Horoscope: ಈ ರಾಶಿಯವರ ದಾಂಪತ್ಯ ಜೀವನದ ಸಮಸ್ಯೆ ದೂರವಾಗಿ ಸಂಬಂಧವು ಸರಿಯಾಗುತ್ತಾ ಸಾಗುವುದು

| Updated By: Rakesh Nayak Manchi

Updated on: Sep 29, 2023 | 12:45 AM

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 29) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರ ದಾಂಪತ್ಯ ಜೀವನದ ಸಮಸ್ಯೆ ದೂರವಾಗಿ ಸಂಬಂಧವು ಸರಿಯಾಗುತ್ತಾ ಸಾಗುವುದು
ದಿನಭವಿಷ್ಯ
Image Credit source: iStock Photo
Follow us on

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 29 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ವೃದ್ಧಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 22 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:53 ರಿಂದ ಮಧ್ಯಾಹ್ನ 12:23ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:23 ರಿಂದ 04:53ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:53 ರಿಂದ 09:23ರ ವರೆಗೆ.

ಧನು ರಾಶಿ: ಕೆಲಸದ ವಿಷಯದಲ್ಲಿ ಇಂದು ನಿಮಗೆ ಉತ್ತಮ ದಿನವಾಗಿದೆ. ಕೆಲಸದ ನಿಮಿತ್ತ ಪ್ರಯಾಣ ಮಾಡಬೇಕಾಗುವುದು. ನಿಮ್ಮ ಈ ಪ್ರಯಾಣವು ತುಂಬಾ ಪ್ರಯೋಜನಕಾರಿಯಾಗಲಿದೆ. ನಿಮಗೆ ಪ್ರೇಮ ವಿವಾಹವನ್ನು ಮಾಡಿಕೊಳ್ಳಲು ಮನಸ್ಸು ಇರುವುದು. ಭೂಮಿಯ ವ್ಯವಹಾರವನ್ನು ಮಾಡಲು ಬಹಳ ಉತ್ಸಾವಿರಲಿದೆ. ಕಛೇರಿಯಲ್ಲಿ ನಿಮ್ಮ ದಾಖಲೆಗಳು ಕಾಣಿಸದೇ ಹೋಗಬಹುದು. ನಿಮಗೆ ಬೇಡದ ವಸ್ತುವಾದರೂ ಇಂದು ಯಾರಿಗೂ ಕೊಡುವುದು ಬೇಡ. ಆರ್ಥಿಕ ಸ್ಥಿತಿಯನ್ನು ಬಲಪಡಿಸಿಕೊಳ್ಳುವ ಪ್ರಯತ್ನ ಮಾಡುವಿರಿ. ಮಕ್ಕಳ ಶುಭವಾರ್ತೆಯು ಇರಲಿದೆ. ಒಗಟಾದ ಮಾತುಗಳು ಇಂದು ಹೆಚ್ಚು ಆಡುವಿರಿ. ಧನವನ್ನು ಕೇಳಬೇಕಾದವರಲ್ಲಿ ಕೇಳಿ.

ಮಕರ ರಾಶಿ: ಇಂದು ಕಛೇರಿಯಲ್ಲಿ ಕೊಡುವ ಕೆಲಸವನ್ನು ಬಹಳ ಜವಾಬ್ದಾರಿಯಿಂದ ಮಾಡಬೇಕಾದೀತು. ಆರೋಗ್ಯ ಸಮಸ್ಯೆಗಳು ನಿಮ್ಮ ಸರಿಯಿಲ್ಲದ ದಿನಚರಿಯಿಂದ ಬರಲಿದೆ. ಇದರಿಂದ ನೀವು ಸರಿಯಾದ ಫಲಿತಾಂಶವನ್ನು ಪಡೆಯುವಿರಿ. ವ್ಯಾಪಾರಸ್ಥರು ಅಧಿಕ ಲಾಭವನ್ನು ಗಳಿಸುವರು. ಮನೆಯಲ್ಲಿ ವಾತಾವರಣ ಚೆನ್ನಾಗಿರುವುದಿಲ್ಲ. ಸರ್ಕಾರದ ಕೆಲಸಕ್ಕೆ ತೊಂದರೆಯಾಗುವುದು. ಆರ್ಥಿಕ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವರನ್ನು ದೂರಮಾಡಿಕೊಳ್ಳಬೇಕಾದೀತು. ಯಾರದೋ ಒತ್ತಾಯಕ್ಕಾಗಿ ಪ್ರಯಾಣ ಮಾಡಬೇಕಾದೀತು. ಪತ್ನಿಯು ನಿಮ್ಮನ್ನು ದೂಷಿಸಬಹುದು. ನಿಮ್ಮ ಪ್ರಾಮಾಣಿಕತೆಗೆ ಫಲವು ಲಭಿಸಿ, ಸಂತಸವಾಗುವುದು. ಖಾಸಗಿಯ ಸಮಾರಂಭದಲ್ಲಿ ಭಾಗವಹಿಸುವಿರಿ. ಇಂದು ನಿಮಗೆ ಒತ್ತಡದ ಕೆಲಸವು ಬಂದು ಮನೆಯ ಕೆಲಸವು ಮರೆತುಹೋದೀತು.

ಕುಂಭ ರಾಶಿ: ಇಂದು ನಿಮ್ಮ ನಿರ್ಧಾರಗಳನ್ನು ನೀವು ಸಾವಧಾನವಾಗಿ ಆಲೋಚಿಸಿ ತೆಗೆದುಕೊಂಡರೆ ಉತ್ತಮ. ಕೆಲಸದ ವಿಷಯದಲ್ಲಿ ನೀವು ಯಾರ ಮಾತನ್ನೂ ನೀವು ಕೇಳುವುದಿಲ್ಲ. ನಿಮ್ಮ ಕುಟುಂಬದ ಜೊತೆ ಇಂದು ಸಮಯವನ್ನು ಕಳೆಯಲು ಸಾಧ್ಯವಾಗುವುದು. ನಿಮ್ಮ ಇಂದಿನ ಆದಾಯವು ಮಧ್ಯಮಕ್ಕಿಂತ ಚೆನ್ನಾಗಿ ಇರುವುದು. ಇಂದು ನೀವು ಅಚಾತುರ್ಯದಿಂದ ನಿರ್ಧಾರ ತೆಗೆದುಕೊಳ್ಳಬೇಡಿ. ಶತ್ರುಗಳ ಚಿಂತೆಯಿಂದ ಮಾನಸಿಕವಾಗಿ ಕುಗ್ಗುವಿರಿ. ನಿಮ್ಮಷ್ಟಕ್ಕೆ ನೀವಿರಲು ಸಾಧ್ಯವಾಗದು. ಹಿಂದಿನಿಂದ ಮಾತನಾಡಿಕೊಳ್ಳುವರಿಗೆ ಬೆಲೆಯನ್ನು ಕೊಡುವುದಿಲ್ಲ. ಇಂದು ನಿಮಗಾದ ವಿಶ್ವಾಸದ್ರೋಹದಿಂದ ಎಲ್ಲರ ಮೇಲೆ ಅಸಮಾಧಾನ ತೋರುವಿರಿ. ನಿಮ್ಮದಲ್ಲದ ವಸ್ತುವಿನ ಮೇಲೇ ಮೋಹವೇಕೆ? ಸಿಗದೇ ದುಃಖಿಸುವುದ್ಕಕಿಂತ ಸಿಕ್ಕಿದ್ದರಲ್ಲಿ ಖುಷಿಪಡಿ. ಕೆಲಸವನ್ನು ನಿಭಾಯಿಸಲು ಸರಳ ತಂತ್ರವನ್ನು ಬಳಸುವಿರಿ. ಇನ್ನೊಬ್ಬರ ಬಗ್ಗೆ ತಪ್ಪು ಕಲ್ಪನೆ ಇರಬಹುದು.

ಮೀನ ರಾಶಿ: ಇಂದು ದಾಂಪತ್ಯದಲ್ಲಿ ನಡೆಯುತ್ತಿರುವ ದೊಡ್ಡ ದೊಡ್ಡ ಸಮಸ್ಯೆಗಳು ದೂರಾಗಿ ನಿಮ್ಮ ಪರಸ್ಪರ ಸಂಬಂಧವು ಸರಿಯಾಗುತ್ತ ಸಾಗುವುದು. ನಿಮ್ಮ ವರ್ತನೆಯನ್ನು ಬೇರೆಯವರ ಮೂಲಕದಿಂದ ತಿದ್ದಿಕೊಳ್ಳುವಿರಿ. ಕಛೇರಿಯ ಕೆಲಸದಲ್ಲಿ ನಿಮ್ಮ ಗುಂಪಿನಿಂದ ತಪ್ಪಾಗದಂತೆ ಪರೀಕ್ಷಿಸಿ. ನಿಮಗೆ ಗೊತ್ತಾಗದಂತೆ ಖರ್ಚು ಅಧಿಕವಾಗುವುದು. ಇಂದು ನಿಮ್ಮ ರಪ್ತು ಅಡೆತಡೆಗಳಿಲ್ಲದೇ ನಡೆಸುವಿರಿ. ಸ್ತ್ರೀಯರಿಗೆ ಕೆಲವು ಲಾಭಗಳು ಆಗಬಹುದು. ವಾಹನ ಖರೀದಿಗೆ ದಾಖಲೆಗಳನ್ನು ತಯಾರಿಸಿಕೊಳ್ಳುವಿರಿ. ಇಂದು ನಿಮ್ಮ ತಲೆಯಲ್ಲಿ ಅಪೂರ್ಣ ಕಾರ್ಯಗಳೇ ತುಂಬಿರುವುದು. ನಿಮ್ಮ ಮಗನ ಮೇಲೆ ಸಂಪತ್ತಿನ‌ ದೂರುವಿರಿ. ತುರ್ತು ಕಾರ್ಯಕ್ಕಾಗಿ ಮನೆಯಿಂದ ಬೇಗ ಹೊರಡಬೇಖಾಗುವುದು. ಹೇಳಿದ ಕೆಲಸಗಳು ಸಮಯಕ್ಕೆ ಆಗಿಲ್ಲ ಎಂದು ನೌಕರರ ಮೇಲೆ ಕೋಪಗೊಳ್ಳುವಿರಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ