AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ರಾಶಿಭವಿಷ್ಯ, ಈ ರಾಶಿಯವರ ದಾಂಪತ್ಯದಲ್ಲಿ ಹಳೆಯ ಬೇಸರವೆಲ್ಲ ದೂರವಾಗಿ ಸಂತೋಷವು ಇರಲಿದೆ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 28) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today: ರಾಶಿಭವಿಷ್ಯ, ಈ ರಾಶಿಯವರ ದಾಂಪತ್ಯದಲ್ಲಿ ಹಳೆಯ ಬೇಸರವೆಲ್ಲ ದೂರವಾಗಿ ಸಂತೋಷವು ಇರಲಿದೆ
ದಿನಭವಿಷ್ಯImage Credit source: iStock Photo
TV9 Web
| Updated By: Rakesh Nayak Manchi|

Updated on: Aug 28, 2023 | 12:45 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಆಗಸ್ಟ್ 28 ಸೋಮವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಉತ್ತರಾಷಾಢ, ಯೋಗ: ಆತುಷ್ಮಾನ್, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 46 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:54 ರಿಂದ 09:27ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 11:00 ರಿಂದ ಮಧ್ಯಾಹ್ನ 12:34ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:07 ರಿಂದ 03:40ರ ವರೆಗೆ.

ಧನು ರಾಶಿ: ಮಾಹಿತಿಯ ಕೊರತೆಯಿಂದ ತಪ್ಪಾದ ಕೆಲಸಕ್ಕೆ ಪಶ್ಚಾತ್ತಾಪ ಪಡುವಿರಿ. ನಿಮಗೆ ಗೌರವವು ಸಿಗದ ಕಡೆ ನೀವು ಹೋಗಲು ಇಷ್ಟಪಡುವುದಿಲ್ಲ. ಸಮಾರಂಭಕ್ಕೆ ಭೇಟಿ ಕೊಡುವುದು ನಿಮಗೆ ಇಷ್ಟವಾಗದು. ಉದ್ಯಮದಲ್ಲಿ ಗಟ್ಟಿಯಾದ ನಿರ್ಧಾರವನ್ನು ತೆಗೆದುಕೊಳ್ಳದಿದ್ದರೆ ಕಷ್ಟವಸದೀತು. ಉದ್ಯೋಗವನ್ನು ಕಳೆದುಕೊಳ್ಳುವ ಭೀತಿಯು ಇರಲಿದೆ. ವೃತ್ತಿಯನ್ನು ಹೊರತುಪಡಿಸಿದ ಆದಾಯ ಬರುವ ಕೆಲಸವನ್ನು ನೀವು ಹುಡುಕಿಕೊಳ್ಳುವಿರಿ. ವಾತಕ್ಕೆ ಸಂಬಂಧಿಸಿದ ರೋಗವು ಕಾಣಿಸಿಕೊಳ್ಳಬಹುದು. ಬಂಧುಗಳ ಜೊತೆ ಹೆಚ್ಚಿನ ಸಮಯವನ್ನು ಕಳೆಯಬೇಕಾಗಬಹುದು. ಅತಿಯಾದ ಮಾತು ನಿಮಗೆ ಕಿರಿಕಿರಿ ಅನಿಸೀತು.

ಮಕರ ರಾಶಿ: ಸಂಗಾತಿಯ ಜೊತೆ ಹೆಚ್ಚಿನ ಸಮಯವನ್ನು ನೀವು ಕಳೆಯುವಿರಿ. ಖರೀದಿಯನ್ನು ಮಾಡುವಿರಿ. ಸಂತಾನದ ಬಯಕೆಯನ್ನು ಹಂಚಿಕೊಳ್ಳುವಿರಿ. ಸರಳವಾದ ಕೆಲಸವನ್ನು ಸಂಕೀರ್ಣ ಮಾಡಿಕೊಳ್ಳುವುದು ಬೇಡ. ಸಹೋದರನಿಂದ ತುರ್ತಾಗಿ ಹಣವನ್ನು ಪಡೆಯುವಿರಿ. ಬಳಕೆಯಾದ ವಾಹನವನ್ನು ಖರೀದಿಸುವಿರಿ. ತೆಗೆದುಕೊಂಡ ಹಣವನ್ನು ಪಡೆಯಲು ನಿಮಗೆ ಕಷ್ಟವಾದೀತು. ಸ್ಥಿರಾಸ್ತಿಯ ವಿಚಾರಕ್ಕೆ ನೀವು ಕಾನೂನಿಗೆ ಶರಣಾಗುವಿರಿ. ಸರ್ಕಾರದ ಕೆಲಸಗಳನ್ನು ಬೇಗ ಮುಗಿಸಿಕೊಳ್ಳಲು ಪ್ರಯತ್ನಿಸುವಿರಿ. ಮಾತುಗಾರಿಗೆ ಹಿನ್ನಡೆಯಾಗಲಿದೆ. ಸಿಕ್ಕ ಅವಕಾಶಗಳನ್ನು ಚೆನ್ನಾಗಿ ಬಳಸಿಕೊಳ್ಳುವಿರಿ.

ಕುಂಭ ರಾಶಿ: ಕುಟುಂಬದಲ್ಲಿ ಅನಿರೀಕ್ಷಿತ ತಿರುವು ಬರಲಿದೆ. ಅನಾರೋಗ್ಯದಿಂದ ಕಷ್ಟಪಡುವಿರಿ. ಸಾಲ ಮಾಡುವ ಯೋಚನೆಯನ್ನು ನೀವು ಬದಲಿಸುವಿರಿ. ಇಂದಿನ ಕೆಲಸವನ್ನು ಬೇಗ ಮುಗಿಸಿ ವಿಶ್ರಾಂತಿಯನ್ನು ಪಡೆಯುವಿರಿ. ನಿಮ್ಮವರ ಮೇಲೆ ತಪ್ಪು ತಿಳಿವಳಿಕೆಯನ್ನು ಇಟ್ಟುಕೊಂಡಿದ್ದು ಅದನ್ನು ಬದಲಿಸಿ. ನಿಮ್ಮ ವಿವಾಹಕ್ಕಾಗಿ ಬಂಧುಗಳು ಪ್ರಯತ್ನಿಸುವರು. ಅಧಿಕಾರದಲ್ಲಿದ್ದರೂ ನಿಮ್ಮ ಪ್ರಭಾವ ಕಡಿಮೆಯಾದೀತು. ರಾಜಕಾರಣಿಗಳು ಬೆಂಬಲಿಗರನ್ನು ಉಳಿಸಿಕೊಳ್ಳಬೇಕಾಗುವುದು. ವಿದ್ಯಾರ್ಥಿಗಳಿಗೆ ಭವಿಷ್ಯವನ್ನು ಸ್ಪಷ್ಟಪಡಿಸಬೇಕಾಗುವುದು. ಕೆಲವರ‌ ಮೇಲೆ ನಿಮಗೆ ಅಸಮಾಧಾನ ಇರಲಿದೆ.

ಮೀನ ರಾಶಿ: ನಿಮಗೆ ದೂರದಲ್ಲಿರುವ ಮಕ್ಕಳನ್ನು ಕಾಣದೇ ಬೇಸರವಾಗಲಿದೆ. ಕಾನೂನಿಗೆ ವಿರುದ್ಧವಾದ ಮಾರ್ಗದಲ್ಲಿ ಹಣಸಂಪಾದನೆಯನ್ನು ಮಾಡುವ ಯೋಚನೆ ಬರುವುದು. ನಿಮ್ಮ ಉದ್ಯಮದಕ್ಕೆ ಸೂಕ್ತವಾದ ವ್ಯಕ್ತಿಗಳನ್ನು ಸೇರಿಸಿಕೊಳ್ಳಿ. ನಿಮಗೆ ಕೊಟ್ಟ ಅಧಿಕಾರವನ್ನು ಸದುಪಯೋಗಿ ಮಾಡಿಕೊಂಡು ಎಲ್ಲರ ಪ್ರೀತಿಯನ್ನು ಗಳಿಸುವಿರಿ. ಸಣ್ಣ ಸಣ್ಣ ವಿಚಾರಗಳಿಗೆ ಸಿಟ್ಟಾಗುವ ಅವಶ್ಯಕತೆ ಇಲ್ಲ. ತಾಳ್ಮೆಯಿಂದಲೇ ಮಾತನಾಡಿ. ಬಾಕಿ ಉಳಿದ ಕಛೇರಿಯ ಕಾರ್ಯಗಳನ್ನು ಮಾಡುವಿರಿ. ದಾಂಪತ್ಯದಲ್ಲಿ ಹಳೆಯ ಬೇಸರವೆಲ್ಲ ದೂರವಾಗಿ ಸಂತೋಷವು ಇರಲಿದೆ. ಶಿವನಿಗೆ ಪ್ರಿಯವಾದ ಬಿಲ್ವಪತ್ರೆಯನ್ನು ಸಮರ್ಪಿಸಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​