Horoscope: ಈ ರಾಶಿಯವರು ಹಿತಶತ್ರುಗಳನ್ನು ನಿಭಾಯಿಸುವುದು ಕಷ್ಟವಾದೀತು

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 29) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರು ಹಿತಶತ್ರುಗಳನ್ನು ನಿಭಾಯಿಸುವುದು ಕಷ್ಟವಾದೀತು
ರಾಶಿ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 30, 2023 | 12:45 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 30 ಸೋಮವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಭರಣೀ, ಯೋಗ: ಸಾಧ್ಯ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 28 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:55 ರಿಂದ 09:22 ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10: 49 ರಿಂದ 12:16 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:43 ರಿಂದ 03:10ರ ವರೆಗೆ.

ಧನು ರಾಶಿ : ಭೂಮಿಯ ವ್ಯವಹಾರವನ್ನು ಸಂಕೋಚದಿಂದ ಮಾಡುವುದು ಬೇಡ. ನಿಮ್ಮ ನಿರ್ಧಾರವನ್ನು ಬದಲಿಸದೇ ಮುಂದುವರಿಯಿರಿ. ವಾಹನವನ್ನು ಪರೀಕ್ಷಿಸಿ ಖರೀದಿಸಿ. ಶತ್ರುಗಳು ನಿಮ್ಮ ಮೇಲೆ‌ ಆರೋಪಗಳನ್ನು ಮಾಡಬಹುದು. ಎಲ್ಲದರಲ್ಲಿಯೂ ನೀವೇ ಬುದ್ಧಿವಂತರು ಎಂದು ತೋರಿಸಿಕೊಳ್ಳುವುದು‌ ಬೇಡ. ಅಧಿಕಾರದಿಂದ‌ ಕೂಡಿದ ಮಾತು ನಿಮಗೆ ಪ್ರಯೋಜನವಾಗದು. ನಿಮ್ಮ ಸ್ವಭಾವದಲ್ಲಿ ಆದ ಬದಲಾವಣೆಯುಂದ ಅಚ್ಚರಿಯಾದೀತು. ನಿಮ್ಮದಲ್ಲದ್ದನ್ನು ನಿಮ್ಮದೆಂದು ವಾದಿಸಲು ಹೋಗಬೇಡಿ. ಮನೆಯ ಕೆಲಸವು ಬಹಳ ಆಯಾಸವನ್ನು ಕೊಡಬಹುದು. ಆಸಮಯದಲ್ಲಿ ನೀವು ಭೋಜನವನ್ನು ಮಾಡಿದರೆ ಆರೋಗ್ಯವನ್ನು ಕೆಡಸಿಕೊಳ್ಳಬೇಕಾದೀತು. ನೂತನ ಉದ್ಯೋಗಕ್ಕೆ ಸೇರುವವರು ಗಣಪತಿಯ ಸ್ತುತಿಯನ್ನು ಮಾಡಿ ಮುಂದುವರಿಯಿರಿ.

ಮಕರ ರಾಶಿ : ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ನಿಮ್ಮ ಗಮನ ಮುಖ್ಯವಾಗಿರಲಿ. ಸ್ನೇಹಿತರ ಜೊತೆ ಮೋಜಿನಲ್ಲಿ ಕಾಲ ಕಳೆಯುವಿರಿ. ಮನಸ್ಸು ಬಹಳ ಖಿನ್ನತೆಗೆ ಹೋಗಬಹುದು. ಯಾವ ವಿಚಾರವನ್ನೂ ತೀರ್ಮಾನಿಸಲಾಯಿತು ಆಗದು. ವ್ಯಾಪಾರದಲ್ಲಿ ನಿಮ್ಮ ಜಾಣ್ಮೆಯನ್ನು ತೋರಿಸುವಿರಿ. ಅಹಂಕಾರದ ಮಾತುಗಳು ಇತರರಿಗೆ ಹಿಂಸೆಯಾದೀತು. ತಾಯಿಯ ಆರೋಗ್ಯದ ವ್ಯತ್ಯಾಸದಿಂದ ಚಿಕಿತ್ಸೆ ಕೊಡಿಸಿ. ಸ್ನೇಹಿತರು ನಿಮ್ಮ ಬಳಿ ಧನಸಹಾಯವನ್ನು ಕೇಳಬಹುದು. ಪ್ರಖ್ಯಾತ ವ್ಯಕ್ತಿಗಳ ಭೇಟಿಯಾಗಬಹುದು. ದೊಡ್ಡ ಅಪಾಯದಿಂದ ನೀವು ಸುರಕ್ಷಿತರಾಗಿರುವಿರಿ. ಸಂಗಾತಿಯ ಇಂಗಿತವನ್ನು ತಿಳಿಯಲು ಪ್ರಯತ್ನಿಸಿ. ಎಂದೋ ಆಡಿದ ನಿಮ್ಮ ಮಾತು ನಿಮಗೇ ಪುನಃ ಬರಬಹುದು.

ಕುಂಭ ರಾಶಿ : ಕೃಷಿ ಚಟುವಟಿಕೆಯಲ್ಲಿ ಆಸಕ್ತಿ ಕಾಣಿಕೊಳ್ಳುವುದು.‌ ಉದ್ಯೋಗದಲ್ಲಿ ಸಹೋದ್ಯೋಗಿಗಳ ಬಗ್ಗೆ ಭಿನ್ನಾಭಿಪ್ರಾಯ ಬರಬಹುದು. ಹಿತಶತ್ರುಗಳನ್ನು ನೀವು ನಿಭಾಯಿಸುವುದು ಕಷ್ಟವಾದೀತು. ಅಮೂಲ್ಯ ವಸ್ತುವನ್ನು ನಿರ್ಲಕ್ಷ್ಯದಿಂದ ಎಲ್ಲಿಯೋ ಇಟ್ಟು ಕಳೆದುಕೊಳ್ಳುವಿರಿ. ರಾಜಕೀಯ ವ್ಯಕ್ತಿಗಳಿಂದ ನೀವು ಸಾಮಾಜಿಕ ಕಾರ್ಯಕ್ಕೆ ಹಣವನ್ನು ಪಡೆಯುವಿರಿ. ಬಹಳ ದಿನಗಳಿಂದ ಕೆಟ್ಟಿದ್ದ ಆರೋಗ್ಯವು ಸರಿಯಾದರೂ ಆರೋಗ್ಯ ಪೂರ್ಣ ಮನಸ್ಸು ಸರಿಯಾಗಲು ಸಮಯು ಬೇಕು. ಆಪ್ತರನ್ನು ನೀವು ಕಳೆದುಕೊಳ್ಳುವ ಸಾಧ್ಯತೆ ಇದೆ. ನಿಮ್ಮವರು ನಿಮ್ಮನ್ನು ಬೇರೆ ಕೆಲಸಗಳಿಗೆ ಕರೆದುಕೊಂಡು ಹೋಗುವರು. ನಿಮ್ಮ ಪಕ್ಷಪಾತವು ಕೆಲವರಿಗೆ ಇಷ್ಟವಾಗದು. ನೀವು ವಹಿಸಿಕೊಂಡ ನಿರ್ಮಾಣ ಕೆಲಸಗಳು ನಿಧಾನವಾಗುವುದು. ಮೊದಲೇ ತೀರ್ಮಾನವಾದ ನಿಮ್ಮ ಪ್ರಯಾಣವು ಮುಂದೆ ಹೋಗಬಹುದು.

ಮೀನ ರಾಶಿ : ನಿಮ್ಮ ಪ್ರೀತಿಗೆ ವಂಚನೆಯಾಗುವ ಸಾಧ್ಯತೆ ಇದೆ. ಆದಾಯದ ಮೂಲವನ್ನು ಹೆಚ್ಚು ಮಾಡಿಕೊಳ್ಳುವಿರಿ. ಮಕ್ಕಳ ಮೇಲಿಟ್ಟ ಭರವಸೆಯು ಫಲಿಸಬಹುದು. ಇನ್ನೊಬ್ಬರಿಗೆ ಕೊಡುವ ಸಮಯು ವ್ಯರ್ಥವಾಗುವುದು. ಸಣ್ಣ ಮಟ್ಟಿನ ಸಾಲವನ್ನು ನೀವು ಮಾಡಬೇಕಾದ ಸ್ಥಿತಿಯು ಬರಬಹುದು. ತಾಯಿಯ ಕಡೆಯಿಂದ ನಿಮಗೆ ಯಾವ ಸಹಾಯವೂ ಸಿಗದೇಹೋಗಬಹುದು. ನಿರಂತರ ಕೆಲಸದಿಂದ ನಿಮಗೆ ಸ್ವಲ್ಪ ವಿಶ್ರಾಂತಿಯ ಅವಶ್ಯಕತೆ ಇದೆ. ಯಾವ ಬಂಧನಕ್ಕೂ ಒಳಪಡದೇ ಮನಸ್ಸು ಮುಕ್ತವಾಗಿರಲು ಬಯಸುವುದು. ಸಾಮರಸ್ಯದ ಅಭಾವವು ದ್ವೇಷಕ್ಕೆ ಕಾರಣವಾಗಬಹುದು. ಅಭ್ಯಾಸ ವಿಷಯದಲ್ಲಿ ನಿಮಗೆ ಪೂರ್ಣ ತೃಪ್ತಿ ಇರದು. ಸಿಕ್ಕ ವಸ್ತುವನ್ನು ಸರಿಯಾಗಿ ಬಳಸಿಕೊಳ್ಳಿ. ನಿಮ್ಮನ್ನು ಸ್ನೇಹಿತರು ಕಡೆಗಣಿಸಬಹುದು.‌ ಆಗಬೇಕಾದ ಕಾರ್ಯವನ್ನು ಮುಂದೂಡುವುದು ನಿಮ್ಮ ನಿರಾಸಕ್ತಿಯನ್ನು ತೋರಿಸುವುದು.

-ಲೋಹಿತಶರ್ಮಾ 8762924271 (what’s app only)

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ