Horoscope: ರಾಶಿಭವಿಷ್ಯ, ನಿಮ್ಮಿಂದ ಇಂದು ನಡೆಯುವ ತಪ್ಪಿಗೆ ನೀವೇ ಕಾರಣರಾಗುವಿರಿ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 23) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ, ನಿಮ್ಮಿಂದ ಇಂದು ನಡೆಯುವ ತಪ್ಪಿಗೆ ನೀವೇ ಕಾರಣರಾಗುವಿರಿ
ದಿನಭವಿಷ್ಯ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Oct 23, 2023 | 12:45 AM

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 23) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ದಶಮೀ, ನಿತ್ಯನಕ್ಷತ್ರ:ಶ್ರವಣ, ಯೋಗ: ಧೃತಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 26 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 07 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:54 ರಿಂದ 09:22ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:49 ರಿಂದ 12:17ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:44 ರಿಂದ 03:12ರ ವರೆಗೆ.

ಧನು ರಾಶಿ: ಕಛೇರಿಯ ಗೌಪ್ಯವಾದ ಕಾರ್ಯಕ್ಕೆ ನಿಮ್ಮನ್ನು ಬಳಸಿಕೊಳ್ಳುವಿರಿ. ವ್ಯಾಪಾರದಲ್ಲಿ ಚಾಣಕ್ಷತೆಯಿಂದ ಲಾಭವನ್ನು ಪಡೆಯುವಿರಿ. ಗ್ರಾಹಕರಿಗೆ ಅನುಕೂಲವಾಗುವಂತೆ ನಡೆದುಕೊಳ್ಳುವಿರಿ. ಸಾಹಿತ್ಯ ಕ್ಷೇತ್ರದಲ್ಲಿ ನಿಮ್ಮನ್ನು ಗುರುತಿಸುವರು. ನಿಮ್ಮ‌ ವರ್ತನೆಯನ್ನು ಬದಲಿಸಿಕೊಳ್ಳಬೇಕು ಎನಿಸುವುದು. ಸಹೋದರಿಯ ಜವಾಬ್ದಾರಿಯೂ ನಿಮಗೆ ಬರಲಿದ್ದು ನಿಮ್ಮ‌ ಜವಾಬ್ದಾರಿ ಹೆಚ್ಚಾಗುವುದು. ಭೂಮಿಯ ವ್ಯವಹಾರವು ಪಾಲುದಾರರ ಸಹಕಾರದಿಂದ ಸುಗಮವಾಗಿ ಸಾಗಲಿದೆ. ಆರ್ಥಿಕ ಸಮಸ್ಯೆಯನ್ನು ಹೆಚ್ಚಿಸಿಕೊಳ್ಳುವಿರಿ. ಮಕ್ಕಳ ವಿದ್ಯಾಭ್ಯಾಸಕ್ಕೆ ಹಣವನ್ನು ಹಿಂದಿಸುವುದು ಕಷ್ಟವಾದೀತು. ನಿಮ್ಮ ಮಾತಿನಿಂದ ಸಂಗಾತಿಯು ಸಿಟ್ಟಾಗುವರು. ನಿಮ್ಮ ಕಡೆಯಿಂದ ಬಂಧುಗಳು ಅರ್ಥಿಕ ಸಹಾಯವನ್ನು ಕೇಳಲು ಹಿಂದೇಟು ಹಾಕುವರು. ಕೃಷಿಯಲ್ಲಿ ನಿಮಗೆ ಆಸಕ್ತಿಯು ಕಡಿಮೆ‌ ಆದಂತೆ ತೋರುವುದು. ಮಕ್ಕಳ ಜೊತೆಗೆ ಕಳೆಯುವ ಸಮಯವು ಬಹಳ ಆಪ್ತವೆನಿಸುವುದು.

ಮಕರ ರಾಶಿ: ಅನಿರೀಕ್ಷಿತವಾಗಿ ಕನಸನ್ನು ಸಾಕಾರಗೊಳಿಸಿಕೊಳ್ಳುವಿರಿ. ಜಾಣ್ಮೆಯಿಂದ ಮಾಡಿದ ವ್ಯವಹಾರಕ್ಕೆ ಪ್ರಶಂಸೆ ಸಿಗಲಿದೆ. ಶಿಸ್ತನ್ನು ಬಿಡದೇ ಪಾಲಿಸುವುದು ನಿಮಗೆ ಗೌರವವನ್ನು ತಂದು ಕೊಡುವುದು. ಅಲಂಕಾರಿಕ ವಸ್ತುಗಳ ಖರೀದಿಯಿಂದ ಲಾಭವಾಗಲಿದೆ. ಹಲವು ಪ್ರಯತ್ನದ ಬಳಿಕ ಮಾನಸಿಕ ಕಿರಿಕಿರಿಯನ್ನು ನೀವು ದೂರ ಮಾಡಿಕೊಳ್ಳುವಿರಿ. ನಿರೀಕ್ಷಿತ ಸ್ಥಾನವನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ. ಸಹೋದ್ಯೋಗಿಗಳ ಸಹಕಾರವು ಸಿಗಬಹುದು. ನಿಮ್ಮ ವಿದ್ಯಾಭ್ಯಾಸವನ್ನು ಕಂಡು ಆಚ್ವರಿಯಾಗಬಹುದು. ದೇವತಾರಾಧನೆಗೆ ತಿಳಿದವರ ಜೊತೆ ಚರ್ಚಿಸುವುದು ಸೂಕ್ತ. ಹಣದ ದುಂದುವೆಚ್ಚಕ್ಕೆ ಕಡಿವಾಣ ಹಾಕಿಕೊಳ್ಳಿ. ಪ್ರಯೋಜನವಿಲ್ಲದ ಮಾತುಕತೆಯಲ್ಲಿ ದಿನ‌ವನ್ನು ಕಳಯುವಿರಿ.‌ ನಿಮ್ಮದೇ ವಸ್ತುವಾದರೂ ನಿಮಗೆ ಬೇಕಾದ ಸಮಯಕ್ಕೆ ಲಭ್ಯವಾಗದು.

ಕುಂಭ ರಾಶಿ: ಇಂದು ಮುಖ್ಯ ಕಾರ್ಯದಲ್ಲಿ ತೊಡಗುವುದು ಅಸಾಧ್ಯವಾಗಬಹುದು. ನಿಮ್ಮಿಂದ ಇಂದು ನಡೆಯುವ ತಪ್ಪಿಗೆ ನೀವೇ ಕಾರಣರಾಗುವಿರಿ. ಸಮಯದ ಹೊಂದಾಣಿಕೆಯಿಂದ ಕಾರ್ಯವನ್ನು ಸಾಧಿಸಬಹುದು. ನಿಮ್ಮ ಒರಟಾದ ಮಾತು ಇನ್ನೊಬ್ಬರಿಗೆ ಬೇಸರವನ್ನು ಕೊಡುವುದು. ವಸ್ತುಗಳ ಖರೀದಿಗೆ ಹಣವನ್ನು ಖರ್ಚು ಮಾಡಬಹುದು. ಪರೀಕ್ಷಿಸಿ ಖರೀದಿಸಿ. ಹೊಸ ಉದ್ಯೋಗಕ್ಕೆ ಅವಕಾಶವು ಪ್ರಾಪ್ತವಾಗಲಿದೆ. ಹೊಸ ಉದ್ಯೋಗವನ್ನು ಉತ್ಸಾಹದಿಂದ ಮಾಡುವಿರಿ. ಏಕಾಂತದಲ್ಲಿ ಇರುವುದು ನಿಮಗೆ ಇಷ್ಟವಾಗುವುದು. ಸಹೋದರಿಯ ನಡುವೆ ವಾಗ್ವಾದ ಮಾಡುವಿರಿ. ಆಸ್ತಿಯ ವಿಚಾರದಲ್ಲಿ ಬೇಸರವಿರಲಿದೆ. ಒತ್ತಾಯಕ್ಕೆ ಮಣಿದು ಇಷ್ಟವಿಲ್ಲದ ಕೆಲಸವನ್ನು ಮಾಡುವಿರಿ. ನಿಮ್ಮ ಬಗ್ಗೆ ಹಿಂದಿನಿಂದ‌ ಮಾತನಾಡಿಕೊಳ್ಳುವುದು ಗೊತ್ತಾದೀತು.

ಮೀನ ರಾಶಿ: ಮಕ್ಕಳಿಗೆ ಬೇಕಾದ ವಿದ್ಯಾಭ್ಯಾಸವನ್ನು ಕೊಡಲು ಸಾಲ ಮಾಡಬೇಕಾದೀತು. ಆದಾಯದ ಮೂಲವು ಬದಲಾಗಬಹುದು. ‌ನಿಮ್ಮನ್ನು ಅಪಹಾಸ್ಯ ಮಾಡುವವರಿಗೆ ಪ್ರತ್ಯುತ್ತರ ನೀಡುವಿರಿ. ಕಾನೂನಿಗೆ ಸಂಬಂಧಿಸಿದಂತೆ ಹೆಚ್ಚಿನ ಓಡಾಟವಾಗಬಹುದು. ಬರಬೇಕಾದ ಹಣವನ್ನು ನೀವು ಬಹಳ ಶ್ರಮದಿಂದ ಪಡೆಯಬೇಕಾಗಬಹುದು. ನಿಮ್ಮ ಇಂದಿನ ಕೆಲಸಗಳು ಅಡೆತಡೆಯ ನಡೆವೆಯೂ ಮಾಡಿಕೊಳ್ಳುವಿರಿ. ವಾಹನ ಖರೀದಿಗೆ ಹಣವನ್ನು ಹೊಂದಿಸುವುದು ಸವಾಲಾಗಬಹುದು. ಅಪಘಾತ ಭೀತಿಯು ಕಾಡುವುದು. ನಿಮಗೆ ಸಂಬಂಧವಿಲ್ಲದೇ ಇರುವ ವಿಚಾರಕ್ಕೆ ಮಧ್ಯ ಪ್ರವೇಶ ಬೇಡ. ನಿಮ್ಮ ಬುದ್ಧಿಯು ನಕಾರಾತ್ಮಕ ವಿಚಾರವನ್ನೇ ಯೋಚಿಸುವುದು. ಬಂಧುಗಳ ಭೇಟಿಗೆ ದೂರಪ್ರಯಾಣವನ್ನು ಮಾಡುವಿರಿ.

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?