AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ರಾಶಿಭವಿಷ್ಯ, ಈ ರಾಶಿಯವರು ಮನೆತನದ ಗೌರವವನ್ನು ಹೆಚ್ಚಿಸಲಿದ್ದಾರೆ

ಧನುಸ್ಸು, ಮಕರ, ಕುಂಭ, ಮೀನಾ ರಾಶಿಯವರ ಜುಲೈ 24 ರ ಸೋಮವಾರದ ದಿನ ಭವಿಷ್ಯದ ಮಾಹಿತಿ ಇಲ್ಲಿದೆ. ಧನು ರಾಶಿಯವರಿಗೆ ಇಂದು ಅನಾರೋಗ್ಯ ಕಾಡುವ ಸಾಧ್ಯತೆ ಇದ್ದು, ಇದರಿಂದಾಗಿ ದಿನಚರಿ ಬದಲಿಸಿಕೊಳ್ಳಲಿದ್ದಾರೆ. ಮಕರ ರಾಶಿಯವರನ್ನು ಮನಸ್ಸಿನ ಹತ್ತಾರು ಭಾವನೆಗಳು ಕಾಡಿಸಬಹುದು.

Horoscope Today: ರಾಶಿಭವಿಷ್ಯ, ಈ ರಾಶಿಯವರು ಮನೆತನದ ಗೌರವವನ್ನು ಹೆಚ್ಚಿಸಲಿದ್ದಾರೆ
ಇಂದಿನ ದಿನಭವಿಷ್ಯImage Credit source: Getty Images
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: Rakesh Nayak Manchi|

Updated on: Jul 24, 2023 | 12:45 AM

Share

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಕೆಲವರು ಬೆಳಗ್ಗೆ ಎದ್ದ ಕೂಡಲೇ ರಾಶಿ ಭವಿಷ್ಯ (Daily horoscope) ತಪ್ಪದೇ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯದಿಂದ ತಿಳಿದುಕೊಳ್ಳುತ್ತಾರೆ. ಅದರ ಜೊತೆಗೆ ನಿತ್ಯಪಂಚಾಂಗ ಕೂಡ ಓದುತ್ತಾರೆ. ಹಾಗಾದರೆ ಇಂದಿನ (2023 ಜುಲೈ 24) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ?, ಯಾರಿಗೆ ಲಾಭ?, ಯಾರಿಗೆ ನಷ್ಟ?, ಯಾರಿಗೆ ಶುಭ, ಅಶುಭ? ಇಲ್ಲಿ ನೋಡಿ ನಿಮ್ಮ ಭವಿಷ್ಯ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಚಿತ್ರಾ, ಯೋಗ: ಶಿವ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 14 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:51 ರಿಂದ 09:27 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 11:03 ರಿಂದ ಮಧ್ಯಾಹ್ನ 12:39ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:15 ರಿಂದ 03:51ರ ವರೆಗೆ.

ಧನುಸ್ಸು: ಅನಾರೋಗ್ಯದ ಕಾರಣ ನಿಮ್ಮ ದಿನಚರಿಯನ್ನು ಬದಲಿಸಿಕೊಳ್ಳುವಿರಿ. ಬಂಧುಗಳು ನಿಮ್ಮ ಬಗ್ಗೆ ಆಡಿಕೊಂಡಾರು. ನಿಮ್ಮ ಶ್ರಮವು ಯುಕ್ತಿಯಿಂದ ಇರಲಿ. ಧನಾತ್ಮಕ ಚಿಂತನೆಯನ್ನು ಪ್ರಯತ್ನಪೂರ್ವಕವಾಗಿ ಮಾಡಿಕೊಳ್ಳುವಿರಿ. ನಿದ್ರೆಯನ್ನು ಮಾಡಲಾಗದೇ ಕಷ್ಟಪಡುವಿರಿ. ಮನೆತನದ ಗೌರವವನ್ನು ಹೆಚ್ಚಿಸುವಿರಿ. ಕಳೆದುಕೊಂಡದ್ದು‌ ನಿಮಗೆ ಬಹಳ ಬೇಸರವನ್ನು ತರಿಸಬಹುದು. ಧನಲಾಭದ ನಿರೀಕ್ಷೆಯಲ್ಲಿ ನೀವು ಇರುವಿರಿ. ಸಂಗಾತಿಯ ನಡೆಯನ್ನು ಅನುಮಾನಿಸುವಿರಿ. ಗೊಂದಲವನ್ನು ಕಡಿಮೆ‌ ಮಾಡಿಕೊಳ್ಳಲು ಪ್ರಯತ್ನಿಸಿ.

ಮಕರ: ದುಂದುವೆಚ್ಚವನ್ನು ಮಾಡಿಕೊಳ್ಳಲಿದ್ದೀರಿ. ನಿಮ್ಮವರ ಪ್ರೀತಿಯು ನಿಮ್ಮ ಮೇಲೆ ಕಡಿಮೆ ಆದಂತೆ ಅನ್ನಿಸಬಹುದು. ಕೃಷಿಯಲ್ಲಿ ಲಾಭಗಳಿಸುವ ಯೋಜನೆಯನ್ನು ಕಂಡುಕೊಳ್ಳುವಿರಿ. ಮಕ್ಕಳ ಬಗ್ಗೆ ಇರುವ ನಿಮ್ಮ ಚಿಂತೆ ದೂರಾಗಬಹುದು. ಹಣವನ್ನು ಗಳಿಸುವ ಹಂಬಲವು ಅದಕ್ಕಾಗಿ ಮಾರ್ಗವನ್ನೂ ಗಮನಿಸಿಕೊಳ್ಳಿ. ಸಹೋದರರ ನಡುವಿನ‌ ಬಾಂಧವ್ಯವು ಸಡಿಲಾಗಬಹುದು.‌ ಆಗಾಗ ಮಾತನಾಡುತ್ತ ಸಂಬಂಧವನ್ನು ಗಟ್ಟಿಮಾಡಿಕೊಳ್ಳಿ. ಕೆಲಸವನ್ನು ಸಮಯದ ಮಿತಿಯಲ್ಲಿ ಮಾಡುವುದು ಕಷ್ಟವಾದೀತು. ಮನಸ್ಸಿನ ಹತ್ತಾರು ಭಾವನೆಗಳು ನಿಮ್ಮನ್ನು ಕಾಡಿಸಬಹುದು.

ಕುಂಭ: ಅನಾರೋಗ್ಯದ ಕಾರಣದಿಂದ ನೀವು ಪ್ರಯಾಣವನ್ನು ಬದಲಾಯಿಸುವಿರಿ. ಚೋರಭೀತಿಯು ಇಂದು ಇರಲಿದೆ. ಸಜ್ಜನರಿಗೆ ಕೆಲವು ಅಪವಾದಗಳು ಬರಬಹುದು. ನಿಮ್ಮ ತಾಳ್ಮೆಯ ವರ್ತನೆಯಿಂದ ಸಂಕಟವನ್ನು ದೂರ ಮಾಡಿಕೊಳ್ಳುವಿರಿ. ಕಲಿಕೆಯಲ್ಲಿ ಹೊಸತನವನ್ನು ತಂದುಕೊಳ್ಳುವಿರಿ. ಪುತ್ರೋತ್ಸವದಲ್ಲಿ ನೀವು ಭಾಗಿಯಾಗುವಿರಿ. ವಿದೇಶಪ್ರಯಾಣವನ್ನು ಮಾಡುವ ಮನಸ್ಸುಳ್ಳವರಿದ್ದೀರಿ. ಪ್ರಾಮಾಣಿಕ ಪ್ರಯತ್ನವನ್ನು ನೀವು ಮಾಡಲಿದ್ದೀರಿ. ಪುಣ್ಯಸ್ಥಳಗಳಿಗೆ ಹೋಗುವಿರಿ. ನಿಮಗೆ ಸಿಗಾಬೇಕಾದುದ್ದು ಸಿಕ್ಕಿಯೇ ಸಿಗುತ್ತದೆ ಎಂಬ ನಂಬಿಕೆ ಇರಲಿದೆ‌.

ಮೀನ: ಕಾನೂನಿಗೆ ವಿರುದ್ಧವಾದ ವ್ಯವಹಾರವು ನಿಮಗೆ ತೊಡಕನ್ನು ಉಂಟುಮಾಡುವುದು. ಆಪ್ತರು ನಿಮ್ಮಿಂದ ದೂರವಾಗಲಿದ್ದು ಆ ವೇದನೆಯನ್ನು ನೀವು ಸಹಿಸಲಾರಿರಿ. ವಿದ್ಯಾರ್ಥಿಗಳು ಅಡ್ಡದಾರಿಯಲ್ಲಿ ಹೋಗುವ ಸಾಧ್ಯತೆ ಇದೆ. ಮಾರ್ಗದರ್ಶನದ ಅವಶ್ಯಕತೆ ಹೆಚ್ಚು ಇರಲಿದೆ. ಸ್ವಾವಂಬಿಯಾಗಲು ನೀವು ಬಹುವಾಗಿ ಇಚ್ಛಿಸುವಿರಿ. ಸಿಟ್ಟನ್ನು ಕಡಿಮೆ ಮಾಡಿಕೊಂಡು ಎಲ್ಲವನ್ನೂ ಸ್ವೀಕರಿಸಿದರೆ ನಿಮಗೆ ಯಶಸ್ಸು ಸಿಗಲಿದೆ. ಸ್ಥಾನಮಾನಗಳೂ ನಿಮ್ಮನ್ನು ಹುಡುಕಿಕೊಂಡು ಬಂದಾವು. ಕಲಾವಿದರು ತಮ್ಮ ಪ್ರತಿಭೆಯನ್ನು ಪ್ರದರ್ಶನ ಮಾಡುವರು.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?