AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಈ ರಾಶಿಯ ವೃತ್ತಿಪರರಿಗೆ ಕಚೇರಿಯಿಂದ ಅಶುಭವಾರ್ತೆಯು ಬರಬಹುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 26) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ಈ ರಾಶಿಯ ವೃತ್ತಿಪರರಿಗೆ ಕಚೇರಿಯಿಂದ ಅಶುಭವಾರ್ತೆಯು ಬರಬಹುದು
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಆಯೇಷಾ ಬಾನು|

Updated on:Aug 26, 2023 | 5:40 AM

Share

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 26) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ದಶಮೀ, ನಿತ್ಯನಕ್ಷತ್ರ: ಮೂಲಾ, ಯೋಗ: ವಿಷ್ಕಂಭ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 47 ನಿಮಿಷಕ್ಕೆ, ರಾಹುಕಾಲ ಬೆಳಿಗ್ಗೆ  09:08 ರಿಂದ 11:01ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:07 ರಿಂದ 03:41ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:21 ರಿಂದ 07:54ರ ವರೆಗೆ.

ಧನು ರಾಶಿ: ತಂದೆಯ ವಿಚಾರದಲ್ಲಿ ನಿಮಗೆ ಅಸಮಾಧನವು ಇರುವುದು. ಯಾರದೋ ಕೋಪವನ್ನು ಮತ್ಯಾರದೋ ಮೇಲೆ ತೋರಿಸುವಿರಿ. ಗೆಲುವಿಗೆ ಬಹಳ ಪ್ರಯತ್ನಪಡುವಿರಿ. ವ್ಯಕ್ತಿಗಳನ್ನು ನೋಡಿ ನಿಮ್ಮ ಮಾತು ಇರಲಿ. ನಿಮ್ಮ ಸಾಧನೆಗೆ ಗೌರವವು ಸಿಗಬಹುದು. ನಿಮ್ಮ ಸ್ಥಾನದ ಬಗ್ಗೆ ನಿಮಗೆ ಭಯವಿರುವುದು. ಸಮಾರಂಭಗಳಿಗೆ ದಂಪತಿ ಸಹಿತರಾಗಿ ತೆರಳುವಿರಿ. ದುರಭ್ಯಾಸದಿಂದ ಮುಕ್ತರಾಗಲು ಹಿರಿಯರಿಂದ ಹಿತವಚನವು ಸಿಗಬಹುದು. ದ್ವೇಷವನ್ನು ಸಾಧಿಸುವುದು ನಿಮ್ಮ ಅವಗುಣಗಳಲ್ಲಿ ಒಂದಾಗಿದ್ದು ಅದನ್ನು ಬಿಡಬೇಕಾಗಬಹುದು. ಧಾರ್ಮಿಕ ಆಚರಣೆಗಳಲ್ಲಿ ಸ್ವತಃ ತೊಡಗುವಿರಿ.

ಮಕರ ರಾಶಿ: ಎಷ್ಟೇ ಹುಡುಕಿದರೂ ನಿಮಗೆ ಬೇಕಾದ ಉದ್ಯೋಗವು ಸಿಗದೇ ಜೀವನವು ನಿರುತ್ಸಾಹದಿಂದ ಕೂಡಿರಬಹುದು. ಸಾಮಾಜಿಕ ಕಾರ್ಯಗಳತ್ತ ಮನಸ್ಸು ಮಾಡುವಿರಿ. ಆರೋಗ್ಯವು ಸುಧಾರಿಸಬಹುದು. ಸಹೋದ್ಯೋಗಿಗಳು ಕಿರಿಕಿರಿಯನ್ನು ನೀಡಬಹುದು. ಮಕ್ಕಳ ಭವಿಷ್ಯಕ್ಕೆ ನೀವು ಸ್ವಲ್ಪ ಹಣವನ್ನು ಹೊಂದಿಸುವಿರಿ. ನಿಮ್ಮ ಸುತ್ತಾಟಕ್ಕೆ ಸ್ವಂತ ವಾಹನವು ಬೇಕು ಎನಿಸುವುದು. ದೂರದಲ್ಲಿದ್ದ ಮಕ್ಕಳನ್ನು ಬಹಳ ದಿನಗಳ ಅನಂತರದ ಭೇಟಿ ಮಾಡುವಿರಿ. ನಿಮ್ಮ ನಡುವೆ ಮೌನವೇ ಸಂಭಾಷಣೆ ಆಗಬಹುದು. ಲಾಭದಾಯಕ ಕೃಷಿಯನ್ನು ನೀವು ಅವಲಂಬಿಸುವಿರಿ. ನಿಮಗೆ ಇಷ್ಟವಾದ ಸ್ಥಳವು ಸಿಗದೇ ಇರುವ ಕಾರಣ ಸ್ಥಿರಾಸ್ತಿಯ ಖರೀದಿಯನ್ನು ಮುಂದೂಡುವುದು ಉತ್ತಮ.

ಕುಂಭ ರಾಶಿ: ಸುಲಭವಾಗಿ ಸಿಗುವ ಸಂಪತ್ತು ನಿಮಗೆ ದಕ್ಕದು. ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ಇರುವುದು. ನಿಮ್ಮ ನೆಚ್ಚಿನ ವ್ಯಕ್ತಿಗಳನ್ನು ಆಕಸ್ಮಾತ್ತಾಗಿ ಭೇಟಿಯಾಗುವಿರಿ. ಕುಟುಂಬದ ಜೊತೆ ಪ್ರಯಾಣವನ್ನೂ ಮಾಡುವ ಆಲೋಚನೆಯು ಇರಲಿದೆ. ನಿಮಗೆ ಕೊಟ್ಟ ಕೆಲಸವನ್ನು ಬಿಟ್ಟು ಅನ್ಯರ ಕಾರ್ಯದಲ್ಲಿ ಮಗ್ನರಾಗುವಿರಿ. ನಿಮ್ಮವರ ಸ್ವೇಚ್ಛಾಚಾರದ ನಡವಳಿಕೆಯು ನಿಮಗೆ ಇಷ್ಟವಾಗದು. ಅದನ್ನು ಬೇರೆ ಮಾತಿನ ಮೂಲಕ ತಿಳಿಸುವಿರಿ. ಹಣವನ್ನು ಕೊಟ್ಟು ವಸ್ತುವನ್ನೂ ಕಳೆದುಕೊಳ್ಳುವ ಸ್ಥಿತಿಯು ಬರಬಹುದು. ಕಚೇರಿಗೆ ವಿರಾಮವಿದ್ದರೂ ತನ್ನಿಮಿತ್ತವಾದ ಕಾರ್ಯವನ್ನೇ ನೀವು ಮಾಡಬೇಕಾಗುವುದು. ಸಂಗಾತಿಯ ದೌರ್ಬಲ್ಯಗಳನ್ನು ಎತ್ತಿ ಆಡುವಿರಿ.

ಮೀನ ರಾಶಿ: ಮನಃಕ್ಲೇಶವನ್ನು ಕಡಿಮೆ ಮಾಡಿಕೊಳ್ಳುವುದು ಅನಿವಾರ್ಯವಾಗುವುದು. ಕಳ್ಳತನದ ಭೀತಿಯು ಇರಬಹುದು. ನೆಮ್ಮದಿಯಿಂದ ಇರಲು ಹಿತಶತ್ರುಗಳು ಬಿಡುವುದಿಲ್ಲ. ಇಂದು ನಿಮ್ಮ ಸ್ವಂತ ಉದ್ಯೋಗದ ಮೇಲೆ ಕಾಳಜಿಯು ಕಾರಣಾಂತರದಿಂದ‌ ಕಡಿಮೆಯಾಗುವುದು. ಇದರಿಂದ ಸ್ವಲ್ಪ ನಷ್ಟವೂ ಆದೀತು‌. ವೃತ್ತಿಪರರಾದ ನಿಮಗೆ ಕಚೇರಿಯಿಂದ ಅಶುಭವಾರ್ತೆಯು ಬರಬಹುದು. ಹಳೆಯ ಸಂಗಾತಿಯ ನೆನಪು ಇಂದು ಮತ್ತೆ ಮತ್ತೆ ನೆನಪಾಗುವುದು. ಮನೆಯಲ್ಲಿ ಧಾರ್ಮಿಕ ಸಮಾರಂಭವನ್ನು ಯೋಜಿಸುವಿರಿ. ಅಪರೂಪದ ಸ್ನೇಹಿತರ ಜೊತೆ ಮನೆಯಲ್ಲಿ ಸಂತೋಷಕೂಟವನ್ನು ಏರ್ಪಡಿಸುವಿರಿ.

-ಲೋಹಿತಶರ್ಮಾ – 8762924271 (what’s app only)

Published On - 12:20 am, Sat, 26 August 23

ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ