Horoscope Today: ರಾಶಿಭವಿಷ್ಯ, ಉದ್ಯಮವನ್ನು ಮಾಡುವವರಿಗೆ ಕೆಲವು ತೊಂದರೆಗಳು ಬರಬಹುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 28) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today: ರಾಶಿಭವಿಷ್ಯ, ಉದ್ಯಮವನ್ನು ಮಾಡುವವರಿಗೆ ಕೆಲವು ತೊಂದರೆಗಳು ಬರಬಹುದು
ಇಂದಿನ ದಿನಭವಿಷ್ಯImage Credit source: Getty Images
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: Rakesh Nayak Manchi

Updated on: Jul 28, 2023 | 12:45 AM

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಕೆಲವರು ಬೆಳಗ್ಗೆ ಎದ್ದ ಕೂಡಲೇ ರಾಶಿ ಭವಿಷ್ಯ (Daily horoscope) ತಪ್ಪದೇ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯದಿಂದ ತಿಳಿದುಕೊಳ್ಳುತ್ತಾರೆ. ಅದರ ಜೊತೆಗೆ ನಿತ್ಯಪಂಚಾಂಗ ಕೂಡ ಓದುತ್ತಾರೆ. ಹಾಗಾದರೆ ಇಂದಿನ (2023 ಜುಲೈ 28) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ?, ಯಾರಿಗೆ ಲಾಭ?, ಯಾರಿಗೆ ನಷ್ಟ?, ಯಾರಿಗೆ ಶುಭ, ಅಶುಭ? ಇಲ್ಲಿ ನೋಡಿ ನಿಮ್ಮ ಭವಿಷ್ಯ.

ನಿತ್ಯಭವಿಷ್ಯ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ದಶಮೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಶುಕ್ಲ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 15 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:03 ರಿಂದ 12:39ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:50 ರಿಂದ 5:26ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:52 ರಿಂದ 09:27ರ ವರೆಗೆ.

ಧನಸ್ಸು: ಒಂದು ಕಡೆ ಹಣದ ವ್ಯವಹಾರವನ್ನು ಮುಕ್ತಾಯ ಮಾಡಿದರೆ ಮತ್ತೊಂದು ಕಡೆಗೆ ತೆರೆದುಕೊಳ್ಳುವುದು. ಸಂಗಾತಿಯ ಒತ್ತಾಯದ ಮೇರೆಗೆ ಹೊಸ ಉದ್ಯೋಗಕ್ಕೆ ಹೋಗುವ ಮನಸ್ಸು ಮಾಡುವಿರಿ. ವಿದ್ಯಾರ್ಥಿಗಳಿಗೆ ಮನಸ್ಸು ಚಂಚಲವಾಗಿದ್ದು ಗಂಭೀರವಾಗಿ ಇದನ್ನು ಪರಿಗಣಿಸಬೇಕಾದೀತು. ಸಮಾರಂಭಗಳಿಗೆ ಭೇಟಿ ನೀಡುವಿರಿ. ಹೂಡಿಕೆಯ ಹಣವು ಎಷ್ಟೋ ವರ್ಷಗಳ ಅನಂತರ ಸಿಗಲಿದ್ದು ನಿಮ್ಮ ಸರಿಯಾಗಿ ಉಪಯೋಗಕ್ಕೆ ಬರಲಿದೆ. ಸುಲಭವಾದ ಕೆಲಸವನ್ನು ಸಂಕೀರ್ಣ ಮಾಡಿಕೊಳ್ಳುವ ಸಾಧ್ಯತೆ ಇದೆ. ಸಂಗಾತಿಗಳು ಒಂದೆಡೆ ಕುಳಿತು ನಿಮ್ಮ ಮನಸ್ಸನ್ನು ಹಂಚಿಕೊಳ್ಳಿ.

ಮಕರ: ಶತ್ರುಗಳ ಕಾಟವನ್ನು ಕಡಿಮೆ‌ ಮಾಡಿಕೊಳ್ಳಲು ಯೋಜನೆಯನ್ನು ರೂಪಿಸಿಕೊಳ್ಳುವಿರಿ. ಉದ್ಯಮವನ್ನು ಮಾಡುವವರಿಗೆ ಕೆಲವು ತೊಂದರೆಗಳು ಬರಬಹುದು.‌ ಸರ್ಕಾರಿ ಉದ್ಯೋಗದಲ್ಲಿ ಇದ್ದವರಿಗೆ ಕೆಲಸದ ಒತ್ತಡವು ಮೇಲಧಿಕಾರಿಗಳಿಂದ ಬರಲಿದೆ. ದೂರ ಪ್ರಯಾಣವನ್ನು ಮಾಡಲು ಬೇಕಾದ ತಯಾರಿಯ ಜೊತೆ ಹೊರಡಿ. ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ. ಸಹೋದರನಿಗೆ ಸಹಾಯವನ್ನು ಮಾಡುವ ಮನಸ್ಸು ಇರಲಿದೆ. ಅಮೂಲ್ಯ ವಸ್ತುಗಳನ್ನು ಖರೀದಿಸುವಿರಿ. ಕೊಟ್ಟಿರುವ ಹಣದ ನಿರೀಕ್ಷೆಯಲ್ಲಿ ಇರುವಿರಿ. ದೈವಾನುಗ್ರಹದ ಕೊರತೆ ಇರಲಿದೆ.

ಕುಂಭ: ಅಪರೂಪದ ದ್ರವ್ಯಗಳು ಸಿಗಲಿದೆ‌. ಕುಟುಂಬದ ಜೊತೆ ಸಮಯವನ್ನು ಕಳೆದುದಕ್ಕೆ ಮನಸ್ಸು ನೆಮ್ಮದಿಯಿಂದ ಇರಲಿದೆ. ಗಣ್ಯರ ವ್ಯಕ್ತಿತ್ವವು ನಿಮ್ಮ ಮೇಲೆ ಪ್ರಭಾವವನ್ನು ಬೀರಬಹುದು. ಖರ್ಚನ್ನು ಕಡಿಮೆ ಮಾಡಿಕೊಂಡ ಕಾರಣ ಆರ್ಥಿಕತೆಯು ಉತ್ತಮವಾದಂತೆ ಅನ್ನಿಸುವುದು. ಸುಮ್ಮನೇ ಆಡಿದ ಮಾತುಗಳೂ ನಿಮಗೆ ತೊಂದರೆಯಾಗಬಹುದು. ನಿಮ್ಮ ವಿರುದ್ಧ ನಡೆಯುವ ಪಿತೂರಿಯನ್ನು ತಿಳಿದುಕೊಳ್ಳುವಿರಿ. ಹಿರಿಯರಿಗೆ ಅಗೌರವವನ್ನು ತೋರುವಿರಿ. ದೇವರ ಸನ್ನಿಧಿಯಲ್ಲಿ ನಿಮಗೆ ನೆಮ್ಮದಿಯು ಸಿಗಲಿದೆ. ಆಗಿರುವ ನಕಾರಾತ್ಮಕತೆಯನ್ನು ಮರೆತು ಮುನ್ನಡೆಯುವಿರಿ.

ಮೀನ: ನೂತನ ವಸ್ತ್ರಾದಿಗಳು ಬಂಧುಗಳಿಂದ ನಿಮಗೆ ಸಿಗಲಿದೆ. ಕೆಲಸದಲ್ಲಿ ಬದಲಾವಣೆಯನ್ನು ನೀವು ಬಯಸುವಿರಿ. ಅಧಿಕಾರಿಗಳಿಂದ ಪ್ರಶಂಸೆಯು ಸಿಕ್ಕಿ ಕೆಲಸದಲ್ಲಿ ಉತ್ಸಾಹವು ಇರಲಿದೆ. ಖಾಸಗಿ ಉದ್ಯೋಗಿಗೆ ಮುಖ್ಯಸ್ಥರಿಂದ ಕಿರಿಕಿರಿ ಆಗಬಹುದು. ಸ್ನೇಹಿತರ ಸಮಸ್ಯೆಯನ್ನು ಬಿಡಿಸಲು ನೀವು ಮುಂದಾಗುವಿರಿ. ನಿಮ್ಮ ಕೆಲಸಗಳನ್ನು ಮುಗಿಸುವ ಚಿಂತೆಯಲ್ಲಿ ಇರುವಿರಿ. ಹಣಕಾಸಿನ‌ ಹರಿವಿನಿಂದ ಸಂತೋಷವಾಗಲಿದೆ. ಸಂಪಾದನೆಗೆ ಅವಕಾಶಗಳು ನಿಮಗೆ ಸಿಗಬಹುದು. ಇಂದು ಕಾರ್ಯದ ಒತ್ತಡವು ಅಧಿಕವಾಗಿ ಇರಲಿದೆ. ದೈವಬಲಕ್ಕೆ ಪುರುಷಪ್ರಯತ್ನವೂ ಇರಲಿ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ