Horoscope: ರಾಶಿಭವಿಷ್ಯ, ಈ ರಾಶಿಯವರು ನಿಮ್ಮ ಇಷ್ಟವಾದ ವಸ್ತುವನ್ನು ಕಳೆದುಕೊಳ್ಳುವಿರಿ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 25) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ಈ ರಾಶಿಯವರು ನಿಮ್ಮ ಇಷ್ಟವಾದ ವಸ್ತುವನ್ನು ಕಳೆದುಕೊಳ್ಳುವಿರಿ
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 25, 2023 | 12:30 AM

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 25) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ನವಮೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ವೈಧೃತಿ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 48 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:08 ರಿಂದ 03:42ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:21 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:28 ರಿಂದ 11:01ರ ವರೆಗೆ.

ಶ್ರಾವಣ ಮಾಸದ ಶುಕ್ರವಾರಗಳು ಅತ್ಯಂತ ಶ್ರೇಷ್ಠವಾದ ವಾರಗಳಾಗಿವೆ. ಅದರಲ್ಲಿಯೂ ಈ ಬಾರಿ ನವಮೀ ತಿಥಿಯು ಸೇರಿಕೊಂಡಿದ್ದು ಮತ್ತಷ್ಟು ವಿಶೇಷ. ದುರ್ಗೆಯರು ಒಂಭತ್ತು ಮತ್ತು ನವಮಿಯ ಅಧಿದೇವತೆಯು ದುರ್ಗೆಯಾಗಿದ್ದು ಶುಕ್ರವಾರವೂ ಬಂದಿರುವ ಕಾರಣ ಬಹಳ ಶ್ರೇಷ್ಠವಾದ ದಿನವಾಗಿದೆ. ಇಷ್ಟಾರ್ಥಗಳು, ಸಂಪತ್ ಸಮೃದ್ಧಿ, ಎಲ್ಲವೂ ಬರಲಿದೆ.

ಧನು ರಾಶಿ : ಹಠದ ಸ್ವಭಾವದಿಂದ ಪ್ರೀತಿಯನ್ನು ಕಳೆದುಕೊಳ್ಳುವಿರಿ. ಇಂದು ವ್ಯವಹಾರವನ್ನು ಮಾಡಲು ನಿಮಗೆ ಧೈರ್ಯವು ಸಾಕಾಗದು. ಮಕ್ಕಳ ಜೊತೆ ನಿಮ್ಮ ಪ್ರಯಾಣ ಮಾಡುವಿರಿ. ಅಸಭ್ಯರ ನಡುವೆ ನಿಮಗೆ ಅಪಮಾನವಾಗಬಹುದು. ವಿವಾಹಕ್ಕೆ ಸಂಬಂಧಿಸಿದಂತೆ ನಿಮ್ಮ ನಿರ್ಧಾರವನ್ನು ಸ್ಪಷ್ಟವಾಗಿ ಹೇಳಿ.‌ ನಿಮ್ಮ ಇಷ್ಟವಾದ ವಸ್ತುವನ್ನು ಕಳೆದುಕೊಳ್ಳುವಿರಿ. ಬಂಧುಗಳು ನಿಮ್ಮನ್ನು ಅಳೆಯುವರು. ಉನ್ನತ ಅಭ್ಯಾಸವನ್ನು ಮಾಡುವ ಅಪೇಕ್ಷೆ ಇರಲಿದೆ. ಇದಕ್ಕಾಗಿ ಆರ್ಥಿಕ ಸಹಾಯವನ್ನು ಇನ್ನೊಬ್ಬರಿಂದ ಕೇಳುವಿರಿ. ಆಪ್ತರ ಮಾತಿನಿಂದ ನಿಮಗೆ ಬೇಸರವಾಗಲಿದೆ.

ಮಕರ ರಾಶಿ : ಉದ್ಯೋಗದಲ್ಲಿ ಆಗದ ಸಣ್ಣ ತಪ್ಪಿನಿಂದ ನಷ್ಟವಾಗಲಿದ್ದು ಅದು ನಿಮ್ಮ ಮೇಲೆ ಬರಬಹುದು.‌ ಭೂಮಿಯ ವ್ಯವಹಾರದಲ್ಲಿ ಲಾಭವಾಗದೇ ಕೇವಲ ಓಡಾಟವನ್ನು ಮಾಡಬೇಕಾಗಬಹುದು. ತುರ್ತು ಹಣವು ಬೇಕಾಗಿದ್ದು ಸಾಲವನ್ನು ಮಾಡಲು ನಿಮಗೆ ಹೆದರಿಕೆ ಆಗಬಹುದು. ನಿಮ್ಮ ಸ್ವಂತ ಕೆಲಸಕ್ಕಾಗಿ ವಿರಾಮವನ್ನು ತೆಗೆದುಕೊಳ್ಳುವಿರಿ. ಬಹಳ ದಿನಗಳ ಅನಂತರ ಕುಟುಂಬದ ಕುಟುಂಬದ ಜೊತೆ ಸೇರಿಕೊಳ್ಳಲಿದ್ದು ನಿಮಗೆ ಸಂತಸವಾಗಲಿದೆ. ವಿವಾಹದ ಮಾತುಕತೆಗಳು ನಿಮಗೆ ಸಂತೋಷವನ್ನು ತರುವುದು. ಸರಿಯಾದ ಕಡೆ ಹೂಡಿಕೆ ಮಾಡದೇ ಹಣವನ್ನು ಕಳೆದುಕೊಳ್ಳಬಹುದು. ಹಣಕಾಸಿನ ವಿಚಾರದಲ್ಲಿ ಯಾರನ್ನೂ ನಂಬುವುದು ಕಷ್ಟವಾದೀತು.

ಕುಂಭ ರಾಶಿ : ಬಂಧುಗಳ ನಿಮ್ಮ ಬಗ್ಗೆ ಆಡಿಕೊಳ್ಳಬಹುದು. ಯಾರ ಮೇಲಾದರೂ ನಿಮ್ಮ ತಪ್ಪನ್ನು ಹಾಕುವಿರಿ. ಬರುವ ಆದಾಯಕ್ಕೆ ಅಡೆತಡೆಗಳು ಬರಬಹುದು. ಸ್ನೇಹವು ಶಿಥಿಲವಾಗುವುದು. ಪ್ರಭಾವಿ ವ್ಯಕ್ತಿಗಳ ಸಲಹೆಯಿಂದ ನಿಮಗೆ ಶ್ರೇಯಸ್ಸು ಪ್ರಾಪ್ತವಾಗಬಹುದು. ಆದಾಯದ ಮೂಲವನ್ನು ಹೆಚ್ಚಿಸಿಕೊಳ್ಳುವಿರಿ. ಹಣದ ಆಮಿಷವನ್ನು ಒಡ್ಡಬಹುದು. ನಿಮ್ಮ ಭೂಮಿಯನ್ನು ವಶಪಡಿಸಿಕೊಳ್ಳಲು ಹೊಂಚುಹಾಕಬಹುದು. ಬಹಳ ದಿನಗಳಿಂದ ನಿಮ್ಮ ಕೆಲಸವು ವೇಗವಾಗಿ ಸಾಗುತ್ತಿದ್ದು ಅನಿರೀಕ್ಷತವಾಗಿ ಮಂದಗತಿಯಲ್ಲಿ ಸಾಗುವುದು. ಸಿಟ್ಟಾಗುವ ಸಂದರ್ಭವು ಬರಬಹುದು. ಎಲ್ಲರ ಜೊತೆ ತಾಳ್ಮೆಯಿಂದ ಮಾತನ್ನಾಡಿ.

ಮೀನ ರಾಶಿ : ಶತ್ರುಗಳ ಬಗ್ಗೆ ನೀವು ಸರಿಯಾದ ಮಾಹಿತಿಯನ್ನು ಪಡೆಯುವಿರಿ. ಹದಗೆಟ್ಟ ತಾಯಿಯ ಆರೋಗ್ಯವು ಸರಿಯಾಗುವುದು. ಅನಿರೀಕ್ಷಿತ ವಾರ್ತೆಗಳು ನಿಮ್ಮ ಮನಸ್ಸನ್ನು ಖಿನ್ನಗೊಳಿಸುವುದು. ಬಂಧುಗಳ ಪ್ರೀತಿಯು ನಿಮಗೆ ಸಿಗಲಿದೆ. ನಿಮ್ಮ ಪ್ರಾಮಾಣಿಕತೆಯನ್ನು ಬಿಡುವುದು ಬೇಡ. ನಿಮ್ಮ ಕೊಟ್ಟ ಜವಾಬ್ದಾರಿಯನ್ನು ಸಕಾಲಕ್ಕೆ ಪೂರ್ಣಗೊಳಿಸುವಿರಿ. ತಾಯಿಯ ಕಡೆಯ ಬಂಧುಗಳಿಂದ ನಿಮಗೆ ಸಹಾಯವು ಸಿಗಲಿದೆ. ನೀವು ಮಾಡಿದ ತಪ್ಪಿನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವಿರಿ. ಸುಳ್ಳು ಹೇಳವ ಸಂದರ್ಭವೂ ಬರಬಹುದು. ಉದ್ವೇಗಕ್ಕೆ ಸಿಲುಕಿ ಏನನ್ನಾದರೂ ಮಾಡಲು ಹೋಗುವಿರಿ. ಸಮೂಹದ ಜೊತೆ ನಿಮ್ಮ ಕೆಲಸವು ಆಗುವುದು.

-ಲೋಹಿತಶರ್ಮಾ – 8762924271 (what’s app only)