AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಈ ರಾಶಿಯವರು ಬಹಳ ಜಾಣ್ಮೆಯಿಂದ ಕಾರ್ಯವನ್ನು ಸಾಧಿಸುವಿರಿ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 23) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ಈ ರಾಶಿಯವರು ಬಹಳ ಜಾಣ್ಮೆಯಿಂದ ಕಾರ್ಯವನ್ನು ಸಾಧಿಸುವಿರಿ
ಜ್ಯೋತಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ|

Updated on: Aug 23, 2023 | 12:20 AM

Share

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 23) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಬ್ರಹ್ಮ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 49 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:43 ರಿಂದ 02:16ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:54 ರಿಂದ 09:28ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 11:01 ರಿಂದ 12:35ರ ವರೆಗೆ.

ಧನು ರಾಶಿ: ಸಹೋದರಿಯ ಸಹಾಯವು ನಿಮಗೆ ಸಿಗಲಿದ್ದು ನಿಮ್ಮ‌ ಜವಾಬ್ದಾರಿಯೂ ಹೆಚ್ಚಾಗಲಿದೆ. ಭೂಮಿಯ ವ್ಯವಹಾರವು ಸುಗಮವಾಗಿ ಸಾಗುವುದು. ಆರ್ಥಿಕ ಸಮಸ್ಯೆಯನ್ನು ನೀವು ದೂರ ಮಾಡಿಕೊಳ್ಳುವಿರಿ. ಮಕ್ಕಳ ವಿದ್ಯಾಭ್ಯಾಸಕ್ಕೆ ಹಣವನ್ನು ಹೊಂದಿಸುವಿರಿ. ನಿಮ್ಮ ಮಾತಿನಿಂದ ಸಂಗಾತಿಯು ಕೋಪಗೊಳ್ಳಬಹುದು. ಬಂಧುಗಳು ನಿಮ್ಮಿಂದ ಅರ್ಥಿಕ ಸಹಾಯವನ್ನು ಬಯಸಿದ್ದರೂ ಕೇಳಲು ಹಿಂದೇಟು ಹಾಕುವರು. ಕೃಷಿಯಲ್ಲಿ ನಿಮಗೆ ಆಸಕ್ತಿಯು ಹೋಗಬಹುದು. ಮಕ್ಕಳ ಜೊತೆಗೆ ಕಳೆಯುವ ನಿಮ್ಮ ಸಮಯವು ಬಹಳ ಆಪ್ತವಾಗಿರುವುದು. ಶುಭವಾರ್ತೆಯ ನಿಮ್ಮ ಉತ್ಸಾಹವನ್ನು ಹೆಚ್ಚಿಸುವುದು.

ಮಕರ ರಾಶಿ: ಮಾನಸಿಕ ಕಿರಿಕಿರಿಯನ್ನು ನೀವು ದೂರ ಮಾಡಿಕೊಳ್ಳಿ. ಬಹಳ ಜಾಣ್ಮೆಯಿಂದ ಕಾರ್ಯವನ್ನು ಸಾಧಿಸುವಿರಿ. ನಿರೀಕ್ಷಿತ ಸ್ಥಾನವನ್ನು ನೀವು ಪಡೆದುಕೊಳ್ಳುವಿರಿ. ಸಹೋದ್ಯೋಗಿಗಳ ಸಹಕಾರವು ನಿಮಗೆ ಸಿಗುವುದು. ನಿಮ್ಮ ಸಾಮರ್ಥ್ಯವು ಇತರರಿಗೂ ತಿಳಿಯವಹದು. ದೇವತಾರಾಧನೆಗೆ ತಿಳಿದವರ ಜೊತೆ ಚರ್ಚಿಸಿ. ಹಣವನ್ನು ಕಳೆದುಕೊಳ್ಳುವ ಸನ್ನಿವೇಶವು ಬರಬಹುದು. ಬೇಡದ ಮಾತುಕತೆಯಲ್ಲಿ ಇಂದಿನ‌ ದಿನ‌ವು ಕಳೆಯುವುದು.‌ ನಿಮ್ಮದೇ ವಸ್ತುವಾದರೂ ನಿಮಗೆ ಬೇಕಾದ ಸಮಯಕ್ಕೆ ಲಭ್ಯವಾಗದು ಕಛೇರಿಯಲ್ಲಿ ಒತ್ತಡವಿರಲಿದ್ದು ಎಲ್ಲರನ್ನೂ ನೀವು ದೂರುವಿರಿ. ನಿಮ್ಮ ಸಂತೋಷಕ್ಕಾಗಿ ಇನ್ನೊಬ್ಬರ ಸಂತೋಷವನ್ನು ಹರಣ ಮಾಡುವಿರಿ.

ಕುಂಭ ರಾಶಿ: ನಿಮ್ಮವರು ನಿಮ್ಮ ಕೆಲಸವನ್ನು ಸರಿಯಾಗಿ ಮಾಡಲು ಬಿಡರು. ನಿಮ್ಮ ಮಾತು ಇನ್ನೊಬ್ಬರಿಗೆ ಬೇಸರವನ್ನು ತರಿಸೀತು. ಮಕ್ಕಳ ವಿಚಾರದಲ್ಲಿ ನೀವು ಸಹಕಾರ ಕೊಡುವಿರಿ. ವಸ್ತುಗಳ ಖರೀದಿಯಲ್ಲಿ ಜಾಗರೂಕತೆ ಇರಲಿ. ಪರೀಕ್ಷಿಸಿ ಖರೀದಿಸುವುದು ಉತ್ತಮ. ಹೊಸ ಉದ್ಯೋಗಕ್ಕೆ ನಿಮಗೆ ಅವಕಾಶವು ಪ್ರಾಪ್ತವಾಗಬಹುದು. ಉದ್ಯೋಗಕ್ಕೆ ಸೇರುವ ತಯಾರಿಯಲ್ಲಿ ನೀವು ಇರಬೇಕಾದೀತು. ಏಕಾಂತಕ್ಕೆ ನೀವು ಹೆಚ್ಚಿನ ಒತ್ತನ್ನು ಕೊಡುವಿರಿ. ಸಹೋದರರ ನಡುಯವೆ ವಾಗ್ವಾದವು ಆಗಬಹುದು. ವಿದ್ಯಾಭ್ಯಾಸವು ನಿಮಗೆ ಸಾಕು ಎನಿಸಬಹುದು. ಯಾರದೋ ಒತ್ತಾಯಕ್ಕೆ ನೀವು ಇಷ್ಟವಿಲ್ಲದ ಕೆಲಸಕ್ಕೆ ಸೇರಿಕೊಳ್ಳುವಿರಿ. ಶನಿಯ ಪ್ರಭಾವವು ನಿಮ್ಮ ಮೇಲೆ ಅತಿಯಾದ ಪರಿಣಾಮವನ್ನು ಬೀರುವುದು.

ಮೀನ ರಾಶಿ: ಬರಬೇಕಾದ ಹಣವನ್ನು ನೀವು ಪಡೆದುಕೊಳ್ಳುವಿರಿ. ನಿಮ್ಮ ಇಂದಿನ ಕೆಲಸಗಳು ಅಡೆತಡೆ ಇಲ್ಲದೇ ಸಾಗುವುದು. ವಾಹನ ಖರೀದಿಗೆ ಹಣವನ್ನು ಹೊಂದಿಸುವಿರಿ. ಅಪಘಾತ ಭೀತಿಯು ನಿಮ್ಮನ್ನು ಹೆಚ್ಚು ಕಾಡುವುದು. ನಿಮಗೆ ಸಂಬಂಧವಿಲ್ಲದೇ ಇರುವ ವಿಚಾರಕ್ಕೆ ಯೋಚಿಸುವಿರಿ. ನಿಮ್ಮ ಬುದ್ಧಿಯು ನಕಾರಾತ್ಮಕ ವಿಚಾರಗಳಿಗೆ ಹೆಚ್ಚು ಸ್ಪಂದಿಸುವುದು. ಸ್ನೇಹಕ್ಕೆ ನೀವು ಬೆಲೆಯನ್ನು ಕೊಡುವಿರಿ. ಬಂಧುಗಳ ಭೇಟಿಗೆ ದೂರಪ್ರಯಾಣವನ್ನು ಮಾಡಲಿದ್ದೀರಿ. ರಾಜಕೀಯ ವಿಚಾರಗಳಿಗೆ ಹೆಚ್ಚು ಸಮಯವನ್ನು ಕೊಡುವಿರಿ. ಮೇಲಧಿಕಾರಿಗಳ ಭೇಟಿಯಾಗವ ಸಾಧ್ಯತೆ ಇದೆ.

-ಲೋಹಿತಶರ್ಮಾ – 8762924271 (what’s app only)

ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ