Horoscope: ಈ ರಾಶಿಯವರು ಸ್ವಂತ ಉದ್ಯಮದಲ್ಲಿ ನಷ್ಟವನ್ನು ಅನುಭವಿಸುವಿರಿ
ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 22) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.
ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 22 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ತುಲಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಪೂರ್ವಾಷಾಢ, ಯೋಗ: ಅತಿಗಂಡ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 28 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:55 ರಿಂದ 12:25 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:27 ರಿಂದ 04:57 ರವರೆಗೆ, ಗುಳಿಕ ಕಾಲ ಬೆಳಿಗ್ಗೆ 07:55 ರಿಂದ 09:24ರ ವರೆಗೆ.
ಧನು ರಾಶಿ : ಹಿರಿಯರ ಆಶೀರ್ವಾದವನ್ನು ಪಡೆದು ಕಾರ್ಯದಲ್ಲಿ ಪ್ರವೃತ್ತರಾಗುವಿರಿ. ಜಾಣ್ಮೆಯ ವ್ಯವಹಾರದಿಂದ ನಿಮಗೆ ಲಾಭವಾಗುವುದು. ವಿರೋಧಿಗಳು ನಿಮ್ಮ ಹತ್ತಿರ ಬರಲು ಹೆದರುವರು. ನಿಮ್ಮ ಗೌರವಕ್ಕೆ ಸಂಗಾತಿಯಿಂದ ತೊಂದರೆಯಾಗಬಹುದು. ನಿಮಗೆ ಅನೇಕ ಕಾರ್ಯಗಳು ಇರುವುದರಿಂದ ಸಮಯವನ್ನು ಹೊಂದಿಸಿಕೊಳ್ಳಲು ಅನಿವಾರ್ಯವಾಗುವುದು. ಇಂದು ಬೆಳಗಿನ ವಾಯುವಿಹಾರದಿಂದ ಆರೋಗ್ಯವು ಕೆಡಬಹುದು. ರಾಜಕೀಯವಾಗಿ ಬೆಳೆಯಲು ಬಹಳ ಆಸಕ್ತಿಯನ್ನು ತೋರುವಿರಿ. ಕಛೇರಿಯಲ್ಲಿ ಸ್ತ್ರೀಯರ ಅಲ್ಪ ಸಹಕಾರವು ಸಿಗುವುದು. ಸಂಗಾತಿಯ ಅನೇಕ ವಿಚಾರಗಳು ನಿಮಗೆ ತಿಳಿಯದೇ ಇರುವುದು. ಆಗಾಗ ಆರೋಗ್ಯದಲ್ಲಿ ಏರಿಳಿತವು ಆಗಲಿದ್ದು ವೈದ್ಯರ ಸಲಹೆಯನ್ನು ದೈವಜ್ಞರಿಂದ ಪರಿಹಾರವನ್ನೂ ಮಾಡಿರಿ.
ಮಕರ ರಾಶಿ : ವ್ಯಾಪಾರದಲ್ಲಿ ಸಾಧಾರಣ ಆದಾಯವು ಇದ್ದು ನಿಮಗೆ ಸಮಾಧಾನವಾಗುವುದು. ವಾಹನ ಖರೀದಿಯಲ್ಲಿ ಮೋಸವಾಗುವ ಸಂಭವವಿದೆ. ಮಕ್ಕಳ ಪ್ರಗತಿಯು ನಿಮಗೆ ಸಂತೋಷವನ್ನು ಕೊಡುವುದು. ಕಛೇರಿಯ ಕೆಲಸಗಳು ಒತ್ತಡದಿಂದ ಇರಲಿದೆ. ಸ್ವಂತ ಉದ್ಯಮದಲ್ಲಿ ನೀವು ನಷ್ಟವನ್ನು ಅನುಭವಿಸುವಿರಿ. ಉದ್ಯೋಗಕ್ಕೆ ಸಮಯವನ್ನು ಕೊಡಲಾಗದು. ಒತ್ತಡವು ಅಧಿಕವಿರಿಲಿ. ಹತ್ತಾರು ಜವಾಬ್ದಾರಿಗಳನ್ನು ವಹಿಸಿಕೊಳ್ಳುವಿರಿ. ಬೇರೆಯವರ ತಪ್ಪುಗಳನ್ನು ಹುಡುಕಿ ಹೇಳುವುದನ್ನು ಕಡಿಮೆ ಮಾಡಿ. ನಿಮ್ಮ ಅಹಂಕಾರವನ್ನು ಪ್ರದರ್ಶಿಸುವಿರಿ. ವಿದ್ಯಾಭ್ಯಾಸವು ಕಾರಣಾಂತರಗಳಿಂದ ನಿಲ್ಲುವುದು. ನಿಮ್ಮ ಸೋತ ಮನಸ್ಸಿಗೆ ಭರವಸೆಯನ್ನು ತುಂಬುವವರು ಬೇಕಾಗಿದ್ದಾರೆ. ಮನಸ್ಸು ಬಹಳ ದುರ್ಬಲಗೊಂಡು ನಕಾರಾತ್ಮಕ ಆಲೋಚನೆಯೇ ಹೆಚ್ಚು ಇರುವುದು.
ಕುಂಭ ರಾಶಿ : ನಮ್ಮ ಪ್ರಾಮಾಣಿಕತೆಗೆ ಉತ್ತಮ ಯಶಸ್ಸನ್ನು ಪಡೆಯುವಿರಿ. ಅಂದುಕೊಂಡ ಕಾರ್ಯಗಳು ಸುಗಮವಾಗಿ ಸಾಗಲಿದ್ದು ನೆಮ್ಮದಿಯು ಇರಲಿದೆ. ಸಿಟ್ಟಿನ ಮೇಲೆ ನಿಯಂತ್ರಣ ಬೇಕಾಗುವುದು. ನಿಮ್ಮ ಮೇಲೆ ಜವಾಬ್ದಾರಿಗಳು ಅಧಿಕವಾಗಲಿವೆ. ನಿಮ್ಮ ಮೇಲಿಟ್ಟ ನಂಬಿಕೆಯನ್ನು ನೀವು ಹುಸಿಗೊಳಿಸುವಿರಿ. ಉದ್ಯೋಗವು ಸಾಕೆನಿಸಿ ನೀವು ಹಿಸ ಉದ್ಯಮವನ್ನು ಆರಂಭಿಸುವ ಯೋಚನೆ ಇರುವುದು. ಆಸ್ತಿ ಖರೀದಿಯನ್ನು ಮಾಡಲು ಅವಕಾಶವು ಸಿಗಬಹುದು. ಅನಿರೀಕ್ಷಿತವಾಗಿ ಉಡುಗೊರೆಯನ್ನು ಆಪ್ತರಿಂದ ಪಡೆಯುವಿರಿ. ಇಷ್ಟಪಟ್ಟವರ ಭೇಟಿಯು ಮನಸ್ಸಿಗೆ ಹಿತವೆನಿಸುವುದು. ಮಕ್ಕಳ ವಿಚಾರದಲ್ಲಿ ಜವಾಬ್ದಾರಿಯು ಅಗತ್ಯವಾಗಿ ಬೇಕಾಗುವುದು.
ಮೀನ ರಾಶಿ : ನಿಮಗೆ ಅಂದಾಜು ಸಿಗದೇ ಇಂದಿನ ಹಣವು ಅಧಿಕವಾಗಿ ಖರ್ಚಾಗುವುದು. ಯಾವುದಾದರೂ ಒಪ್ಪಂದವನ್ನು ಮಾಡಿಕೊಳ್ಳುವಾಗ ಸ್ವಲ್ಪ ಚಿಂತನೆ ಮಾಡುವುದು ಅವಶ್ಯಕ. ವಾಹನದ ಉದ್ಯೋಗವನ್ನು ಮಾಡುತ್ತಿದ್ದರೆ ಲಾಭ ಗಳಿಸುವ ಸಾಧ್ಯತೆ ಇದೆ. ಇಂದು ನಿಮಗೆ ವೃತ್ತಿಯಲ್ಲಿ ಸಹಾಕಾರವು ಸಿಗದೇ ತೊಂದರೆಪಡುವಿರಿ. ನಿಮ್ಮ ಮನಸ್ಸು ಯಾವುದರಲ್ಲಿಯೂ ಸ್ಥಿರವಾಗಿ ಇರದೇ ಬಹಳ ಚಂಚಲವಾಗಿ ಇರುವುದು. ಸ್ನೇಹಿತರ ಜೊತೆ ಸಣ್ಣ ಕಾರಣಕ್ಕೆ ವಾಗ್ವಾದವೇ ಆಗಿ ಮನಸ್ಸು ಮುರಿಯಬಹುದು. ನಿಮಗೆ ವಿರೋಧಿಗಳ ಭಯವು ಕಾಡುವುದು. ಸಾಮಾಜಿಕ ಕೆಲಸದಲ್ಲಿ ಆಸಕ್ತಿಯು ಕಡಿಮೆ ಆಗುವುದು. ಕುಟುಂಬಕ್ಕೆ ನಿಮ್ಮ ಸಹಕಾರವು ಲಭ್ಯವಾಗದು.
-ಲೋಹಿತಶರ್ಮಾ – 8762924271 (what’s app only)