Horoscope: ರಾಶಿಭವಿಷ್ಯ, ಈ ರಾಶಿಯವರಿಗೆ ಸಂಗಾತಿಯ ಜೊತೆ ಹಣಕಾಸಿನ ವಿಚಾರಕ್ಕೆ ಜಗಳವಾಗಲಿದೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 27, 2023 | 12:30 AM

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 27) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ಈ ರಾಶಿಯವರಿಗೆ ಸಂಗಾತಿಯ ಜೊತೆ ಹಣಕಾಸಿನ ವಿಚಾರಕ್ಕೆ ಜಗಳವಾಗಲಿದೆ
ಪ್ರಾತಿನಿಧಿಕ ಚಿತ್ರ
Follow us on

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಪೂರ್ವಾಷಾಢಾ, ಯೋಗ: ಪ್ರೀತಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 46 ನಿಮಿಷಕ್ಕೆ, ರಾಹುಕಾಲ ಬೆಳಿಗ್ಗೆ  05:17 ರಿಂದ 06:47ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:34 ರಿಂದ 02:07ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 03:40 ರಿಂದ 05:13ರ ವರೆಗೆ.

ಧನು ರಾಶಿ : ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಿತಿಯು ಬರಲಿದೆ. ಮನೆಯಿಂದ ಹೊರ ಹೋಗುವುದು ನಿಮಗೆ ಇಂದು ನಿಮಗೆ ಇಷ್ಟವಾಗದು.‌ ಯಾರ ಒತ್ತಡಕ್ಕೂ ನೀವು ಮಣಿಯದವರು ಇಂದು ಮಣಿಯುವಿರಿ.‌ ನಿಮ್ಮವರಿಗೆ ಸ್ವಭಾವವು ಬದಲಾದಂತೆ ಅನ್ನಿಸೀತು. ಪಾಲುದಾರಿಕೆಯಲ್ಲಿ ನಿಮ್ಮ ಶ್ರಮವೇ ಹೆಚ್ಚಿರಲಿದೆ. ನಿಮಗೆ ಇಷ್ಟವಾಗದ ಜವಾಬ್ದಾರಿಗಳು ಬಂದಾಗ ನೀವು ತಪ್ಪಿಸಿಕೊಳ್ಳುವಿರಿ. ಮನಸ್ಸು ಭಾರವಾಗಿದ್ದು ಎಲ್ಲರಿಂದ ದೂರವಿರಲು ಇಷ್ಟಪಡುವಿರಿ. ನಿಮ್ಮ ಮಾತನ್ನು ಅಪಾರ್ಥ ಮಾಡುವರು. ಬಂಧುಗಳಿಂದ ಅನಿರೀಕ್ಷಿತ ವಾರ್ತೆಯನ್ನು ಕೇಳುವಿರಿ. ಆದಾಯವು ಮತ್ತಷ್ಟು ಬೇಕೆನಿಸುವುದು.

ಮಕರ ರಾಶಿ : ಸಂಗಾತಿಯ ಜೊತೆ ಹಣಕಾಸಿನ ವಿಚಾರಕ್ಕೆ ಜಗಳವಾಗಲಿದೆ. ನಿಮಗೆ ಅರ್ಥವಾಗದ ವಿಚಾರವನ್ನು ಬೇರೆಯವರ‌ ಬಳಿ ಪಡೆಯುವಿರಿ. ನಿಮ್ಮ‌ ಪ್ರಯಾಣದಲ್ಲಿ ಅಡೆತಡೆಗಳು ಬರಬಹುದು. ನಿಮ್ಮವರ ಅನಾರೋಗ್ಯದ ಕಾರಣ ಓಡಾಟ ಮಾಡುವಿರಿ. ಏಕಾಂಗಿಯಾಗಿ ಎಲ್ಲಿಗಾದರೂ ದೂರ ಹೋಗುವಿರಿ. ಅಶಿಸ್ತಿನಿಂದ ವರ್ತಿಸಿದ್ದಕ್ಕೆ ನಿಮಗೆ ಎಲ್ಲರೆದುರು ಅಪಮಾನವಾಗಬಹುದು. ಹೊಸ ಉದ್ಯೋಗದ ಅನ್ವೇಷಣೆಯಲ್ಲಿ ನೀವು ಮಗ್ನರಾಗುವಿರಿ. ಅಂದುಕೊಂಡಿದ್ದು ಹಾಗೆಯೇ ಆಗಿದ್ದು ನಿಮಗೂ ಅಚ್ಚರಿಯಾಗಲಿದೆ. ದುಷ್ಕೃತ್ಯಕ್ಕೆ ಅಪ್ರತ್ಯಕ್ಷವಾಗಿ ಅನುಮೋದನೆ ಸಿಗಲಿದೆ.

ಕುಂಭ ರಾಶಿ : ಹಿರಿಯರ ಮಾರ್ಗದರ್ಶನದಲ್ಲಿ ಇಂದಿನ ದಿನವನ್ನು ಕಳೆಯುವಿರಿ. ಮನೆಯ ಕಾರ್ಯಕ್ಕಾಗಿ ನೀವು ಓಡಾಟ ಮಾಡಬೇಕಾಗುವುದು. ಹೆಚ್ಚಿನ ಶ್ರಮವು ವಿದ್ಯಾರ್ಥಿಗಳಿಗೆ ಅವಶ್ಯಕ. ಕಛೇರಿಯಲ್ಲಿ ನಿಮಗೆ ವಹಿಸಿದ ಕೆಲಸವನ್ನು ಮಾಡದೇ ಮೇಲಧಿಕಾರಿಗಳಿಂದ ಹೇಳಿಸಿಕೊಳ್ಳುವಿರಿ. ವಾಹನದಿಂದ ಅಪಘಾತವು ಆಗುವುದು ಎಂಬ ಭೀತಿ ಕಾಡಲಿದೆ. ತಂದೆಯ ಆರೋಗ್ಯದ ಬಗ್ಗೆ ನಿಮಗೆ ಚಿಂತೆ ಇರುವುದು. ಸಹೋದ್ಯೋಗಿಗಳ ಸಹಕಾರವಿಲ್ಲದೇ ನಿಮ್ಮ ಕೆಲಸವನ್ನು ಮಾಡುವಿರಿ. ಇಂದು ಹೆಚ್ಚಿನ ಸಮಯವನ್ನು ಸ್ನೇಹಿತರ ಜೊತೆ ಮನೋರಂಜನೆಯಲ್ಲಿ‌ ಕಳೆಯುವಿರಿ. ನಿಮ್ಮ‌ ಮಾನಸಿಕತೆಯನ್ನು ತಿಳಿಯಲು ಕಷ್ಟಪಡುವರು.

ಮೀನ ರಾಶಿ : ಸಂಸಾರದಲ್ಲಿ ಆಗುವ ಕಲಹವನ್ನು ಉದ್ವೇಗಕ್ಕೆ ಮನಸ್ಸು ಕೊಡದೇ ಶಾಂತಚಿತ್ತರಾಗಿ ಸಮಾಧಾನ ಮಾಡಿ. ನಿಮ್ಮ ಕೈಯ್ಯಲ್ಲಿ ಒಗ್ಗೂಡಿಸುವಿಕೆ ಇರಲಿದೆ. ಸಹೋದರರ ಜೊತೆ ಮನೆಯ ಆಸ್ತಿಯ ಬಗ್ಗೆ ಕುಳಿತು ಮಾತನಾಡುವಿರಿ. ನಿಮ್ಮ‌ ದಿನಚರಿಯನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳಿ. ನಿಮ್ಮ‌ ಮನಸ್ಸು ಭಾರವನ್ನೆಲ್ಲ ದೂರ ಮಾಡಿದೆ. ಮನಸ್ಸು ಹಗುರರಾಗಿದ್ದು ಉತ್ಸಾಹವು ನಿಮ್ಮ ಮುಖದಲ್ಲಿ ಕಾಣುವುದು. ನಿಮ್ಮ ನಿಯಮಗಳೇ ನಿಮಗೆ ಹಿಂಸೆಯಾಗುವುದು. ಆರ್ಥಿಕ ಹಿಂಜರಿಕೆಯು ನಿಮಗೆ ಅರಗಿಸಿಕೊಳ್ಳಲು ಕಷ್ಟವಾದೀತು. ಎಲ್ಲರ ಮೇಲಿನ ನಂಬಿಕೆಯನ್ನು ನೀವು ಕಳೆದುಕೊಂಡು ಆರಾಮಾಗಿ ಇರುವಂತೆ ನಟಿಸುವಿರಿ. ಇಂದಿನ ಮಂದಗತಿಯ ಕೆಲಸಗಳಿಗೆ ಚುರುಕು ನೀಡುವಿರಿ. ಸಾಲಾಗಾರ ವಿಚಾರದಲ್ಲಿ ನಿಮಗೆ ಅಸಮಾಧಾನವು ಇರಲಿದೆ.

-ಲೋಹಿತಶರ್ಮಾ – 8762924271 (what’s app only)