AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ ಭವಿಷ್ಯ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 27) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ ಭವಿಷ್ಯ
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jul 27, 2023 | 12:45 AM

Share

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಕೆಲವರು ಬೆಳಗ್ಗೆ ಎದ್ದ ಕೂಡಲೇ ರಾಶಿ ಭವಿಷ್ಯ (Daily horoscope) ತಪ್ಪದೇ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯದಿಂದ ತಿಳಿದುಕೊಳ್ಳುತ್ತಾರೆ. ಅದರ ಜೊತೆಗೆ ನಿತ್ಯಪಂಚಾಂಗ ಕೂಡ ಓದುತ್ತಾರೆ. ಹಾಗಾದರೆ ಇಂದಿನ (2023 ಜುಲೈ 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ?, ಯಾರಿಗೆ ಲಾಭ?, ಯಾರಿಗೆ ನಷ್ಟ?, ಯಾರಿಗೆ ಶುಭ, ಅಶುಭ? ಇಲ್ಲಿ ನೋಡಿ ನಿಮ್ಮ ಭವಿಷ್ಯ.

ಧನಸ್ಸು: ದೂರದ ಬಂಧುಗಳ ಭೇಟಿಯಾಗಲಿದೆ. ಅವರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ನಿಮ್ಮ ನಡವಳಿಕೆಯು ಅಹಂಕಾರದಂತೆ ತೋರೀತು. ವರ್ತನೆಯನ್ನು ಆದಷ್ಟು ಸಂದರ್ಭಕ್ಕೆ ತಕ್ಕಂತೆ ಇಟ್ಟುಕೊಳ್ಳುವುದು ಉತ್ತಮ. ಕೆಲವರ ಮಾತುಗಳು ನಿಮಗೆ ನೋವನ್ನು ತಂದೀತು. ಹೇಳಿಕೊಳ್ಳದೇ ಒಳಗೇ ಇಟ್ಟುಕೊಳ್ಳುವಿರಿ. ಉದ್ಯೋಗದಲ್ಲಿ ಬದಲಾವಣೆಯನ್ನು ಮಾಡಿಕೊಳ್ಳಬೇಕಾದೀತು. ದಿನಗೂಲಿಯವರಿಗೆ ಕಷ್ಟವು ಎದುರಾಗಬಹುದು. ಹಣಕಾಸಿನ‌ ವಿಚಾರದಲ್ಲಿ ಜಾಗರೂಕತೆ ಮುಖ್ಯವಾದೀತು. ನಿಮ್ಮ‌ ಭವಿಷ್ಯದ ಕನಸನ್ನು ಮಿತ್ರರ ಜೊತೆ ಹಂಚಿಕೊಳ್ಳುವಿರಿ.

ಮಕರ: ನಿಮಗೆ ನಿಮ್ಮವರ ಮಾತಿನಿಂದ ಇರುಸು ಮುರುಸಾದೀತು. ರಾಜಕೀಯ ವ್ಯಕ್ತಿಗಳಿಂದ ಕೆಲಸವಾಗಲು ಅವರಿಗೆ ಹಣವನ್ನು ಕೊಡುವಿರಿ. ಸ್ನೇಹಿತ ಸಹವಾಸದಿಂದ ದುರಭ್ಯಾಸವನ್ನು ಕಲಿಯುವ ಸಾಧ್ಯತೆ ಇದೆ. ಆರೋಗ್ಯದ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ವಿಧವಿಧವಾದ ಪ್ರಯತ್ನವನ್ನು ಮಾಡುವಿರಿ. ನಿಮ್ಮ ಯೋಜನೆಗಳು ಹೆಚ್ಚು ಇಷ್ಟವಾಗಲಿದೆ. ನಿಮ್ಮ ಮೇಲೆ ಬರುವ ನಕಾರಾತ್ಮಕ ಮಾತುಗಳನ್ನು ನೀವು ಅಲ್ಲಗಳೆಯುವಿರಿ. ಇಂದೇ ರೀತಿಯ ಕೆಲಸವು ನಿಮಗೆ ನಿರುತ್ಸಾಹವನ್ನು ತಂದೀತು. ನೆರೆ-ಹೊರೆಯವರ ಜೊತೆ ಮಾತು ಮಿತವಾಗಿರಲಿ. ನಿಮ್ಮನ್ನು ಅಳೆಯಬಹುದು.

ಕುಂಭ: ಆಸ್ತಿಯ ವಿಚಾರಕ್ಕೆ ಕುಟುಂಬದಲ್ಲಿ ಪರಸ್ಪರ ಜಗಳವಾಗುವ ಸಾಧ್ಯತೆ ಇದೆ. ಕಾನೂನಾತ್ಮಕ ವಿಷಯವನ್ನು ಚರ್ಚಿಸಿ ಮಾಡುವುದು ಉತ್ತಮ. ಕಡಿಮೆ ಖರ್ಚಿನಲ್ಲಿ ನಿಮ್ಮ ಕೆಲಸವು ಮುಗಿಯುವಂತೆ ನೋಡಿಕೊಳ್ಳುವಿರಿ. ಅತಿಯಾದ ಉತ್ಸಾಹ ಹಾಗೂ ಸಿದ್ಧತೆಯಲ್ಲಿರುವ ನಿಮಗೆ ಮನೆಯವರ ಮಾತು ಉತ್ಸಾಹಕ್ಕೆ ಭಂಗವನ್ನು ಮಾಡಿಸಬಹುದು. ಮಾತನಾಡಿ ಸಿಕ್ಕಿಬೀಳುವ ಸಾಧ್ಯತೆ ಇದೆ. ಮಾತಿನ ಮೇಲೆ ಹಿಡಿತವಿಟ್ಟುಕೊಳ್ಳಿ. ಅಪರಿಚಿಯ ಸ್ಥಳಗಳ ಬಗ್ಗೆ ಮಾಹಿತಿಯನ್ನು ಪಡೆದು ಮುನ್ನಡೆಯುವುದು ಶ್ರೇಯಸ್ಕರ. ಹಣವಿದ್ದ ಮಾತ್ರಕ್ಕೆ ಎಲ್ಲವೂ ಸಾಧ್ಯವಾಗದು ಎಂಬ ಸತ್ಯವು ಗೊತ್ತಾಗುವುದು.

ಮೀನ: ಪಾಲುದಾರಿಕೆಯಲ್ಲಿ ಉಂಟಾದ ಗೊದಲ್ಲವನ್ನು ಬಗೆಹರಿಸಿಕೊಂಡು ಮೈತ್ರಿ ಮಾಡಿಕೊಂಡರೆ ಇಬ್ಬರಿಗೂ ಅನುಕೂಲವಾಗುವುದು. ನಿಮ್ಮ ಸ್ಥಿರಾಸ್ತಿ ಪರಿಶೀಲನೆಯನ್ನು ಮಾಡಿಕೊಳ್ಳುವುದು ಉತ್ತಮ. ನಿಮ್ಮ‌ ಕಷ್ಟವನ್ನು ಸ್ನೇಹಿತರ ಜೊತೆ ಹಂಚಿಕೊಳ್ಳಿ. ನಿಮಗೆ ಕೊಟ್ಟ ಜವಾಬ್ದಾರಿಯನ್ನು ಅತ್ಯಂತ ಕಾಳಜಿಯಿಂದ ಮಾಡುವಿರಿ. ನಿಮ್ಮ ಯಶಸ್ಸು ನಿಮಗೆ ಮುಳುವಾಗಬಹುದು. ಎಚ್ಚರಿಕೆ ಹೆಜ್ಜೆಯನ್ನು ಇಡಿ. ಹಿರಿಯರ ಮಾರ್ಗದರ್ಶನವನ್ನು ಪಡೆಯುವ ಅವಶ್ಯಕತೆ ಇರಲಿದೆ. ಸೌಲಭ್ಯಗಳ ದುರ್ಬಳಕೆಯಾಗದಂತೆ ನೋಡಿಕೊಳ್ಳಿ.

Follow Us
ಲೋಹಿತ ಹೆಬ್ಬಾರ್​, ಇಡುವಾಣಿ
ಲೋಹಿತ ಹೆಬ್ಬಾರ್​, ಇಡುವಾಣಿ

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್