Horoscope: ಹಣಕಾಸಿನ‌ ವಿಚಾರದಲ್ಲಿ ಈ ರಾಶಿಯವರು ಜಾಗರೂಕತೆ ವಹಿಸುವುದು ಮುಖ್ಯ

| Updated By: Rakesh Nayak Manchi

Updated on: Sep 27, 2023 | 12:45 AM

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 27) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಹಣಕಾಸಿನ‌ ವಿಚಾರದಲ್ಲಿ ಈ ರಾಶಿಯವರು ಜಾಗರೂಕತೆ ವಹಿಸುವುದು ಮುಖ್ಯ
ಇಂದಿನ ದಿನಭವಿಷ್ಯ
Image Credit source: iStock Photo
Follow us on

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಧನಿಷ್ಠಾ / ಶತಭಿಷಾ, ಯೋಗ: ಧೃತಿ / ಶೂಲ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ರಿಂದ 24 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:24 ರಿಂದ 01:54ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:53 ರಿಂದ 09:23ರ ವರೆಗೆ, ಗುಳಿಕ ಕಾಲ ಬೆಳಗ್ಗೆ 10:53 ರಿಂದ ಮಧ್ಯಾಹ್ನ 12:24ರ ವರೆಗೆ.

ಧನು ರಾಶಿ: ಕುಟುಂಬದ ಜವಾಬ್ದಾರಿಯನ್ನು ಹೊತ್ತು ಮುನ್ನಡೆಸಲು ನಿಮಗೆ ಕಷ್ಟವೆನಿಸುವುದು. ಉದ್ವೇಗಕ್ಕೆ ಒಳಗಾಗುವುದು ಬೇಡ, ಉತ್ತಮ ಸಮಯದ ನಿರೀಕ್ಷೆಯಲ್ಲಿ ನೀವು ಇರುವಿರಿ. ದೂರದ ಬಂಧುಗಳ ಸಮಾಗಮವಾಗಬಹುದು. ಜನರ ಜೊತೆ ಬೆರೆಯುವುದು ನಿಮಗೆ ಇಷ್ಟವಾಗದು. ನಿಮ್ಮ ನಡವಳಿಕೆಯು ಅಹಂಕಾರವಾಗಿ ಬದಲಾಗಬಹುದು. ವರ್ತನೆಯು ಸಂದರ್ಭಕ್ಕೆ ಸರಿಯಾಗಿ ಇರಲಿ. ಸರಿಯಾಗಿ ಪ್ರತಿಕ್ರಯಿಸಲು ನಿಮಗೆ ಬಾರದೇ ಇರುವುದು. ಉದ್ಯೋಗದಲ್ಲಿ ಸ್ವಲ್ಪ ಬದಲಾವಣೆಯನ್ನು ಮಾಡಿಕೊಳ್ಳಬೇಕಾದೀತು. ದಿನಗೂಲಿಯವರಿಗೆ ಕೆಲಸವು ಸಿಗದೇ ಓಡಾಟವು ಅಧಿಕವಾಗಬಹುದು. ಹಣಕಾಸಿನ‌ ವಿಚಾರದಲ್ಲಿ ಜಾಗರೂಕತೆ ಮುಖ್ಯ. ನಿಮ್ಮ‌ ಭವಿಷ್ಯವನ್ನು ಮಿತ್ರರ ಜೊತೆ ಹಂಚಿಕೊಳ್ಳಿ.

ಮಕರ ರಾಶಿ: ನಿಮ್ಮ ಆಸಕ್ತಿಯು ಹೊಸ ಕ್ರಮದ ಹಾದಿಯಲ್ಲಿ ತೋರಿಸಬಹುದು, ನಿಮ್ಮ ಆಲೋಚನೆಗಳನ್ನು ಸರಿಯಾದ ಕಡೆ ವ್ಯಕ್ತಪಡಿಸಿ. ಹೊಸ ವ್ಯವಹಾರಕ್ಕೆ ಹಿಂದೇಟು ಹಾಕುವಿರಿ. ಸಂಗಾತಿಯ ಮಾತು ಸಂಕಟವನ್ನು ತರಬಹುದು. ರಾಜಕೀಯ ವ್ಯಕ್ತಿಗಳಿಂದ ಕೆಲಸಮಾಡಿಸಿಕೊಳ್ಳಲಿದ್ದೀರಿ. ಸ್ನೇಹಿತನ ಸಹವಾಸದಿಂದ ದುರಭ್ಯಾಸಕ್ಕೆ ಬೀಳುವಿರಿ. ಆರೋಗ್ಯದ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ವಿಧವಿಧವಾದ ಔಷಧೋಪಚಾರಗಳನ್ನು ಮಾಡುವಿರಿ. ನಿಮ್ಮ ಮೇಲೆ ಬರುವ ನಕಾರಾತ್ಮಕ ಮಾತುಗಳನ್ನು ಅಲ್ಲಗಳೆಯಲಾರಿರಿ. ಒಂದೇ ರೀತಿಯ ಕೆಲಸದಲ್ಲಿ ನಿಮಗೆ ನಿರುತ್ಸಾಹವಿರಲಿದೆ. ನೆರೆ-ಹೊರೆಯವರ ಜೊತೆ ಮಾತು ಮಿತವಾಗಿರಲಿ.

ಕುಂಭ ರಾಶಿ: ಆಶಾವಾದದಲ್ಲಿಯೇ ನಿಮ್ಮ ಇಂದಿನ ದಿನವನ್ನು ಕಳೆಯುವಿರಿ. ಯೋಜಿತ ಉದ್ಯಮದಲ್ಲಿ ಪಾಲುದಾರರನ್ನು ಸೇರಿಸಿಕೊಂಡು ಮುಂದುವರಿಯಿರಿ. ಸಾಮಾಜಿಕ ಕಾರ್ಯಗಳಿಗೆ ಒತ್ತಡಗಳು ಇರಲಿದೆ. ಪ್ರೀತಿಪಾತ್ರರ ಮೇಲೆ ಸುಖಾಸುಮ್ಮನೆ ಅನುಮಾನ ಬೇಡ. ಸ್ಥಿರಾಸ್ತಿಯ ವಿಚಾರಕ್ಕೆ ಬಿಸಿ ಮಾತುಗಳು ಕುಟುಂಬದಲ್ಲಿ ಬರಬಹುದು. ಕಾನೂನಾತ್ಮಕ ವಿಷಯವನ್ನು ಚರ್ಚಿಸಿ ಕಾರ್ಯರೂಪಕ್ಕೆ ತೆಗೆದುಕೊಂಡು ಬನ್ನಿ. ಕಡಿಮೆ ಖರ್ಚಿನಲ್ಲಿ ಇಂದಿನ ಕಾರ್ಯವು ನೋಡಿಕೊಳ್ಳಿ. ಉತ್ಸಾಹವನ್ನು ನಿಮ್ಮವರ ಚುಚ್ಚು ಮಾತು ಕಡಿಮೆ ಮಾಡಬಹುದು. ಮಾತನಾಡಿ ತಪ್ಪಿನಲ್ಲಿ ಸಿಕ್ಕಿಬೀಳುವ ಸಾಧ್ಯತೆ ಇದೆ. ಅಪರಿಚಿತ ಸ್ಥಳಗಳಿಗೆ ಹೋಗುವ ಸಂದರ್ಭವು ಬರಬಹುದು.

ಮೀನ ರಾಶಿ: ಇಂದು ಕೌಂಟುಬಿಕ ವ್ಯವಹಾರದಲ್ಲಿ ಮಹತ್ತ್ವದ ತಿರುವು ಸಿಗುವ ಸಂಭವವಿದೆ. ಕಠಿಣ ಪರಿಶ್ರಮದಿಂದ ನಿಮ್ಮ ವೃತ್ತಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುವಿರಿ. ಪಾಲುದಾರಿಕೆಯಲ್ಲಿ ಉಂಟಾದ ಗೊಂದಲ್ಲವನ್ನು ಸರಿ ಮಾಡಿಕೊಂಡೂ ಮೈತ್ರಿ ಮಾಡಿಕೊಂಡಲ್ಲಿ ಇಬ್ಬರಿಗೂ ಅನುಕೂಲವಿದೆ. ನಿಮ್ಮ ಸ್ಥಿರಾಸ್ತಿ ಪರಿಶೀಲನೆಯನ್ನು ಇಂದು ಮಾಡಿಕೊಳ್ಳಿ. ನಿಮ್ಮ‌ ಕಷ್ಟವನ್ನು ಸ್ನೇಹಿತರ ಜೊತೆ ಹಂಚಿಕೊಳ್ಳುವುದೂ ಕಷ್ಟವಾದೀತು. ನಿಮಗೆ ಕೊಟ್ಟ ಜವಾಬ್ದಾರಿಯನ್ನು ಅತ್ಯಂತ ಕಾಳಜಿಯಿಂದ ನೋಡಿಕೊಳ್ಳುವಿರಿ. ನಿಮ್ಮ ಯಶಸ್ಸೇ ನಿಮಗೆ ಮುಳುವಾಗಬಹುದು. ಹಿರಿಯರ ಮಾರ್ಗದರ್ಶನವನ್ನು ಅಲ್ಲಗಳೆಯುವಿರಿ. ಸೌಲಭ್ಯಗಳನ್ನು ಸದುಪಯೋಗವಾಗುವಂತೆ ನೋಡಿಕೊಳ್ಳಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ