AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರಿಗೆ ಶತ್ರುಗಳ ಕಾಟಗಳು ಉತ್ಸಾಹವನ್ನು ಭಂಗ ಮಾಡಬಹುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 28) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರಿಗೆ ಶತ್ರುಗಳ ಕಾಟಗಳು ಉತ್ಸಾಹವನ್ನು ಭಂಗ ಮಾಡಬಹುದು
ರಾಶಿ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 28, 2023 | 12:45 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 28 ಶನಿವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ರೇವತೀ, ಯೋಗ: ವಜ್ರ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 27 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:22 ರಿಂದ 10:49 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:43 ರಿಂದ 15:11 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:28 ರಿಂದ 07:55ರ ವರೆಗೆ.

ಧನು ರಾಶಿ : ಉದ್ಯೋಗದಲ್ಲಿ ಒತ್ತಡಗಳು ಇರುವುದುರಿಂದ ಕುಟುಂಬಕ್ಕೆ ಸಮಯವನ್ನು ಕೊಡಲಾಗದು. ವೈವಾಹಿಕ ಜೀವನದ ಚಿಂತೆ ಅತಿಯಾಗಿ ಕಾಡಬಹುದು. ಪಾಲುದಾರಿಕೆಯಲ್ಲಿ ಉಂಟಾದ ವಿವಾದವನ್ನು ದೊಡ್ಡ ಮಾಡಿಕೊಳ್ಳುವಿರಿ. ಆಲಸ್ಯದಿಂದ ಎಲ್ಲ ಕಾರ್ಯದಲ್ಲಿಯೂ ನಿರಾಸಕ್ತಿ ಇರಲಿದೆ. ಮಕ್ಕಳಿಂದ ಧನಸಹಾಯದ ನಿರೀಕ್ಷೆ ಇರಲಿದೆ. ವಿದ್ಯಾಭ್ಯಾಸದ ಹಿನ್ನಡೆಯು ನಿಮಗೆ ಅವಮಾನ ಎನಿಸುವುದು. ಈ ದಿನ ನೀವು ಸಂತೋಷವಾಗಿರುವಿರಿ. ಆದರೆ ಅಸಭ್ಯ ವರ್ತನೆಯು ಕೆಲವರಿಂದ ಮಾತುಗಳು ಕೇಳಿಬರಬಹುದು. ಕೆಲಸದ ಬಿಡುವಿಲ್ಲದಿದ್ದರೂ ಇನ್ನಿತರ ಚಟುವಟಿಕೆಯಲ್ಲಿ ಭಾಗ ವಹಿಸುವಿರಿ. ಇಂದು ನೀವು ಯಾವುದೇ ಒಂದು ಸರಿಯಾದ ನಿರ್ಧಾರಕ್ಕೆ ಬರಲಾಗದು. ನಿಮ್ಮ ನೆಮ್ಮದಿಯನ್ನು ಇತರರು‌ ಕಂಡು ಅಸೂಯೆಪಡಬಹುದು.

ಮಕರ ರಾಶಿ : ದೀರ್ಘಕಾಲದ ರೋಗದಿಂದ ಬಳಲಿಕೆಯು ನಿಮಗೆ ಅಭ್ಯಾಸವಾಗಲಿದೆ. ನ್ಯಾಯಾಲಯಕ್ಕೆ ಅಲೆದಾಟವು ಇರಲಿದೆ. ಶತ್ರುಗಳ ಕಾಟಗಳು ಉತ್ಸಾಹವನ್ನು ಭಂಗ ಮಾಡಬಹುದು. ದೈವದ ಭೀತಿಯು ನಿಮ್ಮನ್ನು ಕಾಡಬಹುದು. ರಾಜಕಾರಣಿಗಳಿಂದ ನಿಮ್ಮ ಕೆಲಸವು ಪೂರ್ಣವಾಗಲಿದೆ. ದುಃಸ್ವಪ್ನಗಳು ಬೀಳಬಹುದು. ಈ ದಿನ ನೀವು ಶಾರೀರಿಕ ಕಾಳಜಿಯನ್ನು ಹೆಚ್ಚು ಮಾಡಬೇಕಾದೀತು. ಕೈ ಮತ್ತು ಕಾಲುಗಳಲ್ಲಿ ನೋವು ಕಾಣಿಸಿಕೊಂಡು ದೈನಂದಿನ ಕೆಲಸಗಳೂ ಕಷ್ಟವಾದೀತು. ಇಂದು ವ್ಯವಹಾರದಲ್ಲಿ, ಮಾತುಗಳು ಹೆಚ್ಚು ತೀವ್ರವಾಗಿರಲಿದ್ದು, ಅದರ ಸರಿಯಾದ ಪ್ರಯೋಜನು ವಿಳಂಬದಿಂದ ಬರುವುದು. ಕುಟುಂಬ ವಾತಾವರಣವು ಇಂದು ಹೆಚ್ಚು ಭಾವನಾತ್ಮಕವಾಗಿ ಇರುತ್ತದೆ. ವೈವಾಹಿಕ ಜೀವನದಲ್ಲಿ ವಿಶ್ವಾಸವು ಕಾಣಿಸಿಕೊಳ್ಳುವುದು. ಹಿರಿಯ ಅಧಿಕಾರಿಗಳ ಜೊತಡ ವೈಮಸ್ಸು ಬರಬಹುದು, ಎಚ್ಚರದಿಂದಿರಿ.

ಕುಂಭ ರಾಶಿ : ದಾಂಪತ್ಯದಲ್ಲಿ ನಿರಾಸಕ್ತಿ ಉಂಟಾಗಬಹುದು. ಪಾಲುದಾರಿಕೆಯಲ್ಲಿ ಸಮಸ್ಯೆ ಕಾಣಿಸುವುದು. ಉದ್ಯಮದಲ್ಲಿ ಪ್ರಗತಿಯನ್ನು ಕಂಡು ಖುಷಿಯಾಗುವುದು. ಪರಸ್ಥಳದಲ್ಲಿ ವಾಸ ಮಾಡುವ ಸಂದರ್ಭವು ಬರಲಿಸೆ. ನಿಮಗೆ ಯಾರಿಂದಲೋ ರಕ್ಷಣೆ ಇದೆ ಎನ್ನಿಸಬಹುದು. ಮನೆಯಲ್ಲೂ ತಾಳ್ಮೆಯನ್ನು ಇಟ್ಟುಕೊಳ್ಳಿ. ಯಾರೊಬ್ಬರ ಮಾತುಗಳಿಗೆ ತ್ವರಿತ ಪ್ರತಿಕ್ರಿಯೆ ಕೊಡುವುದು ಬೇಡ. ಶುಭ ಸುದ್ದಿಯು ನಿಮ್ಮನ್ನು ಪ್ರೋತ್ಸಾಹಿಸಬಹುದು. ಖಾಸಗಿ ಸಂಸ್ಥೆ ದೂರದೃಷ್ಟಿಯ ಯೋಜನೆಯು ಪ್ರಯೋಜನವಾದೀತು. ಇಂದು ಮನೆಯ ಸದಸ್ಯರ ಮನವೊಲಿಸುವುದು ಕಷ್ಟವಾಗದು.‌ ನಿರಾಶೆಯನ್ನು ಉಂಟುಮಾಡವ ಆಲೋಚನೆಗಳನ್ನು ತಪ್ಪಿಸಿ. ಬೇಗನೆ ಹಣವನ್ನು ಸಂಪಾದಿಸಲು ಅನ್ಯ ಮಾರ್ಗವನ್ನು ಹಿಡಿಯಬಹುದು. ಹೊಸ ಸಂಪರ್ಕದಿಂದ ಅದೃಷ್ಟ ಬದಲಾಗುತ್ತದೆ.

ಮೀನ ರಾಶಿ : ಸ್ವಂತ ವ್ಯಾಪಾರದಲ್ಲಿ ಹಿನ್ನಡೆಯಾಗುವುದು‌. ಮರಣ ಭಯವು ಕಾಡಬಹುದು. ತೆಗಳಿಕೆಯನ್ನು ಛಲವಾಗಿ ತೆಗೆದುಕೊಳ್ಳುವಿರಿ. ಯಾರ ಮೇಲೂ ಅವಮಾನ ಬೇಡ. ಇಂದು ಕೆಲಸದಲ್ಲಿ ಯಾವುದೇ ಅನಾನುಕೂಲತೆ ಇರುವುದಿಲ್ಲ. ವಾಣಿಜ್ಯದಲ್ಲೂ ಕೆಲಸ ಸುಗಮವಾಗಿ ನಡೆಯುವುದು.‌ ಹಿಂದಿನ ತಪ್ಪುಗಳು ಪಾಠವಾಗುವುದು. ಹಳೆಯ ಸಾಲವನ್ನು ಮರುಪಡೆಯಲು ಸಾಧ್ಯವಾಗದು. ಇಂದು ತಂದೆ ಹೇಳಿದ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುವಿರಿ. ಕೆಲವು ವಿಷಯಗಳ ಬಗ್ಗೆ ಮನೆಯ ಹಿರಿಯರಿಂದ ವ್ಯತ್ಯಾಸಗಳು ಆಗಬಹುದು. ಕೆಲವು ಸಮಯದಲ್ಲಿ ಪರಿಸ್ಥಿತಿ ಸಹ ಸಾಮಾನ್ಯವಾಗಿರುತ್ತದೆ. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸಲಿದ್ದೀರಿ. ಆರ್ಥಿಕವಾಗಿ ಉತ್ತಮ ದಿನವಾಗಿದೆ.

-ಲೋಹಿತಶರ್ಮಾ – 8762924271 (what’s app only)

Follow Us
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ