AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಆಸ್ತಿ ಮಾರಾಟಕ್ಕೆ ಹೆಚ್ಚು ತಿರುಗಾಟ, ಆಕಸ್ಮಿಕ ಧನಪ್ರಾಪ್ತಿ ಸಾಧ್ಯತೆ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 24) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ, ಆಸ್ತಿ ಮಾರಾಟಕ್ಕೆ ಹೆಚ್ಚು ತಿರುಗಾಟ, ಆಕಸ್ಮಿಕ ಧನಪ್ರಾಪ್ತಿ ಸಾಧ್ಯತೆ
ಪ್ರಾತಿನಿಧಿಕ ಚಿತ್ರImage Credit source: iStock Photo
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 24, 2023 | 12:20 AM

Share

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 24) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಶೂಲ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 26 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 06 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:12 ರಿಂದ 04:39ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:22 ರಿಂದ 10:49ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:17 ರಿಂದ 01:44ರ ವರೆಗೆ.

ಧನು ರಾಶಿ: ಇಂದು ಆಸ್ತಿಯ ಮಾರಾಟಕ್ಕೆ ಸಂಬಂಧಿಸಿದಂತೆ ಹೆಚ್ಚು ತಿರುಗಾಟ ಮಾಡಬೇಕಾಗುವುದು. ಮಕ್ಕಳ ವಿದ್ಯಾಭ್ಯಾಸದ ಖರ್ಚನ್ನು ನೋಡಿಕೊಳ್ಳಲು ಹೋಗಿ ನಿಮ್ಮ ಆರ್ಥಿಕತೆಯು ಹಿಂದಡಿ ಇಡಬಹುದು. ಆಕಸ್ಮಿಕ ಧನಪ್ರಾಪ್ತಿಯಿಂದ ಹರ್ಷಗೊಳ್ಳುವಿರಿ. ಶ್ರೇಷ್ಠ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ವಿದ್ಯಾರ್ಥಿಗಳು ಯಾರ ಬೆಂಬಲಕ್ಕೂ ಕಾಯದೇ ನಿಮ್ಮ ಪ್ರತಿಭೆಯ ಪ್ರದರ್ಶನಕ್ಕೆ ಮುನ್ನುಗ್ಗುವುದು ಸೂಕ್ತ. ನಿಮಗೆ ಇಷ್ಟವಾದ ವಿಚಾರವನ್ನು ತಕ್ಷಣ ಪಡೆಯುವಿರಿ. ಉದ್ಯೋಗವಿಲ್ಲವೆಂಬುದು ನಿಮಗೆ ಅವಮಾನದ ಸಂಗತಿಯಾಗಲಿದೆ. ಸಿಕ್ಕ ಅವಕಾಶವನ್ನು ಸದ್ಯ ಬಳಸಿಕೊಳ್ಳಿ. ನಿಮ್ಮ‌ ನಕಾರಾತ್ಮಕ ಆಲೋಚನೆಗಳಿಂದ ಕುಟುಂಬದ ಆಲೋಚನೆಯನ್ನು ಕೆಡಿಸುವಿರಿ. ನಿಮ್ಮವರನ್ನು ಅವರಷ್ಟಕ್ಕೆ ಬಿಟ್ಟು ಬಿಡಿ. ಅಪರಿಚಿತರು ನಿಮ್ಮ ಉದ್ಯೋಗಕ್ಕೆ ಸಂಬಂಧಿಸಿದಂತೆ ಸಲಹೆಯನ್ನು ಕೊಡಬಹುದು.‌ ಪ್ರೀತಿಪಾತ್ರರ ಭೇಟಿಯಿಂದ ಖುಷಿಪಡುವಿರಿ.

ಮಕರ ರಾಶಿ: ಇಂದು ಸ್ತ್ರೀಯರಿಗೆ ಮಾನಿಸಿಕವಾದ ಕಿರಿಕಿರಿ ಇರಲಿದ್ದು ತೊಂದರೆಯಾಗಬಹುದು. ಯಂತ್ರೋತ್ಪನ್ನಗಳ ತಯಾರಿಯಲ್ಲಿ ಹಿನ್ನಡೆಯಾಗಬಹುದು. ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ಪಡೆಯುವಿರಿ. ವೈಯಕ್ತಿಕ‌ ಕೆಲಸಗಳು ಬಹಳಷ್ಟು ಇದ್ದು, ಮಾಡಲು ಸಮಯ ಸಾಲದು. ಮಿತ್ರರ ಸಹಾಯದಿಂದ ನಿಮಗೆ ಧನ ಸಹಾಯವು ಸಿಗಬಹುದು. ಸಾರ್ವಜನಿಕವಾಗಿ ಅವಮಾನವಾಗುವ ಸಾಧ್ಯತೆ ಇದೆ. ನಿಮಗೆ ಪರಿಚಿತರನ್ನು ಆಪ್ತರನದನಾಗಿ ಮಾಡಿಕೊಳ್ಳುವಿರಿ. ಸಂಗಾತಿಯ ಭಾವನೆಗಳಿಗೆ ಸ್ಪಂದಿಸದಿದ್ದರೆ ನಿಮ್ಮ ಮೇಲೆ ಕೋಪಗೊಳ್ಳುವರು. ನಿಮ್ಮ‌ಇಂದಿನ‌ ಸಂಪಾದನೆಯನ್ನು ಮನೆಯ ಬಳಕೆಗೆ ನೀಡುವಿರಿ. ಗೆಳೆತನದಿಂದ ಸಲ್ಲದ ಮಾತುಗಳು ನಿಮ್ಮ ಬಗ್ಗೆ ಬರಬಹುದು.

ಕುಂಭ ರಾಶಿ: ಮನೆಯಲ್ಲಿ ನಡೆಯುವ ಶುಭ ಕಾರ್ಯಕ್ಕೆ ಹೆಚ್ಚು ಖರ್ಚಾಗಬಹುದು. ನಿಮ್ಮ ಅಂದಾಜು ಮೀರಬಹುದು. ಆದಾಯಕ್ಕೆ ನಾನಾ ಮೂಲವನ್ನು ಆಯ್ಕೆ ಮಾಡಿಕೊಳ್ಳುವಿರಿ. ಆಕಸ್ಮಿಕವಾಗಿ ಆರೋಗ್ಯವು ಹದ ತಪ್ಪಬಹುದು. ವಿದೇಶದ ವ್ಯವಹಾರದಲ್ಲಿ ಪಾಲುದಾರಿಕೆ ಇರಲಿದೆ. ವೃತ್ತಿಯನ್ನು ಹೊರತುಪಡಿಸಿದ ಅವಕಾಶಗಳು ನಿಮ್ಮನ್ನು ಹುಡುಕಿ ಬರಬಹುದು. ದಾಂಪತ್ಯದ ಒಳ ಜಗಳವು ಇಂದು ವ್ಯಕ್ತವಾಗಬಹುದು. ನಿಮ್ಮನ್ನು ನಂಬಿದವರಿಗೆ ಸಹಾಯ ಮಾಡಲಾಗದು. ಉತ್ತಮ ಸಮಯದ ನಿರೀಕ್ಷೆಯಲ್ಲಿ ಸಮಾಧಾನ ಇರುವುದು. ನಿಮ್ಮಲ್ಲಿ ಇರುವ ವಸ್ತುಗಳನ್ನು ನೀವು ಯಾರಿಗಾದರೂ ಕೊಡುವುದು ಬೇಡ. ಕೋಪವನ್ನು ಬಿಡಬೇಕು ಎಂದುಕೊಂಡರೂ ಸಂದರ್ಭವು ಅದನ್ನು ಬದಲಿಸಬಹುದು. ಮಕ್ಕಳಿಂದ ನೆಮ್ಮದಿಯು ಪಡೆಯವಿರಿ. ವ್ಯವಹಾರವನ್ನು ಲಾಭದಾಯಕವನ್ನಾಗಿ ಮಾಡಿಕೊಳ್ಳುವಲ್ಲಿ ಸೋಲುವಿರಿ.

ಮೀನ ರಾಶಿ: ಇಂದು ಆರ್ಥಿಕ ವಿಚಾರದಲ್ಲಿ ಜಾಗರೂಕತೆ ಇರಲಿ. ಇಲ್ಲವಾದರೆ ಯಾವ ಪ್ರಯೋಜನವೂ ಇಲ್ಲದೇ ನಷ್ಟವಾಗುವುದು. ಭೂಮಿಗೆ ಸಂಬಂಧಿಸಿದ ವಿಚಾರಗಳನ್ನು ಇತ್ಯರ್ಥ ಮಾಡಿಕೊಳ್ಳುವುದು ಉಚಿತ. ಉನ್ನತ ವಿದ್ಯಾಭ್ಯಾಸದ ಪ್ರಯುಕ್ತ ಹೊರಗಡೆ ಇರಲಿರುವಿರಿ. ನಿಮ್ಮ ಕಾರ್ಯವು ಆಗಬೇಕಾದರೆ ಓಡಾಟ ಅನಿವಾರ್ಯವಾಗಲಿದೆ. ಅನಾರೋಗ್ಯದ ನಡುವೆಯೂ ಉತ್ಸಾಹದಿಂದ ಇರುವಿರಿ. ಶತ್ರುಗಳ ಮುಖಾಮುಖಿ ಭೇಟಿಯ ಸಂದರ್ಭವು ಬರುವುದು. ನೀವು ಇಂದು ಯಾವ ವಿಚಾರವನ್ನು ಮಾತನಾಡುವುದಿದ್ದರೂ ಎಚ್ಚರವಿರಲಿ. ನಿಮ್ಮ ಸಂಗಾತಿಯು ನಿಮ್ಮನ್ನು ಇತರರಿಗೆ ಹೋಲಿಸಬಹುದು.‌ ಒಂದೊಂದು ರೂಪಾಯಿಯನ್ನೂ ಜೊಪಾನ ಮಾಡುವಿರಿ. ಎಂತಹ ಸನ್ನಿವೇಶದಲ್ಲಿಯೂ ನೀವು ವಿಚಲಿತರಾಗುವುದಿಲ್ಲ.