AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಈ ರಾಶಿಯವರು ಉದ್ಯೋಗಕ್ಕೆ ಸಂಬಂಧಿಸಿದಂತೆ ಸರಿಯಾದ ನಿರ್ಧಾರವನ್ನು ಮಾಡಿಕೊಳ್ಳಿ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 26) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ, ಈ ರಾಶಿಯವರು ಉದ್ಯೋಗಕ್ಕೆ ಸಂಬಂಧಿಸಿದಂತೆ ಸರಿಯಾದ ನಿರ್ಧಾರವನ್ನು ಮಾಡಿಕೊಳ್ಳಿ
ದಿನಭವಿಷ್ಯImage Credit source: iStock Photo
TV9 Web
| Edited By: Rakesh Nayak Manchi|

Updated on: Sep 26, 2023 | 12:45 AM

Share

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 26) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಶ್ರವಣಾ, ಯೋಗ: ಸುಕರ್ಮ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 25 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:53 ರಿಂದ 09:24ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:54 ರಿಂದ ಮಧ್ಯಾಹ್ನ 12:24ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:55 ರಿಂದ 03:25ರ ವರೆಗೆ.

ಧನು ರಾಶಿ: ಉದ್ಯೋಗಕ್ಕೆ ಸಂಬಂಧಿಸಿದಂತೆ ಸರಿಯಾದ ನಿರ್ಧಾರವನ್ನು ಮಾಡಿಕೊಳ್ಳಿ. ನಿಮ್ಮ ಚಾಂಚಲ್ಯದ ಸ್ಥಿತಿಗೆ ಸಿಟ್ಟಾಗಬಹುದು. ಆಹಾರದ ಮಾರಾಟದಿಂದ ಲಾಭ ಸಿಗುವುದು. ಇಂದು ಬರುವ ಹಣದ ಆಧಾರದ ಮೇಲೆ ನೀವು ಯಾವ ವ್ಯವಹಾರವನ್ನೂ ಮಾಡುವುದು ಬೇಡ. ವಾಹನವನ್ನು ಚಾಲಾಯಿಸುವಾಗ ಅನೇಕ ಸಕಾರಾತ್ಮಕ ಯೋಚನೆಗಳು ಇರಲಿ. ಸಂಗಾತಿಯ ಆಯ್ಕೆಯಲ್ಲಿ ನಿಮಗೆ ಅನೇಕ ಗೊಂದಲಗಳೂ ಪರೀಕ್ಷೆಗಳೂ ಬರಬಹುದು. ಸ್ವತಂತ್ರವಾದ ಆಲೋಚನೆಯು ಇಲ್ಲದೇ ಹೋದರೆ ಕಷ್ಟವಾದೀತು‌‌. ಕಛೇರಿಯಲ್ಲಿ ನಿಮ್ಮ ಶ್ರಮಕ್ಕೆ ಮೆಚ್ಚುಗೆ ಸಿಗಲಿದೆ‌. ಮನೆ ಕೆಲಸಕ್ಕೆ ಆಲಸ್ಯವು ಇರುವುದು. ಸಮಾರಂಭದಲ್ಲಿ ಅನಿರೀಕ್ಷಿತ ಗೌರವವು ನಿಮಗೆ ಪ್ರಾಪ್ತವಾಗುವುದು. ನಿಮ್ಮ ಮನಸ್ಸನ್ನು ಸಂಗಾತಿಯು ಅರ್ಥಮಾಡಿಕೊಳ್ಳಲು ಪ್ರಯತ್ನಿಸಬಹುದು.

ಮಕರ ರಾಶಿ: ಉದ್ಯೋಗದ ಸ್ಥಳದಲ್ಲಿ ಉತ್ಸಾಹವು ಹೆಚ್ಚಿರಲಿದೆ. ಸಮಯೋಚಿತ ಸಲಹೆಯಿಂದ ಬರುವ ತೊಂದರೆಯು ದೂರಾಗುವುದು. ಪಾಲುದಾರಿಕೆಯಲ್ಲಿ ಕಲಹವಾಗುವ ಸಾಧ್ಯತೆ ಇದೆ. ಪತ್ರವ್ಯವಹಾರವು ಸಂಪೂರ್ಣ ಪ್ರಾಮಾಣಿಕವಾಗಿ ಇರದು ಎಂಬುದು ಗಮನದಲ್ಲಿ ಇರಲಿ. ಕೇಳಿಕೊಂಡು ಬಂದವರಿಗೆ ನಿಮ್ಮಿಂದ ಅಲ್ಪ ಸಹಾಯ ಸಿಗುವುದು. ಇಂದು ನೀವು ನಿರೀಕ್ಷಿಸಿದಷ್ಟು ಸಂಪತ್ತು ಸಿಗದೇ ಹೋದೀತು. ಸಹೋದ್ಯೋಗಿಗಳ ವರ್ತನೆಯಿಂದ ಸಿಟ್ಟಾಗುವ ಸಾಧ್ಯತೆ ಇದೆ. ಭೋಗವಸ್ತುಗಳನ್ನು ಖರೀದಿ ಮಾಡುವಿರಿ. ಇವತ್ತಿಗೆ ಬೇಕಾದುದನ್ನು ಸ್ನೇಹಿತರಿಂದ ಪಡೆದುಕೊಳ್ಳುವಿರಿ. ನೀವು ಇಂದು ವಿಶೇಷ ಲಕ್ಷ್ಯವನ್ನು ಇಟ್ಟುಕೊಂಡು ಕೆಲಸವನ್ನು ಮಾಡಬೇಕಾದೀತು. ವಿದ್ಯಾರ್ಥಿಗಳಿಗೆ ಒಳ್ಳೆಯ ಅವಕಾಶಗಳು ಸಿಗುವುದು. ಬರಹಗಾರರು ಗೌರವವನ್ನು ಪಡೆಯುವರು.

ಕುಂಭ ರಾಶಿ: ನೆರೆಹೊರೆಯವರ ವಿಚಾರದಲ್ಲಿ ಸಣ್ಣ ಅಸಮಾಧಾನ ಇರಲಿದೆ. ದೇಹಕ್ಕೆ ತೊಂದರೆ ಮಾಡಿಕೊಳ್ಳುವ ಸನ್ನಿವೇಶವಿರಲಿದೆ. ಮನೆಯ ಬದಲಾವಣೆಯನ್ನು ಮಾಡುವಿರಿ. ಯಾರಿಂದಲೂ ಆರ್ಥಿಕ ಸಹಾಯವು ಸಿಗದೇ ಕಷ್ಟವಾದೀತು. ಮನಸ್ಸು ಚಂಚಲವಾಗಿ ಕೆಲಸವು ಸೂಚಿಸದು. ಚರ ಆಸ್ತಿಯನ್ನು ಮಾರಾಟ ಮಾಡಿ ಹಣದ ಗಳಿಸುವಿರಿ. ನಿಮಗೆ ಸಂಬಂಧಿಸದ ವಿಚಾರದಲ್ಲಿ ಮಧ್ಯಸ್ತಿಕೆ ಬೇಡ. ಇದರಿಂದ ಅಪಮಾನವು ಆಗುವುದು. ನಿಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಸಮಸ್ಯೆಯಾಗಬಹುದು. ಇಂದು ಭೀತಿಯು ಇರಲಿದ್ದು ಮನೆಯನ್ನು ಬಿಟ್ಟು ಹೋಗಲಾರಿರಿ. ಶುಭಾವಾರ್ತೆಯಿಂದ ಖುಷಿ ಇರುವುದು. ದೂರದಲ್ಲಿರುವ ಮಕ್ಕಳನ್ನು ಕಾಣಲು ಹೋಗುವಿರಿ.

ಮೀನ ರಾಶಿ: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ತೊಂದರೆ ಆಗಲಿದ್ದು ಮನಸ್ಸು ವಿಚಲಿತವಗಲಿದೆ. ಮಿತ್ರರು ನಿಮಗೆ ಸಹಕಾರ ನೀಡಲಾರರು. ಸಾಲ ಮಾಡುವ ಸಂದರ್ಭವನ್ನು ತಂದುಕೊಳ್ಳುವುದು ಬೇಡ. ಪ್ರಯಾಣದಲ್ಲಿ ಜಾಗರೂಕತೆ ಇರಲಿ. ನಿಮಗೆ ಇಂದು ಸಂಗಾತಿಯ ಮೇಲೆ ಪ್ರೀತಿ ಹೆಚ್ಚಾಗಿದ್ದು ದೂರದ ಊರಿನಿಂದ ನೋಡಲು ಹೋಗುವಿರಿ. ಮಹಿಳಾ ಉದ್ಯೋಗಿಗಳು ಹೆಚ್ಚಿನ ಸ್ಥಾನವನ್ನು ಪಡೆಯುವಿರಿ. ಯಾರನ್ನೂ ದೂರುವ ಅವಶ್ಯಕತೆ ಇಲ್ಲ. ನಿಮ್ಮ ಕೆಲಸವನ್ನು ಸರಿ ಮಾಡಿಕೊಂಡು ಹೋಗುವಿರಿ. ನಿಮ್ಮ ಮಾತಿನಿಂದ ತಾಯಿಗೆ ಬೇಸರವಾಗಲಿದೆ. ನಿಮ್ಮನ್ನು ನೀವು ಬದಲಿಸಿಕೊಳ್ಳುವಿರಿ. ಕಾನೂನಿನ ಸಮರದಲ್ಲಿ ರೋಚಕತೆ ಇರುವುದು. ಸಂಗಾತಿಯ ಕಿರಿಕಿರಿಯಿಂದ ನಿಮಗೆ ಕಷ್ಟವಾದೀತು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​