Horoscope: ಈ ರಾಶಿಯವರು ಸುಮ್ಮನೇ ಸಂಶಯಪಟ್ಟು ಸಂಬಂಧ ದೂರ ಮಾಡಿಕೊಳ್ಳುವಿರಿ

| Updated By: ಗಂಗಾಧರ​ ಬ. ಸಾಬೋಜಿ

Updated on: Oct 29, 2023 | 12:20 AM

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 29) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರು ಸುಮ್ಮನೇ ಸಂಶಯಪಟ್ಟು ಸಂಬಂಧ ದೂರ ಮಾಡಿಕೊಳ್ಳುವಿರಿ
ಪ್ರಾತಿನಿಧಿಕ ಚಿತ್ರ
Image Credit source: iStock Photo
Follow us on

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 29 ಭಾನುವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ಸಿದ್ಧಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 27 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಸಂಜೆ 04:37 ರಿಂದ 06:05 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:16 ರಿಂದ 01:43 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:10 ರಿಂದ 04:37ರ ವರೆಗೆ.

ಧನು ರಾಶಿ: ಹಳೆಯ ಮಿತ್ರನನ್ನು ಉದ್ಯಮದ ಪಾಲುದಾರಿಕೆಯಲ್ಲಿ ಜೋಡಿಸಿಕೊಳ್ಳುವಿರಿ. ನಿರೀಕ್ಷಿತ ಸಂದರ್ಭವು ಇಂದು ಬರಲಿದ್ದು ಅದನ್ನು ಬಳಸಿಕೊಳ್ಳುವಿರಿ. ಆಕಸ್ಮಿಕವಾಗಿ ಧನಲಾಭವು ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು. ಮನಸ್ಸಿನ ಸ್ಥಿರತೆಯಲ್ಲಿ ಅಭಾವವಿದ್ದು ನಿಮ್ಮ ಗುರಿಯೂ ಬದಲಾಗುವುದು. ಜಾಣ್ಮಯಿಂದ ನಿಮ್ಮ ಕಾರ್ಯವನ್ನು ಸಾಧಿಸಿ. ಪ್ರೇಮವು ಕೊನೆಗೂ ಅಂದುಕೊಂಡಂತೆ ಆಗಲಿದೆ. ಇಂದು ಖುಷಿಯಿಂದ ಹಣವನ್ನು ಖರ್ಚು ಮಾಡುವಿರಿ. ಇಂದು ನೀವಾಡವ ಮಾತು ತೂಕದ್ದಾಗಿರಲಿದೆ. ನಿಮ್ಮ ಕೆಲಸಗಳನ್ನು ಮೇಲಧಿಕಾರಿಗಳು ಪರಿಶೀಲಿಸುವರು. ವ್ಯಾಪಾರದಲ್ಲಿ ನೀವು ತಜ್ಞರಾಗಿದ್ದು ಅಧಿಕ ಲಾಭವನ್ನು ಗಳಿಸುವಿರಿ. ಸಂತೋಷದ ವಿಚಾರವನ್ನು ಹೇಳಲು ಸಂಕೋಚವಾಗುವುದು. ಇಷ್ಟವಿಲ್ಲದಿದ್ದರೂ ಇನ್ನೊಬ್ಬರ ಮಾತಿಗೆ ಮೌಕಿಕ ಬೆಂಬಲ ಕೊಡಬೇಕಾದೀತು.

ಮಕರ ರಾಶಿ: ಅಪರಿಚಿತರ ಸಹಾಯದಿಂದ ಪೂರ್ಣ ನಂಬಿಕೆ ಬರದು. ಹೊಸಬರನ್ನು ಸಾಮಾಜಿಕ ತಾಣದಲ್ಲಿ ಪರಿಚಯ ಮಾಡಿಕೊಳ್ಳುವಿರಿ. ತಂದೆಯ ಮಾತು ನಿಮಗೆ ಬೇಸರ ತರಿಸಬಹುದು. ಕಲಾವಿದರು ಉತ್ತಮ ಅವಕಾಶದ ನಿರೀಕ್ಷೆಯಲ್ಲಿ ಇರುವಿರಿ. ದಾಂಪತ್ಯದಲ್ಲಿ ಸಾಮರಸ್ಯದ ಕೊರತೆ ಬಗೆ ಹರಿಯಬಹುದು. ಕುಟುಂಬದ ನೆಮ್ಮದಿಯು ನಿಮ್ಮ ಮಾತಿನಿಂದ ವಿಚಲಿತವಾಗುವುದು. ಸ್ವಂತ ಶ್ರಮದಿಂದ ಗಳಿಸಿದ್ದು ನಿಮಗೆ ಆಪ್ತವೆನಿಸಲಿದೆ. ಮಾಡಬೇಕೆಂದುಕೊಂಡ ಕಾರ್ಯಕ್ಕೆ ತೊಂದರೆ ಬಂದರೂ ಬಿಡದೇ ಮುಂದುವರಿಸುವಿರಿ. ಆದಾಯದ ಹೆಚ್ಚಿಸಿಕೊಳ್ಳು ವಿಚಾರದಲ್ಲಿ ನೀವು ಬಹಳ ಹಿಂದೆ. ಕುಟುಂಬದ ಜೊತೆ ಸುಖವಾದ ಪ್ರಯಾಣವನ್ನು ಮಾಡುವಿರಿ. ದಾಂಪತ್ಯದಲ್ಲಿ ಮನಸ್ತಾಪವು ನಿಮ್ಮ ಮೌನದಿಂದ‌ ಶಾಂತವಾಗುವುದು.‌ ಒಂಟಿಯಾಗಿ ಸುತ್ತುವ ಆಸೆಯಾಗುವುದು.

ಕುಂಭ ರಾಶಿ: ದಿನನಿತ್ಯ ವಸ್ತುಗಳ ಮಾರಾಟಗಾರರಿಗೆ ಲಾಭವು ಹೆಚ್ಚಿರುವುದು. ಮಕ್ಕಳ‌ ವಿದ್ಯಾಭ್ಯಾಸದ ಚಿಂತೆಯು ದೂರಾಗುವುದು. ಉತ್ತಮ ಸ್ಥಳವು ಸಿಕ್ಕಿದ್ದು ನಿಮಗೆ ಖುಷಿಯೂ ಆಗುವುದು. ಮನೆಯಿಂದ ಹೊರಗೆ ಹೋಗಿ‌ ಇಡೀ ದಿನವನ್ನು ಕಳೆದುಬರುವಿರಿ. ಅಪರಿಚಿತರ ಜೊತೆ ಜಗಳವಾಡಿ ಸಮಯವನ್ನು ವ್ಯರ್ಥ ಮಾಡುವಿರಿ.‌ ಪ್ರೀತಿಗೆ ಯೋಗ್ಯರನ್ನು ಹುಡುಕುವಿರಿ. ವಿದ್ಯಾಭ್ಯಾಸದ ಪ್ರಗತಿಯಿಂದ ಮನೆಯಲ್ಲಿ ಖುಷಿ ಇರಲಿದೆ. ನಿಮ್ಮ ಒರಟಾದ ಮಾತು ನೌಕರರು ಸಿಟ್ಟಾಗುವಂತೆ ಮಾಡುವುದಹ. ನಿಯಮದ ತಪ್ಪಿಗೆ ದಂಡವನ್ನು ಕೊಡಬೇಕಾದೀತು. ನಿಮ್ಮ ಅವಕಾಶಗಳನ್ನು ಅನ್ಯರು ಬಳಸಿಕೊಂಡಾರು. ಅತಿಯಾದ ಉತ್ಸಾಹದಲ್ಲಿರುವ ನಿಮಗೆ ಸಂಗಾತಿಯ ಮಾತು ಉತ್ಸಾಹ ಭಂಗವನ್ನು ಮಾಡೀತು. ಹಳೆಯ ಸ್ನೇಹಿತರು ಉಪಕಾರ ಸ್ಮರಣೆಯಿಂದ ಸಹಾಯ ಮಾಡುವರು.

ಮೀನ ರಾಶಿ: ಯಾರ ಮೇಲೂ ಸುಮ್ಮನೇ ಸಂಶಯಪಟ್ಟು ಸಂಬಂಧವನ್ನು ದೂರ ಮಾಡಿಕೊಳ್ಳುವಿರಿ. ದಾಂಪತ್ಯದಲ್ಲಿ ನೆಮ್ಮದಿ ಇಲ್ಲದೇ ಪರಸ್ಪರ ಕಲಹವಾಗಬಹುದು. ಸಾಮಾಜಿಕ‌ ಕಾರ್ಯದಿಂದ ಸಮ್ಮಾನವನ್ನು ನಿರೀಕ್ಷಿಸುವಿರಿ. ಎಲ್ಲರನ್ನೂ ತೃಪ್ತಿಪಡಿಸುವ ಸಂಕಲ್ಪವು ಸುಮ್ಮನೇ ವ್ಯರ್ಥವಾಗಬಹುದು. ನಿಮ್ಮ ಗುರಿಯ ಬಗ್ಗೆ ವಿಶ್ವಾಸವು ನಿಮಗಿರಲಿ. ನಿಮ್ಮಿಂದ ಸಹಾಯ ಪಡೆಯಲು ನಿಮ್ಮನ್ನು ಹೊಗಳುವರು. ಧಾರ್ಮಿಕ ಕಾರ್ಯಗಳಲ್ಲಿ ಶ್ರದ್ಧೆಯು ಇಲ್ಲವಾಗುವುದು. ನಿಮ್ಮ ಮೇಲೆ‌ ಹಿತಶತ್ರುಗಳು‌ ಬೇಕಂತಲೇ ಆರೋಪವನ್ನು ಮಾಡಬಹುದು. ನಿಮ್ಮ ತಿಳಿವಳಿಕೆಯನ್ನು ಇನ್ನೊಬ್ಬರ‌ ಮುಂದೆ ತೋರಿಸಿಕೊಳ್ಳುವುದಿಲ್ಲ. ನಿಮಗೆ ಇಂದು ಚಂಚಲವಾದ ಮನಸ್ಸು ಇದ್ದು ಸ್ಪರ್ಧೆಯಲ್ಲಿ ಸೋಲಬೇಕಾಗುವುದು.