ನಿಮ್ಮ ಅರೋಗ್ಯ ಸಮಸ್ಯೆಯನ್ನು ಆಪ್ತರ ಜೊತೆ ಚರ್ಚಿಸಿ. ದಾಂಪತ್ಯದ ಸುಖದಲ್ಲಿ ಮಕ್ಕಳನ್ನು ಮರೆಯದಿರಿ.
ಕುಂಭ ರಾಶಿ: ಶತ್ರುಬಾಧೆಯಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗುಬುದು. ನಿಮ್ಮ ಏಳ್ಗೆಯನ್ನು ಇತರರು ಸಹಿಸಿಕೊಳ್ಳುವುದು ಕಷ್ಟವಾಗುವುದು. ಯಾರ ಬಗ್ಗೆಯೂ ಸಲ್ಲದ ಮಾತನಾಡಿ ಸಿಕ್ಕಿಕೊಳ್ಳುವಿರಿ. ಸ್ವಯಂ ಕೃತ ಅಪರಾಧದಿಂದ ಪಶ್ಚಾತ್ತಾಪವಾಗುವುದು. ಸಂಗಾತಿಯ ವಿಷಯದಲ್ಲಿ ನಿಮಗೆ ಸಮಾಧಾನ ಇರದು. ನಿಮ್ಮ ಬಾಲಿಶ ಮಾತುಗಳಿಂದ ಇತರರು ನಕ್ಕಾರು. ಕ್ರೀಡೆಯಲ್ಲಿ ಉತ್ಸಾಹವು ತೋರುವಿರಿ. ಮನೆಯಲ್ಲಿ ಇಂದು ಸ್ನೇಹ ಕೂಟವು ಏರ್ಪಡುವುದು. ನಿಮ್ಮ ಬಳಿ ಇರುವ ಸಂಪತ್ತನ್ನು ಎಲ್ಲರಿಗೂ ಹೇಳಬೇಕಾದೀತು. ನಿಮ್ಮ ಜೀವನ ಶೈಲಿಯನ್ನು ಬದಲಿಸಿಕೊಳ್ಳುವಿರಿ. ಕಛೇರಿಯ ವ್ಯವಹಾರವನ್ನು ಮನೆಯಲ್ಲಿ ಚರ್ಚಿಸುವುದು ಬೇಡ. ಸ್ನೇಹಿತರಿಗಾಗಿ ಧನ ನಷ್ಟ ಮಾಡಿಕೊಳ್ಳುವಿರಿ.
ಮೀನ ರಾಶಿ: ನಿಮ್ಮ ಹಣವನ್ನು ಬಲಾತ್ಕಾರದಿಂದ ಪಡೆಯಬೇಕಾಗಬಹುದು. ಸ್ತ್ರೀಯರು ಸಂತೋಷದಿಂದ ದಿನ ಕಳೆಯುವಿರಿ. ಸಹೋದರರ ಪಾಲಿಗೆ ಬಂದ ಆಸ್ತಿಯು ನಿಮಗೆ ಸಿಗುವ ಸಾಧ್ಯತೆ ಇದೆ. ನಿಮಗೆ ಇಂದು ಧಾರ್ಮಿಕ ಕಾರ್ಯದಲ್ಲಿ ತೃಪ್ತಿಯು ಸಿಗಲಿದೆ. ಸಂಗಾತಿಯ ಪ್ರೀತಿಯು ನಿಮಗೆ ಅಚ್ವರಿಯಾಗಬಹುದು. ನೌಕರರಿಗೆ ಇಂದು ಸಂತೋಷವನ್ನು ಕೊಡುವಿರಿ. ಸಂತೋಷದ ನಡುವೆ ಯಾರನ್ನೂ ಬೇಸರಿಸುವುದು ಬೇಡ. ನಿಮ್ಮ ಅಧ್ಯಾತ್ಮ ಜೀವನದಿಂದ ಪ್ರಭಾವಿತರಾಗುವರು. ಅತಿಯಾದ ಭೋಜನದಿಂದ ಕಷ್ಟವಾದೀತು. ತಾಯಿಯ ಬಂಧುಗಳು ನಿಮಗೆ ಸಹಕಾರವನ್ನು ನೀಡಬಹುದು. ಮನೆಯ ಗಂಭೀರ ವಿಚಾರವನ್ನು ಲಘುವಾಗಿ ತೆಗೆದುಕೊಳ್ಳುವುದು ಬೇಡ.
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ