Horoscope: ಈ ರಾಶಿಯವರಿಗೆ ಶತ್ರುಗಳ ಕಾಟವು ಆಕಸ್ಮಿಕವಾಗಿ ಕಡಿಮೆ ಆಗಲಿದೆ
ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 27) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.
ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 27 ಶುಕ್ರವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ಹರ್ಷಣ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 27 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 05 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:49 ರಿಂದ 12:16 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:11 ರಿಂದ 04:38 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:55 ರಿಂದ 09:22ರ ವರೆಗೆ.
ಧನು ರಾಶಿ: ಸಾಲಬಾಧೆಯ ಕಾರಣ ಮನಸ್ಸಿನಲ್ಲಿ ಅಸ್ಥಿರತೆ ಇರಲಿದೆ. ಯಾರ ಮಾತನ್ನೂ ಸಾವಧಾನವಾಗಿ ಕೇಳುವ ಮನಸ್ಸು ಇರದು. ಶುಭ ಸಮಾಚಾರದಿಂದ ಮನಸ್ಸು ಅರಳುವುದು. ಪ್ರೀತಿಯನ್ನು ಹೇಳಿಕೊಳ್ಳಲು ನಿಮಗೆ ಮುಜುಗರವಾಗಬಹುದು. ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಿತಿಯು ಬಂದರೂ ಸಮಯೋಚಿತವಾಗಿರಲಿ. ಮನೆಯಿಂದ ಹೊರ ಹೋಗುವುದು ನಿಮಗೆ ಇಷ್ಟವಾಗದು. ಯಾರ ಒತ್ತಡಕ್ಕೂ ಮಣಿಯದ ನೀವಿ ಇಂದು ಒಪ್ಪಿಕೊಳ್ಳುವಿರಜ. ನಿಮ್ಮವರಿಗೆ ನಿಮ್ಮ ನಡತೆಯಲ್ಲಿ ಬದಲಾವಣೆ ಕಂಡೀತು. ಪಾಲುದಾರಿಕೆಯಲ್ಲಿ ನಿಮ್ಮ ಶ್ರಮವೇ ಹೆಚ್ಚಿರಲಿದೆ. ನಿಮಗೆ ಇಷ್ಟವಾಗದ ಜವಾಬ್ದಾರಿಗಳು ಹೇಗಾದರೂ ಮಾಡಿ ತಪ್ಪಿಸಿಕೊಳ್ಳುವಿರಿ. ಮನಸ್ಸು ಭಾರವಾಗಿದ್ದು ಎಲ್ಲರಿಂದ ದೂರವಿರುವ ಮನಸ್ಸಾಗುವುದು. ಆದಾಯವು ಮತ್ತಷ್ಟು ಬೇಕೆನಿಸುವುದು.
ಮಕರ ರಾಶಿ: ಶತ್ರುಗಳ ಕಾಟವು ಆಕಸ್ಮಿಕವಾಗಿ ಕಡಿಮೆ ಆಗಲಿದೆ. ನಿಮ್ಮ ಊಹೆಗಳು ಎಲ್ಲವೂ ವಾಸ್ತವಕ್ಕೆ ದೂರವಾದುದಾಗಿದೆ. ಸಂಗಾತಿಯ ಮಾತುಗಳು ನಿಮಗೆ ಖುಷಿ ಕೊಟ್ಟೀತು. ಬಂಧುಗಳ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರಲಿದೆ. ನಿಮಗೆ ಅರ್ಥವಾಗದ ವಿಚಾರವನ್ನು ಬೇರೆಯವರ ಕಡೆಯಿಂದ ಪಡೆಕೊಳ್ಳುವಿರಿ. ನಿಮ್ಮ ಪ್ರಯಾಣದಲ್ಲಿ ಅಡೆತಡೆಗಳು ಉಂಟಾಗಬಹುದು. ನಿಮ್ಮವರ ಅನಾರೋಗ್ಯದ ಕಾರಣ ಓಡಾಟ ಮಾಡಬೇಕಾದೀತು. ಒಂಟಿಯಾಗಿ ಎಲ್ಲಿಗಾದರೂ ದೂರ ಹೋಗುವಿರಿ. ಅಶಿಸ್ತಿನಿಂದ ವರ್ತಿನೆಯ ಕಾರಣ ನಿಮಗೆ ಎಲ್ಲರಿಂದ ಅಪಮಾನವಾಗಬಹುದು. ಹೊಸ ಉದ್ಯೋಗದ ಅನ್ವೇಷಣೆಯಲ್ಲಿ ತೊಡಗುವಿರಿ. ಅಂದುಕೊಂಡಂತೆ ಆಗಿದ್ದಿ ನಿಮಗೂ ಅಚ್ಚರಿಯಾಗಬಹುದು.
ಕುಂಭ ರಾಶಿ: ಸಾಮಾಜಿಕ ಕ್ಷೇತ್ರದಲ್ಲಿ ಅಪಕೀರ್ತಿ ಬರಬಹುದು. ಉದ್ಯಮದಲ್ಲಿ ಒತ್ತಡದ ಸ್ಥಿತಿ ಬರಬಹುದು. ಅಜಾಗರೂಕತೆಯಿಂದ ವಾಹನ ಚಲಾಯಿಸಿ ಅಪಘಾತ ಮಾಡಿಕೊಳ್ಳುವಿರಿ. ಹಿರಿಯರ ಮಾರ್ಗದರ್ಶನವು ಉಪಯೋಗಕ್ಕೆ ಬರಲಿದೆ. ಹೂಡಿಕೆಯನ್ನು ಒತ್ತಾಯದ ಕಾರಣಕ್ಕೆ ಮಾಡುವಿರಿ. ಮನೆ ಹುಡುಕಾಟಕ್ಕೆ ತಿರುಗಾಟ ಮಾಡಲಿದ್ದೀರಿ. ವಿದ್ಯಾರ್ಥಿಗಳು ಗಂಭೀರವಾಗಿ ಅಧ್ಯಯನದ ಕಡೆ ಗಮನಕೊಡಬೇಕಸದೀತು. ಕಛೇರಿಯಲ್ಲಿ ನಿಮಗೆ ವಹಿಸಿದ ಕೆಲಸವನ್ನು ಮಾಡದೇ ಮೇಲಧಿಕಾರಿಗಳಿಂದ ಕೆಂಗಣ್ಣಿಗೆ ಗುರಿಯಾಗಬೇಕಾದೀತು. ತಂದೆಯ ಆರೋಗ್ಯದ ಬಗ್ಗೆ ನಿಮಗೆ ಚಿಂತೆ ಹೆಚ್ಚಾದೀತು. ಯೋಗ್ಯ ವೈದ್ಯರ ಬಳಿ ಚಿಕಿತ್ಸೆ ಕೊಡಿಸಿ. ಸಹೋದ್ಯೋಗಿಗಳ ಸಹಕಾರವಿಲ್ಲದೇ ನಿಮ್ಮ ಕೆಲಸವನ್ನು ಮುಗಿಸುವಿರಿ. ನಿಮ್ಮ ಮನೋವಿಕಾರವನ್ನು ತಿಳಿಯಲು ಕಷ್ಟವಾದೀತು.
ಮೀನ ರಾಶಿ: ಅಧ್ಯಾತ್ಮದಲ್ಲಿ ಆಸಕ್ತಿಯು ಅಧಿಕವಾಗಿರುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಸ್ಥಳವನ್ನು ಬದಲಿಸುವಿರಿ. ಭೂಮಿಯ ಮಾರಾಟದಿಂದ ಕಲಹವಾಗುವುದು. ಸಂಸಾರದ ಕಲಹಕ್ಕೆ ಮನಸ್ಸು ಕೊಡದೇ ಪ್ರಸನ್ನ ಮನಸ್ಸಿನಿಂದ ಇರುವಿರಿ. ಬೇರೆಯಾದ ಮನಸ್ಸನ್ನು ಒಟ್ಟು ಸೇರಿಸಲಿದ್ದೀರಿ. ಸಹೋದರರ ಜೊತೆ ಮನೆಯ ಆಸ್ತಿಯ ಬಗ್ಗೆ ಮಾತನಾಡುವಿರಿ. ನಿಮ್ಮ ದಿನಚರಿಯನ್ನು ವ್ಯವಸ್ಥಿತವಾಗಿಸಿಕೊಳ್ಳಿ. ಆಪ್ತರ ಜೊತೆ ಮಾತನಾಡಿ ನಿಮ್ಮ ಮನಸ್ಸಿನ ಭಾರವನ್ನೆಲ್ಲ ದೂರ ಮಾಡಿಕೊಳ್ಳುವಿರಿ. ನಿಮ್ಮ ನಿಯಮಗಳು ನಿಮಗೆ ತೊಂದರೆಯಾಗಬಹುದು. ಆರ್ಥಿಕ ಹಿಂಜರಿಕೆಯು ನಿಮಗೆ ಅರಗಿಸಿಕೊಳ್ಳಲು ಕಷ್ಟವಾದೀತು. ಎಲ್ಲರ ಮೇಲಿನ ನಂಬಿಕೆಯನ್ನು ನೀವು ಕಳೆದುಕೊಂಡು ಸಂಕಟಪಡುವಿರಿ. ಮಂದಗತಿಯ ಕೆಲಸಗಳಿಗೆ ನೀವು ಚುರುಕು ನೀಡುವಿರಿ. ಸಾಲ ಪಡೆದವರ ವಿಚಾರದಲ್ಲಿ ನಿಮಗೆ ಅಸಮಾಧಾನವಾಗಲಿದೆ.